ಲೋಪವಿಲ್ಲದೇ ಮಳೆ ಹಾನಿ ಪರಿಹಾರದ ಕೆಲಸವಾಗಲಿ

Team Udayavani, Oct 15, 2022, 6:00 AM IST

ಲೋಪವಿಲ್ಲದೇ ಮಳೆ ಹಾನಿ ಪರಿಹಾರದ ಕೆಲಸವಾಗಲಿ

ಮುಂಗಾರು ಮಳೆಯಿಂದ ಪ್ರವಾಹ, ಮೂಲಸೌಕರ್ಯ ಹಾನಿ, ಬೆಳೆ ನಷ್ಟದಿಂದ ತತ್ತರಿಸಿದ್ದ ರಾಜ್ಯದ ರೈತರು ಹಾಗೂ ಜನಸಾಮಾನ್ಯರು ಇದೀಗ ಹಿಂಗಾರು ಮಳೆಯಿಂದ ಮತ್ತೆ ಸಮಸ್ಯೆ ಎದುರಿಸುವಂತಾಗಿದೆ.

ರಾಜ್ಯಾದ್ಯಂತ ಮಳೆಯಿಂದ ಆಪಾರ ಪ್ರಮಾಣದ ಬೆಳೆ ನಷ್ಟ, ಜಾನುವಾರು ಸಾವು ಉಂಟಾಗಿದ್ದು, ಗ್ರಾಮೀಣ ಭಾಗದ ಜನರಂತೂ ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ನಿರಂತರ ಪ್ರವಾಹದಿಂದ ಪೆಟ್ಟಿನ ಮೇಲೆ ಪೆಟ್ಟು ಎಂಬಂತೆ ಸಮಸ್ಯೆಗೆ ಸಿಲುಕುವಂತಾಗುತ್ತಿದೆ.

ರಾಜ್ಯ ಸರಕಾರ ಬೆಳೆಹಾನಿ ಪರಿಹಾರ, ತುರ್ತು ದುರಸ್ತಿ ಕಾರ್ಯಕ್ಕೆ ಕ್ರಮ ಕೈಗೊಂಡಿದೆಯಾದರೂ ಕೆಳ ಹಂತದಲ್ಲಿ ಅದು ಸಂತ್ರಸ್ತರನ್ನು ತಲುಪುತ್ತಿಲ್ಲ. ಹೀಗಾಗಿಯೇ ಮುಖ್ಯಮಂತ್ರಿಯವರು ವಿಜಯ ಸಂಕಲ್ಪ ಯಾತ್ರೆ ನಡುವೆಯೇ ಮಳೆ ಹಾನಿ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿ ಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಬೇಕು. ಪರಿಹಾರ ವಿತರಣೆಯಲ್ಲಿ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದ್ದಾರೆ.

ರಾಜ್ಯದಲ್ಲಿ ಹಿಂದೆಂದಿಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿ ಗಳು ಕಟ್ಟೆಚ್ಚರಿಕೆ ವಹಿಸಬೇಕು. ಮಳೆಹಾನಿ ಸಂಭವಿಸಿದ ಪ್ರದೇಶಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಪ್ರವಾಹ ವಿಚಾರದಲ್ಲಿ ಪರಿಹಾರ ಹಾಗೂ ಪುನರ್ವಸತಿ ವಿಚಾರದಲ್ಲಿ ಜಿಲ್ಲಾಧಿಕಾರಿಗಳೇ ಖುದ್ದು ಮೇಲ್ವಿಚಾರಣೆ ನಡೆಸಿ ಕರ್ತವ್ಯ ಲೋಪ ಎಸಗಿದ ಸಿಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ. ಇಂತಹ ಸೂಚನೆ ಅಗತ್ಯವಿತ್ತು. ಏಕೆಂದರೆ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳಿಂದ ನಿರ್ದೇಶನ ಬಂದರೆ ಕೆಳ ಹಂತದ ಸಿಬಂದಿ ಚುರುಕಿನಿಂದ ಕೆಲಸ ಮಾಡುತ್ತಾರೆ.

ಮನೆ ಹಾನಿಗೆ ಸಂಬಂಧಿಸಿದಂತೆ ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿಯವರು ಸೂಚನೆ ನೀಡಿರುವುದು ಸ್ವಾಗತಾರ್ಹ. ಜತೆಗೆ ಹಿಂಗಾರು ಮಳೆಯಿಂದ ಉಂಟಾಗಿರುವ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ತಿಳಿಸಿದ್ದಾರೆ.

ಈ ನಡುವೆ, 2022-23ನೇ ಸಾಲಿನಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ 191.50 ಕೋಟಿ ರೂ. ಬಿಡುಗಡೆಯಾಗಿರುವುದರಿಂದ ಅಧಿಕಾರಿಗಳು ಪರಿಹಾರ ಕಾರ್ಯ ಚುರುಕುಗೊಳಿಸಲು ಸಹಾಯವಾಗಿದೆ. ಇದೀಗ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಪರಿಹಾರ ಮತ್ತು ಪುನರ್‌ವಸತಿ, ಮೂಲಸೌಕರ್ಯ ಹಾನಿಯ ದುರಸ್ತಿ ಬಗ್ಗೆ ಹೆಚ್ಚು ಗಮನಹರಿಸಬೇಕು. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಗಮನನೀಡಬೇಕು. ಪ್ರವಾಹ ಸಂತ್ರಸ್ತ್ರರ ಪರಿಹಾರ, ತುರ್ತು ಕಾಮಗಾರಿ, ಬೆಳೆ ಪರಿಹಾರ ವಿಚಾರದಲ್ಲಿ ಪಕ್ಷಾತೀತವಾಗಿ ಆಡಳಿತ ಪಕ್ಷ ಹಾಗೂ ವಿಪಕ್ಷ ಜತೆಗೂಡಿಯೇ ಕೆಲಸ ಮಾಡಬೇಕು.

ಮುಂದಿನ ಚುನಾವಣೆ ಹಿನ್ನೆಲೆ ಹಾಗೂ ಪಕ್ಷ ಸಂಘಟನೆಗಾಗಿ ಎಲ್ಲ ಪಕ್ಷಗಳೂ ಯಾತ್ರೆ, ಸಮಾವೇಶ ನಡೆಸುತ್ತಿವೆಯಾದರೂ ಇದರ ನಡುವೆಯೂ ಮಳೆ ಹಾನಿಯ ಬಗ್ಗೆ ಹಾಗೂ ಸಂತ್ರಸ್ತರ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗಿದೆ.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.