ನಿಲ್ಲದ ಚೀನ ಉದ್ಧಟತನ ಭಾರತದ ಪ್ರಬಲ ಸಂದೇಶ


Team Udayavani, Jun 30, 2020, 5:53 AM IST

ನಿಲ್ಲದ ಚೀನ ಉದ್ಧಟತನ ಭಾರತದ ಪ್ರಬಲ ಸಂದೇಶ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪೂರ್ವ ಲಡಾಖ್‌ನಲ್ಲಿ ಚೀನದ ಬೆದರಿಕೆಗಳಿಗೆ, ಕುತಂತ್ರಗಳಿಗೆ ಪ್ರತ್ಯುತ್ತರ ನೀಡಲು ಭಾರತ ಸಕಲ ರೀತಿಯಿಂದಲೂ ಸಜ್ಜಾಗುತ್ತಿದೆ.

ಅತ್ತ ಚೀನ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ಗಡಿಭಾಗದಲ್ಲಿ ಜಮಾವಣೆ ಮಾಡುತ್ತಿರುವಂತೆಯೇ, ಇತ್ತ ಭಾರತವೂ ಸಹ ಯೋಧರು, ಯುದ್ಧವಿಮಾನಗಳು, ರಾಡಾರ್‌ಗಳು, ವಾಯುನೆಲೆ ತುಕಡಿಗಳು, ಫಿರಂಗಿಗಳು ಸೇರಿದಂತೆ ಅತ್ಯುಪಯುಕ್ತ ಯುದ್ಧ ಸಾಮಗ್ರಿಗಳ ಮೂಲಕ ಎಲ್ಲಾ ಸವಾಲಿಗೂ ಸಜ್ಜಾಗಿ ನಿಲ್ಲುತ್ತಿದೆ.

ಪ್ರಧಾನಿ ನರೇಂದ್ರ ಮೋದಿಯವರೂ ಸಹ ಚೀನದ ಉದ್ಧಟತನಕ್ಕೆ ಎಚ್ಚರಿಕೆ ನೀಡಿದ್ದಾರೆ.

ಚೀನ ನಂಬಿಕೆಗೆ ಒಂದಿಷ್ಟೂ ಅರ್ಹವಲ್ಲದ ರಾಷ್ಟ್ರ ಎನ್ನುವುದು ಪದೇ ಪದೇ ಸಾಬೀತಾಗುತ್ತಲೇ ಇರುತ್ತದೆ. ನುಡಿಯೊಂದು ನಡೆಯೊಂದು ಎನ್ನುವುದು ಚೀನದ ಪ್ರಮುಖ ಗುರುತಾಗಿ ಬದಲಾಗಿಬಿಟ್ಟಿದೆ. ಇತ್ತೀಚೆಗಷ್ಟೇ ಹಿರಿಯ ಕಮಾಂಡರ್‌ ಮಟ್ಟದ ಮಾತುಕತೆಯ ನಂತರ, ಚೀನ ಸೇನೆಯನ್ನು ಪಾಪಸ್‌ ಕರೆಸಿಕೊಳ್ಳುವುದಾಗಿ ಹೇಳಿತ್ತು.

ಆದರೆ, ಮತ್ತೆ ಗಾಲ್ವಾನ್‌ ಕಣಿವೆಯ ಮೇಲೆ ಸಾರ್ವಭೌಮತ್ವ ಸ್ಥಾಪಿಸಲು ಅದು ಯತ್ನಿಸುತ್ತಿದೆ. ಚೀನ ಗಸ್ತು ಪಾಯಿಂಟ್‌ 14-15ರಲ್ಲಿ ಪುನಃ ಕ್ಯಾಂಪ್‌ ಹಾಕಿರುವುದನ್ನು ಉಪಗ್ರಹ ಚಿತ್ರಗಳು ಸಾರುತ್ತಿವೆ.ಈ ಕಾರಣಕ್ಕಾಗಿಯೇ, ನಮ್ಮ ತಯಾರಿಯಲ್ಲಿ ನಾವಿರುವುದು ಅತ್ಯಗತ್ಯ.

ಗಮನಾರ್ಹ ಸಂಗತಿಯೆಂದರೆ, ಈ ಬಿಕ್ಕಟ್ಟಿನ ಸಮಯದಲ್ಲೇ ಭಾರತದ ವಾಯುಪಡೆಯ ಬಲವನ್ನು ಮತ್ತಷ್ಟು ಹೆಚ್ಚಿಸುವಂಥ ಸಂತಸದ ಸುದ್ದಿಯೊಂದು ಬಂದಿದೆ. ಭಾರತ ಮತ್ತು ಫ್ರಾನ್ಸ್ ನಡುವಿನ 36 ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದದ ಹಿನ್ನೆಲೆಯಲ್ಲಿ ಜುಲೈ ಅಂತ್ಯದೊಳಗೆ ಆರು ರಫೇಲ್‌ ಯುದ್ಧ ವಿಮಾನಗಳನ್ನು ಭಾರತ ಪಡೆಯಲಿದೆ.

ಹಾಗೆಂದು, ಚೀನ – ಭಾರತದ ನಡುವೆ ಯುದ್ಧ ಸಂಭವಿಸುವುದು ಶತಃಸಿದ್ಧ ಎಂದು ಭಾವಿಸುವುದು ತಪ್ಪಾಗುತ್ತದೆ. ಚೀನ ಆರ್ಥಿಕವಾಗಿ ಭಾರತಕ್ಕಿಂತ ಎಷ್ಟೇ ಮುಂದಿರಬಹುದು, ಆದರೆ ಯುದ್ಧ ನಿಸ್ಸಂಶಯವಾಗಿಯೂ ಅದಕ್ಕೂ ಹಲವು ರೀತಿಯಿಂದ ದುಬಾರಿಯಾಗಿ ಪರಿಣಮಿಸುವುದು ನಿರ್ವಿವಾದ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಗಲೇ ಕಪ್ಪು ಚುಕ್ಕೆಯೊಂದು ಚೀನಕ್ಕೆ ಹತ್ತಿದ್ದು, ಅದರ ಮೇಲೆ ಜಾಗತಿಕ ಒತ್ತಡವೂ ಹೆಚ್ಚುತ್ತಿದೆ. ಒಂದು ವೇಳೆ ಯುದ್ಧ ಸಂಭವಿಸಿತೆಂದರೂ ಚೀನದ ಹೆಡೆಮುರಿಕಟ್ಟಲು ಅನೇಕ ರಾಷ್ಟ್ರಗಳು ಭಾರತಕ್ಕೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆಂಬಲಕ್ಕೆ ನಿಲ್ಲಲಿವೆ. ಭಾರತವೂ ಏಕಾಂಗಿಯಾಗಿ ಚೀನಕ್ಕೆ ಉತ್ತರಿಸಲು ಸಶಕ್ತವಾಗಿದೆ.

ಇಂದು ಪಾಕಿಸ್ಥಾನವನ್ನು ಹೊರತುಪಡಿಸಿ, ಉಳಿದೆಲ್ಲ ನೆರೆ ರಾಷ್ಟ್ರಗಳೊಂದಿಗೂ ಚೀನ ವೈಷಮ್ಯ ಕಟ್ಟಿಕೊಂಡಿದೆ. ದಕ್ಷಿಣ ಚೀನ ಸಮುದ್ರದಲ್ಲಿ ಅದು ಪಾರಮ್ಯ ಸಾಧಿಸಲು ಪ್ರಯತ್ನಿಸುತ್ತಿರುವುದು ಜಗತ್ತಿನ ಅನೇಕ ರಾಷ್ಟ್ರಗಳ ಕಣ್ಣು ಕೆಂಪಾಗಿಸಿದೆ.

ಇತ್ತೀಚೆಗಷ್ಟೇ ಮಹತ್ವದ ಬೆಳವಣಿಗೆಯೊಂದರಲ್ಲಿ ಅಮೆರಿಕ ಜರ್ಮನಿಯಲ್ಲಿದ್ದ ತನ್ನ ಮೂರು ಸಮರ ನೌಕೆಗಳನ್ನು ದಕ್ಷಿಣ ಚೀನ ಸಮುದ್ರಕ್ಕೆ ಕಳುಹಿಸಿಕೊಟ್ಟಿರುವುದು, ಅಲ್ಲದೇ ಚೀನ ಯಾವ ರಾಷ್ಟ್ರಗಳೊಂದಿಗೆ ಬಿಕ್ಕಟ್ಟು ಸೃಷ್ಟಿಸುತ್ತಿದೆಯೋ, ಆ ರಾಷ್ಟ್ರಗಳಿಗೆಲ್ಲ ಸೇನಾ ಬೆಂಬಲ ನೀಡಿರುವುದಾಗಿ ಹೇಳಿರುವುದು ಸಹ, ಚೀನ ಬೆಚ್ಚುವಂತೆ ಮಾಡಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಭಾರತ ಚೀನಕ್ಕೆ ಈಗ ಬಲಿಷ್ಠ ಸಂದೇಶ ಕಳುಹಿಸುವಲ್ಲಿ ಯಶಸ್ವಿಯಾಗುತ್ತಿದೆ.

ಈಗ ಭಾರತ  ಬದಲಾಗಿದೆ. ಸತ್ಯವೇನೆಂದರೆ, ಗಡಿ ಭಾಗದಲ್ಲಿ ಭಾರತ ನಡೆಸಿರುವ ಅಭಿವೃದ್ಧಿ ಕಾರ್ಯಗಳು ಚೀನದ ನಿದ್ದೆಗೆಡಿಸಿವೆ. ಈ ಕಾರಣಕ್ಕಾಗಿಯೇ, ಚೀನ ಹುಚ್ಚುಹಿಡಿದಂತೆ ವರ್ತಿಸುತ್ತಿದೆ. ನಿಸ್ಸಂಶಯವಾಗಿಯೂ ಭಾರತೀಯ ಸೇನೆಯ ಕೆಚ್ಚೆದೆಯ ಈ ಹೆಜ್ಜೆಗಳು, ಬದಲಾದ ಭಾರತದ ಸಂಕೇತಗಳಾಗಿವೆ.

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.