ಮಹಾರಾಷ್ಟ್ರ ದುಸ್ಸಾಹಸಕ್ಕೆ ಹಾಕಬೇಕಿದೆ ಕಡಿವಾಣ


Team Udayavani, May 3, 2022, 6:00 AM IST

ಮಹಾರಾಷ್ಟ್ರ ದುಸ್ಸಾಹಸಕ್ಕೆ ಹಾಕಬೇಕಿದೆ ಕಡಿವಾಣ

ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದವನ್ನು ಮತ್ತೆ ಕೆಣಕಿರುವ ಮಹಾರಾಷ್ಟ್ರ ಸರಕಾರ ಗಡಿ ಪ್ರದೇಶದಲ್ಲಿ ಭಾಷಾ ಸಾಮರಸ್ಯಕ್ಕೆ ಧಕ್ಕೆ ತರುವ ಸಾಹಸಕ್ಕೆ ಪುನಃ ಕೈಹಾಕಿದೆ. ಮೇ 1ರಂದು “ಮಹಾರಾಷ್ಟ್ರ ದಿನಾಚರಣೆ’ ನೆಪ ಮಾಡಿಕೊಂಡು ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಈ ವಿವಾದ ಕೆದಕಿದ್ದಾರೆ. ಎರಡೂ ರಾಜ್ಯಗಳ ಅಭಿವೃದ್ಧಿ ದೃಷ್ಟಿ ಯಿಂದ ಇದು ಅಪಾಯಕಾರಿ ಬೆಳವಣಿಗೆ.

ಅಜಿತ್‌ ಪವಾರ್‌ ಅವರು ಕರ್ನಾಟಕದ ಮರಾಠಿ ಭಾಷಿಕ ಪ್ರದೇಶ ಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಲು ನಮ್ಮ ಸರಕಾರದಿಂದ ಬೆಂಬಲ ನೀಡಲಾಗುವುದು ಎಂದು ಹೇಳಿ ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಇಲ್ಲಿ ಪವಾರ್‌ ಯಾರನ್ನೋ ಸಮಾ ಧಾನಿಸಲು ಕನ್ನಡಿಗರನ್ನು ಕೆಣಕುವ ಕೆಲಸ ಮಾಡಿದ್ದಾರೆ.

ಗಡಿ ವಿವಾದ ಕೆಣಕುವುದೇ ಮಹಾರಾಷ್ಟ್ರದ ಮೊದಲ ಕೆಲಸ. ಇದು ಕಳೆದ 62 ವರ್ಷಗಳಿಂದ ನಡೆದುಕೊಂಡು ಬಂದಿದೆ. ಅವರಿಂದ ಬೇರೆ ಯದನ್ನು ನಿರೀಕ್ಷೆ ಮಾಡುವುದು ಸಾಧ್ಯವಿಲ್ಲ. ಮಹಾರಾಷ್ಟ್ರ ವಿವಾದ ಕೆಣಕಿದಾಗ ಬೆಳಗಾವಿ ಸೇರಿದಂತೆ ಗಡಿ ಭಾಗದ ಪ್ರದೇಶಗಳು ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಸಿದ್ಧ ಉತ್ತರವನ್ನು ನೀಡಿ ಸುಮ್ಮನೆ ಕುಳಿತು ಕೊಳ್ಳುವ ಕರ್ನಾಟಕ ಸರಕಾರ ಅದಕ್ಕೆ ಪೂರಕವಾಗಿ ಯಾವ ಕಾನೂನು ಕ್ರಮ ಕೈಗೊಂಡಿದೆ ಎಂಬುದು ಕನ್ನಡಿಗರ ಪ್ರಶ್ನೆ.

ಗಡಿ ವಿವಾದ ಕುರಿತು ಮೇಲಿಂದ ಮೇಲೆ ಈ ರೀತಿಯ ಪ್ರಚೋದನಕಾರಿ ಹೇಳಿಕೆ ನೀಡಿದರೆ ಅದರಿಂದ ಪರಿಹಾರ ಸಿಗುವುದಿಲ್ಲ. ಇದು ಮಹಾರಾಷ್ಟ್ರದ ನಾಯಕರು ಹಾಗೂ ಕರ್ನಾಟಕದ ಗಡಿ ಭಾಗದಲ್ಲಿರುವ ಮಹಾರಾಷ್ಟ್ರ ಪರ ಇರುವ ನಾಯಕರಿಗೂ ಗೊತ್ತಿದೆ. ಆದರೂ ಆಗಾಗ ಈ ವಿಷಯವನ್ನು ಕೆದಕುವುದನ್ನು ಬಿಟ್ಟಿಲ್ಲ. ಎಂದೋ ಮುಗಿದು ಹೋದ ವಿಷಯಕ್ಕೆ ಮೇಲಿಂದ ಮೇಲೆ ರಾಜಕೀಯ ಬಣ್ಣ ಕೊಟ್ಟು ಅದರಿಂದ ಲಾಭ ಪಡೆದು ಕೊಳ್ಳುವ ಕಾರ್ಯಕ್ಕೆ ಮಹಾರಾಷ್ಟ್ರದ ನಾಯಕರು ಇಳಿದಿದ್ದಾರೆ.

ಕರ್ನಾಟಕದಲ್ಲಿ ಚುನಾವಣೆ ಸಮೀಪ ಇದ್ದಾಗ ಇಲ್ಲವೇ ಮಹಾ ರಾಷ್ಟ್ರದಲ್ಲಿ ತಮ್ಮ ಜನಪ್ರಿಯತೆ ಕಡಿಮೆಯಾದಾಗ ಅಲ್ಲಿನ ನಾಯಕರು ಮುಗಿಬೀಳುವುದು ಸಾಮಾನ್ಯವೆನಿಸಿದೆ. ಇದಕ್ಕೆ ಕರ್ನಾಟಕ ಸರಕಾರದ ಉದಾಸೀನ ಮನೋಭಾವವೂ ಪ್ರಮುಖ ಕಾರಣ.

ಹಾಗೆ ನೋಡಿದರೆ ಗಡಿ ಭಾಗದ ಪ್ರದೇಶಗಳ ಜನರಲ್ಲಿ ಕರ್ನಾಟಕ ಸರಕಾರ ನಿಮ್ಮ ಜತೆಗಿದೆ ಎಂಬ ಆತ್ಮವಿಶ್ವಾಸ ಮೂಡಿಸಲು ಹಾಗೂ ಅಲ್ಲಿನ ಕನ್ನಡಿಗರ ಹಿತ ಕಾಯುವ ಉದ್ದೇಶದಿಂದ ಸರಕಾರ ರಚಿಸಿರುವ ಆಯೋಗ ಹಾಗೂ ಸಮಿತಿಗಳ ಚಟುವಟಿಕೆ ಟೀಕೆಗೆ ಗುರಿಯಾಗಿದೆ. ಗಡಿ ಅಭಿವೃದ್ಧಿ ಪ್ರಾಧಿಕಾರ ನಿಷ್ಕ್ರಿಯವಾಗಿದೆ. ಗಡಿ ಸಂರಕ್ಷಣ ಆಯೋಗ ಇದ್ದೂ ಇಲ್ಲದಂತಿದೆ. ಕನ್ನಡ ಅಭಿವೃದ್ದಿ ಪ್ರಾಧಿಕಾರ ನಿಸ್ತೇಜವಾಗಿದೆ. ಈ ರೀತಿಯ ವ್ಯವಸ್ಥೆ ಇರುವಾಗ ಮಹಾರಾಷ್ಟ್ರದ ವಿರುದ್ಧ ನಾವು ಟೀಕೆ ಮಾಡಿದರೂ ಅರ್ಥವಿಲ್ಲ ಎಂಬ ಬಲವಾದ ಆರೋಪ ಇದೆ. ಮೇಲಾಗಿ ಗಡಿ ಸಂರಕ್ಷಣ ಆಯೋಗವನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡಬೇಕು. ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಬೇಕು ಎಂಬ ಮನವಿಗಳು ಅರಣ್ಯರೋದನವಾಗಿವೆ. ಸರಕಾರ ಮೊದಲು ಈ ಗೊಂದಲವನ್ನು ಬಗೆಹರಿಸುವ ಕೆಲಸ ಮಾಡಬೇಕು. ಅನಂತರ ವಿವಾದ ಕೆಣಕುವ ನಾಯಕರಿಗೆ ಕಾನೂನಿನ ಮೂಲಕವೇ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಈ ರೀತಿಯ ಹೇಳಿಕೆ ನಿಲ್ಲುವುದಿಲ್ಲ. ಗಡಿ ಭಾಗದ ಕನ್ನಡಿಗರಿಗೆ ಆತಂಕ ತಪ್ಪುವುದಿಲ್ಲ.

ಟಾಪ್ ನ್ಯೂಸ್

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.