Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ


Team Udayavani, Oct 19, 2024, 6:21 AM IST

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

ರಾಜ್ಯದೆಲ್ಲೆಡೆ ಹಿಂಗಾರು ಮಾರುತಗಳ ಅಬ್ಬರ ಜೋರಾಗಿಯೇ ಇದೆ. ಸದ್ಯ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಹಂಗಾಮಿನ ಕೃಷಿ ಬೆಳೆಗಳು ಕಟಾವು ಯಾ ಕೊಯ್ಲಿನ ಹಂತದಲ್ಲಿದ್ದು, ಮಳೆಯ ಪರಿಣಾಮ ಹೊಲಗಳಲ್ಲಿಯೇ ಉಳಿಯುವಂತಾಗಿದೆ. ಇಷ್ಟು ಮಾತ್ರವಲ್ಲದೆ ಬೆಳೆಗಳು ನೀರಿನಲ್ಲಿ ಮುಳು ಗಡೆಯಾಗಿದ್ದು, ಭಾರೀ ಪ್ರಮಾಣದಲ್ಲಿ ಹಾನಿಗೀಡಾಗಿವೆ. ಹಿಂಗಾರು ಮಳೆಯ ಈ ಆರ್ಭಟ ರೈತರ ಪಾಲಿಗಂತೂ ಸಂಕಷ್ಟದ ಸರಮಾಲೆಯನ್ನೇ ತಂದೊಡ್ಡಿದೆ.

ಸಾಮಾನ್ಯವಾಗಿ ಈಶಾನ್ಯ ಮಾರುತಗಳು ದಕ್ಷಿಣ ಒಳನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆ ಸುರಿಸಿದರೆ, ಈ ಬಾರಿ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿಯೂ ಉತ್ತಮ ಮಳೆಯಾಗಿದೆ. ಸದ್ಯ ಕರಾವಳಿ, ಮಲೆನಾಡು ಮತ್ತು ಒಳನಾಡಿನಲ್ಲಿ ವಿವಿಧ ಕೃಷಿ ಬೆಳೆಗಳು ಕಟಾವಿನ ಹಂತದಲ್ಲಿದೆ. ಆದರೆ ಮಳೆಯಿಂದಾಗಿ ಆಹಾರ ಧಾನ್ಯಗಳು, ತರಕಾರಿ ಸಹಿತ ಬಹುತೇಕ ಕೃಷಿ ಬೆಳೆಗಳ ಕೊಯ್ಲು ವಿಳಂಬಗೊಳ್ಳುವಂತಾಗಿದೆ.

ಮಳೆಯಿಂದಾಗಿ ಭತ್ತ, ಮೆಕ್ಕೆಜೋಳ, ಶೇಂಗಾ, ಹತ್ತಿ ಸಹಿತ ವಿವಿಧ ಕೃಷಿ ಬೆಳೆಗಳು ಹೊಲಗದ್ದೆಗಳಲ್ಲಿಯೇ ನೆಲಕ್ಕೊರಗಿವೆ. ಮಳೆ ನಿಂತು ಬಿಸಿಲು ಬರದೇ ಹೋದಲ್ಲಿ ಈ ಎಲ್ಲ ಬೆಳೆಗಳು ಮಣ್ಣುಪಾಲಾಗಲಿರುವುದು ನಿಶ್ಚಿತ. ಇನ್ನು ಈಗಾಗಲೇ ಕಟಾವು ಮಾಡಲ್ಪಟ್ಟ ಆಹಾರ ಧಾನ್ಯಗಳು, ತರಕಾರಿಗಳ ಸಂರಕ್ಷಣೆ ಕೂಡ ರೈತರ ಪಾಲಿಗೆ ಸವಾಲಾಗಿ ಪರಿಣಮಿಸಿದೆ. ಈರುಳ್ಳಿ, ಬಟಾಟೆ ಮತ್ತಿತರ ಕೃಷಿ ಬೆಳೆಗಳನ್ನು ಒಣಗಿಸಲು ಸಾಧ್ಯವಾಗದೆ ಅವು ಕೊಳೆತು ನಾರತೊಡಗಿವೆ.

ತೋಟಗಾರಿಕಾ ಬೆಳೆಗಳಿಗೂ ಹಾನಿ ಸಂಭವಿಸಿದ್ದು ಕಾಫಿಯ ಎಳೆಯ ಕಾಯಿಗಳು ಉದುರುತ್ತಿದ್ದರೆ ಹಲವೆಡೆ ಕಬ್ಬು, ಬಾಳೆ ಕೂಡ ನೆಲಕಚ್ಚಿವೆ. ಇದೇ ವೇಳೆ ಮೇವನ್ನು ಒಣಗಿಸಲು ಕೂಡ ರೈತರು ತ್ರಾಸ ಪಡುತ್ತಿದ್ದಾರೆ.

ಮುಂದಿನ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೈತರನ್ನು ಚಿಂತಾಕ್ರಾಂತರನ್ನಾಗಿಸಿದೆ.

ರೈತರು ಕಳೆದ ನಾಲ್ಕು ತಿಂಗಳುಗಳಿಂದ ಶ್ರಮ ವಹಿಸಿ, ಬೆಳೆದ ಬೆಳೆಗಳು ಇನ್ನೇನು ಕೈ ಸೇರಿತು ಎನ್ನುವಷ್ಟರಲ್ಲಿ ಹಿಂಗಾರಿನ ಆರ್ಭಟ ಎಲ್ಲವನ್ನೂ ಆಪೋಶನ ತೆಗೆದುಕೊಳ್ಳತೊಡಗಿರುವುದರಿಂದ ತಲೆಯ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ.
ಕಳೆದೆರಡು ತಿಂಗಳುಗಳಿಂದ ರಾಜ್ಯದಲ್ಲಿ ಹಗರಣ, ಭ್ರಷ್ಟಾಚಾರ, ಅಕ್ರಮಗಳನ್ನು ಮುಂದಿಟ್ಟು ಆಡಳಿತ ಮತ್ತು ವಿಪಕ್ಷಗಳ ನಡುವೆ ರಾಜಕೀಯ ವಾಕ್ಸಮರ, ಪ್ರತಿಭಟನೆ ಬಿರುಸಿನಿಂದ ಸಾಗಿದ್ದು, ಆಡಳಿತ ಯಂತ್ರ ಬಹುತೇಕ ನಿಷ್ಕ್ರಿಯ ಸ್ಥಿತಿಯಲ್ಲಿದೆ. ರಾಜ್ಯದ ಲಕ್ಷಾಂತರ ರೈತರು ಸದ್ಯ ಸಂಕಷ್ಟದ ಸ್ಥಿತಿಯಲ್ಲಿದ್ದು ಸರಕಾರ, ಜನಪ್ರತಿನಿಧಿ ಗಳು ಮತ್ತು ಆಡಳಿತ ಯಂತ್ರ ರೈತರ ನೆರವಿಗೆ ಧಾವಿಸಬೇಕು. ರಾಜಕೀಯವೇನೇ ಇರಲಿ, ಸರಕಾರ ಮತ್ತು ಜನಪ್ರತಿನಿಧಿಗಳಿಗೆ ಸದ್ಯ ರೈತರ ಸಂಕಷ್ಟಕ್ಕೆ ಸ್ಪಂದಿಸುವುದೇ ಪ್ರಥಮ ಆದ್ಯತೆಯಾಗಬೇಕು.

ಮಳೆಯಿಂದಾಗಿ ಬೆಳೆ ಹಾನಿಗೀಡಾದ ಪ್ರದೇಶಗಳ ತುರ್ತು ಸಮೀಕ್ಷೆ ನಡೆಸಿ, ರೈತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು. ಬೆಳೆ ವಿಮೆ ಸಕಾಲದಲ್ಲಿ ರೈತರ ಕೈಸೇರುವಂತೆ ಮಾಡಿ, ಮುಂದಿನ ಹಂಗಾಮಿನ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ತೋರುವಂತೆ ಮಾಡಬೇಕು. ಕೃಷಿ ಬೆಳೆಗಳನ್ನು ಸಂರಕ್ಷಿಸಲು ಅಗತ್ಯ ಗೋದಾಮು ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು.

ಇದೇ ವೇಳೆ ಕಾಳಸಂತೆಕೋರರು ಪರಿಸ್ಥಿತಿಯ ದುರ್ಲಾಭ ಪಡೆಯದಂತೆ ಕಟ್ಟೆಚ್ಚರ ವಹಿಸಬೇಕು. ದೀಪಾವಳಿ ಹಬ್ಬ ಸಮೀಪಿಸುತ್ತಿರುವುದರಿಂದ ಆಹಾರ ಧಾನ್ಯಗಳು ಮತ್ತು ತರಕಾರಿ ಬೇಡಿಕೆಗೆ ತಕ್ಕಷ್ಟು ಪ್ರಮಾಣದಲ್ಲಿ ಮಾರುಕಟ್ಟೆಗೆ ಪೂರೈಕೆಯಾಗುವುದನ್ನು ಖಾತರಿಪಡಿಸುವ ಮೂಲಕ ಬೆಲೆಗಳನ್ನು ನಿಯಂತ್ರಣ ದಲ್ಲಿರಿಸಿಕೊಳ್ಳುವ ಗುರುತರ ಹೊಣೆಗಾರಿಕೆ ಸರಕಾರದ್ದಾಗಿದೆ. ಇವೆಲ್ಲದರತ್ತ ಸರಕಾರ ಮತ್ತು ಆಡಳಿತ ಯಂತ್ರ ತುರ್ತು ಗಮನಹರಿಸಿದಲ್ಲಿ ರೈತರು ಮತ್ತು ಗ್ರಾಹಕರು ಸಂಕಷ್ಟದಿಂದ ಪಾರಾಗಲು ಸಾಧ್ಯ.

ಟಾಪ್ ನ್ಯೂಸ್

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ

WI vs ENG, 5th T20I: ಅಂತಿಮ ಟಿ20 ರದ್ದು ಇಂಗ್ಲೆಂಡ್‌ಗೆ 3-1 ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.