ಮಾನವ- ವನ್ಯಜೀವಿ ಸಂಘರ್ಷ: ಇನ್ನೆಷ್ಟು ದುರಂತ ಸಂಭವಿಸಬೇಕು?


Team Udayavani, Feb 14, 2023, 6:00 AM IST

ಮಾನವ- ವನ್ಯಜೀವಿ ಸಂಘರ್ಷ: ಇನ್ನೆಷ್ಟು ದುರಂತ ಸಂಭವಿಸಬೇಕು?

ರಾಜ್ಯದಲ್ಲಿ ಪ್ರಾಣಿ ಮತ್ತು ಮಾನವ ಸಂಘರ್ಷ ಪ್ರಕರಣಗಳು ಪದೇ ಪದೆ ಸಂಭವಿಸು ತ್ತಿ ರುವುದು ಆತಂಕಕ್ಕೆ ಕಾರಣವಾಗಿದೆ. ಆನೆ, ಚಿರತೆ, ಹುಲಿ ದಾಳಿಗೆ ಅಮಾಯಕ ಜನರು ಬಲಿಯಾಗುತ್ತಿದ್ದು, ಒಂದು ರೀತಿಯಲ್ಲಿ ಕಾಡಂಚಿನಲ್ಲಿ ವಾಸಿಸುವವರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮಲೆನಾಡು ಭಾಗದಲ್ಲಿ ಆನೆ ದಾಳಿ, ಹಳೇ ಮೈಸೂರು ಭಾಗದಲ್ಲಿ ಚಿರತೆ, ಕೊಡಗು, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಹುಲಿ ದಾಳಿ ಜನರನ್ನು ಬೆಚ್ಚಿ ಬೀಳಿಸಿದೆ. ರಾಜ್ಯ ಸರಕಾರ ಪ್ರತೀ ಬಾರಿ ಪ್ರಕರಣ ಆದಾಗಲೂ ಮಾನವ -ಪ್ರಾಣಿ ಸಂಘರ್ಷ ತಡೆಯಲು ಒಂದಷ್ಟು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿ ಪರಿಹಾರ ಘೋಷಿಸುತ್ತಿದೆ. ಆದರೆ ಇದಕ್ಕೆ ಶಾಶ್ವತ ಪರಿಹಾರ ಇಲ್ಲದಂತಾಗಿದೆ.

ಕಾಡಿನಲ್ಲಿರಬೇಕಾದ ವನ್ಯ ಜೀವಿಗಳು ನಾಡಿಗೆ ಬಂದು ಬೆಳೆ ನಷ್ಟ ಉಂಟು ಮಾಡು ವುದು ಒಂದು ಕಡೆಯಾದರೆ, ಜನರ ಮೇಲೆ ಎರಗಿ ಪ್ರಾಣ ಹಾನಿ ಮಾಡುತ್ತಿರುವುದು ಮತ್ತೂಂದೆಡೆ. ಇದಕ್ಕೆ ಕೊನೆಯೇ ಇಲ್ಲವೇ ಎಂಬ ಪ್ರಶ್ನೆಗೆ ಉತ್ತರ ಇಲ್ಲದಂತಾಗಿದೆ.

ಅದರಲ್ಲೂ ಕೊಡಗಿನಲ್ಲಿ ಹುಲಿ ದಾಳಿಯಿಂದಾಗಿ 24 ಗಂಟೆಗಳಲ್ಲಿ ಅಜ್ಜ-ಮೊಮ್ಮಗ ಸಾವನ್ನಪ್ಪಿರುವುದು ಪರಿಸ್ಥಿತಿಯ ಭೀಕರತೆಯನ್ನು ತೋರಿಸುತ್ತಿದೆ. ಕಾಡಂಚಿನ ಗ್ರಾಮಗಳಲ್ಲಿ ಜನರಂತೂ ತೀವ್ರ ಆತಂಕದಿಂದಲೇ ಜೀವನ ಸಾಗಿಸುತ್ತಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಸಾವಿಗೀಡಾದ ಮೇಲೆ ಕೊಡಗಿನ ಜನರ ಆಕ್ರೋಶದ ಕಟ್ಟೆಯೂ ಒಡೆದಿದೆ. ಈ ಅಜ್ಜ-ಮೊಮ್ಮಗನ ತವರು ಹುಣಸೂರಿನಲ್ಲಿ ಆಕ್ರೋಶ ಹೆಚ್ಚಾಗಿದ್ದು, ಹುಲಿಯನ್ನು ಕೊಂದು ಹಾಕುವಂತೆ ಆಗ್ರಹ ಮಾಡುತ್ತಿದ್ದಾರೆ.

ಪ್ರಸಕ್ತ ವರ್ಷ ಆನೆ, ಚಿರತೆ, ಹುಲಿ ಸೇರಿ 28 ಪ್ರಾಣಿ ದಾಳಿ ಪ್ರಕರಣಗಳು ರಾಜ್ಯದಲ್ಲಿ ನಡೆದಿವೆ. ಅದಕ್ಕೆ ಈಗ ಕೊಡಗಿನ ಹುಲಿ ದಾಳಿಯೂ ಸೇರ್ಪಡೆಯಾಗಿದೆ. ಇದಂತು ಅತ್ಯಂತ ಮನಕಲಕುವ ಘಟನೆ. ಪ್ರಾಣಿ ಮತ್ತು ಮಾನವ ಸಂಘರ್ಷ ಪ್ರಕರಣಗಳಲ್ಲಿ ಪ್ರಾಣ ಕಳೆದುಕೊಂಡವರಿಗೆ ಅಥವಾ ಬೆಳೆ ನಷ್ಟ ಅನುಭವಿಸಿದವರಿಗೆ ಸರಕಾರ ಹಣಕಾಸು ಪರಿಹಾರ ನೀಡುವುದು ಶಾಶ್ವತ ಪರಿಹಾರವಲ್ಲ. ಪ್ರಾಣಿ ಮತ್ತು ಮಾನವ ಸಂಘರ್ಷ ಪ್ರಕರಣಗಳಿಗೆ ಅಂತ್ಯ ಹಾಡಲು ಪರಿಣಾಮಕಾರಿ ಕ್ರಮ ಕೈಗೊಳ್ಳುವುದು. ಸರಕಾರ ಅಂತಹ ಪ್ರಕರಣ ಗಂಭೀರವಾಗಿ ಪರಿಗಣಿಸಿ ವನ್ಯ ಜೀವಿ ತಜ್ಞರು, ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ, ಅಗತ್ಯ ಬಿದ್ದರೆ ತಂಡ ರಚಿಸಿ ಅಧ್ಯಯನ ವರದಿ ತರಿಸಿಕೊಂಡು ಮುಂದುವರಿಯುವುದು ಅಗತ್ಯ.
ಪ್ರಾಣಿ ಮತ್ತು ಮಾವನ ಸಂಘರ್ಷ ಪ್ರಕರಣಗಳಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಗಳ ಸ್ಥಿತಿಯೂ ತುಂಬಾ ಶೋಚನೀಯ ಸ್ಥಿತಿಯಲ್ಲಿದೆ. ಇತ್ತೀಚೆಗೆ ಕಂದಾಯ ಸಚಿವರು ಹಟ್ಟಿಯಲ್ಲಿ ವಾಸ್ತವ್ಯ ಹೂಡಲು ಹೋಗಿದ್ದಾಗ ಅವರ ಮುಂದೆ ಆನೆ ತುಳಿತಕ್ಕೆ ಒಳಗಾದ ಕುಟುಂಬ ನೋವು ತೋಡಿಕೊಂಡಿತ್ತು.ಇದೇ ರೀತಿ ಮಲೆನಾಡು ಭಾಗದಲ್ಲಿ ಆನೆ ದಾಳಿಯಿಂದ ಸಾಕಷ್ಟು ಪ್ರಾಣ ಹಾನಿ, ಬೆಳೆ ನಷ್ಟ ಆಗಿದೆ.

ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ಚಿರತೆ ಹಾವಳಿಯೂ ದೊಡ್ಡ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಭಯ ಉಂಟು ಮಾಡಿತ್ತು. ರಾಜಧಾನಿ ಬೆಂಗಳೂರಿನ ಕೋಡಿಪಾಳ್ಯ, ತುರಹಳ್ಳಿ ಅರಣ್ಯ ಭಾಗದಲ್ಲೂ ಚಿರತೆ ಕಾಣಿಸಿಕೊಂಡು ಜನರಲ್ಲಿ ಆತಂಕ ಉಂಟು ಮಾಡಿತ್ತು.

ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಇತ್ತೀಚೆಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲೂ ವನ್ಯ ಜೀವಿ ತಜ್ಞರು ಹಲವು ಸಲಹೆ ನೀಡಿದ್ದಾರೆ. ಯಾಕಾಗಿ ಪ್ರಾಣಿಗಳು ನಾಡಿನತ್ತ ಬರುತ್ತಿವೆ, ತಡೆಯಲು ಏನು ಮಾಡಬೇಕು ಎಂಬುದರ ಬಗ್ಗೆ ಸಲಹೆ ನೀಡಿದ್ದಾರೆ.ಇದೆಲ್ಲ ಪರಿಗಣಿಸಿ ರಾಜ್ಯ ಸರಕಾರ ಪ್ರಾಣಿಗಳ ಹಾವಳಿ ನಿಯಂತ್ರಣ ವಿಚಾರದಲ್ಲಿ ವೈಜ್ಞಾನಿಕ ತಳಹದಿಯ ಮೇಲೆ ಒಂದು ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲೇಬೇಕು. ಇಲ್ಲವಾದರೆ ಮತ್ತಷ್ಟು ಅಮಾಯಕರು ಪ್ರಾಣ ಕಳೆದುಕೊಳ್ಳುವಂತಾಗುತ್ತದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.