Editorial; ಕನ್ನಡಿಗರಿಗೆ ಉದ್ಯೋಗ: ಸರಕಾರ ಗಮನಹರಿಸಲಿ


Team Udayavani, Jul 3, 2024, 6:09 AM IST

job for kannadigas

“ಖಾಸಗಿ ಕಂಪೆನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ’. ಈ ಕೂಗು ಇಂದು- ನಿನ್ನೆಯದಲ್ಲ. ಕನ್ನಡ ನಾಡಿನ ಮಣ್ಣಿನಲ್ಲಿ ಖಾಸಗಿ ಕಂಪೆನಿಗಳು ಕಾಲಿಟ್ಟಾಗಿನಿಂದಲೂ ಈ ಕರುಳ ಕೂಗು ಇದ್ದೇ ಇದೆ. ಈ ನಿಟ್ಟಿನಲ್ಲಿ ನ್ಯಾಯ ಒದಗಿಸಲು ಸರಕಾರಗಳು ಪ್ರಯತ್ನ ಮಾಡಿವೆ. ಆದರೆ ಅದು ಎಷ್ಟರ ಮಟ್ಟಿಗೆ ಸಫ‌ಲವಾಗಿವೆ ಎಂಬುದರ ಆತ್ಮಾವಲೋಕನಕ್ಕೆ ಇದು ಸಕಾಲ.

ಇತರೆ ರಾಜ್ಯಗಳಲ್ಲಿ ಶೇ.50ಕ್ಕಿಂತ ಹೆಚ್ಚು ಮೀಸಲಾತಿಯನ್ನು ಸ್ಥಳೀಯರಿಗೆ ಕಲ್ಪಿಸುವ ಕಾನೂನುಗಳಿವೆ. ಆದರೆ ಕರ್ನಾಟಕದಲ್ಲಿ ಇರುವ ಕಾನೂನುಗಳು ಪ್ರಬಲವಾಗಿ ಇಲ್ಲದೇ ಇರುವುದರಿಂದಲೇ ಕನ್ನಡಿಗರಿಗೆ ವಂಚನೆಯಾಗುತ್ತದೆ ಎನ್ನುವ ಹೋರಾಟಗಳು ಸಾಕಷ್ಟು ನಡೆದಿವೆ. ಸ್ಥಳೀಯರಿಗೆ ಉದ್ಯೋಗ ಕೊಟ್ಟರೆ ಕನಿಷ್ಠ ವೇತನ ಸೇರಿದಂತೆ ಸೌಲಭ್ಯಗಳನ್ನು ಕೊಡಬೇಕು ಹಾಗೂ ಸ್ಥಳೀಯ ಕಾರ್ಮಿಕ ಕಾನೂನನ್ನು ಪಾಲನೆ ಮಾಡಬೇಕು. ಇಂತಹ ಹಲವಾರು ಕಾರಣಗಳಿಂದಾಗಿ ಹೊರರಾಜ್ಯಗಳಿಂದ ಜನರನ್ನು ಕರೆತಂದು ಉದ್ಯೋಗ ಕೊಡಲಾಗುತ್ತದೆ. ಇದರಿಂದ ಕನ್ನಡಿಗರ ಅವಕಾಶಗಳನ್ನು ಹೊರರಾಜ್ಯಗಳವರು ಕಿತ್ತುಕೊಳ್ಳುತ್ತಿದ್ದಾರೆ ಎನ್ನುವ ಅರಣ್ಯರೋದನ ಸರಕಾರಕ್ಕೆ ಕೇಳಿಸದ್ದೇನಲ್ಲ.

ಇತ್ತೀಚೆಗಂತೂ ಬಂಡವಾಳ ಹೂಡಿಕೆ ಆಕರ್ಷಿಸುವ ಸಲುವಾಗಿ ಸರಕಾರಗಳು ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಿದ್ದು, ಹೂಡಿಕೆದಾರರ ಸಮಾವೇಶಗಳನ್ನು ಆಯೋಜಿಸುವುದಲ್ಲದೆ, ವಿದೇಶಗಳಲ್ಲೂ ರೋಡ್‌ಶೋ, ಸಭೆ, ಸಮಾವೇಶ ಮಾಡುವ ಮೂಲಕ ವಿದೇಶಿ ಹೂಡಿಕೆ ಆಕರ್ಷಿಸುವ ಯತ್ನಗಳನ್ನೂ ನಡೆಸುತ್ತಿವೆ.

ಹೂಡಿಕೆಗೆ ಪೂರಕವಾದ ವಾತಾವರಣ ನಿರ್ಮಿಸಲು ಇನ್ನಿಲ್ಲದ ಕೊಡುಗೆಗಳನ್ನೂ ಖಾಸಗಿ ಕಂಪೆನಿಗಳಿಗೆ ಸರಕಾರ ಕೊಡುತ್ತಿದೆ. ದೊಡ್ಡ ಕೈಗಾರಿಕ ಪ್ರದೇಶಗಳನ್ನು ಅಭಿವೃದ್ಧಿಪಡಿಸುವುದು, ಮೂಲಸೌಕರ್ಯಗಳನ್ನು ಒದಗಿಸು ವುದರ ಜತೆಗೆ ಸಾಲ ಸೌಲಭ್ಯ, ವಿವಿಧ ವಿನಾಯಿತಿಗಳು, ಅನುಮೋದನೆಗೆ ಏಕಗವಾಕ್ಷಿ ವ್ಯವಸ್ಥೆಯಂತಹ ಈಸ್‌ ಆಫ್ ಡೂಯಿಂಗ್‌, ಈಸ್‌ ಆಫ್ ಬ್ಯುಸಿನೆಸ್‌ನ ತಂತ್ರಗಳನ್ನು ಅನುಸರಿಸಿ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ.

ಇವೆಲ್ಲವೂ ರಾಜ್ಯದ ಅಭಿವೃದ್ಧಿಗೆ ಪೂರಕವೂ ಹೌದು. ಆದರೆ 2011ರ ಜನಗಣತಿಯ ಪ್ರಕಾರವೇ ಬೆಂಗಳೂರಿನಲ್ಲಿ ಶೇ.50ಕ್ಕೂ ಹೆಚ್ಚು ವಲಸಿಗರು ಉದ್ಯೋಗ ಪಡೆದಿದ್ದಾರೆ. ಅದರಲ್ಲೂ ಬಹುರಾಷ್ಟ್ರೀಯ ಕಂಪೆನಿಗಳ ವ್ಯವಸ್ಥೆ ನೆಲೆಯೂರಿದಂತೆ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಕ್ಷೀಣಿಸಿವೆ.

ಮೊದಲಿನಿಂದಲೂ ಅನುಭವಿಸಿಕೊಂಡು ಬಂದ ಇಂತಹ ಅವಕಾಶ ವಂಚ ನೆಯ ಕಾರಣದಿಂದಲೇ ಡಾ| ಸರೋಜಿನಿ ಮಹಿಷಿ ನೇತೃತ್ವದಲ್ಲಿ 1983ರಲ್ಲಿಯೇ ಸಮಿತಿ ರಚಿಸಿದ್ದ ಸರಕಾರ, ಉದ್ಯೋಗಾವಕಾಶಗಳ ಕುರಿತು ಪರಾಮರ್ಶೆ ನಡೆಸಿ ವರದಿ ನೀಡಲು ನಿರ್ದೇಶಿಸಿತ್ತು. ಅದರಂತೆ ಸರೋಜಿನಿ ಮಹಿಷಿ ವರದಿಯೂ ಸಲ್ಲಿಕೆಯಾಗಿತ್ತು. ಆದರೆ ಅದು ಕಾರ್ಯಗತ ಆಗಿಲ್ಲ ಎಂಬುದನ್ನು ಒತ್ತಿ ಹೇಳಬೇಕಿಲ್ಲ. ಕೊನೆಗೆ ಈ ವರದಿಯಲ್ಲಿನ ಎಲ್ಲ ಶಿಫಾರಸುಗಳನ್ನೂ ಅನುಷ್ಠಾನ ಮಾಡಲು ಆಡಳಿತಾತ್ಮಕವಾಗಿ ದುಸ್ತರವೆಂಬ ಅಭಿಪ್ರಾಯ ವ್ಯಕ್ತವಾಗಿತ್ತು.

ಕನ್ನಡ ಕಾವಲು ಸಮಿತಿಯ ಅಧ್ಯಕ್ಷರೂ ಆಗಿದ್ದ ಸಿದ್ದರಾಮಯ್ಯ ಅವರು 2017 ರಲ್ಲಿ ಸಿಎಂ ಆಗಿದ್ದಾಗ ಪರಿಷ್ಕೃತ ವರದಿಯನ್ನೂ ಸ್ವೀಕರಿಸಿದ್ದರು. ಅಂದಿನಿಂದ ಪರಿಷ್ಕೃತ ವರದಿಯಲ್ಲಿನ ಶಿಫಾರಸುಗಳೂ ಅನುಷ್ಠಾನವಾಗಿಲ್ಲ. ಸ್ಥಳೀಯರು ಎಂಬುದನ್ನು ಪರಿಗಣಿಸಲು ಕರ್ನಾಟಕದಲ್ಲಿ 15 ವರ್ಷ ವಾಸವಿರಬೇಕು ಎಂಬ ನಿಯಮವನ್ನು 10 ವರ್ಷಕ್ಕೆ ಇಳಿಸುವ ಬೇಡಿಕೆಯೂ ಇದರೊಂದಿಗೆ ಇದೆ. ಈ ಹೋರಾಟದ ಕಿಚ್ಚು ಮತ್ತೆ ಹೊತ್ತಿಕೊಂಡಿದ್ದು, ಕರ್ನಾಟಕ ರಕ್ಷಣ ವೇದಿಕೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಮತ್ತೆ ಬೀದಿಗಿಳಿದಿವೆ. ಕನ್ನಡಿಗರ ಈ ನ್ಯಾಯಯುತ ಬೇಡಿಕೆಯನ್ನು ಸಂವಿಧಾನದ ಮಿತಿಯಲ್ಲಿ ರಾಜ್ಯ ಸರಕಾರ ಮಾಡುವ ಬಗ್ಗೆ ಆಲೋಚನೆ ಮಾಡಬೇಕು.

ಟಾಪ್ ನ್ಯೂಸ್

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.