ಎಚ್ಚರಿಕೆ ನಡುವೆ ಶೈಕ್ಷಣಿಕ ಚಟುವಟಿಕೆ ನಡೆಯಲಿ

Team Udayavani, Feb 1, 2022, 6:00 AM IST

ಎಚ್ಚರಿಕೆ ನಡುವೆ ಶೈಕ್ಷಣಿಕ ಚಟುವಟಿಕೆ ನಡೆಯಲಿ

ಕೊರೊನಾ ಮೂರನೇ ಅಲೆಯಲ್ಲಿ ಆತಂಕ ತಗ್ಗುತ್ತಿದ್ದಂತೆ ಬೆಂಗಳೂರಿನಲ್ಲಿ ತಿಂಗಳ ಬಳಿಕ ಶಾಲಾ-ಕಾಲೇಜುಗಳು ಸೋಮವಾರದಿಂದ ಆರಂಭವಾಗಿವೆ. ಉಳಿದೆಡೆಗಳಲ್ಲಿ ಆತಂಕದ ನಡುವೆಯೇ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿವೆ. ಕೆಲವು ಶಾಲಾ ಕಾಲೇಜುಗಳಿಂದ ಅನಾರೋಗ್ಯದ ವರದಿಗಳು ಬರುತ್ತಿದ್ದು, ಈ ನಿಟ್ಟಿನಲ್ಲಿ ಇದು ಎಲ್ಲರೂ ಎಚ್ಚರ ವಹಿಸಿಕೊಳ್ಳಬೇಕಾದ ಸಮಯ.

ಕೊರೊನಾ ಮೂರನೇ ಅಲೆ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಹೀಗಾಗಿ ಮುನ್ನಚ್ಚರಿಕೆ ಅನಿವಾರ್ಯ. ಶಾಲಾ-ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರು, ಹೆತ್ತವರು ಹಾಗೂ ವಿದ್ಯಾರ್ಥಿಗಳು ಎಲ್ಲರೂ ಈ ಬಗ್ಗೆ ಜಾಗೃತಿವಹಿಸಬೇಕು. ಮಕ್ಕಳಲ್ಲಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆ ಎದುರಾದರೂ ಆತಂಕ ಇದ್ದೇ ಇರುತ್ತದೆ. ಹೀಗಾಗಿ ಸರಕಾರಿ ಹಾಗೂ ಖಾಸಗಿ ಶಾಲೆಗಳ ಮುಖ್ಯಸ್ಥರು ಸ್ವತ್ಛತೆ ಹಾಗೂ ಸುರಕ್ಷತೆ ಬಗ್ಗೆ ಹೆಚ್ಚು ಗಮನಹರಿಸಬೇಕು. ಮುಂದಿನ ಎರಡು -ಮೂರು ತಿಂಗಳು ಪರೀಕ್ಷೆ ಸಮಯ.

ಹೀಗಾಗಿ ವಿದ್ಯಾರ್ಥಿಗಳು ಒಂದೆಡೆ ಸೇರುವುದು ಸಹಜ. ಆದರೆ ಇದರಿಂದ ಆರೋಗ್ಯಕ್ಕೆ ತೊಂದರೆಯಾಗದಂತೆ ನೋಡಿ ಕೊಳ್ಳಬೇಕಾಗಿದೆ. ಸರಕಾರದ ನಿಯಮ ಪಾಲನೆ ಒಂದು ಕಡೆ. ಸ್ವಯಂ ನಿಯಂತ್ರಣ ಹಾಗೂ ನಿರ್ಬಂಧಗಳ ಮೂಲಕ ಕೊರೊನಾ ಅಷ್ಟೇ ಅಲ್ಲದೆ ಇತರ ಆರೋಗ್ಯ ಸಮಸ್ಯೆಗಳು ಮಕ್ಕಳನ್ನು, ವಿದ್ಯಾರ್ಥಿಗಳನ್ನು ಬಾಧಿಸದಂತೆ ಎಚ್ಚರಿಕೆ ವಹಿಸಬೇಕಿದೆ. ವಿದ್ಯಾರ್ಥಿ ಸಮೂಹ ಅಷ್ಟೇ ಅಲ್ಲದೆ ಶಿಕ್ಷಕ ಹಾಗೂ ಬೋಧಕೇತರ ಸಿಬಂದಿಯೂ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು ಅವರ ಆರೋಗ್ಯವೂ ಮುಖ್ಯ. ಸರಕಾರವು ಶಾಲಾ- ಕಾಲೇಜು ಆರಂಭದ ತೀರ್ಮಾನ ಕೈಗೊಂಡಿರುವುದು ಒಳ್ಳೆಯ ಕ್ರಮ. ಜತೆಗೆ ಜತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು.

ಶಾಲಾ- ಕಾಲೇಜುಗಳಲ್ಲಿ ಪಾಲಿಸಬೇಕಾದ ನಿಯಮಗಳ ಬಗ್ಗೆ ಹೊರಡಿಸಲಾದ ಪ್ರತ್ಯೇಕ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ನೋಡಿಕೊಳ್ಳುವುದು ಶಾಲಾ ಆಡಳಿತ ಮಂಡಳಿ ಮತ್ತು ಸಂಬಂಧಿತ ವಲಯದ ಅಧಿಕಾರಿಗಳ ಜವಾಬ್ದಾರಿ. ಜತೆಗೆ ಹೆತ್ತವರಿಗೂ ತಿಳಿವಳಿಕೆ ಮೂಡಿಸಬೇಕು.

ಮೊದಲ ಹಾಗೂ ಎರಡನೇ ಅಲೆಯ ಅನುಭವದ ಆಧಾರದ ಮೇಲೆ ಸಾಕಷ್ಟು ಕ್ರಮ ಕೈಗೊಂಡರೂ ಮೂರನೇ ಅಲೆ ಸಂದರ್ಭದಲ್ಲೂ ಸ್ವಲ್ಪ ಮಟ್ಟಿಗೆ ಸಮಸ್ಯೆಯಾಯಿತು. ಮುಂದಿನ ದಿನಗಳಲ್ಲಿ ಸಮಸ್ಯೆ ಎದುರಾಗದಂತೆ ನೋಡಿಕೊಂಡು ಶೈಕ್ಷಣಿಕ ಚಟುವಟಿಕೆಗಳು ಯಥಾ ಪ್ರಕಾರ ನಡೆದು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಅಡೆ-ತಡೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಹಾಗೆಯೇ 15ರಿಂದ 18ರ ವರೆಗಿನ ವಯೋಮಾನದ (ಹತ್ತನೇ ತರಗತಿಯಿಂದ ದ್ವಿತೀಯ ಪಿಯು ತನಕ) ವಿದ್ಯಾರ್ಥಿಗಳು ಲಸಿಕೆ ತೆಗೆದುಕೊಳ್ಳುವಂತೆ ಪ್ರೇರೇಪಿಸುವುದು ಹಾಗೂ ಪಾಲಕರ ಮನವೊಲಿಕೆ ಮಾಡುವುದು ಸಹ ಶಾಲಾ ಆಡಳಿತ ಮಂಡಳಿಯ ಆದ್ಯ ಕರ್ತವ್ಯವಾಗಿದೆ.

ಈ ನಿಟ್ಟಿನಲ್ಲಿ ಆರೋಗ್ಯ, ಶಿಕ್ಷಣ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳು ಜತೆಗೂಡಿಯೇ ಕೆಲಸ ಮಾಡಬೇಕು. ಜತೆಗೆ ಶಿಕ್ಷಕ, ಉಪನ್ಯಾಸಕ ಸಮೂಹ, ಹೆತ್ತವರು ಸಹ ಜತೆಗೂಡಬೇಕಾಗಿದೆ. ಮಕ್ಕಳ ಭವಿಷ್ಯವೂ ಮುಖ್ಯ, ಆರೋಗ್ಯವೂ ಮುಖ್ಯ. ಹೀಗಾಗಿ ಪ್ರತೀ ಹಂತದಲ್ಲೂ ಸೂಕ್ತ ತೀರ್ಮಾನ ಹಾಗೂ ಕ್ರಮಗಳೊಂದಿಗೆ ಮುಂದುವರಿಯಬೇಕು.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.