ವರ್ಷಾಂತ್ಯದಲ್ಲಿ ನಡೆಯಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಪುನಾರಚನೆ

Team Udayavani, Oct 1, 2022, 6:00 AM IST

ವರ್ಷಾಂತ್ಯದಲ್ಲಿ ನಡೆಯಲಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಪುನಾರಚನೆ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪುನಾರಚನೆ ಆಗಬೇಕು ಎನ್ನುವುದು ಐವತ್ತೇಳು ವರ್ಷಗಳ ಬೇಡಿಕೆ. ಭದ್ರತಾ ಮಂಡಳಿಯನ್ನು 1945ರ ಅ.24ರಂದು ಸ್ಥಾಪಿಸಲಾಯಿತು. ಅದರ ಬಳಿಕ 1965ರಲ್ಲಿ ಶಾಶ್ವತ ಸದಸ್ಯರಲ್ಲದ ರಾಷ್ಟ್ರಗಳ ಸಂಖ್ಯೆಯನ್ನು ಆರರಿಂದ ಹತ್ತಕ್ಕೆ ಹೆಚ್ಚಳ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ನಂತರ ಯಾವುದೇ ಪ್ರಮುಖ ಬದಲಾವಣೆಗಳನ್ನು ಭದ್ರತಾ ಮಂಡಳಿಯಲ್ಲಿ ತರಲಾಗಿಲ್ಲ ಎನ್ನುವುದು ಹಗಲಿನಷ್ಟೇ ಸತ್ಯ.
ದಶಕಗಳ ಕಾಲದಿಂದ ಭಾರತಕ್ಕೆ ಭದ್ರತಾ ಮಂಡಳಿಯ ಶಾಶ್ವತ ಸ್ಥಾನಮಾನ ಹೊಂದಲು ಅರ್ಹತೆ ಇದೆ. ಅದಕ್ಕೆ ನಮ್ಮ ಬೆಂಬಲ ಇದೆ ಎಂದು ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳ ಸರ್ಕಾರಿ ಮುಖ್ಯಸ್ಥರು ನವದೆಹಲಿಗೆ ಬಂದಾಗ ಅಥವಾ ನಮ್ಮ ದೇಶದ ಪ್ರಧಾನಿ, ವಿದೇಶಾಂಗ ಸಚಿವರು ಆಯಾ ದೇಶಗಳಿಗೆ ಪ್ರವಾಸ ಕೈಗೊಂಡಾಗ ಚರ್ಚೆಗೆ ಬರುತ್ತದೆ. ನಂತರ ಅಲ್ಲಿಗೇ ತಣ್ಣಗಾಗಿ ಬಿಡುತ್ತದೆ.

ಪ್ರಸಕ್ತ ಸಾಲಿನಲ್ಲಿ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅಮೆರಿಕ ಪ್ರವಾಸದಲ್ಲಿ ಇದ್ದಾರೆ. ವರ್ಷಾಂತ್ಯಕ್ಕೆ ಭಾರತ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದೆ. ಆಗ ಭದ್ರತಾ ಮಂಡಳಿಯ ಆಮೂಲಾಗ್ರ ಬದಲಾವಣೆ, ಉಗ್ರ ನಿಗ್ರಹ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಡಿಸೆಂಬರ್‌ಗೂ ಒಂದು ವಿಶೇಷತೆ ಇದೆ. ಭದ್ರತಾ ಮಂಡಳಿಯ ಶಾಶ್ವತವಲ್ಲದ ಸ್ಥಾನಮಾನ ಹೊಂದಿರುವ ವಿಭಾಗದ ಎರಡನೇ ವರ್ಷದ ಕೊನೇಯ ತಿಂಗಳು ಭಾರತಕ್ಕೆ ಇದೆ. ಹೀಗಾಗಿ, ಪುನಾರಚನೆ ಮತ್ತು ಉಗ್ರ ನಿಗ್ರಹ ಕಾರ್ಯತಂತ್ರ ನಿಟ್ಟಿನಲ್ಲಿ ಜಗತ್ತಿಗೆ ಅತ್ಯಂತ ನಾಜೂಕಿನಿಂದ ಮತ್ತು ಅಷ್ಟೇ ಸ್ಪಷ್ಟವಾಗಿ ನಿಲುವು ಪ್ರತಿಪಾದನೆ ಮಾತ್ರವಲ್ಲ ಅದನ್ನು ಅನುಷ್ಠಾನಗೊಳಿಸುವ ಚಾಕಚಕ್ಯತೆಯನ್ನು ಕೇಂದ್ರ ಸರ್ಕಾರ ಪ್ರದರ್ಶಿಸಬೇಕು.

ಭಾರತ ನಮ್ಮ ವಿಶೇಷ ಪಾಲುದಾರ ಎಂದು ಆಗಾಗ ಅಮೆರಿಕ ಸರ್ಕಾರ ಹೇಳಿಕೊಳ್ಳುತ್ತಿದೆ. ಸದ್ಯ ಅಮೆರಿಕ ಪ್ರವಾಸದಲ್ಲಿ ಇರುವ ಸಚಿವ ಜೈಶಂಕರ್‌ ಅವರ ಬಳಿ ಭದ್ರತಾ ಮಂಡಳಿ ಪುನಾರಚನೆ ಆಗಬೇಕು. ಈ ನಿಟ್ಟಿನಲ್ಲಿ ಭಾರತದ ವಾದಕ್ಕೆ ಬೆಂಬಲವನ್ನು ಅಧ್ಯಕ್ಷ ಜೋ ಬೈಡೆನ್‌ ನೀಡಿದ್ದಾರೆಂದು ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್‌ ಹೇಳಿದ್ದಾರೆ. ಅ ಮಾತು ಹುಸಿಯಾಗದಂತೆ, ಅನುಷ್ಠಾನ ಮಾಡಿಸುವ ಹೊಣೆ ಕೇಂದ್ರದ ಮೇಲೆ ಇದೆ.

1950ರ ದಶಕದ ಪಾಶ್ಚಿಮಾತ್ಯ ರಾಜಕೀಯ ಚಿಂತನೆಗಳು, ನಿಯಂತ್ರಣ ಈಗ ಭಾರತ ಮೇಲೆ ಇಲ್ಲ. ಜಗತ್ತು ಭಾರತದ ಮಾತುಗಳನ್ನು ಕೇಳುತ್ತಿದೆ ಎನ್ನುತ್ತಿರುವಾಗ ಚೀನಾದ ಕುಟಿಲೋಪಾಯವನ್ನು ಛೇದಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸಹಪಂಕ್ತಿಯ ಸದಸ್ಯನಾಗಲು ಬೇಕಾದ ಪರಿಸ್ಥಿತಿಯನ್ನು ಸೃಷ್ಟಿಸಿಕೊಳ್ಳಬೇಕು. ಯಾವುದೇ ನಿಯಮ, ಕಾನೂನುಗಳು ಬದಲಾವಣೆಯಾಗಿರುವ ಕಾಲಕ್ಕೆ ತಕ್ಕಂತೆ ತಿದ್ದುಪಡಿಗೊಳ್ಳಬೇಕು. ಇಲ್ಲದೇ ಹೋದಲ್ಲಿ ಅಂಥ ಸಂಸ್ಥೆಯ ಅಸ್ತಿತ್ವ ಕೇವಲ ಅಲಂಕಾರಿಕವಾಗುತ್ತದೆ.

ಇದೇ ವಾದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಅನ್ವಯವಾಗುತ್ತದೆ. ಭಾರತಕ್ಕೆ ಶಾಶ್ವತ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಬೇಕಾದ ಕಾರ್ಯತಂತ್ರವನ್ನು ರೂಪಿಸಲೇಬೇಕು. ಆ ಸಂದರ್ಭದಲ್ಲಿ ಕಿಡಿಗೇಡಿತನವನ್ನು ಕೆಲವು ರಾಷ್ಟ್ರಗಳು ಪ್ರದರ್ಶನ ಮಾಡಬಹುದು. ಅದಕ್ಕೆ ಸೂಕ್ತ ತಿರುಗೇಟನ್ನು ಕೇಂದ್ರ ನೀಡಬೇಕು. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಶಾಶ್ವತ ಸದಸ್ಯತ್ವ ಪಡೆದರೆ, ದಕ್ಷಿಣ ಏಷ್ಯಾದಲ್ಲಿನ ಕೆಲವೊಂದು ಅಪಸವ್ಯಗಳನ್ನು ತಡೆಯಬಹುದು.

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Supreme Court: ವರದಕ್ಷಿಣೆ ತಡೆ ಕಾಯ್ದೆ ದುರ್ಬಳಕೆ ಸುಪ್ರೀಂ ಸಲಹೆಗಳು ಸಮುಚಿತ

Supreme Court: ವರದಕ್ಷಿಣೆ ತಡೆ ಕಾಯ್ದೆ ದುರ್ಬಳಕೆ ಸುಪ್ರೀಂ ಸಲಹೆಗಳು ಸಮುಚಿತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.