ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ
Team Udayavani, Oct 20, 2021, 7:00 AM IST
ಸಾಂದರ್ಭಿಕ ಚಿತ್ರ.
ಕರ್ನಾಟಕ ರಾಜ್ಯೋತ್ಸವಕ್ಕೆ 11 ದಿನಗಳು ಬಾಕಿ ಉಳಿದಿರುವಂತೆಯೇ ಈ ಬಾರಿಯ ರಾಜ್ಯೋತ್ಸವವನ್ನು ಅತ್ಯಂತ ವಿಶೇಷವಾಗಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ಧರಿಸಿದೆ.
ಸಚಿವರಾದಂದಿನಿಂದಲೂ ಹೊಸತನಕ್ಕೆ ಆದ್ಯತೆ ನೀಡುವುದಾಗಿ ಹೇಳುತ್ತಲೇ ಬಂದಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಈ ದಿಸೆಯಲ್ಲಿ ಈಗಾಗಲೇ ಕಾರ್ಯೋನ್ಮುಖ ರಾಗಿದ್ದು ಇಲಾಖೆಗೆ ನವಚೈತನ್ಯ ತುಂಬುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರ ಹೆಸರುಗಳನ್ನು ಶಿಫಾರಸು ಮಾಡುವಂತೆ ಜನತೆಗೆ ಕರೆ ನೀಡುವ ಮೂಲಕ ಪ್ರತೀ ವರ್ಷವೂ ಒಂದಲ್ಲ ಒಂದು ವಿವಾದಕ್ಕೆ ಕಾರಣವಾಗುತ್ತಿದ್ದ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ ಪಾರದರ್ಶಕತೆಯ ಸ್ಪರ್ಶ ನೀಡುವ ಮುನ್ಸೂಚನೆ ನೀಡಿದ್ದರು. ಅದರಂತೆ ರಾಜ್ಯೋತ್ಸವ ಪ್ರಶಸ್ತಿಗಾಗಿ 4,500 ಅರ್ಜಿಗಳು ಬಂದಿವೆ. ಈಗಾಗಲೇ ಆಯ್ಕೆ ಸಮಿತಿ ಸಭೆ ನಡೆಸಿ ಈ ಎಲ್ಲ ಅರ್ಜಿಗಳನ್ನು ಸಮಗ್ರವಾಗಿ ಪರಿಶೀಲಿಸಿದೆ. ಸಮಿತಿಯು ಮತ್ತೊಮ್ಮೆ ಸಭೆ ಸೇರಿ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಅಂತಿಮಗೊಳಿಸಲಿದೆ. ಸಾಧನೆಯನ್ನೇ ಮಾನ ದಂಡವಾಗಿರಿಸಿ ಅರ್ಹ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಸರಕಾರ ತೀರ್ಮಾನಿಸಿದೆ ಎಂದು ಸಚಿವರು ಹೇಳಿದ್ದಾರೆ.
ಸರಕಾರದ ಈ ದೃಢ ನಿಲುವು ಶ್ಲಾಘನೀಯ. ಆದರೆ ಇದು ಎಷ್ಟರ ಮಟ್ಟಿಗೆ ಅನುಷ್ಠಾನಗೊಳ್ಳಲಿದೆ ಎಂಬುದು ಪ್ರಶಸ್ತಿ ವಿಜೇತರ ಪಟ್ಟಿ ಬಿಡು ಗಡೆಗೊಂಡ ಬಳಿಕವಷ್ಟೇ ಖಚಿತವಾಗಲಿದೆ. ಈ ಹಿಂದಿನ ಎಲ್ಲ ಸರ ಕಾರಗಳೂ ಇದೇ ಮಾದರಿಯ ಭರವಸೆಗಳನ್ನು ನೀಡುತ್ತಾ ಬಂದಿದ್ದವಾ ದರೂ ಅದನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದ್ದವು. ಪ್ರತೀ ಬಾರಿಯೂ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಂದರ್ಭದಲ್ಲಿ ರಾಜಕೀಯ ಹಸ್ತ ಕ್ಷೇಪ, ಪ್ರಭಾವ, ಪ್ರಾದೇಶಿಕ ತಾರತಮ್ಯ, ಅಧಿಕಾರ ದುರುಪಯೋಗ ಹೀಗೆ ನಾನಾತರದ ಆರೋಪಗಳು ಕೇಳಿ ಬಂದಿವೆ. ಆದರೆ ಈ ಬಾರಿ ಪ್ರಶಸ್ತಿ ವಿಜೇತರ ಆಯ್ಕೆ ಪ್ರಕ್ರಿಯೆಯಲ್ಲಿ ಸ್ವತಃ ಜನರೂ ತೊಡಗಿ ಕೊಳ್ಳುವಂತೆ ಮಾಡುವ ಮೂಲಕ ಹೊಸದೊಂದು ಪ್ರಯತ್ನಕ್ಕೆ ಸರಕಾರ ಕೈಹಾಕಿದ್ದು, ಅರ್ಹ ಸಾಧಕರಿಗೆ ಪ್ರಶಸ್ತಿ ಲಭಿಸಬೇಕೆಂಬ ಆಶಯ ಈಡೇರೀತು ಎಂಬ ನಿರೀಕ್ಷೆ ರಾಜ್ಯದ ಜನತೆಯದ್ದಾಗಿದೆ. ಹೀಗಾದಲ್ಲಿ ರಾಜ್ಯೋತ್ಸವ ಪ್ರಶಸ್ತಿಗೂ ಹೆಚ್ಚಿನ ಗೌರವ ಲಭಿಸಿದಂತಾಗುತ್ತದೆ. ಅಷ್ಟು ಮಾತ್ರವಲ್ಲದೆ ಪ್ರಶಸ್ತಿ ವಿಜೇತರ ಪಟ್ಟಿಯೂ ಹನುಮಂತನ ಬಾಲದ ಮಾದರಿಯಲ್ಲಿ ಬೆಳೆಯ ದಂತೆ ನೋಡಿಕೊಳ್ಳುವ ಹೊಣೆಗಾರಿಕೆಯೂ ಸರಕಾರದ ಮೇಲಿದೆ.
ಇದನ್ನೂ ಓದಿ:100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ
ಈ ಬಾರಿ ಉತ್ಸವವನ್ನು ಕೇವಲ ನ. 1ಕ್ಕೆ ಸೀಮಿತಗೊಳಿಸದೇ ಒಂದು ವಾರ ಕಾಲ ರಾಜ್ಯೋತ್ಸವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಎಲ್ಲರೂ ಬಳಕೆ ಮಾಡುವಂತೆ ಪ್ರೇರಣೆ ನೀಡುವ ಹಲವು ವಿನೂತನ ಕಾರ್ಯಕ್ರಮಗಳನ್ನು ಇಲಾಖೆ ಹಮ್ಮಿಕೊಂಡಿದೆ. ಕನ್ನಡ ಭಾಷೆಯ ಮಹತ್ವವನ್ನು ಸಾರುವ ಜತೆಯಲ್ಲಿ ರಾಜ್ಯದಲ್ಲಿನ ಎಲ್ಲರೂ ಕನ್ನಡ ಮಾತನಾಡಲು ಪೂರಕವಾದ ವಾತಾವರಣ ನಿರ್ಮಿಸಿ ಕೊಡಲು ಈ ಅಭಿಯಾನ ಆಯೋಜಿಸಲಾಗಿದೆ. ಈ ವಿನೂತನ ಪ್ರಯ ತ್ನದಲ್ಲಿ ಇಡೀ ರಾಜ್ಯದ ಜನತೆ ಕೈಜೋಡಿಸಿದ್ದೇ ಆದಲ್ಲಿ ಕನ್ನಡದ ಕಂಪನ್ನು ಇನ್ನಷ್ಟು ಪಸರಿಸಲು ಸಾಧ್ಯ. ಕೇವಲ ಭಾಷಣ, ಹೇಳಿಕೆ, ಪ್ರಚಾರಗೀಳಿನ ಹೋರಾಟಗಳಿಗೆ ಕನ್ನಡಾಭಿಮಾನ ಸೀಮಿತಗೊಳಿಸದೇ ಸರಕಾರ ಆಯೋಜಿಸಿರುವ ಅಭಿಯಾನದಲ್ಲಿ ಕನ್ನಡಿಗರೆಲ್ಲರೂ ಭಾಗಿಗಳಾಗುವ ಮೂಲಕ ತಮ್ಮ ನೈಜ ಕನ್ನಡಾಭಿಮಾನವನ್ನು ಮೆರೆಯಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.