ಶಾಸಕರ ಮೇಲೆ ಹಲ್ಲೆ ಕಠಿನ ಕ್ರಮ ಅಗತ್ಯ

Team Udayavani, Nov 20, 2019, 5:22 AM IST

hh-17

ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದಾಗ ವ್ಯಕ್ತಿಯೊಬ್ಬನಿಂದ ಮಾರಣಾಂತಿಕ ಹಲ್ಲೆಗೆ ಒಳಗಾದ ಮಾಜಿ ಸಚಿವ ಹಾಗೂ ಶಾಸಕ ತನ್ವೀರ್‌ ಸೇಠ್ ಪ್ರಕರಣವನ್ನು ಕೇವಲ ಒಂದು “ಕೊಲೆ ಯತ್ನ’ ಪ್ರಕರಣ ಎಂಬಂತೆ ನೋಡಲು ಸಾಧ್ಯವಿಲ್ಲ.

ಲಕ್ಷಾಂತರ ಜನರನ್ನು ಪ್ರತಿನಿಧಿಸುವ ಒಬ್ಬ ಶಾಸಕನಿಗೆ ಗನ್‌ಮ್ಯಾನ್‌ ಜತೆಯಲ್ಲಿದ್ದಾಗಲೇ ಡ್ಯಾಗರ್‌ನಿಂದ ಮಾರಣಾಂತಿಕ ಹಲ್ಲೆ ನಡೆಯುತ್ತದೆ ಎಂದರೆ ಕಾನೂನು ಸುವ್ಯವಸ್ಥೆಯ ಸ್ಥಿತಿ ಎಲ್ಲಿಗೆ ಬಂತು ಎಂಬ ಪ್ರಶ್ನೆ ಉದ್ಭವವಾಗುತ್ತದೆ ಹಾಗೂ ಸಮಾಜ ಘಾತುಕ ಶಕ್ತಿಗಳನ್ನು ಹತ್ತಿಕ್ಕುವ ತುರ್ತನ್ನು ಈ ಪ್ರಕರಣ ಸಾರುತ್ತಿದೆ.

ತನ್ವೀರ್‌ ಸೇಠ್ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್ಐ ವಿರುದ್ಧದ ಎಲ್ಲ ಪ್ರಕರಣ ವಾಪಸ್‌ ಪಡೆದಿದ್ದರು. ಅದರಿಂದಾಗಿಯೇ ಇಂತಹ ಕೃತ್ಯಗಳು ನಡೆಯುತ್ತಿವೆ ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ.

ಹಿರಿಯ ರಾಜಕಾರಣಿಯಾಗಿದ್ದ ಅಜೀಜ್‌ ಸೇs… ಪುತ್ರ ತನ್ವೀರ್‌ ಸೇs… ರಾಜ್ಯದ ಹಿರಿಯ ಶಾಸಕರು. ಮೈಸೂರು ಭಾಗದಲ್ಲಷ್ಟೇ ಅಲ್ಲದೆ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದಲ್ಲೂ ತಮ್ಮದೇ ಆದ ಪ್ರಭಾವ, ವರ್ಚಸ್ಸು ಹೊಂದಿರುವ ರಾಜಕಾರಣಿ. ಅಂತಹವರ ಮೇಲೆ ಹಲ್ಲೆ ನಡೆಯುವುದು ಗಂಭೀರವಾದ ವಿಚಾರವೇ. ಸಮಾಜಘಾತುಕ ಶಕ್ತಿಗಳು ಯಾರೇ ಆಗಿದ್ದರೂ, ಎಂತಹ ಸಂಘಟನೆ ಅಥವಾ ಧರ್ಮ, ಸಮುದಾಯಕ್ಕೆ ಸೇರಿದ್ದರೂ ತಪ್ಪು ತಪ್ಪೇ. ಹಿಂಸೆ ಯನ್ನು ಯಾರೂ ಒಪ್ಪುವುದಿಲ್ಲ.

ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಸಭೆ, ಸಮಾರಂಭ, ಕ್ಷೇತ್ರದ ಜನತೆಯ-ಕುಟುಂಬ ವರ್ಗದವರ ಮದುವೆ ಸೇರಿದಂತೆ ನಿತ್ಯವೂ ಅನೇಕ ಕಾರ್ಯಕ್ರಮಗಳಲ್ಲಿ ಹಾಜರಾಗಬೇಕಾಗುತ್ತದೆ. ಆಗ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಬಂದು ಕೈ ಕುಲುಕುವುದು ಸಹ ಜವೇ. ಇತ್ತೀಚಿನ ವರ್ಷಗಳಲ್ಲಿ ಜನ ಪ್ರತಿನಿಧಿಗಳೊಂದಿಗೆ ಸೆಲ್ಫಿ ಪಡೆದುಕೊಳ್ಳುವ ಕ್ರೇಜ್‌ ಕೂಡ ಅಧಿಕವಾಗುತ್ತಿದೆ. ಜನಪ್ರತಿನಿಧಿಗಳಿಗೆ ಜನರ ಇಂಥ ಆಗ್ರಹಗಳನ್ನು ನಿರಾಕರಿಸುವುದಕ್ಕೂ ಕಷ್ಟವಾಗುತ್ತದೆ.

ಆದರೆ, ಇಂತಹ ಕೃತ್ಯಗಳು ನಡೆದಾಗ ಪ್ರತಿಯೊಬ್ಬರನ್ನೂ ಅನುಮಾನದ ದೃಷ್ಟಿಯಿಂದ ನೋಡುವಂತಾಗುತ್ತದೆ. ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲದಿದ್ದರೆ ಜನಸಾಮಾನ್ಯರ ಕಥೆ ಏನು ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ಇನ್ನಾ ದರೂ ರಾಜಕೀಯ ಪಕ್ಷಗಳು ಹಾಗೂ ನಾಯಕರು ಸಮಾಜಘಾತುಕ ಶಕ್ತಿಗಳು, ವ್ಯಕ್ತಿಗಳು, ಸಂಘಟನೆಗಳ ಬಗ್ಗೆ ಮೃದು ಧೋರಣೆ ತಾಳದೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವ ದಿಟ್ಟ ನಿರ್ಧಾರ ತೋರಬೇಕು.

ಜನಪ್ರತಿನಿಧಿಯ ಮೇಲೆ ಇಂತಹ ಹಲ್ಲೆ ವೈಯಕ್ತಿಕ ಅಥವಾ ರಾಜಕೀಯ ದ್ವೇಷಕ್ಕೆ ಆಗಿದ್ದರೂ ಅದರ ಹಿಂದೆ ಯಾರಿದ್ದಾರೆ? ಯಾವ ಕಾರಣ ಇರಬಹುದು? ಎಂಬುದರ ಬಗ್ಗೆ ಸಮಗ್ರ ತನಿಖೆಯೂ ಅಗತ್ಯ. ಹೀಗಾಗಿ, ಸರ್ಕಾರ ಹಾಗೂ ಪ್ರತಿಪಕ್ಷ ಇದರಲ್ಲಿ ರಾಜಕೀಯ ಬೆರೆಸದೆ ಪಾರದರ್ಶಕ ತನಿಖೆಗೆ ಅವಕಾಶ ಕೊಟ್ಟು ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಜನಪ್ರತಿನಿಧಿಗಳಿಗೆ ರಕ್ಷಣೆ ವಿಚಾರದಲ್ಲಿ ಬಿಗಿ ಕ್ರಮದ ಬಗ್ಗೆ ಯೋಚಿಸಬೇಕು. ಜನಪ್ರತಿನಿಧಿಗಳು ಸಹ ಎಚ್ಚರಿಕೆ ವಹಿಸಬೇಕು.

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.