ವಿಪಕ್ಷಗಳ ಶಕ್ತಿ ಪ್ರದರ್ಶನ ಒಗ್ಗಟ್ಟಲ್ಲಿ ಮುಂದುವರಿದರೆ ಒಳಿತು 


Team Udayavani, May 24, 2018, 6:00 AM IST

x-14.jpg

ಜೆಡಿ(ಎಸ್‌)-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಚುನಾವಣೆ ಬಳಿಕ ರಾಜ್ಯದ ರಾಜಕೀಯದಲ್ಲಿದ್ದ ಅನಿಶ್ಚಿತತೆಯೂ ಒಂದು ಹಂತಕ್ಕೆ ಮುಗಿದಂತಾಗಿದೆ. ರಾಜ್ಯದ ಪಾಲಿಗಿದು ನಾಲ್ಕನೇ ಸಮ್ಮಿಶ್ರ ಸರಕಾರ. ಹಿಂದೆಂದೂ ಈ ಸಲ ಎದ್ದಷ್ಟು ರಾಜಕೀಯ ರಾಡಿ ಎದ್ದಿರಲಿಲ್ಲ. ಈ ಕಾರಣಕ್ಕೆ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯಿತು. ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದ್ದರೂ ಬಹುಮತವಿಲ್ಲದ ಕಾರಣಕ್ಕೆ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದುಕೊಂಡಿರುವ ಪಕ್ಷಗಳು ಸರಕಾರ ರಚಿಸಿವೆ. 

ಎರಡು ಕಾರಣಕ್ಕೆ ಇಂದಿನ ಪ್ರಮಾಣ ವಚನ ಸಮಾರಂಭ ಗಮನ ಸೆಳೆದಿದೆ. ಒಂದು ಬರೀ 37 ಸ್ಥಾನಗಳನ್ನು ಹೊಂದಿರುವ ಪಕ್ಷ ಅಧಿಕಾರ ಸೂತ್ರ ಹಿಡಿದದ್ದು. ಎರಡನೆಯದ್ದು ಈ ಸಮಾರಂಭದಲ್ಲಿ ಬಿಜೆಪಿ ವಿರೋಧಿಗಳೆಲ್ಲ ಒಗ್ಗೂಡಿರುವುದು. ಬಿಜೆಪಿಗೆ ಪರ್ಯಾಯವಾಗಿ ತೃತೀಯ ಶಕ್ತಿಯೊಂದು ಉದಯವಾಗಲು ಈ ಸಮಾರಂಭ ವೇದಿಕೆಯಾಯಿತು ಎನ್ನುವುದು ರಾಷ್ಟ್ರೀಯ ನೆಲೆಯಲ್ಲಿ ಚರ್ಚೆಗೆ ಅವಕಾಶ ಕಲ್ಪಿಸಿರುವ ಅಂಶ.  

ಬಿಜೆಪಿಯೇತರ ಸರಕಾರಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಹಲವು ಪ್ರಾದೇಶಿಕ ಪಕ್ಷಗಳ ಮುಖಂಡರು, ಬಿಜೆಪಿ ವಿರೋಧಿ ರಾಷ್ಟ್ರೀಯ ನಾಯಕರ ಸಮಾವೇಶಕ್ಕೆ ಕಾರಣವಾಗಿರುವ ಈ ಬೆಳವಣಿಗೆ ರಾಷ್ಟ್ರ ರಾಜಕಾರಣದ ದಿಕ್ಕನ್ನು ಬದಲಾಯಿಸೀತೇ ಎನ್ನುವುದನ್ನು ಈಗಲೇ ಹೇಳುವುದು ಅಸಾಧ್ಯ. ಆದರೆ ಬಿಜೆಪಿಯನ್ನು ಕಟ್ಟಿ ಹಾಕಲು ಎಲ್ಲ ವಿರೋಧ ಪಕ್ಷಗಳು ಒಗ್ಗಟ್ಟಾಗುತ್ತಿವೆ ಎಂಬ ಸಂದೇಶವಂತೂ ರವಾನೆಯಾಗಿದೆ. 

ಇಂದಿನ ಸಮಾರಂಭದಲ್ಲಿ ಭಾಗವಹಿಸಿದವರಲ್ಲಿ ಚಂದ್ರಬಾಬು ನಾಯ್ಡು, ಪಿಣರಾಯಿ ವಿಜಯನ್‌, ಕೆ.ಸಿ.ಆರ್‌.ಚಂದ್ರಶೇಖರ್‌, ಮಮತಾ ಬ್ಯಾನರ್ಜಿ ಅವರನ್ನು ಹೊರತುಪಡಿಸಿದರೆ ಉಳಿದವರೆಲ್ಲ ಅಧಿಕಾರ ವಂಚಿತರು. ಅಖೀಲೇಶ್‌ ಯಾದವ್‌, ಮಾಯಾವತಿ, ಸೀತಾರಾಮ್‌ ಯೆಚೂರಿ, ಶರದ್‌ ಪವಾರ್‌, ಸೋನಿಯಾ, ರಾಹುಲ್‌ ಇವರೆಲ್ಲ ಚುನಾವಣೆಗಳಲ್ಲಿ ಸೋತವರು. ಒಂದು ಲೆಕ್ಕದಲ್ಲಿ ಇದು ರಾಜಕೀಯ ಅಸ್ತಿತ್ವ ಪಡೆಯುವ / ಪುನರ್‌ ಸ್ಥಾಪಿಸುವ ಪ್ರಯತ್ನವಾಗಿಯೂ ತೋರುತ್ತಿದೆ. ಹೀಗಾಗಿ ಈ ಶಕ್ತಿ ಪ್ರದರ್ಶನವನ್ನು ಐಡೆಂಟಿಟಿ ಪಾಲಿಟಿಕ್ಸ್‌ ಎನ್ನಬಹುದು. ಪ್ರಾದೇಶಿಕ ಪಕ್ಷಗಳು ರಚಿಸಲುದ್ದೇಶಿಸಿರುವ ಈ ತೃತೀಯ ರಂಗದಲ್ಲಿ ಕಾಂಗ್ರೆಸ್‌ ಯಾವ ಪಾತ್ರ ವಹಿಸಲಿದೆ ಎನ್ನುವುದು ಕುತೂಹಲಕಾರಿ ಅಂಶ. ಸದ್ಯ ಒಟ್ಟಾಗಿರುವವರೆಲ್ಲ ವಿವಿಧ ಕಾಲಘಟ್ಟದಲ್ಲಿ ಬೇರೆ ಬೇರೆ ತೃತೀಯ ರಂಗಗಳಲ್ಲಿ ಗುರುತಿಸಿಕೊಂಡವರು. ಆದರೆ ಈ ಎಲ್ಲ ಸಂದರ್ಭದಲ್ಲಿ ಒಂದೋ ಕಾಂಗ್ರೆಸ್‌ ಇಲ್ಲವೇ ಬಿಜೆಪಿ ದೊಡ್ಡಣ್ಣನ ಸ್ಥಾನದಲ್ಲಿತ್ತು. ಸದ್ಯಕ್ಕೆ ಕಾಂಗ್ರೆಸ್‌ಗೆ ಈ ಪಾತ್ರ ನಿಭಾಯಿಸುವ ಸಾಮರ್ಥ್ಯವಿಲ್ಲ. ಆದರೆ  ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ಗೆ ಇಡೀ ದೇಶದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಅಗತ್ಯವಿದೆ. ಈ ಪ್ರಯತ್ನದಲ್ಲಿ ಅದು ಪುಟಿದೇಳಬಹುದು. ಹೀಗಾದಾಗ ತೃತೀಯ ರಂಗ ಇದೇ ರೂಪದಲ್ಲಿ ಉಳಿದೀತೆ ಎಂಬ ಕುತೂಹಲ ಸದ್ಯದ್ದು. 

ವಿರೋಧ ಪಕ್ಷಗಳ ಈ ಒಗ್ಗಟ್ಟು ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಯಾವ ರೀತಿ ಕಾರ್ಯ ನಿರ್ವಹಿಸುತ್ತಿದೆ ಎನ್ನುವುದನ್ನು ಅವಲಂಬಿಸಿದೆ. ಪರಸ್ಪರ ಹೊಂದಿಕೊಂಡು ಯಾವುದೇ ವಿವಾದಗಳಿಗೆ ಎಡೆಯಿಲ್ಲದಂತೆ ಸರಕಾರವನ್ನು ನಡೆಸಿಕೊಂಡು ಹೋದರೆ ಈ ಮಾದರಿಯನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗಬಹುದು. ಆದರೆ ಎರಡೂ ಪಕ್ಷಗಳಲ್ಲಿ ಅಧಿಕಾರಕ್ಕಾಗಿ ಕಾದು ಕುಳಿತಿರುವವರ ದೊಡ್ಡ ದಂಡೇ ಇರುವುದರಿಂದ ಸರಕಾರ ಎಷ್ಟು ಸಮಯ ಬಾಳುತ್ತದೆ ಎನ್ನುವ ಅನುಮಾನವೂ ಇದ್ದೇ ಇದೆ. ಪ್ರಜಾತಂತ್ರದಲ್ಲಿ ಯಾವುದೇ ಬಗೆಯ ಏಕಸ್ವಾಮ್ಯ ಅಪಾಯಕಾರಿ. ಈ ನಿಟ್ಟಿನಲ್ಲಿ ಬಿಜೆಪಿಯನ್ನು ಎದುರಿಸಲು ತೃತೀಯ ಶಕ್ತಿಗಳ ಕ್ರೋಢೀಕರಣವಾಗುತ್ತಿರುವುದು ಪ್ರಜಾತಂತ್ರದ ಹಿತದೃಷ್ಟಿಯಿಂದ ಆರೋಗ್ಯಕಾರಿ ನಡೆ ಎಂದಷ್ಟೇ ಹೇಳಬಹುದು.

ಟಾಪ್ ನ್ಯೂಸ್

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.