ವಲಸೆ ಕಾರ್ಮಿಕರಿಗೆ ಸಹಾಯ ಸಹಾನುಭೂತಿ ಮುಖ್ಯ


Team Udayavani, May 29, 2020, 5:11 AM IST

ವಲಸೆ ಕಾರ್ಮಿಕರಿಗೆ ಸಹಾಯ ಸಹಾನುಭೂತಿ ಮುಖ್ಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಾಕ್‌ಡೌನ್‌ ಆರಂಭವಾದಾಗಿನಿಂದ ದೇಶಾದ್ಯಂತ ಅತಿಹೆಚ್ಚು ಸಂಕಷ್ಟಕ್ಕೊಳಗಾದ ವರ್ಗವೆಂದರೆ ವಲಸೆ ಕಾರ್ಮಿಕರು.

ವಿವಿಧ ರಾಜ್ಯಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಲು ಪಟ್ಟ, ಪಡುತ್ತಿರುವ ಪಡಿಪಾಟಲು ಅಷ್ಟಿಷ್ಟಲ್ಲ. ಸುಡುಬಿಸಿಲಲ್ಲಿ ನೂರಾರು ಕಿಲೋಮೀಟರ್‌ ನಡೆದವರೆಷ್ಟೋ, ಮಧ್ಯದಲ್ಲೇ ಹಸಿವು, ಅಪಘಾತ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಅಸುನೀಗಿದವರೆಷ್ಟೋ.

ಲಾಕ್‌ಡೌನ್‌ನ ಮೂರು ಚರಣಗಳಲ್ಲಿ ರಾಜ್ಯಗಳೆಲ್ಲ ತಮ್ಮ ಗಡಿಯನ್ನು ಮುಚ್ಚಿದ್ದರಿಂದಾಗಿ ಹಾಗೂ ಸಾರಿಗೆ ವ್ಯವಸ್ಥೆಯ ಮೇಲಿನ ನಿರ್ಬಂಧದಿಂದಾಗಿ ವಲಸಿಗ ಕಾರ್ಮಿಕರ ತೊಂದರೆ ತಾರಕಕ್ಕೇರುವಂತಾಯಿತು.

ಆದರೆ ಮೇ ತಿಂಗಳ ಆರಂಭದಿಂದ ಅನ್ಯ ರಾಜ್ಯಗಳಲ್ಲಿ ಸಿಲುಕಿರುವ ವಲಸಿಗರನ್ನು ಅವರ ಊರುಗಳಿಗೆ ತಲುಪಿಸುವ ಕೆಲಸ ಭರದಿಂದ ಸಾಗಿರುವುದು ಸ್ವಾಗತಾರ್ಹ. ಮೇ 1ರಿಂದ 27ರ ವರೆಗೆ 97 ಲಕ್ಷ ಜನರನ್ನು ಅವರ ಊರುಗಳಿಗೆ ತಲುಪಿಸಿರುವುದಾಗಿ ಕೇಂದ್ರ ಸರಕಾರ ಗುರುವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಈ ಅವಧಿಯಲ್ಲಿ ಶ್ರಮಿಕ್‌ ವಿಶೇಷ ರೈಲುಗಳ ಮೂಲಕ 50 ಲಕ್ಷ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಿದ್ದರೆ, 41 ಲಕ್ಷ ಜನ ರಸ್ತೆಗಳ ಮೂಲಕ ತಲುಪಿದ್ದಾರೆ ಎಂದಿದೆ ಕೇಂದ್ರ.

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಕೂಡ ಸರಕಾರಕ್ಕೆ ನಿರ್ದೇಶನಗಳನ್ನು ನೀಡಿದ್ದು, ವಲಸೆ ಕಾರ್ಮಿಕರಿಗೆ ಪ್ರಯಾಣ ದರ ವಿಧಿಸದಂತೆ, ನೀರು,ಆಹಾರದ ಕೊರತೆಯಾಗದಂತೆ ನೋಡಿಕೊಳ್ಳಲು ಹೇಳಿದೆ.

ಅಲ್ಲದೇ, ಒಂದು ವೇಳೆ ಅನ್ಯ ರಾಜ್ಯಗಳಲ್ಲಿ ಸಿಲುಕಿರುವವರು ತಮ್ಮ ಊರುಗಳಿಗೆ ಹಿಂದಿರುಗಲು ಬಯಸಿದರೆ, ರಾಜ್ಯ ಸರಕಾರಗಳು ಅವರನ್ನು ತಡೆಯಬಾರದು ಎಂದೂ ನ್ಯಾಯಪೀಠ ಹೇಳಿರುವುದು ಸ್ವಾಗತಾರ್ಹ.

ಇದೇ ವೇಳೆಯಲ್ಲೇ, ಹಠಾತ್ತನೆ ಭಾರೀ ಪ್ರಮಾಣದಲ್ಲಿ ಹಿಂದಿರುಗುತ್ತಿರುವ ಜನರೊಂದಿಗೆ, ಕೊವಿಡ್ ಪ್ರಕರಣಗಳ ಸಂಖ್ಯೆಯೂ ದೇಶದಲ್ಲಿ ಹೆಚ್ಚಳವಾಗುತ್ತಿರುವುದು, ಇದುವರೆಗೂ ಹಸುರು ವಲಯಗಳಾಗಿ ಉಳಿದಿದ್ದ ಪ್ರದೇಶಗಳಲ್ಲಿ ಸೋಂಕುಗಳು ಪತ್ತೆಯಾಗುತ್ತಿರುವುದು ಕಳವಳಕಾರಿ ವಿಷಯ.

ಆದಾಗ್ಯೂ, ಇಂಥದ್ದೊಂದು ಸನ್ನಿವೇಶವನ್ನು ದೇಶ ನಿರೀಕ್ಷಿಸಿರಲಿಲ್ಲ ಎನ್ನುವುದು ತಪ್ಪಾದೀತು. ಲಾಕ್‌ಡೌನ್‌ನ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿರುವಂತೆಯೇ, ಜನರ ಓಡಾಟ ಹೆಚ್ಚುವುದನ್ನು ನಿರೀಕ್ಷಿಸಿದ್ದ ಕೇಂದ್ರ-ರಾಜ್ಯ ಸರಕಾರಗಳು, ಆರೋಗ್ಯ ವಲಯಗಳು ಈ ರೀತಿಯ ಸವಾಲಿಗೆ ಸಾಕಷ್ಟು ಸಿದ್ಧತೆಯನ್ನೂ ನಡೆಸಿದ್ದವು.

ಈ ಸಿದ್ಧತೆಯ ಪರಿಣಾಮವನ್ನು ನಾವೀಗ ನೋಡುತ್ತಿದ್ದೇವೆ. ರಾಜ್ಯದಲ್ಲೂ ಮಹಾರಾಷ್ಟ್ರ, ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳಿಂದ ಹಿಂದಿರುಗಿರುವವರನ್ನು ಪರೀಕ್ಷಿಸಿ ಅವರನ್ನು ಕ್ವಾರಂಟೈನ್‌ನಲ್ಲಿ ಇಡಲಾಗುತ್ತಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಬಂದವರು. ನಮ್ಮಲ್ಲಷ್ಟೇ ಅಲ್ಲ, ಹಠಾತ್ತನೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾದ ರಾಜ್ಯಗಳಲ್ಲೂ ಇದೇ ಸ್ಥಿತಿ ಕಾಣಿಸುತ್ತಿದೆ.

ಹಾಗೆಂದು, ಇದಕ್ಕೆ ಸೋಂಕಿತರನ್ನು ತಪ್ಪಿತಸ್ಥರಂತೆ ನೋಡುವ ತಪ್ಪನ್ನು ಯಾರೂ ಮಾಡಬಾರದು. ವಲಸಿಗ ಕಾರ್ಮಿಕರು ತಿಂಗಳುಗಳಿಂದ ಪಟ್ಟ ಪಡಿಪಾಟಲು ಅಷ್ಟಿಷ್ಟಲ್ಲ. ದೇಶದ ಬಹುತೇಕ ಆರ್ಥಿಕ ಚಟುವಟಿಕೆಗಳು ನಿಂತಿದ್ದರಿಂದಾಗಿ, ದಿನಗೂಲಿಯ ಮೇಲೆ ಅವಲಂಬಿತರಾದ ಅವರ ಜೀವನ ಹಠಾತ್ತನೆ ಬೀದಿಗೆ ಬಂದು ಬಿದ್ದಿದೆ.

ಕೋವಿಡ್ ಗಿಂತಲೂ ಊಟವಿಲ್ಲದೇ ಎಲ್ಲಿ ಪ್ರಾಣ ಕಳೆದುಕೊಳ್ಳುತ್ತೇವೋ ಎಂಬ ಭಯ ಅನೇಕರನ್ನು ಕಾಡಿದ್ದುಂಟು. ಹೀಗಾಗಿ, ಆರ್ಥಿಕವಾಗಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಹೋಗಿರುವ ಅವರನ್ನೆಲ್ಲ ಸುರಕ್ಷಿತವಾಗಿ ಕರೆತರುವುದು, ಅವರ ಕಾಳಜಿ ಮಾಡುವುದು ರಾಜ್ಯಗಳ ಜವಾಬ್ದಾರಿ.

ಅಲ್ಲದೆ, ಹೀಗೆ ಹಿಂದಿರುಗಿರುವವರನ್ನು ಆಯಾ ಪ್ರದೇಶಗಳ ಜನರೂ ಕೂಡ ಸಹಾನುಭೂತಿಯ ದೃಷ್ಟಿಯಿಂದ ನೋಡಬೇಕೇ ಹೊರತು, ಯಾವುದೇ ಕಾರಣಕ್ಕೂ ಅವರನ್ನು ಕಳಂಕಿತರೆಂಬಂತೆ ನೋಡಲೇಬಾರದು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.