NEET-JEE ಚರ್ಚೆ ಗೊಂದಲ ಬೇಡ

Team Udayavani, Aug 29, 2020, 6:18 AM IST

NEET-JEE ಚರ್ಚೆ ಗೊಂದಲ ಬೇಡ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ ಪ್ರವೇಶ ಪರೀಕ್ಷೆಗಳಾದ ಎನ್‌ಇಇಟಿ ಮತ್ತು ಜೆಇಇ ವಿಚಾರದಲ್ಲಿ ಈಗ ದೇಶಾದ್ಯಂತ ಪರ-ವಿರೋಧ ವೇಗ ಪಡೆದಿದೆ.

ಸೆಪ್ಟಂಬರ್‌ 1ರಿಂದ 6ರವರೆಗೆ ಜೆಇಇ ಪರೀಕ್ಷೆ ನಡೆಸಲು ಹಾಗೂ ಸೆಪ್ಟಂಬರ್‌ 13ಕ್ಕೆ ಎನ್‌ಇಇಟಿ ಪರೀಕ್ಷೆ ನಡೆಸಲು ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಇಲಾಖೆ ನಿರ್ಧರಿಸಿದೆ.

ಈ ಹಿಂದೆಯೇ ಈ ಪರೀಕ್ಷೆಗಳು ಸಾಂಕ್ರಾಮಿಕದ ಕಾರಣಕ್ಕೆ ಎರಡು ಬಾರಿ ಮುಂದೂಡಲ್ಪಟ್ಟಿದ್ದವು.

ಈಗ ಕೋವಿಡ್‌-19 ಕಾರಣಕ್ಕೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಈ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ವಿಪಕ್ಷಗಳು ಹೇಳುತ್ತಿವೆ.

ಬಿಜೆಪಿಯಲ್ಲೂ ಒಂದಿಬ್ಬರು ನಾಯಕರು ಇದೇ ವಾದವನ್ನೇ ಎದುರಿಟ್ಟಿದ್ದಾರೆ. ಆದರೆ ಸುರಕ್ಷತ ಕ್ರಮಗಳ ಪರಿಪಾಲನೆಯ ಮೂಲಕ ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಬಹುದು ಎನ್ನುವ ಭರವಸೆಯನ್ನು ನೀಡುತ್ತಿದೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ.

ಎನ್‌ಇಇಟಿಯೊಂದರ ವಿಚಾರವನ್ನೇ ನೋಡಿದರೆ ಈ ಪರೀಕ್ಷೆಯನ್ನು ಬರೆಯಲು ಈಗಾಗಲೇ ದೇಶಾದ್ಯಂತ 15.94 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈಗಾಗಲೇ 90 ಪ್ರತಿಶತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಡ್ಮಿಷನ್‌ ಕಾರ್ಡ್‌ಗಳನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಇದೊಂದು ರೀತಿಯಲ್ಲಿ ಇಕ್ಕಟ್ಟಿನ ವಿಚಾರವೇ ಸರಿಯಾದರೂ ಒಂದು ಸ್ಪಷ್ಟ ನಿರ್ಧಾರಕ್ಕೆ ಬರುವ ಅಗತ್ಯವಂತೂ ಇತ್ತು. ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಲು ಸಾಧ್ಯವಿದೆ ಎನ್ನುವುದನ್ನು ಕರ್ನಾಟಕ ರುಜುವಾತು ಮಾಡಿದೆ. ಅದನ್ನೇ ಮಾದರಿಯಾಗಿಟ್ಟುಕೊಂಡು ಮುಂದುವರಿಯಬೇಕು ಎಂದು ದೇಶಾದ್ಯಂತ ಶಿಕ್ಷಣ ತಜ್ಞರು ಅಭಿಪ್ರಾಯ ಪಡುತ್ತಾರೆ.

ಆದರೆ ಇದು ವಿದ್ಯಾರ್ಥಿಗಳ ಜೀವನದ ಜತೆಗಿನ ಚೆಲ್ಲಾಟ ಎನ್ನುವುದು ಪರೀಕ್ಷೆಗಳನ್ನು ಮುಂದೂಡಲು ಆಗ್ರಹಿಸುವವರ ವಾದ. ಈ ವಿಚಾರವಾಗಿ ಸುಪ್ರೀಂ ಕೋರ್ಟ್‌ಗೂ ಕೂಡ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ ಕೋರ್ಟ್‌ ಈ ಅರ್ಜಿಗಳನ್ನೆಲ್ಲ ತಿರಸ್ಕರಿಸಿ, ವೈರಸ್‌ನ ಜತೆಗೇ ಜೀವನ ಸಾಗಬೇಕಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಲು ಬಿಡುವುದಿಲ್ಲ ಎಂದಿದೆ.

ರಾಜ್ಯದ ವಿಷಯಕ್ಕೆ ಬರುವುದಾದರೆ, ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ| ಸಿ.ಎನ್‌. ಅಶ್ವತ್ಥನಾರಾಯಣ ಅವರು ನೀಟ್‌ ಮತ್ತು ಜೆಇಇ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಬಹುದು, ಸಿಇಟಿ ಸಮಯದಲ್ಲಿ ಬರದ ಕೋವಿಡ್ 19 ಜೆಇಇ ಪರೀಕ್ಷೆಯಲ್ಲಿ ಬರುತ್ತದೆಯೇ ಎಂದು ಪ್ರಶ್ನಿಸುತ್ತಾರೆ. ಅಲ್ಲದೇ ಈ ಎರಡೂ ಪರೀಕ್ಷೆಗಳನ್ನು ಮುಂದೂಡಿಸಲು ಪ್ರಯತ್ನಿಸುತ್ತಿರುವುದರ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ ಎಂದೂ ಅವರು ಹೇಳುತ್ತಿದ್ದಾರೆ.

ಗಮನಿಸಬೇಕಾದ ಸಂಗತಿಯೆಂದರೆ, ಪರೀಕ್ಷೆಗಳನ್ನು ಮುಂದೂಡಿದರೂ, ಎಲ್ಲಿಯವರೆಗೆ ಮುಂದೂಡಬೇಕು ಎನ್ನುವ ಪ್ರಶ್ನೆ ಎದುರಾಗುತ್ತದೆ. ಏಕೆಂದರೆ, ಇಂದು ಜಗತ್ತಿನಾದ್ಯಂತ ಕೋವಿಡ್ 19 ಸೋಂಕಿನ ಎರಡನೇ ಅಲೆಯ ಅಪಾಯವಿದೆ.

ಹೀಗಾಗಿ ಮುಂದೂಡುತ್ತಾ ಹೋದಷ್ಟೂ ಸವಾಲು ಹೆಚ್ಚುತ್ತಲೇ ಹೋಗುತ್ತದೆ. ಕೆಲವರು ಎರಡು ತಿಂಗಳು ಮುಂದೂಡಬೇಕು ಎನ್ನುತ್ತಾರೆ.ಆದರೆ ಎರಡು ತಿಂಗಳುಗಳಲ್ಲಿ ಕೋವಿಡ್‌ ಸವಾಲು ಕಡಿಮೆಯಾಗುತ್ತದೆ ಎನ್ನಲಾಗುವುದಿಲ್ಲ.

ಒಟ್ಟಿನಲ್ಲಿ ಪರೀಕ್ಷೆಗಳು ನಡೆಯುವುದೇ ಆದರೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರಿಕೆಯ ಕ್ರಮಗಳನ್ನು ಪಾಲಿಸುವಂತಾಗಬೇಕು. ನಿಗದಿಯಾದ ದಿನಕ್ಕೆ ಇನ್ನೂ ಕೆಲವೇ ಸಮಯ ಬಾಕಿ ಉಳಿದಿದೆ.

ಈ ಸಮಯದಲ್ಲಿ ಒಂದು ಸ್ಪಷ್ಟತೆ ವಿದ್ಯಾರ್ಥಿಗಳಲ್ಲಿ ಮನೆಮಾಡಬೇಕಿದೆ. ಪರೀಕ್ಷೆ ನಡೆಯುತ್ತದೋ ಇಲ್ಲವೋ ಎನ್ನುವ ಗೊಂದಲ ಅವರಲ್ಲಿ ಒತ್ತಡ ಉಂಟುಮಾಡಬಾರದು. ವಿದ್ಯಾರ್ಥಿಗಳೂ ಸಹ ಪರ-ವಿರೋಧದ ರಾಜಕೀಯ ಚರ್ಚೆಗಳತ್ತ ಗಮನಹರಿಸದೇ ಪರೀಕ್ಷಾ ತಯಾರಿಯತ್ತ ಗಮನಹರಿಸುವುದು ಒಳಿತು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.