POP ವಿಗ್ರಹ ನಿಷೇಧ: ಬಿಗಿ ನಿಲುವು ಅಗತ್ಯ


Team Udayavani, Aug 24, 2024, 6:10 AM IST

1-ganesh

ಗೌರಿ-ಗಣೇಶ ಹಬ್ಬಕ್ಕೆ ಇನ್ನು ಎರಡು ವಾರಗಳಷ್ಟೇ ಬಾಕಿ ಉಳಿದಿದೆ. ಈಗಾಗಲೇ ರಾಜ್ಯದೆಲ್ಲೆಡೆ ಮನೆಗಳಲ್ಲಿ ಮತ್ತು ಸಾರ್ವಜನಿಕವಾಗಿ ಪ್ರತಿಷ್ಠಾಪಿಸಿ, ಪೂಜಿಸಲು ಗಣೇಶ ವಿಗ್ರಹಗಳ ಖರೀದಿ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ವಿಗ್ರಹ ತಯಾರಕರು ಕೂಡ ಗಣೇಶನ ವಿಗ್ರಹಗಳ ತಯಾರಿ ಕಾರ್ಯದಲ್ಲಿ ಭರದಿಂದ ತೊಡಗಿಕೊಂಡಿದ್ದಾರೆ. ಏತನ್ಮಧ್ಯೆ ರಾಜ್ಯದ ಹಲವೆಡೆ ನಿಷೇಧಿತ ಪ್ಲಾಸ್ಟರ್‌ ಆಫ್ ಪ್ಯಾರಿಸ್‌(POP) ವಿಗ್ರಹಗಳ ತಯಾರಿ, ದಾಸ್ತಾನು, ಸಾಗಾಟ, ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಒಂದಿಷ್ಟು ಆತಂಕ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿ ಒಂದಿಷ್ಟು ಮುಂಚಿತವಾಗಿಯೇ ಎಚ್ಚೆತ್ತುಕೊಂಡಿರುವ ರಾಜ್ಯದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದಲ್ಲಿ ಪಿಒಪಿ ವಿಗ್ರಹಗಳ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಮುಂದಾಗಿದೆ. ಈ ಸಂಬಂಧ ರಾಜ್ಯದ ಅರಣ್ಯ ಮತ್ತು ಪರಿಸರ ಖಾತೆ ಸಚಿವರು ಇಲಾಖಾಧಿಕಾರಿಗಳ ಸಭೆ ನಡೆಸಿ, ಯಾವುದೇ ಕಾರಣಕ್ಕೂ ಪಿಒಪಿ ವಿಗ್ರಹ ನಿಷೇಧ ಕಾನೂನಿನ ಜಾರಿಯಲ್ಲಿ ಲೋಪವಾಗದಂತೆ ನೋಡಿಕೊಳ್ಳುವಂತೆ ಆಯಾಯ ಜಿಲ್ಲಾ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ವಿವಿಧ ನ್ಯಾಯಾಲಯಗಳ ನಿರ್ದೇಶನಾನುಸಾರ ರಾಷ್ಟ್ರೀಯ ಹಸುರು ನ್ಯಾಯಮಂಡಳಿ ಪಿಒಪಿ ವಿಗ್ರಹಗಳ ಬಳಕೆಯನ್ನು ನಿಷೇಧಿಸಿದೆ. ಪಿಒಪಿ ವಿಗ್ರಹಗಳು ಮತ್ತು ಈ ವಿಗ್ರಹಗಳಿಗೆ ರಾಸಾಯನಿಕ ಬಣ್ಣಗಳನ್ನು ಬಳಿಯುವುದರಿಂದ ಇವು ನೀರನ್ನು ಕಲುಷಿತಗೊಳಿಸುತ್ತವೆ. ಇಂತಹ ವಿಗ್ರಹಗಳನ್ನು ವಿಸರ್ಜಿಸಲಾಗುವ ಜಲಮೂಲಗಳಲ್ಲಿನ ಜಲಚರಗಳ ಪ್ರಾಣಕ್ಕೂ ಕುತ್ತು ತರುವ ಜತೆಯಲ್ಲಿ ಜಲಮೂಲಗಳೂ ನಿಷ್ಪ್ರಯೋಜಕವಾಗುತ್ತವೆ. ಇವೆಲ್ಲವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಪರಿಸರ ಸಚಿವರು, ಈ ಬಾರಿ ಪಿಒಪಿ ವಿಗ್ರಹ ತಯಾರಿಕರಿಗೆ ಎಚ್ಚರಿಕೆ, ದಂಡ, ವಿಗ್ರಹಗಳ ಮುಟ್ಟುಗೋಲಿನ ಜತೆಯಲ್ಲಿ ಕಾನೂನನ್ನು ಉಲ್ಲಂ ಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಎಲ್ಲ ಕ್ರಮಗಳು ಪರಿಸರ ಸಂರಕ್ಷಣೆಯಲ್ಲಿ ಸ್ವಾಗತಾರ್ಹ. ಇದೇ ವೇಳೆ ವಿಗ್ರಹ ತಯಾರಕರ ಕೆಲವು ಸಮಸ್ಯೆಗಳು ಮತ್ತವರ ಬೇಡಿಕೆಗಳಿಗೂ ಸರಕಾರ ಒಂದಿಷ್ಟು ಗಮನಹರಿಸುವ ಅಗತ್ಯವಿದೆ. ವರ್ಷಗಳುರುಳಿದಂತೆಯೇ ವಿಗ್ರಹ ತಯಾರಿಗೆ ಅಗತ್ಯವಾಗಿರುವ ಮಣ್ಣಿನ ಕೊರತೆ ವಿಗ್ರಹ ತಯಾರಕರನ್ನು ಬಾಧಿಸುತ್ತಿದ್ದು ಬೇಡಿಕೆಗೆ ತಕ್ಕಷ್ಟು ವಿಗ್ರಹಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ವ್ಯಾಪಾರಿಗಳು ಹೊರ ರಾಜ್ಯಗಳಿಂದ ವಿಗ್ರಹಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಇದು ರಾಜ್ಯದ ವಿಗ್ರಹ ತಯಾರಕರ ಮೇಲೆ ಭಾರೀ ಹೊಡೆತ ನೀಡುತ್ತಿದೆ. ಹೀಗಾಗಿ ಪ್ರತೀ ವರ್ಷ ಗಣೇಶೋತ್ಸವದ ಸಂದರ್ಭದಲ್ಲಿ ಪೂಜಿಸಲ್ಪಟ್ಟ ಗಣೇಶನ ವಿಗ್ರಹಗಳನ್ನು ಆಯಾಯ ಹೋಬಳಿ, ತಾಲೂಕು ಮತ್ತು ನಗರ ಪ್ರದೇಶದ ನಿರ್ದಿಷ್ಟ ಕೆರೆಯೊಂದರಲ್ಲಿ ನಿಗದಿತ ದಿನದಂದು ವಿಸರ್ಜನೆಗೆ ವ್ಯವಸ್ಥೆ ಮಾಡಬೇಕು ಎಂಬುದು ವಿಗ್ರಹ ತಯಾರಕರ ಬೇಡಿಕೆ. ಇದರಿಂದ ಮುಂದಿನ ವರ್ಷ ಇದೇ ಕೆರೆಗಳಿಂದ ಮಣ್ಣನ್ನು ಮೇಲೆತ್ತಿ ವಿಗ್ರಹಗಳನ್ನು ತಯಾರಿಸಲು ಅನುಕೂಲವಾಗಲಿದೆ. ಇಂತಹ ವ್ಯವಸ್ಥೆ ನಮ್ಮ ನೆರೆಯ ರಾಜ್ಯಗಳಲ್ಲಿ ಈಗಾಗಲೇ ಜಾರಿಯಲ್ಲಿದ್ದು, ಇದನ್ನು ರಾಜ್ಯದಲ್ಲಿಯೂ ಜಾರಿಗೆ ತರಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ವಿಗ್ರಹ ತಯಾರಕರ ಈ ಬೇಡಿಕೆ ನ್ಯಾಯಸಮ್ಮತವಾಗಿದ್ದು ಕನಿಷ್ಠ ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಾದರೂ ಇಂತಹ ಒಂದು ವ್ಯವಸ್ಥೆಯನ್ನು ಜಾರಿಗೆ ತರಲು ಸರಕಾರ ಮುಂದಾಗಬೇಕು. ಇದರಿಂದ ವಿಗ್ರಹ ತಯಾರಕರಿಗೆ ಸಾಕಷ್ಟು ಪ್ರಮಾಣದಲ್ಲಿ ಮಣ್ಣಿನ ವಿಗ್ರಹಗಳನ್ನು ತಯಾರಿಸಿ ಮಾರುಕಟ್ಟೆಗೆ ಪೂರೈಕೆ ಮಾಡಲು ಸಾಧ್ಯವಾಗಲಿದೆ. ಇದರಿಂದ ತನ್ನಿಂತಾನೆ ಪಿಒಪಿ ವಿಗ್ರಹಗಳ ಬಳಕೆಗೆ ಕಡಿವಾಣ ಬೀಳಲು ಸಾಧ್ಯ.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.