ಅತ್ಯಾಧುನಿಕ ಡ್ರೋನ್‌ಗಳ ಸೇರ್ಪಡೆ: IAF ಗೆ ಆನೆಬಲ

Team Udayavani, Aug 13, 2023, 11:16 PM IST

HERON MARK 11

ಭಾರತದ ಪಾಲಿಗೆ ಸದಾ ಹೊರೆಯಾಗಿ ಪರಿಣಮಿಸಿರುವ ನೆರೆಯ ರಾಷ್ಟ್ರಗಳಾದ ಪಾಕಿಸ್ಥಾನ ಮತ್ತು ಚೀನದ ಮೇಲೆ ಗಡಿಯಲ್ಲಿ ಹದ್ದು ಗಣ್ಣಿರಿಸಲು ಭಾರತೀಯ ವಾಯುಪಡೆ ಅತ್ಯಾಧುನಿಕ ಹೆರಾನ್‌ ಮಾರ್ಕ್‌ -2 ದರ್ಜೆಯ 4 ಡ್ರೋನ್‌ಗಳನ್ನು ನಿಯೋಜಿಸಿದೆ. ಅತ್ಯಾಧುನಿಕ ತಂತ್ರ ಜ್ಞಾನವನ್ನೊಳಗೊಂಡ ಈ ಡ್ರೋನ್‌ಗಳು ಉಭ ಯಗಡಿಗಳಲ್ಲಿ ಒಂದೇ ಬಾರಿಗೆ ಗಸ್ತು ತಿರುಗುವ ಸಾಮರ್ಥ್ಯವನ್ನು ಹೊಂದಿವೆಯಲ್ಲದೆ ಸರ್ವೇ ಕ್ಷಣೆಯ ಜತೆಜತೆಯಲ್ಲಿ ದಾಳಿ ನಡೆಸಬಲ್ಲ ಸಾಮರ್ಥ್ಯವನ್ನೂ ಹೊಂದಿವೆ.

ಸುದೀರ್ಘ‌ ಸಮಯದ ಹಿಂದೆಯೇ ಭಾರತೀಯ ವಾಯುಪಡೆ ಹೆರಾನ್‌ ಮಾರ್ಕ್‌-2 ದರ್ಜೆಯ ಡ್ರೋನ್‌ಗಳ ಅಗತ್ಯತೆಯ ಕುರಿತಂತೆ ರಕ್ಷಣ ಇಲಾಖೆಯ ಮುಂದೆ ತನ್ನ ಬೇಡಿಕೆಯನ್ನು ಇರಿಸಿ ನಿರಂತರವಾಗಿ ಒತ್ತಡ ಹೇರುತ್ತ ಬಂದಿತ್ತು. ಇದೀಗ ಈ ಅತ್ಯಾಧುನಿಕ ಡ್ರೋನ್‌ಗಳನ್ನು ಭಾರತೀಯ ವಾಯುಪಡೆಗೆ ಸೇರ್ಪಡೆಗೊಳಿಸಲಾಗಿದ್ದು ಇವುಗಳನ್ನೀಗ ಭಾರತದ ಉತ್ತರ ವಲಯದ ಗಡಿಯ ಮುಂಚೂಣಿ ಪ್ರದೇಶಗಳಲ್ಲಿ ಕಣ್ಗಾವಲಿಗಾಗಿ ನಿಯೋಜಿಸಲಾಗಿದೆ. ಈ ಡ್ರೋನ್‌ಗಳಿಗೆ ಒಮ್ಮೆ ಇಂಧನ ತುಂಬಿದರೆ 36 ತಾಸುಗಳ ಕಾಲ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಒಳಗೊಂಡಿದ್ದು ಉಪಗ್ರಹಗಳ ಜತೆ ಸಂವಹನ ಸಂಪರ್ಕವನ್ನೂ ಹೊಂದಿ ರಲಿವೆ. ಇವು ಅತ್ಯಂತ ದೂರದಲ್ಲಿರುವ ಶತ್ರು ನೆಲೆಗಳನ್ನು ಲೇಸರ್‌ ತಂತ್ರ ಜ್ಞಾನದ ಮೂಲಕ ಗುರುತಿಸಿ ಸೇನೆಗೆ ಮಾಹಿತಿ ರವಾನಿಸುತ್ತವೆ. ಇವುಗಳ ನೆರವಿನಿಂದ ವಾಯುಪಡೆಯ ಸಮರ ವಿಮಾನಗಳು ಶತ್ರುಗಳ ನೆಲೆ ಗಳನ್ನು ದೂರಗಾಮಿ ಕ್ಷಿಪಣಿಗಳನ್ನು ಪ್ರಯೋಗಿಸಿ ನಾಶಪಡಿಸಲು ಸಾಧ್ಯ. ಸರ್ವೇಕ್ಷಣೆ, ದಾಳಿ, ಮಾಹಿತಿ ರವಾನೆಯ ಜತೆಯಲ್ಲಿ ಬೇಹುಗಾರಿಕೆಗೂ ಈ ಡ್ರೋನ್‌ಗಳು ಸಹಕಾರಿಯಾಗಿವೆ.

ನೆರೆಯ ಚೀನ ಸದಾ ಗಡಿಯಲ್ಲಿ ತಗಾದೆ ತೆಗೆಯುವ ಮೂಲಕ ಭಾರತವನ್ನು ಕೆಣಕುತ್ತಲೇ ಬಂದಿದೆ. ಒಂದೆಡೆಯಿಂದ ಚೀನ ಸೇನೆಯ ಅಧಿಕಾರಿಗಳು ಗಡಿ ವಿವಾದಕ್ಕೆ ಸಂಬಂಧಿಸಿದಂತೆ ದ್ವಿಪಕ್ಷೀಯ ಮಾತುಕತೆ ಯಲ್ಲಿ ಪಾಲ್ಗೊಳ್ಳುವ ಮೂಲಕ ಸಂಧಾನದ ನಾಟಕವಾಡಿದರೆ ಮತ್ತೂಂದೆ ಡೆಯಿಂದ ಚೀನ ಸೇನೆ ಗಡಿ ಭಾಗದಲ್ಲಿ ತನ್ನ ಯೋಧರನ್ನು ಅತಿ ಕ್ರಮಣದಂತಹ ಕಾರ್ಯದಲ್ಲಿ ತೊಡಗಿಕೊಳ್ಳಲು ಪ್ರೇರೇಪಿಸುತ್ತಿರುತ್ತದೆ. ಈ ಮೂಲಕ ಇಬ್ಬಗೆಯ ನೀತಿಯನ್ನು ಅನುಸರಿಸುತ್ತ ಬಂದಿರುವ ಚೀನದ ಮೇಲೆ ಹದ್ದುಗಣ್ಣಿರಿಸಲು ಭಾರತ ಈ ಅತ್ಯಾಧುನಿಕ ಡ್ರೋನ್‌ಗಳನ್ನು ನಿಯೋಜಿಸಿದೆ. ಇದರ ಜತೆಯಲ್ಲಿ ಅತ್ತ ಪಾಕಿಸ್ಥಾನ ಪ್ರಚೋದಿತ ಉಗ್ರರು ಗಡಿಯಲ್ಲಿ ಭಾರತದೊಳಕ್ಕೆ ನುಸುಳಲು ಪ್ರಯತ್ನಿಸುತ್ತಲೇ ಬಂದಿ ದ್ದು ಈ ಉಗ್ರಗಾಮಿ ಚಟುವಟಿಕೆಗಳ ಮೇಲೂ ನಿಗಾ ಇಡಬಹುದು.

ಪಾಕಿಸ್ಥಾನ ಭಯೋತ್ಪಾದನೆಗೆ ಕುಮ್ಮಕ್ಕು, ಉಗ್ರರಿಗೆ ನೆರವು, ಆಶ್ರಯ ನೀಡುವ ಚಾಳಿಯನ್ನು ಇನ್ನೂ ಬಿಟ್ಟಿಲ್ಲ. ಇದೇ ವೇಳೆ ಚೀನ ಕೂಡ ಗಡಿ ಭಾಗದಲ್ಲಿ ಸದಾ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸುವ ಕಾರ್ಯ ದಲ್ಲಿ ನಿರತವಾಗಿದೆ. ಭಯೋತ್ಪಾದನೆ, ಗಡಿ ಸಂಘರ್ಷದಂತಹ ವಿಷಯ ಗಳಲ್ಲಿ ಆರಂಭದಿಂದಲೂ ಶೂನ್ಯ ಸಹಿಷ್ಣುತೆ ನೀತಿಯನ್ನು ಕೇಂದ್ರ ಸರಕಾರ ಅನುಸರಿಸುತ್ತ ಬಂದಿದೆ. ಚೀನ ಮತ್ತು ಪಾಕಿಸ್ಥಾನದ ಎಲ್ಲ ಕುಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತ ತನ್ನದೇ ಆದ ಕಾರ್ಯತಂತ್ರವನ್ನು ಅನುಸರಿಸುತ್ತ ಬಂದಿದ್ದು ಅತ್ಯಾಧುನಿಕ ಶಸ್ತ್ರಾಸ್ತ್ರ, ಸಾಧನಗಳ ಸೇರ್ಪಡೆಯ ಮೂಲಕ ಸೇನಾಪಡೆಗಳ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಿದೆ. ಅದರಂತೆ ಈ ಅತ್ಯಾಧುನಿಕ ಡ್ರೋನ್‌ಗಳನ್ನು ಸೇರ್ಪಡೆ ಗೊಳಿಸಲಾಗಿದ್ದು ಭಾರತೀಯ ವಾಯುಪಡೆಗೆ ಆನೆಬಲ ಬಂದಂತಾಗಿದೆ.

ಟಾಪ್ ನ್ಯೂಸ್

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

BBK11: ಮೋಕ್ಷಿತಾ ತೊಡೆ ಮೇಲೆ ಕೂತ ರಜತ್.. ಅತಿಥಿಗಳ ವರ್ತನೆಗೆ ಸಿಬ್ಬಂದಿಗಳು ಸುಸ್ತು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.