ಸುಪ್ರೀಂ ಕೋರ್ಟ್‌ಗೀಗ ಪೂರ್ಣ ಬಲ ಪ್ರಕರಣ ಇತ್ಯರ್ಥಕ್ಕೆ ಆದ್ಯತೆ ಲಭಿಸಲಿ


Team Udayavani, Feb 11, 2023, 6:00 AM IST

ಸುಪ್ರೀಂ ಕೋರ್ಟ್‌ಗೀಗ ಪೂರ್ಣ ಬಲ ಪ್ರಕರಣ ಇತ್ಯರ್ಥಕ್ಕೆ ಆದ್ಯತೆ ಲಭಿಸಲಿ

ಕಳೆದ ಐದಾರು ತಿಂಗಳುಗಳಿಂದ ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಕೊಲೀಜಿಯಂ ನಡುವೆ ನಡೆಯುತ್ತಿದ್ದ ಸಂಘರ್ಷ ಕೊನೆಗೂ ಶಮನಗೊಂಡಿದ್ದು ಸುಪ್ರೀಂನಲ್ಲಿ ತೆರವಾಗಿದ್ದ ನ್ಯಾಯಮೂರ್ತಿಗಳ ಹುದ್ದೆಗಳಿಗೆ ಪೂರ್ಣ ಪ್ರಮಾಣದಲ್ಲಿ ನೇಮಕಾತಿ ನಡೆದಿದೆ. ಕೊಲೀಜಿಯಂ ಕಳೆದ ತಿಂಗಳು ಶಿಫಾರಸು ಮಾಡಿದ್ದ ಅಲಹಾಬಾದ್‌ ಹೈಕೋರ್ಟ್‌ನ ಮುಖ್ಯ ನ್ಯಾ| ರಾಜೇಶ್‌ ಬಿಂದಾಲ್‌ ಮತ್ತು ಗುಜರಾತ್‌ ಹೈಕೋರ್ಟ್‌ನ ಮುಖ್ಯ ನ್ಯಾ| ಅರವಿಂದ ಕುಮಾರ್‌ ಅವರ ಹೆಸರಿಗೆ ಕೇಂದ್ರ ಸರಕಾರ ಸಮ್ಮತಿ ಸೂಚಿಸಿದ ಬಳಿಕ ರಾಷ್ಟ್ರಪತಿಯವರು ಇವರೀರ್ವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಿದ್ದಾರೆ. ಇವರಿಬ್ಬರು ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ  ಮುಖ್ಯ ನ್ಯಾಯಮೂರ್ತಿಗಳ ಸಹಿತ ಸುಪ್ರೀಂ ಕೋರ್ಟ್‌ನ ಎಲ್ಲ 34 ನ್ಯಾಯಮೂರ್ತಿಗಳ ಹುದ್ದೆಗಳೂ ಭರ್ತಿಯಾದಂತಾಗಲಿದೆ.

ಇದರೊಂದಿಗೆ ಸುಪ್ರೀಂ ಕೋರ್ಟ್‌ ಪೂರ್ಣ ಬಲವನ್ನು ಪಡೆದಂತಾಗಲಿದೆ. ಸುಪ್ರೀಂನ ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಮತ್ತು ಕೊಲೀಜಿಯಂ ನಡುವೆ ನಿರಂತರವಾಗಿ ಹಗ್ಗಜಗ್ಗಾಟ ನಡೆಯುತ್ತಲೇ ಬಂದಿತ್ತು. ಇದು ಶಾಸಕಾಂಗ ಮತ್ತು ನ್ಯಾಯಾಂಗದ ನಡುವೆ ಬಿಕ್ಕಟ್ಟು ಸೃಷ್ಟಿಸುವಂತೆ ಮಾಡಿತ್ತು. ಎರಡೂ ಕಡೆಯವರೂ ಇದನ್ನೊಂದು ಪ್ರತಿಷ್ಠೆಯನ್ನಾಗಿ ಪರಿಗಣಿಸಿದ ಕಾರಣ ಈ ವಿವಾದ ನ್ಯಾಯಾಂಗದ ಕಾರ್ಯಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವಂತಾಗಿತ್ತು. ವಾರದ ಹಿಂದೆಯಷ್ಟೇ ಕೇಂದ್ರ ಸರಕಾರ ತನ್ನ ನಿಲುವನ್ನು ಸಡಿಲಿಸಿ ಕೊಲೀಜಿಯಂ ಶಿಫಾರಸು ಮಾಡಿದ ಐವರು ನ್ಯಾಯಮೂರ್ತಿಗಳ ಹೆಸರುಗಳನ್ನು ರಾಷ್ಟ್ರಪತಿಗೆ ಕಳುಹಿಸಿತ್ತು. ಅದರಂತೆ ರಾಷ್ಟ್ರಪತಿಯವರು ಐವರು ನ್ಯಾಯಮೂರ್ತಿಗಳನ್ನು ನೇಮಕ ಮಾಡಿದ್ದರು. ಇದೀಗ ಮತ್ತೆ ಇಬ್ಬರು ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿನ ನ್ಯಾಯಮೂರ್ತಿಗಳ ಎಲ್ಲ ಹುದ್ದೆಗಳು ಭರ್ತಿಯಾದಂತಾಗಿದೆ.

ಇದೇ ವೇಳೆ ಹೈಕೋರ್ಟ್‌ಗೆ ನ್ಯಾಯಮೂರ್ತಿಗಳ ನೇಮಕ ಮತ್ತು ನ್ಯಾಯಮೂರ್ತಿಗಳ ವರ್ಗಾವಣೆ ಪ್ರಕ್ರಿಯೆಗಳು ಜಾರಿಯಲ್ಲಿವೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಲೋಕಸಭೆಗೆ ನೀಡಿದ ಲಿಖೀತ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸದ್ಯ 10 ಹೈಕೋರ್ಟ್‌ ನ್ಯಾಯಮೂರ್ತಿಗಳ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದ್ದು ವಿವಿಧ ಹಂತಗಳಲ್ಲಿವೆ ಎಂದವರು ಹೇಳಿದ್ದಾರೆ.

ಏತನ್ಮಧ್ಯೆ ಸುಪ್ರೀಂ ಕೋರ್ಟ್‌ನಲ್ಲಿ 69,511 ಮತ್ತು ವಿವಿಧ ಹೈಕೋಟ್‌ಗಳಲ್ಲಿ 59,87,477 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ ಎಂದು ಸಚಿವರು ಲೋಕಸಭೆಗೆ ನೀಡಿದ ಇನ್ನೊಂದು ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ. ಅಲಹಾಬಾದ್‌ ಹೈಕೋರ್ಟ್‌ ನಲ್ಲಿ ಗರಿಷ್ಠ 10.30 ಲಕ್ಷ ಮತ್ತು ಸಿಕ್ಕಿಂ ಹೈಕೋರ್ಟ್‌ ನಲ್ಲಿ ಕನಿಷ್ಠ 171 ಪ್ರಕರಣಗಳು ವಿಚಾರಣೆಗೆ ಬಾಕಿ ಉಳಿದಿವೆ. ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಂಡಿರುವುದಾಗಿಯೂ ಅವರು ತಿಳಿಸಿದ್ದಾರೆ.

ಸದ್ಯ ಸುಪ್ರೀಂ ಕೋರ್ಟ್‌ನಲ್ಲಿನ ನ್ಯಾಯಮೂರ್ತಿಗಳ ಹುದ್ದೆಗಳು ಭರ್ತಿಯಾಗಿರುವುದರಿಂದ ಸುಪ್ರೀಂ ಕೋರ್ಟ್‌ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಇತ್ಯರ್ಥಗೊಳಿಸಲು ಮೊದಲ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸರಕಾರ, ಸಂಬಂಧಿತ ಸಂಸ್ಥೆಗಳೂ ಕೂಡ ಸಹಕಾರ ನೀಡುವ ಅಗತ್ಯವಿದೆ.

ಇನ್ನು ರಾಜ್ಯಗಳ ಹೈಕೋರ್ಟ್‌ಗಳಲ್ಲಿ ತೆರವಾಗಿರುವ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಮೂರ್ತಿಗಳ ಹುದ್ದೆಗಳಿಗೆ ತ್ವರಿತಗತಿಯಲ್ಲಿ ನೇಮಕಾತಿ ಮಾಡುವ ನಿಟ್ಟಿನಲ್ಲಿ ಕೊಲೀಜಿಯಂ ಮತ್ತು ಕೇಂದ್ರ ಸರಕಾರ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಹೈಕೋರ್ಟ್‌ಗಳಲ್ಲಿ ವಿಚಾರಣೆಗೆ ಬಾಕಿ ಉಳಿದಿರುವ ಪ್ರಕರಣಗಳ ವಿಲೇವಾರಿಗೆ ನ್ಯಾಯಮೂರ್ತಿಗಳ ಕೊರತೆ ಒಂದು ಕಾರಣವಾಗಬಾರದು.

ಮೇ-ಜುಲೈ ತಿಂಗಳ ಅವಧಿಯಲ್ಲಿ ಸುಪ್ರೀಂ ಕೋರ್ಟ್‌ನ ಆರು ನ್ಯಾಯಮೂರ್ತಿಗಳು ಸೇವೆಯಿಂದ ನಿವೃತ್ತರಾಗಲಿರುವುದರಿಂದ ಮತ್ತೆ ನೇಮಕ ಪ್ರಕ್ರಿಯೆಗಳು ನಡೆಯಬೇಕಿದೆ. ನ್ಯಾಯಮೂರ್ತಿಗಳ ನೇಮಕಾತಿ ವಿಚಾರದಲ್ಲಿ ಶಾಸಕಾಂಗ ಮತ್ತು ನ್ಯಾಯಾಂಗ ಸಂವಿಧಾನದ ಚೌಕಟ್ಟಿನೊಳಗೆ ತಮ್ಮ ಇತಿಮಿತಿಗಳನ್ನು ಅರಿತು ಕಾರ್ಯನಿರ್ವಹಿಸುವ ಮೂಲಕ ಮುಂದಿನ ದಿನಗಳಲ್ಲಿ ಇದು ಮತ್ತೆ ವಿವಾದಕ್ಕೆ ಕಾರಣವಾಗದಂತೆ ಎಚ್ಚರಿಕೆ ವಹಿಸಬೇಕು.

 

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.