ಸಾಹಿತ್ಯ ಸಮ್ಮೇಳನ ವಿಚಾರದಲ್ಲಿ ಮತ್ತಷ್ಟು ವಿಳಂಬ ಬೇಡ


Team Udayavani, Oct 4, 2022, 6:00 AM IST

ಸಾಹಿತ್ಯ ಸಮ್ಮೇಳನ ವಿಚಾರದಲ್ಲಿ ಮತ್ತಷ್ಟು ವಿಳಂಬ ಬೇಡ

ಹಾವೇರಿಯಲ್ಲಿ ನಡೆಯಬೇಕಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಅನಿಶ್ಚಿತತೆ ಎದುರಾಗಿದೆ. ಸಮ್ಮೇಳನ ನಡೆಯುತ್ತದೆಯೋ ಇಲ್ಲವೊ ಎಂಬುದನ್ನು ಮೂಕನಾಗಿ ನೋಡುವ ಸ್ಥಿತಿ ಬಂದಿದೆ ಎಂದು ಖುದ್ದು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಮಹೇಶ್‌ ಜೋಷಿ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ಸಾಹಿತ್ಯ ಪರಿಷತ್‌ ಅಧ್ಯಕ್ಷರೇ ಹೀಗೆ ಹೇಳಿರುವುದು ನೋಡಿದರೆ ರಾಜ್ಯ ಸರಕಾರಕ್ಕೆ ಸಮ್ಮೇಳನವನ್ನು ನಡೆಸುವ ಆಸಕ್ತಿ ಇಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಕನ್ನಡದ ಕೆಲಸ ಆದ್ಯತೆಯ ಕೆಲಸವಾಗಬೇಕು. ಕನ್ನಡ ಕಡ್ಡಾಯಕ್ಕೆ ಕಾನೂನಾತ್ಮಕ ಬಲ ಕೊಡಲು ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಸಹ ಮಂಡಿಸಲಾಗಿದೆ. ಕನ್ನಡಕ್ಕೆ ತಮ್ಮ ಬದ್ಧತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌ ಪ್ರದರ್ಶಿಸಿಕೊಂಡೇ ಬಂದಿದ್ದಾರೆ. ಹಾಗಿದ್ದರೂ ಸಾಹಿತ್ಯ ಸಮ್ಮೇಳನದ ಬಗ್ಗೆ ಅನಾದರ ಏಕೆ ಎನ್ನುವುದು ಸ್ಪಷ್ಟವಾಗಿಲ್ಲ.

ಕೊರೊನಾ ಅನಂತರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಲವು ಬಾರಿ ಮುಂದೂಡಿಕೆಯಾಗಿದ್ದು, ಈಗ ನವೆಂಬರ್‌ 11ಕ್ಕೆ ದಿನ ನಿಗದಿಯಾಗಿದೆ. ರಾಜ್ಯ ಸರಕಾರ ಅನುದಾನ ಬಿಡುಗಡೆ ಮಾಡ ಬೇಕಾಗಿದೆ. ಜತೆಗೆ, ಲಾಂಛನ ಬಿಡುಗಡೆ ಮಾಡಬೇಕಾಗಿದೆ. ಇದು ವರೆಗೂ ಹಲವು ಸಭೆಗಳನ್ನು ನಡೆಸಿ ಸಿದ್ಧತೆಗಳ ಬಗ್ಗೆ ಸಮಾಲೋಚನೆ ನಡೆಸಬೇಕಿತ್ತು. ಆದರೆ, ಇದ್ಯಾವುದೂ ಆಗಿಲ್ಲ.

ಪ್ರತೀವರ್ಷ ಸಾಹಿತ್ಯ ಸಮ್ಮೇಳನವನ್ನು ಜಾತ್ರೆಯ ಮಾದರಿಯಲ್ಲಿ ನಡೆಸುವ ಬಗ್ಗೆ ಸಾಕಷ್ಟು ಸಮಯಗಳಿಂದ ಚರ್ಚೆಗಳು ನಡೆದುಕೊಂಡೇ ಬರುತ್ತಿವೆ. ಸಾಹಿತ್ಯ ಸಮ್ಮೇಳನಗಳಲ್ಲಿ ನಾಡು-ನುಡಿ ಪರ ಕೈಗೊಳ್ಳುವ ನಿರ್ಣಯಗಳು ಯಾವುದೂ ಜಾರಿಗೆ ಬರುವುದಿಲ್ಲ ಎಂಬ ಆರೋಪ ಇದ್ದೇ ಇದೆ. ಹೆಸರಿಗೆ ಮಾತ್ರ ಸಮ್ಮೇಳನ ಮಾಡಿ ಕೈತೊಳೆದು ಕೊಳ್ಳಲಾಗುತ್ತದೆ. ಈ ಬಗ್ಗೆಯೂ ಸರಕಾರ ಗಂಭೀರ ಗಮನ ಹರಿಸಬೇಕಾಗುತ್ತದೆ.

ಕನ್ನಡ ಸಾಹಿತ್ಯ ಪರಿಷತ್‌ಗೆ ಸ್ವಾಯತ್ತತೆ ನೀಡಬೇಕೆಂಬ ಚರ್ಚೆಯೂ ಬಹು ಹಿಂದಿನದು. ಸಾಹಿತ್ಯ ಪರಿಷತ್‌ ಪ್ರತೀ ಹಂತದಲ್ಲೂ ಸರಕಾರದ ಮುಂದೆ ತಲೆಬಾಗಿ ನಿಂತುಕೊಳ್ಳುವುದು ನಮ್ಮ ಸಾರಸ್ವತ ಲೋಕಕ್ಕೆ ಬಗೆಯುವ ಅವಮಾನ ಎಂದರೂ ತಪ್ಪಲ್ಲ. ಇಂಥ ವ್ಯವಸ್ಥೆಯನ್ನು ತಪ್ಪಿಸಬೇಕಿದೆ, ಪರಿಷತ್‌ಗೆ ಬಲ ನೀಡುವ ಬದಲು ಈಚೆಗೆ ಸರಕಾರವು ಕಸಾಪ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದೆ. ಇದರ ಬದಲು ಪರಿಷತ್‌ಗೆ ಹಾಗೂ ಅದರ ಅಧ್ಯಕ್ಷರಿಗೆ ಸಂಪೂರ್ಣ ಸ್ವಾಯತ್ತತೆ ನೀಡುವುದು ವಿಹಿತ.

ಪರಿಷತ್‌ನ ಚಟವಟಿಕೆಗಳ ಮೇಲೆ ಸರಕಾರ ನಿಯಂತ್ರಣ ಹೇರುವುದು ಅಸಮರ್ಥನೀಯವೇ. ರಾಜ್ಯ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಅಥವಾ ಇಲಾಖೆ ಅಧಿಕಾರಿಗಳು ಈ ಬಗ್ಗೆ ತತ್‌ಕ್ಷಣ ಗಮನಹರಿಸಬೇಕು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎದುರಾಗಿರುವ ಅಡೆತಡೆ ನಿವಾರಿಸಬೇಕು. ಸಮ್ಮೇಳನ ಸಿದ್ಧತೆ ಪ್ರಾರಂಭಿಸಿ ಮುಂದಿನ ಕೆಲಸ ಕಾರ್ಯಗಳಿಗೆ ಅನುದಾನ ಬಿಡುಗಡೆ ಮಾಡುವ ಕೆಲಸ ಮಾಡಬೇಕು.

ಈಗಿನ ಲೆಕ್ಕಾಚಾರದಂತೆ ತಿಂಗಳು ಮೇಲೆ ಇನ್ನು ಏಳು ದಿನಗಳು ಮಾತ್ರ ಸಮ್ಮೇಳನಕ್ಕೆ ಬಾಕಿ ಉಳಿದಿವೆ. ಈಗಾಗಲೇ ಅರ್ಧದಷ್ಟು ಕೆಲಸ ಮುಗಿದಿರಬೇಕಾಗಿತ್ತು. ಅಲ್ಲದೆ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿ ಈಗ ನಡೆಯುತ್ತಿದೆ. ಜನರಲ್ಲೂ ಈ ಬಗ್ಗೆ ಗೊಂದಲ ಮೂಡಿಸದೇ ಅಕ್ಷರ ಜಾತ್ರೆಯನ್ನು ಸುಸೂತ್ರವಾಗಿ ನಡೆಸಲು ಬೇಕಾದ ಎಲ್ಲ ಕೆಲಸಗಳನ್ನು ಮಾಡಬೇಕು.

ಟಾಪ್ ನ್ಯೂಸ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.