ಆಂತರಿಕ ವಿಚಾರದಲ್ಲಿ ಯಾರೂ ಮೂಗು ತೂರಿಸುವ ಅಗತ್ಯವಿಲ್ಲ 


Team Udayavani, Apr 15, 2022, 6:00 AM IST

Untitled-1

ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣದ ನಡುವೆಯೇ ಇಡೀ ಜಗತ್ತಿನಾದ್ಯಂತ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರ ಬಹುಚರ್ಚಿತ ವಿಷಯವಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆ ಎಂಬುದು ಯಾವುದೇ ಸಮಾಜ ಒಪ್ಪತಕ್ಕ ವಿಚಾರವಂತೂ ಅಲ್ಲವೇ ಅಲ್ಲ. ಇಂಥ ವಿಚಾರದಲ್ಲಿ ಜಗತ್ತಿನ ಎಲ್ಲ ಸರಕಾರಗಳು ತೀರಾ ಮುತುವರ್ಜಿಯಿಂದ ಇರಬೇಕಾದದ್ದು ಮತ್ತು ಪ್ರತಿಯೊಬ್ಬರ ಹಕ್ಕುಗಳಿಗೆ ಸಮಾನ ಗೌರವ ನೀಡಬೇಕಾದದ್ದು ಕರ್ತವ್ಯ ಕೂಡ ಆಗಿದೆ.

ಆದರೆ, ಬಹಳಷ್ಟು ಸಂದರ್ಭದಲ್ಲಿ ಮಾನವ ಹಕ್ಕು ವಿಚಾರಗಳು ಬೇರೆ ಕಾರಣಗಳಿಗಾಗಿ ಚರ್ಚೆಗೆ ಬರುವುದು ಮಾತ್ರ ವಿಷಾದದ ಸಂಗತಿ. ಇಂದು ಒಂದು ದೇಶ, ಮಗದೊಂದು ದೇಶಕ್ಕೆ ಮಾನವ ಹಕ್ಕುಗಳ ವಿಚಾರ ಕುರಿತಾಗಿ ಪಾಠ ಹೇಳುವ ಅನಿವಾರ್ಯತೆ ಅಥವಾ ಅಗತ್ಯ ಖಂಡಿತವಾಗಿಯೂ ಇಲ್ಲ.

ಇತ್ತೀಚೆಗಷ್ಟೇ ಅಮೆರಿಕ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್‌, ಭಾರತದ ಮಾನವ ಹಕ್ಕುಗಳ ವಿಚಾರದ ಕುರಿತಾಗಿ ಮಾತನಾಡಿ, ಇಲ್ಲಿ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಗಳ ಬಗ್ಗೆ ನಾವು ಕಳವಳಕಾರಿ ಮನೋಭಾವ ಹೊಂದಿದ್ದೇವೆ ಎಂದಿದ್ದರು. ಅಂದರೆ, ಮಾನವ ಹಕ್ಕುಗಳ ಸಂಘಟನೆಗಳು, ಜೈಲಿನ ಪರಿಸ್ಥಿತಿ, ಮಾಧ್ಯಮದವರಿಗೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ ಎಂಬುದು ಅವರ ಮಾತಿನ ಸಾರಾಂಶವಾಗಿತ್ತು. ಕೆಲವೊಮ್ಮೆ ಅಮೆರಿಕದ ಈ ಅನಿಸಿಕೆಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತವೆ ಎಂಬುದು ಸುಳ್ಳೇನಲ್ಲ. ಇದಕ್ಕೆ ಕಾರಣವೂ ಇದೆ. ಜಗತ್ತಿಗೇ ದೊಡ್ಡಣ್ಣ ಎಂದು ಗುರುತಿಸಿಕೊಂಡಿರುವ ಅಮೆರಿಕ ಯಾವುದೋ ಒಂದು ದೇಶದ ಮೇಲೆ ಅಭಿಪ್ರಾಯ ವ್ಯಕ್ತಪಡಿಸಿದರೆ, ಉಳಿದ ದೇಶಗಳು ಒಪ್ಪಿಕೊಳ್ಳುವುದು ಸಾಮಾನ್ಯ. ಹೀಗಾಗಿ ಅಮೆರಿಕ ಏನು ಹೇಳುತ್ತದೆಯೋ ಅದಕ್ಕೆ ಒಂದಷ್ಟು ಪ್ರಾಮುಖ್ಯವೂ ಇರುತ್ತದೆ. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಮೆರಿಕ, ಇನ್ನೊಂದು ದೇಶದ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರ ಮಾತನಾಡುವಾಗ ತನ್ನ ದೇಶದಲ್ಲಿ ಏನಾಗುತ್ತಿದೆ ಎಂಬುದನ್ನು ಮೊದಲು ಅರಿತುಕೊಳ್ಳಬೇಕಿದೆ. ಈ ವಿಚಾರದಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಅಮೆರಿಕಕ್ಕೆ ತಕ್ಕನಾದ ಉತ್ತರವನ್ನೇ ನೀಡಿದ್ದಾರೆ.

ಭಾರತದ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರ ಒತ್ತಟ್ಟಿಗಿರಲಿ, ಇತ್ತೀಚೆಗಷ್ಟೇ ಅಮೆರಿಕದಲ್ಲಿ ಆದ ಮಾನವ ಹಕ್ಕುಗಳ ಉಲ್ಲಂಘನೆ ವಿಚಾರದ ಬಗ್ಗೆ ನಾನು ಪ್ರಸ್ತಾವಿಸುತ್ತೇನೆ. ಇಲ್ಲಿ ಭಾರತೀಯರ ಮೇಲೆ ಆಗಾಗ ಕಿರುಕುಳ ನೀಡುವ ಪ್ರಕರಣಗಳು ಆಗುತ್ತಲೇ ಇವೆ. ಮೊದಲಿಗೆ ಈ ವಿಚಾರದ ಬಗ್ಗೆ ಅಮೆರಿಕ ಗಮನಹರಿಸಬೇಕು ಎಂದು ಜೈಶಂಕರ್‌ ನೇರವಾಗಿಯೇ ಹೇಳಿದ್ದಾರೆ. ಜೈಶಂಕರ್‌ ಹೇಳಿದ್ದರಲ್ಲಿ ಸುಳ್ಳೇನಿಲ್ಲ. ಇತ್ತೀಚಿನ ದಿನಗಳಲ್ಲಿ ಅಮೆರಿಕದಲ್ಲಿ ವೈಟ್‌ ಸುಪ್ರಿಮಸಿ ಹೆಚ್ಚಾಗಿ ಬೇರೆ ದೇಶಗಳ ಜನರನ್ನು ಕೀಳಾಗಿ ನೋಡುವ ವಿದ್ಯಮಾನಗಳು ಹೆಚ್ಚುತ್ತಿವೆ. ನ್ಯೂಯಾರ್ಕ್‌ ಸೇರಿದಂತೆ ಅಮೆರಿಕದ ನಾನಾ ಭಾಗಗಳಲ್ಲಿ ಪಂಜಾಬ್‌ನ ಸಿಕ್ಖ್ ರುಗಳನ್ನು ನಿಲ್ಲಿಸಿ ಅವರ ಮೇಲೆ ದೈಹಿಕವಾಗಿ ಹಲ್ಲೆಯನ್ನೂ ಮಾಡಲಾಗಿದೆ. ಈ ಸಂಗತಿಗಳನ್ನೂ ಜೈಶಂಕರ್‌ ಅಮೆರಿಕದ ಮುಂದೆ ಪ್ರಸ್ತಾವಿಸಿ, ಉತ್ತಮ ಕೆಲಸವನ್ನೇ ಮಾಡಿದ್ದಾರೆ.

ಹಾಗೆಂದು, ಭಾರತದಲ್ಲಿ ಇಂಥ ಘಟನೆಗಳು ನಡೆಯುತ್ತಲೇ ಇಲ್ಲ ಎಂದು ಹೇಳಲು ಆಗುವುದಿಲ್ಲ. ಖಂಡಿತವಾಗಿಯೂ ಇಂಥ ಘಟನೆಗಳು ನಡೆಯುತ್ತಿವೆ. ಇವುಗಳನ್ನು ನಮ್ಮ ಸರಕಾರಗಳು, ಪೊಲೀಸರು, ಕೋರ್ಟ್‌ಗಳು ನೋಡಿಕೊಳ್ಳುತ್ತವೆ. ಇದರಲ್ಲಿ ಹೊರಗಿನವರು ಖಂಡಿತವಾಗಿಯೂ ಮೂಗು ತೂರಿಸುವ ಅಗತ್ಯತೆ ಇಲ್ಲ.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.