ರಷ್ಯಾ-ಉಕ್ರೇನ್‌ ನಡುವಣ ಯುದ್ಧ ಶೀಘ್ರ ಕೊನೆಗಾಣಲಿ


Team Udayavani, Jun 7, 2023, 6:00 AM IST

ರಷ್ಯಾ-ಉಕ್ರೇನ್‌ ನಡುವಣ ಯುದ್ಧ ಶೀಘ್ರ ಕೊನೆಗಾಣಲಿ

ರಷ್ಯಾ ಮತ್ತು ಉಕ್ರೇನ್‌ ನಡುವಣ ಸಂಘರ್ಷ ತಾರಕಕ್ಕೇರಿದ್ದು ದಕ್ಷಿಣ ಉಕ್ರೇನ್‌ನ ಕಖೋವಾದಲ್ಲಿರುವ ಬೃಹತ್‌ ಅಣೆಕಟ್ಟೆಯ ಮೇಲೆ ದಾಳಿ ನಡೆಸಲಾಗಿದೆ. ಇದರ ಪರಿಣಾಮ ಅಣೆಕಟ್ಟೆಯ ಪಾರ್ಶ್ವದ ಗೋಡೆ­ಯೊಂದು ಕುಸಿದಿದ್ದು ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಹದ ಭೀತಿ ತಲೆದೋರಿದೆ. ಈ ಅಣೆಕಟ್ಟೆಯ ನೀರನ್ನೇ ಆಶ್ರಯಿಸಿರುವ ಜಲವಿದ್ಯುತ್‌ ಸ್ಥಾವರವೂ ಅಪಾಯದಲ್ಲಿದ್ದು ಈ ದುಷ್ಕೃತ್ಯದ ಸಂಬಂಧ ರಷ್ಯಾ ಮತ್ತು ಉಕ್ರೇನ್‌ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ನಿರತವಾಗಿವೆ. ಸೋವಿಯತ್‌ ಯೂನಿಯನ್‌ ಕಾಲದಲ್ಲಿ ಇಲ್ಲಿನ ಡ್ನಿಪ್ರೊ ನದಿಗೆ ಅಡ್ಡಲಾಗಿ ಈ ಬೃಹತ್‌ ಅಣೆಕಟ್ಟನ್ನು ನಿರ್ಮಿಸಲಾಗಿತ್ತು. ಕಳೆದ ವರ್ಷದ ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಉಕ್ರೇನ್‌ ವಿರುದ್ಧ ಸೇನಾ ಆಕ್ರಮಣ ಆರಂಭಿಸಿದ ಆರಂಭದಲ್ಲಿಯೇ ರಷ್ಯಾ ಈ ಅಣೆಕಟ್ಟು ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ತನ್ನ ವಶಕ್ಕೆ ತೆಗೆದುಕೊಂಡಿತ್ತು.

ಇದೇ ವೇಳೆ ಈ ಅಣೆಕಟ್ಟೆಯಿಂದಲೇ ಯುರೋಪ್‌ನ ಅತೀ ದೊಡ್ಡ ಝಪೋರ್‌ಝಿಯಾ ಪರಮಾಣು ಸ್ಥಾವರಕ್ಕೆ ನೀರು ಪೂರೈಕೆ­ಯಾಗುತ್ತಿತ್ತು. ಸದ್ಯ ಪರಮಾಣು ಸ್ಥಾವರಕ್ಕೆ ಯಾವುದೇ ಅಪಾಯ ಎದುರಾಗಿಲ್ಲವಾದರೂ ಪರಿಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ ತಿಳಿಸಿದೆ.

ಉಕ್ರೇನ್‌ ಮಾತ್ರವಲ್ಲದೆ ರಷ್ಯಾದ ಹಲವಾರು ಭಾಗಗಳಿಗೆ ಈ ಅಣೆಕಟ್ಟೆ­ಯಿಂದಲೇ ನೀರು ಪೂರೈಕೆಯಾಗುತ್ತಿತ್ತು. ಪ್ರವಾಹ ಭೀತಿಯಲ್ಲಿರುವ ಪ್ರದೇಶಗಳು ರಷ್ಯಾ ಮತ್ತು ಉಕ್ರೇನ್‌ ಈ ಎರಡೂ ದೇಶಗಳ ನಿಯಂತ್ರಣದಲ್ಲಿರುವ ಹಿನ್ನೆಲೆಯಲ್ಲಿ ಇತ್ತಂಡಗಳೂ ಸಂತ್ರಸ್ತರ ರಕ್ಷಣ ಕಾರ್ಯದಲ್ಲಿ ತೊಡಗಿಕೊಂಡಿವೆ. ಇದೇ ವೇಳೆ ಜಲ ವಿದ್ಯುತ್‌ ಸ್ಥಾವರ ಮತ್ತು ಸಮೀಪದಲ್ಲಿರುವ ವಿವಿಧ ಕೈಗಾರಿಕೆಗಳು ದಾಸ್ತಾನು ಇರಿಸಿದ್ದ ನೂರಾರು ಟನ್‌ಗಳಷ್ಟು ತೈಲ ನೀರುಪಾಲಾಗಿದ್ದು ಜಲಚರಗಳ ಪ್ರಾಣಕ್ಕೂ ಕುತ್ತು ಬಂದೊದಗಿದೆ. ಕಳೆದ 16 ತಿಂಗಳುಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್‌ ನಡುವಣ ಯುದ್ಧ ಮತ್ತೆ ಭೀಕರ ಸ್ವರೂಪವನ್ನು ಪಡೆದು­ಕೊಂಡಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಆರೋಪ-ಪ್ರತ್ಯಾರೋಪ­ಗಳೇನೇ ಇರಲಿ, ಯುದ್ಧದ ಭಾಗವಾಗಿ ಈ ದಾಳಿ ನಡೆದಿರುವುದಂತೂ ಸ್ಪಷ್ಟ.

ಯುದ್ಧಾರಂಭದಿಂದಲೂ ರಷ್ಯಾ ಜಾಗತಿಕವಾಗಿ ತನ್ನ ಪ್ರಾಬಲ್ಯವನ್ನು ತೋರ್ಪಡಿಸುವ ಇರಾದೆಯನ್ನು ಪ್ರದರ್ಶಿಸುತ್ತ ಬಂದಿದ್ದರೆ ನ್ಯಾಟೋ ರಾಷ್ಟ್ರಗಳ ಬೆಂಬಲದೊಂದಿಗೆ ಉಕ್ರೇನ್‌ ರಷ್ಯಾಕ್ಕೆ ಸಡ್ಡು ಹೊಡೆದು ನಿಂತಿದೆ. ಆದರೆ ರಷ್ಯಾ ಮಾತ್ರ ವಿಶ್ವಸಂಸ್ಥೆ, ಯುರೋಪಿಯನ್‌ ರಾಷ್ಟ್ರಗಳ ಯಾವುದೇ ನಿರ್ಬಂಧ, ಷರತ್ತು ಮತ್ತು ಬೆದರಿಕೆಗಳಿಗೆ ಮಣಿಯದೆ ಉಕ್ರೇನ್‌ ವಿರುದ್ಧದ ಯುದ್ಧವನ್ನು ಮುಂದುವರಿಸಿದೆ. ಇದೇ ವೇಳೆ ಉಕ್ರೇನ್‌ ಕೂಡ ಅಮೆರಿಕ ಆದಿಯಾಗಿ ಯುರೋಪಿಯನ್‌ ರಾಷ್ಟ್ರಗಳ ಪ್ರತ್ಯಕ್ಷ ಮತ್ತು ಪರೋಕ್ಷ ಬೆಂಬಲದೊಂದಿಗೆ ರಷ್ಯಾ ವಿರುದ್ಧ ಪ್ರತಿದಾಳಿಯನ್ನು ನಡೆಸುತ್ತಲೇ ಬಂದಿದೆ. ಪರಿಸ್ಥಿತಿ ಇದೇ ತೆರನಾಗಿ ಮುಂದುವರಿದದ್ದೇ ಆದಲ್ಲಿ ಭಾರೀ ಅನಾಹುತ ಸಂಭವಿಸಲಿರುವುದಂತೂ ನಿಶ್ಚಿತ.

ರಷ್ಯಾ-ಉಕ್ರೇನ್‌ ನಡುವೆ ತಲೆದೋರಿರುವ ಸಮಸ್ಯೆಗೆ ಮಾನವೀಯ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ವಿಶ್ವಸಂಸ್ಥೆ ಮುಂದಡಿ ಇಡಬೇಕಾಗಿದೆಯಾದರೂ ಈ ಇಚ್ಛಾಶಕ್ತಿಯನ್ನು ಅದು ಪ್ರದರ್ಶಿಸುತ್ತಿಲ್ಲ. ಇಂದಿನ ಪರಮಾಣು ಯುಗದಲ್ಲೂ ವರ್ಷ ಕಾಲ ಯುದ್ಧ ಮುಂದುವರಿದಿದೆ ಎಂದಾದರೆ ಇದು ಬಲುದೊಡ್ಡ ವಿನಾಶಕ್ಕೆ ನಾಂದಿ ಹಾಡಿದಂತೆಯೇ. ಇನ್ನಾದರೂ ಜಾಗತಿಕ ಸಮುದಾಯ ಮತ್ತು ವಿಶ್ವಸಂಸ್ಥೆ ಎಚ್ಚೆತ್ತುಕೊಂಡು ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಿದ್ದೇ ಆದಲ್ಲಿ ಈ ಯುದ್ಧಕ್ಕೆ ಅಂತ್ಯ ಹಾಡುವುದು ಕಷ್ಟಸಾಧ್ಯವೇನಲ್ಲ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.