ಮತದಾನ ಪ್ರಮಾಣ ಹೆಚ್ಚಳ  ನಗರದಲ್ಲಿ ಮತ್ತೆ ನಿರಾಸಕ್ತಿ

Team Udayavani, May 11, 2023, 6:00 AM IST

ಮತದಾನ ಪ್ರಮಾಣ ಹೆಚ್ಚಳ  ನಗರದಲ್ಲಿ ಮತ್ತೆ ನಿರಾಸಕ್ತಿ

ಕೆಲವೊಂದು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿದರೆ, ರಾಜ್ಯ ವಿಧಾನಸಭೆ ಯ ಎಲ್ಲ 224 ಸ್ಥಾನಗಳಿಗೆ ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದ್ದು ಒಟ್ಟು 2,615 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದೊಳಗೆ ಭದ್ರವಾಗಿದ್ದು ಮೇ 13ರಂದು ನಡೆಯಲಿರುವ ಮತಎಣಿಕೆಯ ಬಳಿಕ ಬಹಿರಂಗಗೊಳ್ಳಲಿದೆ.

ಬುಧವಾರ ನಡೆದ ಚುನಾವಣೆಯಲ್ಲಿ ಸುಮಾರು ಶೇ. 72.67ರಷ್ಟು ಮತ ದಾನವಾಗಿದೆ. ಕಳೆದ ಬಾರಿ ಅಂದರೆ 2018ರ ಚುನಾವಣೆಯಲ್ಲಿ ಅದುವರೆಗಿನ ಗರಿಷ್ಠ ಶೇ.72.13 ಮತದಾನವಾಗಿತ್ತು. ಈ ಬಾರಿ ಮತದಾನ ಪ್ರಮಾಣದಲ್ಲಿ ಒಂದಷ್ಟು ಏರಿಕೆಯಾಗಿದೆ. ಅಲ್ಲದೆ ಮತದಾನ ಪ್ರಮಾಣವನ್ನು ಹೆಚ್ಚಿಸುವ ಪಣ ತೊಟ್ಟಿದ್ದ ಚುನಾವಣ ಆಯೋಗ ಸಾಕಷ್ಟು ಮುಂಚಿತವಾಗಿಯೇ ಜನರಲ್ಲಿ ಮತ ಜಾಗೃತಿ ಮೂಡಿಸಲು ವಿಶೇಷ ಕಾರ್ಯಕ್ರಮ ಮತ್ತು ಅಭಿಯಾನಗಳನ್ನು ಹಮ್ಮಿ ಕೊಂಡಿತ್ತು. ಅಷ್ಟು ಮಾತ್ರವಲ್ಲದೆ ಅಂಗವಿಕಲರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿಕೊಟ್ಟಿತ್ತು. ಇದು ಒಂದಷ್ಟು ಕೆಲಸ ಮಾಡಿರುವುದು ಕಾಣಿಸುತ್ತಿದೆ. ಆದರೆ ಬೆಂಗಳೂರಿನ ಮಂದಿ ಮತದಾನಕ್ಕಾಗಿ ಬರದೇ ಇರುವುದು ಅವರ ನಿರಾಸಕ್ತಿ ತೋರಿಸುತ್ತಿದೆ.  ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಹಲವೆಡೆ ಸಂಜೆಯ ವೇಳೆ ಭಾರೀ ಮಳೆ ಸುರಿದದ್ದರಿಂದ ಸಂಜೆ ಮತ ಚಲಾಯಿಸುವ ಇರಾದೆಯಲ್ಲಿದ್ದವರಿಗೆ ತಮ್ಮ ಹಕ್ಕು ಚಲಾಯಿಸಲು ತೊಡಕುಂಟಾಯಿತು.

ಇದೇ ವೇಳೆ ರಾಜ್ಯದ ಅಲ್ಲಲ್ಲಿ ವಿದ್ಯುನ್ಮಾನ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದಿತಾದರೂ ಮತಗಟ್ಟೆ ಅಧಿಕಾರಿಗಳು ಕ್ಷಿಪ್ರ ಕ್ರಮ ಕೈಗೊಂಡು ಬದಲಿ ಯಂತ್ರಗಳನ್ನು ಅಳವಡಿಸುವ ಮೂಲಕ ಮತದಾನ ಸುಸೂತ್ರವಾಗಿ ನಡೆಯು ವಂತೆ ನೋಡಿಕೊಂಡರು. ಇನ್ನು ಕೆಲವೆಡೆ ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತಗಟ್ಟೆಯ ಹೊರಗಡೆ ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದರಿಂದಾಗಿ ಪೊಲೀ ಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರೆ ಒಂದೆರಡು ಕಡೆ ಅನಿ ವಾರ್ಯವಾಗಿ ಬಲಪ್ರಯೋಗ ನಡೆಸಿ ಘರ್ಷಣೆ ನಿರತರನ್ನು ಸ್ಥಳದಿಂದ ಚದು ರಿಸಿದರು. ಇದೇ ವೇಳೆ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿರುವುದು, ಯಾರದೋ ಹೆಸರಿನಲ್ಲಿ ಇನ್ಯಾರೋ ಮತ ಚಲಾಯಿಸಿದ ಕೆಲವೊಂದು ಪ್ರಕರಣಗಳು ಕೂಡ ವರದಿಯಾಗಿವೆ. ಈ ಘಟನೆಗಳನ್ನು ಹೊರತುಪಡಿಸಿದಂತೆ ರಾಜ್ಯದಲ್ಲಿ ಬಹುತೇಕ ಮತದಾನ ಪ್ರಕ್ರಿಯೆ ಸಾಂಗವಾಗಿ ನೆರವೇರಿರುವುದು ಚುನಾವಣ ಕರ್ತವ್ಯ ನಿರತ ಅಧಿಕಾರಿಗಳು, ಸಿಬಂದಿ, ಚುನಾವಣ ಆಯೋಗ ಮತ್ತು ರಾಜ್ಯದ ಪಾಲಿಗೆ ಸಂತಸದ ವಿಚಾರವೇ.

ಪ್ರಸಕ್ತ ವಿಧಾನಸಭೆ ಚುನಾವಣೆ ಅಕ್ರಮದಲ್ಲಿ ದಾಖಲೆ ನಿರ್ಮಿಸಿರುವುದು ಬಲುದೊಡ್ಡ ಕಪ್ಪುಚುಕ್ಕೆಯಾಗಿದೆ. ಈ ಬಾರಿ ಚುನಾವಣ ಅಕ್ರಮಗಳಿಗೆ ಸಂಬಂಧಿ ಸಿದಂತೆ ಜಪ್ತಿ ಮಾಡಲಾದ ನಗದು ಮತ್ತು ಇತರ ವಸ್ತುಗಳ ಮೌಲ್ಯ ಬರೋಬ್ಬರಿ 379 ಕೋ. ರೂ. ಗಳಾಗಿದೆ. ಚುನಾವಣ ಆಯೋಗ ಮತ್ತು ಸಂಬಂಧಿತ ಇಲಾಖೆ ಗಳು ಈ ಬಾರಿ ಅಕ್ರಮಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ನಿಗಾ ಇರಿಸಿದ್ದೇ ಅಲ್ಲದೆ ಇದಕ್ಕಾಗಿ ವಿಶೇಷ ದಳಗಳನ್ನು ನಿಯೋಜಿಸಿದ್ದರಿಂದಾಗಿ ಬಲುದೊಡ್ಡ ಪ್ರಮಾಣದ ಜಪ್ತಿ ನಡೆದಿದೆ.  ಸುಶಿಕ್ಷಿತ ಮತದಾರರನ್ನು ಒಳಗೊಂಡ ರಾಜ್ಯದಲ್ಲಿ ಪಕ್ಷಗಳು ಮತ್ತು ಇತರ ಅಭ್ಯರ್ಥಿಗಳು ಮತದಾರರಿಗೆ ಆಮಿಷ ವೊಡ್ಡಲು ಭಾರೀ ಪ್ರಮಾಣದ ಹಣವನ್ನು ವ್ಯಯಿಸಲು ಯತ್ನ ನಡೆಸಿರುವುದು ಕಳವಳಕಾರಿ ಬೆಳವಣಿಗೆ. ಈ ಹಿಂದೆ ಚುನಾವಣ ಅಕ್ರಮಗಳಲ್ಲಿ ಉತ್ತರ ಭಾರತದ ರಾಜ್ಯಗಳು ಮುಂಚೂಣಿಯಲ್ಲಿದ್ದರೆ ಇದೀಗ ಇದರ ಕರಿನೆರಳು ದೇಶದ ಇತರ ರಾಜ್ಯಗಳ ಮೇಲೆ ಬೀಳುತ್ತಿರುವುದರ ಬಗೆಗೆ ಕೇವಲ ಚುನಾವಣ ಆಯೋಗ ಮಾತ್ರವಲ್ಲದೆ ರಾಜಕೀಯ ಪಕ್ಷಗಳೂ ಗಂಭೀರವಾಗಿ ಚಿಂತನೆ ನಡೆಸುವುದು ಅತ್ಯವಶ್ಯ. ಚುನಾವಣೆಗಳಲ್ಲಿ ಕಾಂಚಾಣದ ರೌದ್ರ ನರ್ತನಕ್ಕೆ ಕಡಿವಾಣ ಹಾಕಬೇಕಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

PM-yojana

Education: ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಬಡ ಪ್ರತಿಭಾನ್ವಿತರಿಗೆ ವರದಾನ

supreme-Court

Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ

Canada

Canada Temple Attack: ಕೆನಡಾ ದೇಗುಲ ದಾಳಿ: ಜಾಗತಿಕ ವಿರೋಧ ಪ್ರತಿಧ್ವನಿಸಲಿ

Flight

Hoax Call: ಹುಸಿ ಬಾಂಬ್‌ ಬೆದರಿಕೆ ಮರುಕಳಿಸದಿರಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.