ಕೋವಿಡ್‌ ಲಸಿಕೆ ಭಾರತದ ಸಿದ್ಧತೆ

Team Udayavani, Aug 12, 2020, 6:02 AM IST

ಕೋವಿಡ್‌ ಲಸಿಕೆ ಭಾರತದ ಸಿದ್ಧತೆ

ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಂತೂ ಬೆಚ್ಚಿಬೀಳಿಸುವ ಪ್ರಮಾಣದಲ್ಲಿ ಏರುತ್ತಿದೆ. ಆರೋಗ್ಯ ಕಾರ್ಯಕರ್ತರು, ಆರೋಗ್ಯ ಇಲಾಖೆಗಳು ಕೋವಿಡ್‌ ವಿರುದ್ಧದ ಹೋರಾಟದಲ್ಲಿ ನಿರತವಾಗಿವೆ. ಇದೇ ವೇಳೆಯಲ್ಲಿ ದೇಶದ ವೈಜ್ಞಾನಿಕ ವಲಯ ಕೋವಿಡ್‌ ವಿರುದ್ಧ ಲಸಿಕೆ ಕಂಡುಹಿಡಿಯುವಲ್ಲೂ ಶ್ರಮವಹಿಸುತ್ತಿದೆ. ಭಾರತದ ಮೂರು ಲಸಿಕೆಗಳು ಕ್ಲಿನಿಕಲ್‌ ಟ್ರಯಲ್‌ನ ವಿವಿಧ ಹಂತದಲ್ಲಿದ್ದು, ಅದರಲ್ಲಿ ಎರಡು ಲಸಿಕೆಗಳು ಆರಂಭಿಕ ಭರವಸೆಯನ್ನಂತೂ ಮೂಡಿಸಿವೆ, ಆದರೆ ಅವಿನ್ನೂ ಪ್ರಮುಖ ಟ್ರಯಲ್‌ ಹಂತಗಳನ್ನು ದಾಟುವ ಅಗತ್ಯವಿದೆ. ಅದಕ್ಕೆ ಸಮಯವಾಗಬಹುದು.

ಇವೆಲ್ಲದರ ನಡುವೆಯೇ ರಷ್ಯಾದಿಂದ ಭರವಸೆಯ ಸುದ್ದಿಯೊಂದು ಹೊರಬಿದ್ದಿದ್ದು, ಕೋವಿಡ್‌ ವಿರುದ್ಧ ಮೊದಲ ಲಸಿಕೆ ಸಿದ್ಧವಾಗಿರುವುದಾಗಿ ಅದು ಹೇಳುತ್ತಿದೆ. ಭಾರತವು ಈಗ ಲಸಿಕೆ ಸಂಶೋಧನೆಯಲ್ಲಿ ತೊಡಗಿರುವುದಷ್ಟೇ ಅಲ್ಲದೇ, ಈ ನಿಟ್ಟಿನಲ್ಲಿ ವಿಶ್ವಾದ್ಯಂತದ ವಿದ್ಯಮಾನಗಳ ಮೇಲೂ ಗಮನವಿಟ್ಟಿರುವುದರಿಂದಾಗಿ, ರಷ್ಯಾದಿಂದ ಬಂದಿರುವ ಈ ಸುದ್ದಿ ಮಹತ್ವ ಪಡೆದಿದೆ.

ಕೇಂದ್ರ ಸರ್ಕಾರವು ವಿಶೇಷ ತಜ್ಞರ ಒಂದು ಸಮಿತಿಯನ್ನು ನೇಮಕ ಮಾಡಿದ್ದು, ಇದರ ನೇತೃತ್ವವನ್ನು ನೀತಿ ಆಯೋಗದ ಡಾ. ವಿ.ಕೆ. ಪೌಲ್‌ ಅವರು ವಹಿಸಿಕೊಂಡಿದ್ದಾರೆ. ಈ ಸಮಿತಿಯು ಒಂದು ವೇಳೆ ವ್ಯಾಕ್ಸಿನ್‌ ಲಭ್ಯವಾದರೆ ಅದನ್ನು ಗುರುತಿಸುವಿಕೆ, ಖರೀದಿ, ಫೈನಾನ್ಸ್‌ ಇತ್ಯಾದಿ ಅಂಶಗಳನ್ನು ನಿಭಾ ಯಿಸಿ, ವೇಗವಾಗಿ ಭಾರತದ ಬೃಹತ್‌ ಜನಸಂಖ್ಯೆಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಿದೆ. ಈ ನಡುವೆಯೇ ಸೀರಂ ಇನ್ಸ್‌ಟಿಟ್ಯೂಟ್‌ ಆಫ್ ಇಂಡಿಯಾ (ಎಸ್‌ ಐಐ) ಗಾವಿ ದ ವ್ಯಾಕ್ಸಿನ್‌ ಅಲಯನ್ಸ್‌ ಮತ್ತು ಬಿಲ್‌-ಮೆಲಿಂದಾ ಗೇಟ್ಸ್‌ ಫೌಂಡೇಷನ್‌ನ ಸಹಭಾಗಿತ್ವದಲ್ಲಿ 10 ಕೋಟಿ ವ್ಯಾಕ್ಸಿನ್‌ ಡೋಸ್‌ಗಳನ್ನು ಉತ್ಪಾದಿಸುವ ಒಪ್ಪಂದ ಮಾಡಿಕೊಂಡಿದೆ.

ನೆನಪಿರಲಿ, ಲಸಿಕೆ ಅಭಿವೃದ್ಧಿ ಎಷ್ಟು ಮುಖ್ಯವೋ, ಅದರ ಡೋಸ್‌ಗಳ ವ್ಯಾಪಕ ಉತ್ಪಾದನೆಯೂ ಅಷ್ಟೇ ಮುಖ್ಯ. ಈ ಹಿನ್ನೆಲೆಯಲ್ಲಿಯೇ, ಪ್ರಪಂಚದಲ್ಲೇ ಅತಿಹೆಚ್ಚು ವಿವಿಧ ವ್ಯಾಕ್ಸಿನ್‌ ಡೋಸ್‌ಗಳ ಉತ್ಪಾದನಾ ಕಂಪೆನಿಯಲ್ಲಿ ಒಂದಾಗಿರುವ ಎಸ್‌ಐಐ ಮುಂದಿನ ದಿನಗಳಲ್ಲಿ ದೊಡ್ಡ ಪಾತ್ರ ನಿರ್ವಹಿಸಲಿದೆ. ಗಮನಾರ್ಹ ಸಂಗತಿಯೆಂದರೆ, ಆಕ್ಸ್‌ಫ‌ರ್ಡ್‌ ವಿವಿ ಅಭಿವೃದ್ಧಿಪಡಿಸುತ್ತಿರುವ ಲಸಿಕೆಯು ಯಶಸ್ವಿಯಾದರೆ, ಅದನ್ನೂ ದೊಡ್ಡ ಪ್ರಮಾಣದಲ್ಲಿ ಉತ್ಪಾದಿಸುವ ಒಪ್ಪಂದ ಮಾಡಿಕೊಂಡಿದೆ ಈ ಸಂಸ್ಥೆ. ಎಲ್ಲಕ್ಕಿಂತ ಮುಖ್ಯವಾಗಿ ಈ ಸಂಸ್ಥೆಯು ಬಿಲ್‌ಗೇಟ್ಸ್‌ ಫೌಂಡೇಷನ್‌ನೊಂದಿಗೆ ಮಾಡಿಕೊಂಡಿರುವ ಒಪ್ಪಂದ ಶ್ಲಾಘನೀಯವಾಗಿದೆ. ಅತ್ಯಂತ ಅಗ್ಗದ ದರದಲ್ಲಿ ವ್ಯಾಕ್ಸಿನ್‌ಗಳನ್ನು ಜನರಿಗೆ ತಲುಪಿಸುವುದು ಈ ಒಪ್ಪಂದದ ಉದ್ದೇಶ.

ಇದೇನೇ ಇದ್ದರೂ ಒಂದು ವಿಷಯವನ್ನಂತೂ ನಾವು ಕಡೆಗಣಿಸಲೇಬಾರದು. ಲಸಿಕೆಯ ಭರವಸೆಯಲ್ಲಿ ಬದುಕು ದೂಡುವುದು ತಪ್ಪಾಗುತ್ತದೆ. ಕೋವಿಡ್‌ ವಿರುದ್ಧ ಪರಿಣಾಮಕಾರಿ ಲಸಿಕೆ ಲಭ್ಯವಾಗುತ್ತದೋ ಇಲ್ಲವೋ ಎನ್ನುವುದರ ಬಗ್ಗೆ ಸಾರ್ವಜನಿಕರು ತಲೆಕೆಡಿಸಿಕೊಳ್ಳುವುದನ್ನು ಬಿಟ್ಟು, ತಮ್ಮ ಸುರಕ್ಷತೆಯಲ್ಲಿ ತಾವಿರುವುದಕ್ಕೆ ಆದ್ಯತೆ ಕೊಡುವುದು ಬಹಳ ಮುಖ್ಯ.

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.