ಕಸ್ತೂರಿರಂಗನ್‌ ವರದಿ ; ಜಾರಿ ಹಂತದಲ್ಲಿ ನಮ್ಯತೆ ಇರಲಿ


Team Udayavani, Dec 10, 2020, 6:14 AM IST

ಕಸ್ತೂರಿರಂಗನ್‌ ವರದಿ ; ಜಾರಿ ಹಂತದಲ್ಲಿ ನಮ್ಯತೆ ಇರಲಿ

ಸಾಂದರ್ಭಿಕ ಚಿತ್ರ

ಕಸ್ತೂರಿರಂಗನ್‌ ವರದಿಗೆ ಅಂತಿಮ ರೂಪ ನೀಡಲು ಹಸುರು ಪೀಠ (ಎನ್‌ಜಿಟಿ)ಯು ಕೇಂದ್ರ ಸರಕಾರಕ್ಕೆ ನೀಡಿರುವ ಗಡುವು ಹತ್ತಿರವಾಗುತ್ತಿದೆ. 2020ರ ಡಿ. 31ರೊಳಗೆ ವರದಿಯನ್ನು ಅನುಷ್ಠಾನಿಸುವಂತೆ ಹಸುರು ಪೀಠ ಸೂಚಿಸಿರುವುದರಿಂದ ಕರ್ನಾಟಕ ಸಹಿತ ಪಶ್ಚಿಮ ಘಟ್ಟ ಸಾಲು ಹಾದುಹೋಗುವ ರಾಜ್ಯಗಳು ತಮ್ಮ ಪ್ರತಿಕ್ರಿಯೆಯನ್ನು ಕೇಂದ್ರಕ್ಕೆ ಸಲ್ಲಿಸಲೇ ಬೇಕಿದೆ. ಇದು ಕಾನೂನು ಮತ್ತು ಸಂವಿಧಾನಾತ್ಮಕವಾಗಿರುವ ಅನಿವಾರ್ಯ. ಹಾಗೆಯೇ ಜಗತ್ತಿನ ಎಂಟು ಜೈವಿಕ ಹಾಟ್‌ಸ್ಪಾಟ್‌ಗಳಲ್ಲಿ ಒಂದಾಗಿರುವ ಮತ್ತು ಅಪರೂಪದ ಜೀವವೈವಿಧ್ಯ ತಾಣ ಎಂದು ಯುನೆಸ್ಕೊದಿಂದ ಮಾನ್ಯತೆ ಪಡೆದಿರುವ ಪಶ್ಚಿಮ ಘಟ್ಟಗಳ ಸಂರಕ್ಷಣೆಯೂ ಒಂದು ಅನಿವಾರ್ಯವೇ.

ಮೊತ್ತಮೊದಲಾಗಿ ನಾವು ಅರ್ಥ ಮಾಡಿಕೊಳ್ಳಬೇಕಾಗಿರುವುದು ಎಂದರೆ, ಕಸ್ತೂರಿ ರಂಗನ್‌ ವರದಿಯು ಪಶ್ಚಿಮ ಘಟ್ಟಗಳ ಸಂರಕ್ಷಣೆಯ ಉದ್ದೇಶದಿಂದ ರಚನೆಯಾ ಗಿರುವಂಥದ್ದು; ಜನರಿಗೆ ತೊಂದರೆಯಾಗಬೇಕು ಎಂಬ ಉದ್ದೇಶ ಅದರದ್ದಲ್ಲ. ಹೀಗಾಗಿ ಅದರ ಜಾರಿಯ ಸಂದರ್ಭದಲ್ಲಿ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ, ತಪ್ಪಲು ಪ್ರದೇಶಗಳಲ್ಲಿ ತಲೆಮಾರುಗಳಿಂದ ವಾಸಿಸುತ್ತಿರುವ ಜನರ ಜೀವನಕ್ಕೆ ಯಾವುದೇ ಅಡಚಣೆಯಾಗಬಾರದು ಎಂಬುದು ಸರಿಯಾದ ನಿಲುವು. ಕಸ್ತೂರಿರಂಗನ್‌ ವರದಿಯು ಪಶ್ಚಿಮ ಘಟ್ಟ ಶ್ರೇಣಿಯ ಶೇ. 37 ಭಾಗವನ್ನು ಪರಿಸರ ಸೂಕ್ಷ್ಮ ವಲಯದಡಿಗೆ ತರಲು ಶಿಫಾರಸು ಮಾಡಿದೆ. ಇದರಡಿ ಕರ್ನಾಟಕ, ಕೇರಳ, ಗೋವಾ ಸಹಿತ ಪಶ್ಚಿಮ ಘಟ್ಟ ಶ್ರೇಣಿ ವ್ಯಾಪಿಸಿರುವ ರಾಜ್ಯಗಳ 60 ಸಾವಿರ ಚ. ಕಿ.ಮೀ. ಪ್ರದೇಶದಲ್ಲಿ ಅಭಿವೃದ್ಧಿ ಚಟುವಟಿಕೆ ಗಳು ತಡೆಹಿಡಿಯಲ್ಪಡುತ್ತವೆ. ವರದಿ ಜಾರಿಯ ಸಂಬಂಧ ರಾಜ್ಯ ಸರಕಾರವು ರಚಿಸಿರುವ ಸಂಪುಟ ಉಪಸಮಿತಿಯು ಕೇಂದ್ರ ಸರಕಾರಕ್ಕೆ ಶಿಫಾರಸುಗಳನ್ನು ಇನ್ನಷ್ಟೇ ಸಲ್ಲಿಸಬೇಕಿದೆ.

ನಿಸರ್ಗ ಸಂರಕ್ಷಣೆಯ ಅಂತಾರಾಷ್ಟ್ರೀಯ ಒಕ್ಕೂಟ (ಐಸಿಯುಎನ್‌) ಇತ್ತೀಚೆಗೆ ತನ್ನ ತೃತೀಯ ವರದಿಯಲ್ಲಿ ಪಶ್ಚಿಮ ಘಟ್ಟದ ಸಂರಕ್ಷಣೆಯಲ್ಲಿ ಹೆಚ್ಚು ಪ್ರಗತಿ ಆಗಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದು ಕಸ್ತೂರಿರಂಗನ್‌ ವರದಿ ಜಾರಿಗೆ ಪೂರಕ ಅಂಶವಾಗಬಹುದು.

ಪಶ್ಚಿಮ ಘಟ್ಟದ ಜಾಗತಿಕ ಮಹತ್ವ ಮತ್ತು ಅದರ ನಾಶದಿಂದ ಉಂಟಾಗಬಹುದಾದ ದೀರ್ಘ‌ಕಾಲಿಕ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಂಡಲ್ಲಿ ಅದನ್ನು ಸಂರಕ್ಷಿಸಲೇ ಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಇದೇ ಸಂದರ್ಭದಲ್ಲಿ ಅದರ ಆಸುಪಾಸಿನಲ್ಲಿ ನೆಲೆಸಿರುವ ಜನಸಾಮಾನ್ಯರ ಹಿತಾಸಕ್ತಿಯನ್ನೂ ಅವಗಣಿಸುವಂತಿಲ್ಲ. ಪರಿಸರ ಸೂಕ್ಷ್ಮ ವಲಯವನ್ನು ಗುರುತಿಸುವ ಸಂದರ್ಭದಲ್ಲಿ ಉಪಗ್ರಹ ಚಿತ್ರಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ, ನೆಲದ ವಸ್ತುಸ್ಥಿತಿಯನ್ನಲ್ಲ ಎಂಬ ಆರೋಪಗಳಿವೆ.

ಹೀಗಾಗಿ ವರದಿ ಜಾರಿಯ ಸಂದರ್ಭದಲ್ಲಿ ಜನರಿಗೆ ತೊಂದರೆಯಾಗದಂತೆ ನೋಡಿ ಕೊಳ್ಳುವ ಮಟ್ಟದಲ್ಲಿ ಸಡಿಲಿಕೆಯ ಅವಕಾಶವನ್ನು ಉಳಿಸಿಕೊಳ್ಳುವುದು ಸೂಕ್ತವಾದ ಹೆಜ್ಜೆಯಾಗಿದೆ. ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಲ್ಪಡುವ ಪ್ರದೇಶದಲ್ಲಿ ನಿಷೇಧ ಗೊಳ್ಳುವ ಚಟುವಟಿಕೆಗಳಲ್ಲಿ ಸ್ಪಷ್ಟತೆಯನ್ನೂ ಹೊಂದಿರಬೇಕು. ಅಂದರೆ ಔದ್ಯಮಿಕ ಚಟುವಟಿಕೆಗಳು ಮತ್ತು ಜನಸಾಮಾನ್ಯರ ದೈನಂದಿನ ಬದುಕಿನ ಚಟುವಟಿಕೆಗಳು ಎಂಬ ವಿಭಜನೆ ಅತ್ಯಂತ ಸ್ಪಷ್ಟವಾಗಿರಬೇಕು. ಕೃಷಿ ಮತ್ತು ಅರಣ್ಯ ಪ್ರದೇಶದ ಗಡಿ ಗುರುತಿಸುವಿಕೆ ಕಾರ್ಯ ಪಾರದರ್ಶಕವಾಗಿ ನಡೆಯಬೇಕಿದೆ. ಹೀಗಾದಲ್ಲಿ ಮಾತ್ರ ಪಶ್ಚಿಮಘಟ್ಟದಲ್ಲಿನ ಜೀವ ವೈವಿಧ್ಯ ಉಳಿಯಲು ಸಾಧ್ಯ.

ಇದರ ಜತೆಗೆ ಸರಕಾರ ಮಾಡಬೇಕಿರುವ ಇನ್ನೊಂದು ಕೆಲಸವೆಂದರೆ, ವರದಿಯ ಅಂಶಗಳ ಬಗ್ಗೆ ಆ ಪ್ರದೇಶದ ಜನರಲ್ಲಿ ಸ್ಪಷ್ಟತೆಯನ್ನು ಮೂಡಿಸುವುದು. ಸದ್ಯ ವರದಿಯ ಎಷ್ಟೋ ಅಂಶಗಳ ಬಗ್ಗೆ ಜನರು ಕತ್ತಲಿನಲ್ಲಿದ್ದಾರೆ ಮತ್ತು ಆ ಕಾರಣದಿಂದಾಗಿಯೇ ಭಯದಲ್ಲಿದ್ದು, ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದನ್ನು ನಿವಾರಿಸುವ ಕೆಲಸ ತಳಮಟ್ಟದಲ್ಲಿ ಆಗಬೇಕಿದೆ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.