ನವೋದ್ಯಮಗಳಿಗೆ ಮೂಲನಿಧಿ ತೀರ್ಮಾನ ಸ್ವಾಗತಾರ್ಹ


Team Udayavani, Jan 18, 2022, 6:00 AM IST

ನವೋದ್ಯಮಗಳಿಗೆ ಮೂಲನಿಧಿ ತೀರ್ಮಾನ ಸ್ವಾಗತಾರ್ಹ

ರಾಷ್ಟ್ರೀಯ ನವೋದ್ಯಮ ದಿನದ ಅಂಗವಾಗಿ ರಾಜ್ಯದಲ್ಲಿ ಪ್ರಸಕ್ತ ವರ್ಷ 200 ನವೋದ್ಯಮಗಳಿಗೆ ಗರಿಷ್ಠ ತಲಾ 50 ಲಕ್ಷ ರೂ.ವರೆಗೆ ಮೂಲನಿಧಿ ಕೊಡುವ ತೀರ್ಮಾನ ತೆಗೆದುಕೊಂಡಿರುವುದು ಸ್ವಾಗತಾರ್ಹವಾಗಿದೆ.

ರಾಜ್ಯದಲ್ಲಿ ಇದುವರೆಗೂ 500 ಸ್ಟಾರ್ಟ್‌ಅಪ್‌ಗಳಿಗೆ ಈ ರೀತಿಯ ಮೂಲನಿಧಿ ನೀಡಿದ್ದು ಇದರಿಂದ ನವೋದ್ಯಮಗಳಿಗೆ ಸಾಕಷ್ಟು ಅನುಕೂಲವಾಗಿದೆ. ದೇಶದಲ್ಲಿ ಈ ರೀತಿಯ ಉಪಕ್ರಮ ಯಾವ ರಾಜ್ಯದಲ್ಲೂ ಇಲ್ಲ. ಕರ್ನಾಟಕವೇ ಪ್ರಥಮ. ಇದು ಅತ್ಯುತ್ತಮ ನಿರ್ಧಾರ ಸಹ.

ಡಾ| ಸಿ.ಎನ್‌. ಅಶ್ವತ್ಥನಾರಾಯಣ ಅವರು ಐಟಿ-ಬಿಟಿ ಹಾಗೂ ಕೌಶಲಾಭಿವೃದ್ಧಿ  ಇಲಾಖೆಯ ಹೊಣೆಗಾರಿಕೆ ವಹಿಸಿಕೊಂಡ ಅನಂತರ ನವೋದ್ಯಮಗಳ ಪ್ರೋತ್ಸಾಹ ನಿಟ್ಟಿನಲ್ಲಿ ಸಾಕಷ್ಟು ಕ್ರಮ ಕೈಗೊಂಡಿದ್ದು, ಹಲವು ಕ್ರಾಂತಿಕಾರಕ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ರಾಜ್ಯದಲ್ಲಿ ನವೋದ್ಯಮಗಳ ಬೆಳವಣಿಗೆಗೆ ಇದು ಅಗತ್ಯವೂ ಹೌದು. ನವೋದ್ಯಮಗಳ ಸ್ಥಾಪನೆಗೆ ಮುಂದಾಗುವವರಿಗೆ ಮೂಲನಿಧಿ ನೀಡುವುದು ಒಂದು ರೀತಿಯ ಆಶಾಕಿರಣ ಅಥವಾ ಭರವಸೆಯ ಬೆಳಕು ಎಂದು ಹೇಳಬಹುದು. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹೆಚ್ಚುವರಿಯಾಗಿ ನವೋದ್ಯಮಗಳಿಗೆ  ಈ ಕೊಡುಗೆ ಘೋಷಿಸಿರುವುದು ವಿಶೇಷ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ  ಇದುವರೆಗೆ ರಾಜ್ಯದಲ್ಲಿ ಉದ್ದಿಮೆಗಳ ಸ್ಥಾಪನೆಗಾಗಿ 1.60 ಲಕ್ಷ ಕೋಟಿ ರೂ. ವಿದೇಶಿ ಬಂಡವಾಳ ಹರಿದುಬಂದಿದ್ದು,  ಒಟ್ಟಾರೆಯಾಗಿ ದೇಶದಲ್ಲಿ ಆಗಿರುವ ಹೂಡಿಕೆಯಲ್ಲಿ ಶೇ.50ಕ್ಕಿಂತ ಹೆಚ್ಚು ಭಾಗ ಕರ್ನಾಟಕದಲ್ಲೇ ಆಗಿದೆ. ದೇಶದಲ್ಲಿ  57 ಸಾವಿರ ನವೋದ್ಯಮಗಳ ಪೈಕಿ 13 ಸಾವಿರಕ್ಕೂ ಹೆಚ್ಚು ಸ್ಟಾರ್ಟ್‌ ಅಪ್‌ಗ್ಳು ರಾಜ್ಯದಲ್ಲೇ ನೆಲೆ ಹೊಂದಿವೆ ಎಂಬುದು ಗಮನಾರ್ಹ ಹಾಗೂ ಹೆಮ್ಮೆಯ ಸಂಗತಿ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಐಟಿ-ಬಿಟಿ – ಕೌಶಲಾಭಿವೃದ್ಧಿ ಇಲಾಖೆಯ ಪ್ರಯತ್ನ ಅಭಿನಂದನೀಯ. ದೇಶವು ವಿಶ್ವಗುರುವಾಗಿ ಸೂಪರ್‌ ಪವರ್‌ ಆಗಿ ಹೊರಹೊಮ್ಮುವಲ್ಲಿ ನವೋದ್ಯಮಗಳ ಪಾತ್ರ ನಿರ್ಣಾಯಕ ಎಂಬುದನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸರಕಾರವೂ ಪ್ರಾಮುಖ್ಯ ನೀಡಿದೆ.

ರಾಜ್ಯದಲ್ಲಿ ಎಲೆಕ್ಟ್ರಾನಿಕ್‌ ಉದ್ದಿಮೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಮುಂದಿನ 5 ವರ್ಷಗಳಲ್ಲಿ ಇಎಸ್‌ ಡಿಎಂ ನೀತಿಯಡಿ 5 ಸಾವಿರ ಕೋಟಿ ರೂ. ಸಬ್ಸಿಡಿ ಕೊಡುವ ಪ್ರಸ್ತಾವನೆಯೂ ರಾಜ್ಯ ಸರಕಾರದ ಮುಂದೆ ಇದ್ದು ಇದೂ ಸಹ ಉದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ.

ರಾಜ್ಯದಲ್ಲಿ ಎರಡು ದಶಕಗಳಲ್ಲಿ ಉದ್ಯಮ ವ್ಯವಸ್ಥೆ ಆಮೂಲಾಗ್ರವಾಗಿ ಬದಲಾಗಿದೆ. ಈಗ ಉದ್ಯಮಶೀಲ ವ್ಯಕ್ತಿಗಳಲ್ಲಿರುವ ಹೊಸ ಆಲೋಚನೆಗಳನ್ನು ತ್ವರಿತ ಗತಿಯಲ್ಲಿ ಗುರುತಿಸಲಾಗುತ್ತಿದೆ. ಇದಕ್ಕೆ ಸರಕಾರ ತಕ್ಕಂತೆ ಅಗತ್ಯ ಹಾಗೂ ನೆರವು, ಸೌಲಭ್ಯ ಒದಗಿಸುತ್ತಿರುವುದು ಒಳ್ಳೆಯ ಕೆಲಸ.ರಾಜ್ಯದಲ್ಲಿ ನವೋದ್ಯಮಗಳಿಗೆ ಪ್ರಶಸ್ತವಾದ ಹಲವು ನೀತಿಗಳಿದ್ದು, ಕರ್ನಾಟಕ ಡಿಜಿಟಲ್‌ ಎಕಾನಮಿ ಮಿಷನ್‌ ಸಹ ಇದಕ್ಕೆ ಪೂರಕವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ನವೋದ್ಯಮ ಗಳ ಪ್ರೋತ್ಸಾಹದ ನಿಟ್ಟಿನಲ್ಲಿ ಮುಕ್ತ ಮನಸ್ಸು ಹೊಂದಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಹಾಗೆಯೇ ರಾಜ್ಯದ ಹಲವಾರು ಸ್ಟಾರ್ಟ್‌ ಅಪ್‌ಗಳು ನವೋದ್ಯಮದಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದು, ಭಾರತದ ಮಟ್ಟದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಸರಕಾರದ ಪ್ರೋತ್ಸಾಹ ಕ್ರಮಗಳ ಮೂಲಕ ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಶಸ್ತಿ ಬರುವ
ಸಾಧ್ಯತೆಯೂ ಇದೆ.

ಟಾಪ್ ನ್ಯೂಸ್

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Rane-Kerala-Cm

Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

ಕೆಪಿಎಸ್‌ಸಿ ಲೋಪಗಳಿಲ್ಲದಂತೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿ

JAmmu

Jammu-Kashmir: ಉಗ್ರರನ್ನು ಮಟ್ಟ ಹಾಕಿದ‌ ಭದ್ರತಾ ಪಡೆಗಳು

6-national-emblem

National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.