New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ


Team Udayavani, Nov 22, 2024, 6:00 AM IST

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೀರ ಮಾರುಕಟ್ಟೆಯಲ್ಲಿ ಹಿಡಿತ ಸಾಧಿಸುವ ಮೂಲಕ ಪ್ರಾಬಲ್ಯ ಮೆರೆದಿರುವ ಕರ್ನಾಟಕ ಹಾಲು ಒಕ್ಕೂಟ(ಕೆಎಂಎಫ್) ಈಗ ದೇಶದ ರಾಜಧಾನಿ ಹೊಸದಿಲ್ಲಿ ಮತ್ತು ರಾಷ್ಟ್ರ ರಾಜಧಾನಿ ವ್ಯಾಪ್ತಿಯ ಪ್ರದೇಶದ ಹಾಲು ಮಾರುಕಟ್ಟೆಗೆ ಲಗ್ಗೆ ಇರಿಸಿದೆ.

ರಾಜ್ಯದಲ್ಲಿರುವ 15, 737 ಹಾಲು ಉತ್ಪಾದಕ ಸಂಘಗಳು, 15 ಜಿಲ್ಲಾ ಹಾಲು ಒಕ್ಕೂಟಗಳ ಮೂಲಕ 26.76 ಲಕ್ಷ ಹಾಲು ಉತ್ಪಾದಕರು ಪ್ರತಿನಿತ್ಯ ಒಂದು ಕೋಟಿ ಲೀಟರ್‌ಗೂ ಅಧಿಕ ಹಾಲನ್ನು ಕೆಎಂಎಫ್ ಗೆ ಪೂರೈಕೆ ಮಾಡುತ್ತಿದ್ದಾರೆ. ಈ ಪೈಕಿ ಕೆಎಂಎಫ್ 60 ಲಕ್ಷ ಲೀಟರ್‌ಗಳಿಗೂ ಅಧಿಕ ಪ್ರಮಾಣ ಹಾಲನ್ನು ಮಾರಾಟ ಮಾಡು­ತ್ತಿದೆ. ಇನ್ನು ಮಿಗತೆಯಾಗುತ್ತಿರುವ 40 ಲಕ್ಷ ಲೀ.ಗಳಷ್ಟು ಹಾಲಿಗೆ ಪರ್ಯಾಯ ಮಾರುಕಟ್ಟೆಯನ್ನು ಕಂಡುಕೊಳ್ಳುವ ಉದ್ದೇಶದಿಂದ ಕೆಎಂಎಫ್ ಮಾರುಕಟ್ಟೆ ವಿಸ್ತರಣೆ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಅದರಂತೆ ರಾಷ್ಟ್ರ ರಾಜಧಾನಿಗೆ ಹಾಲು ಪೂರೈಕೆ ಮಾಡಲಾರಂಭಿಸಿದೆ. ಮೊದಲ ಹಂತದಲ್ಲಿ ದಿಲ್ಲಿ ಮತ್ತು ಎನ್‌ಸಿಆರ್‌ ಭಾಗದಲ್ಲಿ ನಂದಿನಿ ಬ್ರ್ಯಾಂಡ್‌ನ‌ ವಿವಿಧ ಮಾದರಿಯ ಹಾಲು ಅಲ್ಲಿನ ಗ್ರಾಹಕರಿಗೆ ಲಭಿಸಲಿದ್ದರೆ ಸದ್ಯೋಭವಿಷ್ಯದಲ್ಲಿ ಉತ್ತರ ಭಾರತದ ಇನ್ನಷ್ಟು ಪ್ರದೇಶಗಳಿಗೆ ತನ್ನ ಮಾರುಕಟ್ಟೆಯನ್ನು ವಿಸ್ತರಿಸುವ ಗುರಿಯನ್ನು ಕೆಎಂಎಫ್ ಹಾಕಿಕೊಂಡಿದೆ.

ಕೆಎಂಎಫ್ ನ ನಂದಿನಿ ಬ್ರ್ಯಾಂಡ್‌ನ‌ ಹಾಲು ಉತ್ಪನ್ನಗಳು ಕೇವಲ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಲಭ್ಯವಾಗುತ್ತಿದ್ದು, ಅಂತಾರಾಷ್ಟ್ರೀಯ ಮನ್ನಣೆ ಗಳಿಸಿಕೊಂಡಿದೆ. ನಂದಿನಿ ಬ್ರ್ಯಾಂಡ್‌ಗೆ ಹೆಚ್ಚಿನ ಪ್ರಚಾರ ನೀಡುವ ಉದ್ದೇಶದಿಂದ ಕೆಎಂಎಫ್ ವಿವಿಧ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳು ಮತ್ತು ಕಾರ್ಯ­­ಕ್ರಮಗಳ ಪ್ರಾಯೋಜಕತ್ವವನ್ನು ವಹಿಸಿಕೊಳ್ಳುವ ಮೂಲಕ ತನ್ನ ಉತ್ಪನ್ನಗಳನ್ನು ವಿದೇಶಿಗರಿಗೂ ಪರಿಚಯಿಸುವ ಕಾರ್ಯವನ್ನು ಮಾಡುತ್ತ ಬಂದಿದೆ.

ಈಗಾಗಲೇ ದೇಶ-ವಿದೇಶಗಳಲ್ಲಿ ವಿಖ್ಯಾತವಾಗಿರುವ ಅಮೂಲ್‌ ಮತ್ತು ಮದರ್‌ ಡೇರಿ ಬ್ರ್ಯಾಂಡ್‌ಗೆ ಸಡ್ಡು ಹೊಡೆಯಲು ಮುಂದಾಗಿರುವ ಕೆಎಂಎಫ್ ಈಗ ದಿಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಹಾಲಿನ ಎಲ್ಲ ಬ್ರ್ಯಾಂಡ್‌ಗಳಿಗಿಂತ ಕಡಿಮೆ ಬೆಲೆಯಲ್ಲಿ ತನ್ನ ಬ್ರ್ಯಾಂಡ್‌ನ‌ ಹಾಲನ್ನು ಮಾರಾಟ ಮಾಡುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ 5-6 ಲಕ್ಷ ಲೀಟರ್‌ಗಳಷ್ಟು ಹಾಲನ್ನು ಈ ಪ್ರದೇಶದಲ್ಲಿ ಮಾರಾಟ ಮಾಡುವ ಗುರಿಯನ್ನು ಹಾಕಿಕೊಂಡಿದೆ. ಉತ್ತರ ಭಾರತದ ಪ್ರದೇಶಗಳಿಗೆ ಹಾಲು ಸಾಗಣೆ ಒಂದಿಷ್ಟು ತ್ರಾಸದಾಯಕವಾದರೂ ಹಾಲಿನ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಅತ್ಯಂತ ಸುರಕ್ಷಿತವಾಗಿ ಹಾಲನ್ನು ಪೂರೈಕೆ ಮಾಡಲು ಕೆಎಂಎಫ್ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಒಟ್ಟಾರೆ ಕೆಎಂಎಫ್ ನ ಐದು ದಶಕಗಳ ಅವಧಿಯಲ್ಲಿ ಇದೊಂದು ಮಹತ್ತರ ಮೈಲಿಗಲ್ಲು ಎಂಬುದರಲ್ಲಿ ಎರಡು ಮಾತಿಲ್ಲ.

ಇದೇ ವೇಳೆ ಕೆಎಂಎಫ್ ನ ಈ ಎಲ್ಲ ಕಾರ್ಯಯೋಜನೆಗಳಿಗೆ ರಾಜ್ಯ ಸರಕಾರ ನಿರಂತರ ಬೆಂಬಲ ನೀಡುತ್ತ ಬಂದಿದೆ. ಅಷ್ಟು ಮಾತ್ರವಲ್ಲದೆ ಹಾಲು ಉತ್ಪಾದಕ ಸಂಘಗಳಿಗೆ ಹಾಲನ್ನು ಪೂರೈಸುವ ಹೈನುಗಾರರಿಗೆ ಸರಕಾರ ಪ್ರೋತ್ಸಾಹಧನವನ್ನು ನೀಡುತ್ತಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಸರಕಾರ ಪ್ರೋತ್ಸಾಹಧನ ನೀಡಿಕೆಯಲ್ಲಿ ತಿಂಗಳುಗಳ ಕಾಲ ವಿಳಂಬ ಮಾಡುತ್ತಿರುವುದರಿಂದಾಗಿ ಹೈನುಗಾರರಿಗೆ ಸಮಸ್ಯೆ­ಯುಂಟಾಗಿದೆ.

ಅಲ್ಲದೆ ವರ್ಷಗಳುರುಳಿದಂತೆಯೇ ಹೈನುಗಾರಿಕೆ ವಿವಿಧ ಸಮಸ್ಯೆಗಳ ಸುಳಿಗೆ ಸಿಲುಕಿದ್ದು ರೈತರು ಈ ಎಲ್ಲ ಬವಣೆಗಳಿಂದ ಬೇಸತ್ತು ಹೈನುಗಾರಿಕೆಯಿಂದ ಹಿಂದೆ ಸರಿಯುತ್ತಿದ್ದಾರೆ. ಹೀಗಾಗಿ ಕೆಎಂಎಫ್ ಮತ್ತು ರಾಜ್ಯ ಸರಕಾರ ಹೈನುಗಾರರ ಸಮಸ್ಯೆ, ಬೇಡಿಕೆಗೆ ಕ್ಲಪ್ತವಾಗಿ ಸ್ಪಂದಿಸಿ ಅವರು ಹೈನುಗಾರಿಕೆಯಿಂದ ವಿಮುಖರಾಗದಂತೆ ನೋಡಿಕೊಳ್ಳಬೇಕು. ಹೈನುಗಾರಿಕೆಗೆ ಇನ್ನಷ್ಟು ಉತ್ತೇಜನ ನೀಡಿದ್ದೇ ಆದಲ್ಲಿ “ನಂದಿನಿ’ ಬ್ರ್ಯಾಂಡ್‌ ಅನ್ನು ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವ ಕೆಎಂಎಫ್ನ ಕನಸು ಸಾಕಾರಗೊಳ್ಳಲು ಸಾಧ್ಯ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.