ಉಳಿದ ತರಗತಿಗಳು ಶೀಘ್ರ ಆರಂಭವಾಗಲಿ


Team Udayavani, Aug 24, 2021, 6:00 AM IST

ಉಳಿದ ತರಗತಿಗಳು ಶೀಘ್ರ ಆರಂಭವಾಗಲಿ

ಸರಿಸುಮಾರು ಒಂದೂವರೆ ವರ್ಷದ ಬಳಿಕ ರಾಜ್ಯದ ಪ್ರೌಢಶಾಲೆ ಹಾಗೂ ಪದವಿ  ಪೂರ್ವ ಕಾಲೇಜುಗಳಲ್ಲಿ ಗಂಟೆಯ ಸದ್ದು ಶುರುವಾಗಿದೆ. ಬಿಕೋ ಎನ್ನುತ್ತಿದ್ದ ಶಾಲಾ ಕಾಲೇಜು ಪರಿಸರ, ತರಗತಿ ಕೊಠಡಿಗಳಿಗೆ  ಜೀವಕಳೆ ಬಂದಿದೆ. ವಿದ್ಯಾರ್ಥಿಗಳು ಶಾಲೆಗೆ ಬರಲಾರಂಬಿಸಿದ್ದಾರೆ. ಭೌತಿಕ ತರಗತಿಗಳಲ್ಲಿ ಬೋಧನೆಯ ಜತೆಗೆ ಶೈಕ್ಷಣಿಕ ಚಟುವಟಿಕೆಯೂ ಚುರುಕುಗೊಂಡಿದೆ. ಶಾಲಾ ಕಾಲೇಜು ಆರಂಭದ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವು ಕಡೆಗಳಲ್ಲಿ ತಳಿರು ತೋರಣ, ರಂಗೋಲಿ ಗಳೊಂದಿಗೆ ವಿದ್ಯಾರ್ಥಿಗಳಿಗೆ ಭವ್ಯಸ್ವಾಗತ ನೀಡಲಾಗಿತ್ತು. ಬಹುತೇಕ ಶಾಲಾ ಕಾಲೇಜುಗಳಲ್ಲಿ  ಜನ ಪ್ರತಿನಿಧಿಗಳು ಶಿಕ್ಷಣ ಇಲಾಖೆಅಧಿಕಾರಿಗಳು ಎಸ್‌ಡಿಎಂಸಿ ಸದಸ್ಯರು, ಊರಿನ ಹಿರಿಯರು ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಿದ್ದಾರೆ. ಒಟ್ಟಿನಲ್ಲಿ ಶಾಲಾ ಕಾಲೇಜು ಆರಂಭ  ವ್ಯವಸ್ಥಿತವಾಗಿ ನಡೆದಿದೆ. ವಿದ್ಯಾರ್ಥಿಗಳ ದಾಖಲಾತಿಯೂ ಚೆನ್ನಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ತಾಂತ್ರಿಕ ತಜ್ಞರ ಸಲಹೆಯಂತೆ ರೂಪಿಸಿದ್ದ ಮಾರ್ಗಸೂಚಿ ಅನ್ವಯ ಎಲ್ಲೆಡೆ ಕಠಿನ ನಿಯಮ ಪಾಲನೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ, ಸ್ಯಾನಿಟೈಜೇಷನ್‌, ಮಾಸ್ಕ್, ದೇಹದ ಉಷ್ಣಾಂಶ ಪರೀಕ್ಷೆ ಸೇರಿದಂತೆ ಎಲ್ಲವೂ ಅಚ್ಚುಕಟ್ಟಾಗಿ ನಡೆದಿದೆ. ಪ್ರೌಢಶಾಲೆ ಹಾಗೂ ಪಿಯುಸಿ ತರಗತಿಗಳು ಮಾತ್ರ ಆರಂಭವಾಗಿದ್ದರಿಂದ ವಿದ್ಯಾರ್ಥಿ ಗಳ ಸಂಖ್ಯೆ ಕಡಿಮೆಯಿತ್ತು. ಅದರಲ್ಲೂ ಶೇ.50ರಷ್ಟು ವಿದ್ಯಾರ್ಥಿಗಳಿಗೆ ಆನ್‌ಲೈನ್‌, ಉಳಿದ ಶೇ.50ರಷ್ಟು ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಇದ್ದುದ್ದ ರಿಂದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಎಲ್ಲ ರೀತಿಯಲ್ಲೂ ಸುರಕ್ಷಿತವಾಗಿತ್ತು. ಇದೇ ರೀತಿಯ ಸುರಕ್ಷಿತ ವ್ಯವಸ್ಥೆ ಮುಂದೆಯೂ ನಿರಂತರವಾಗಬೇಕು. ಪಾಲಕ, ಪೋಷಕರಿಂದಲೂ ಉತ್ತಮ ಸ್ಪಂದನೆ ಸಿಕ್ಕಿರುವುದರಿಂದ ಸರಕಾರ ಉಳಿದ ತರಗತಿಗಳನ್ನು ಶೀಘ್ರ ಆರಂಭಿಸುವ ಅಥವಾ ಆ ವಿದ್ಯಾರ್ಥಿಗಳಿಗೆ ಶಾಲಾವರಣದಲ್ಲಿ ವಿದ್ಯಾಗಮ ತರಗತಿ ನಡೆಸುವ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳಬೇಕು.

ಕೊರೊನಾದಿಂದ ಶಿಕ್ಷಣ ಕ್ಷೇತ್ರಕ್ಕೆ ಭಾರಿ ಪೆಟ್ಟು ಬಿದ್ದಿದೆ. ನಿರಂತರ ಕಲಿಕೆಯಲ್ಲಿದ್ದ ವಿದ್ಯಾರ್ಥಿಗಳಿಗೆ ಕಲಿಕೆಯೇ ಮರೆತಿದೆ. ಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ ಸೇರಿದಂತೆ ಹಲವು ರೀತಿಯ ಕಾನೂನು ಬಾಹಿರ ಆಚರಣೆಗಳೂ ಹೆಚ್ಚಾಗುತ್ತಿವೆ. ಸದ್ಯ ಪ್ರೌಢಶಾಲೆ ಹಾಗೂ ಪಿಯು ಕಾಲೇ ಜುಗಳ ಆರಂಭವಾಗಿದೆ. ಉಳಿದ ತರಗತಿಗಳನ್ನು ಈಗಿರುವಷ್ಟೇ ಸುರಕ್ಷತೆ ಹಾಗೂ ಮುನ್ನೆಚ್ಚರಿಕ ಕ್ರಮಗಳೊಂದಿಗೆ ಶೀಘ್ರಾತಿಶೀಘ್ರ ಆರಂಭಿಸಿದಲ್ಲಿ, ವಿದ್ಯಾರ್ಥಿಗಳ ಕಲಿಕೆಯ ಅಂತರ ಕಡಿಮೆ ಮಾಡಲು ಸಾಧ್ಯವಿದೆ. ಸರಕಾರಿ ಶಾಲಾ ವ್ಯವಸ್ಥೆಯಲ್ಲಿ ಸುಮಾರು 45 ಲಕ್ಷ ಮಕ್ಕಳಿದ್ದಾರೆ. ಇವರಿಗೆ ಆನ್‌ಲೈನ್‌ ಶಿಕ್ಷಣ ಸಮರ್ಪಕವಾಗಿ ಸಿಗುತ್ತಿಲ್ಲ. ಸಂವೇದ ಹಾಗೂ ಪೂರ್ವ ಮುದ್ರಿತ ವೀಡಿಯೋ ತರಗತಿ ಇತ್ಯಾದಿಗಳಷ್ಟೇ ನಡೆಯುತ್ತಿದೆ. ಈ  ಮಕ್ಕಳು ಶಾಲೆಗೆ ಬಂದು  ಶೈಕ್ಷಣಿಕ ಚಟುವಟಿಕೆಯಲ್ಲಿ ಪಾಲ್ಗೊ ಳ್ಳುವ ಜತೆಗೆ ನಿರಂತರ ಕಲಿಕೆಯಲ್ಲೂ ಮುಂದುವರಿಯುವಂತೆ ಆಗಬೇಕು.

9ರಿಂದ 12ನೇ ತರಗತಿ ವಿದ್ಯಾರ್ಥಿಗಳಲ್ಲಿನ ಉತ್ಸಾಹ, ಸಂಭ್ರಮ ಉಳಿದ ತರಗತಿಗಳ ಮಕ್ಕಳಲ್ಲೂ ಇದೆ. ಅದರಂತೆ ಸರಕಾರ ಉಳಿದ ಮಕ್ಕಳಿಗೆ ಸುರಕ್ಷಿತ ವ್ಯವಸ್ಥೆಯಲ್ಲಿ ತರಗತಿಗಳನ್ನು ಆರಂಭಿಸಬೇಕು. ಕನಿಷ್ಠ ವಾರದಲ್ಲಿ 3 ದಿನವಾದರೂ ಈ ಮಕ್ಕಳು ಶಾಲೆಗೆ ಬಂದು ಕಲಿಯುವಂತಾ ಗಬೇಕು. ನಿರಂತರ ಕಲಿಕೆಯಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಹೊಸ ಚೈತನ್ಯ ಸಿಗಲಿದೆ. ಸರಕಾರದ ಸುರಕ್ಷತ ಕ್ರಮದ ಜತೆಗೆ ಪಾಲಕ, ಹೆತ್ತವರು ಎಚ್ಚರಿಕೆ, ವಿದ್ಯಾರ್ಥಿಗಳ ಜಾಗೃತ ಪ್ರಜ್ಞೆಯೂ ಅತೀ ಅವಶ್ಯಕ.

ಟಾಪ್ ನ್ಯೂಸ್

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.