ಸರಾಗವಾಗಿ ಸಂಸತ್‌ ಅಧಿವೇಶನ ನಡೆಯಲಿ


Team Udayavani, Nov 30, 2021, 6:00 AM IST

ಸರಾಗವಾಗಿ ಸಂಸತ್‌ ಅಧಿವೇಶನ ನಡೆಯಲಿ

ಸೋಮವಾರದಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಶುರುವಾಗಿದ್ದು, ಮೊದಲ ದಿನವೇ ಗದ್ದಲಗಳಿಂದಾಗಿ ಕಲಾಪ ವ್ಯರ್ಥವಾಗಿದೆ. ಕೇಂದ್ರ ಸರಕಾರ ಈ ಹಿಂದೆಯೇ ರೈತರಿಗೆ ವಾಗ್ಧಾನ ನೀಡಿದಂತೆ ಮೊದಲ ದಿನವೇ ಮೂರು ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯುವ ಮಸೂದೆಯನ್ನು ಉಭಯ ಸದನಗಳಲ್ಲೂ ಮಂಡಿಸಿ ಒಪ್ಪಿಗೆ ಪಡೆದುಕೊಂಡಿದೆ.

ಯಾವುದೇ ಚರ್ಚೆಗೆ ಅವಕಾಶವಿಲ್ಲದೇ ಈ ಮಸೂದೆಗಳನ್ನು ಕೇಂದ್ರ ಸರಕಾರ ಮಂಡಿಸಿ, ಅನುಮೋದನೆ ಪಡೆದುಕೊಂಡಿದೆ ಎಂಬುದು ವಿಪಕ್ಷಗಳ ಆಕ್ಷೇಪವಾದರೆ, ಈ ಹಿಂದೆಯೇ ಚರ್ಚೆ ನಡೆಸಲಾಗಿದ್ದ ಕಾಯ್ದೆಗಳ ಬಗ್ಗೆ ಈಗ ಮತ್ತೆ ಏಕೆ ಚರ್ಚೆ ಎಂಬುದು ಕೇಂದ್ರ ಸರಕಾರದ ವಾದ. ಅಲ್ಲದೇ ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕುರಿತಂತೆ ಕಾಯ್ದೆ, ಪ್ರತಿಭಟನೆ ವೇಳೆ ಮೃತಪಟ್ಟಿರುವ ರೈತರಿಗೆ ಪರಿಹಾರ ಘೋಷಣೆ ಸೇರಿದಂತೆ ಕೆಲವೊಂದು ವಿಚಾರಗಳ ಬಗ್ಗೆ ಚರ್ಚೆಯಾಗಬೇಕಿತ್ತು ಎಂದು ವಿಪಕ್ಷಗಳು ಒತ್ತಾಯಿಸಿವೆ. ಈ ಗದ್ದಲದ ನಡುವೆಯೇ ಮೊದಲ ದಿನದ ಕಲಾಪ ಮಧ್ಯಾಹ್ನಕ್ಕೇ ಮುಗಿದಿದೆ.

ಇದರ ಜತೆಗೆ ಮುಂಗಾರು ಅಧಿವೇಶನದ ವೇಳೆ ರಾಜ್ಯಸಭೆಯಲ್ಲಿ ಅನುಚಿತವಾಗಿ ವರ್ತಿಸಿದ್ದ ಆರೋಪದ ಮೇಲೆ 12 ಸದಸ್ಯರನ್ನು ಇಡೀ ಚಳಿಗಾಲದ ಅಧಿವೇಶನದಿಂದಲೇ ಅಮಾನತು ಮಾಡಲಾಗಿದೆ. ಇದರಲ್ಲಿ ಕಾಂಗ್ರೆಸ್‌ನ ಆರು, ಟಿಎಂಸಿ, ಶಿವಸೇನೆಯ ತಲಾ ಇಬ್ಬರು, ಸಿಪಿಎಂ, ಸಿಪಿಐನ ತಲಾ ಒಬ್ಬರನ್ನು ಸಸ್ಪೆಂಡ್‌ ಮಾಡಲಾಗಿದೆ. ಆದರೆ ಮುಂಗಾರು ಅಧಿವೇಶನದಲ್ಲಿನ ಗದ್ದಲಕ್ಕೆ ಸಂಬಂಧಿಸಿದಂತೆ ಈಗ ಅಮಾನತು ಮಾಡಿರುವ ಕ್ರಮ ಸರಿಯಲ್ಲ ಎಂದು ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಆದರೆ ಈ ಬಗ್ಗೆ ಸದನದ ವೀಡಿಯೋ ಸೇರಿದಂತೆ ಹಲವಾರು ಸಾಕ್ಷಿಗಳನ್ನು ಪರಿಗಣಿಸಿ, ಶಿಸ್ತು ಕ್ರಮ ಸಮಿತಿಯ ಶಿಫಾರಸಿನ ಮೇರೆಗೆ ಈ 12 ಮಂದಿಯನ್ನು ಅಮಾನತು ಮಾಡಲಾಗಿದೆ ಎಂದು ಕೇಂದ್ರ ಸರಕಾರ ಸಮರ್ಥಿಸಿಕೊಂಡಿದೆ. ಇದೂ ವಿಪಕ್ಷಗಳ ಕೋಪಕ್ಕೆ ಕಾರಣವಾಗಿದ್ದು, ಮಂಗಳವಾರ ಸಭೆ ಸೇರಿ ಮುಂದಿನ ನಡೆ ಏನಿರಬೇಕು ಎಂಬ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿಕೊಂಡಿವೆ. ಅಲ್ಲದೆ, ಕೇಂದ್ರ ಸರಕಾರ ಈ 12 ಮಂದಿಯ ಅಮಾನತು ನಿರ್ಧಾರವನ್ನು ವಾಪಸ್‌ ಪಡೆಯದಿದ್ದರೆ, ಇಡೀ ಚಳಿಗಾಲದ ಅಧಿವೇಶನದಿಂದಲೇ ದೂರ ಉಳಿಯುವುದಾಗಿ ಎಚ್ಚರಿಕೆಯನ್ನೂ ನೀಡಿವೆ.

ಇದನ್ನೂ ಓದಿ:ರಾಜ್ಯದಲ್ಲಿ 257ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ: ಐವರು ಸಾವು

ಈ ಎಲ್ಲ ಬೆಳವಣಿಗೆಗಳು ಮೊದಲ ದಿನವೇ ನಡೆದಿದ್ದು, ಇಡೀ ಅಧಿವೇಶನ ಹಾದಿ ತಪ್ಪುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಬೇರೆ ಬೇರೆ ಕಾರಣಗಳನ್ನು ಇರಿಸಿಕೊಂಡು ಅಧಿವೇಶನ ಮುಂದೂಡುವ ಕ್ರಮ ಸರಿಯಲ್ಲ. ಮುಂಗಾರು ಅಧಿವೇಶನವೂ ಸರಿಯಾಗಿ ನಡೆದಿಲ್ಲ. ಈಗ ಚಳಿಗಾಲದ ಅಧಿವೇಶನವೂ ಗದ್ದಲದಲ್ಲೇ ಕೊಚ್ಚಿ ಹೋದರೆ ಎಷ್ಟೋ ಮಸೂದೆಗಳು, ದೇಶ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುವುದೇ ಇಲ್ಲ. ಇಲ್ಲಿ ಕೇಂದ್ರ ಸರಕಾರ ಮತ್ತು ವಿಪಕ್ಷಗಳು ತಮ್ಮ ಪ್ರತಿಷ್ಠೆಯನ್ನು ಬದಿಗಿಟ್ಟು ಮಾತನಾಡಿಕೊಂಡೇ ಕಾರ್ಯ ನಿರ್ವಹಣೆ ಮಾಡಬೇಕಾಗಿದೆ.

ಅಷ್ಟೇ ಅಲ್ಲದೆ, ಈಗಷ್ಟೇ ಕೊರೊನಾದ ಒಮಿಕ್ರಾನ್‌ ವೈರಸ್‌ ಜಗತ್ತಿನಾದ್ಯಂತ ಆತಂಕ ಸೃಷ್ಟಿಸಿದೆ. ಈ ಬಗ್ಗೆಯೂ ಚರ್ಚೆ ನಡೆಸಿ, ಆಡಳಿತ ಮತ್ತು ವಿಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವೂ ಇದೆ. ಹೀಗಾಗಿ ಸರಾಗವಾಗಿ ಸಂಸತ್‌ ಅಧಿವೇಶನ ಸರಾಗವಾಗಿ ನಡೆಯಬೇಕು.

ಟಾಪ್ ನ್ಯೂಸ್

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.