PU ಪ್ರಾಯೋಗಿಕ ಪರೀಕ್ಷೆ ದಿನಕ್ಕೊಂದು ಆದೇಶದ ಗೊಂದಲ


Team Udayavani, Oct 11, 2024, 6:00 AM IST

Exam 3

ರಾಜ್ಯ ಶಿಕ್ಷಣ ಇಲಾಖೆ ಇನ್ನೂ ಗೊಂದಲದ ಮಡುವಿನಿಂದ ಹೊರಬಂದಂತೆ ಕಾಣಿಸುತ್ತಿಲ್ಲ. ಇಲಾಖೆ ಕೈಗೊಳ್ಳುವ ಪ್ರತಿಯೊಂದು ನಿರ್ಣಯ ಕೂಡ ಒಂದಲ್ಲ ಒಂದು ಗೊಂದಲಕ್ಕೆ ಕಾರಣವಾಗುತ್ತಿದ್ದು ಅಧಿಕಾರಿಗಳು, ಶಿಕ್ಷಕ ವರ್ಗ, ವಿದ್ಯಾರ್ಥಿಗಳು ಮತ್ತವರ ಹೆತ್ತವರನ್ನು ಇಕ್ಕಟ್ಟಿನಲ್ಲಿ ಸಿಲುಕಿಸುತ್ತಿದೆ. ವಿದ್ಯಾರ್ಥಿಗಳಿಗೆ ಅನ್ಯ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ)ಯ ನಿರ್ಧಾರ ಈಗ ಈ ಗೊಂದಲದ ಗೂಡಿಗೆ ಹೊಸ ಸೇರ್ಪಡೆ.

ಆರಂಭದಲ್ಲಿ ಕೆಎಸ್‌ಇಎಬಿ, ಈ ಬಾರಿ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಯಾದೃಚ್ಛಿàಕರಿಸಿ ನಡೆಸುವ ಮತ್ತು ವಿದ್ಯಾರ್ಥಿಗಳು ತಾವು ಓದುತ್ತಿರುವ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ನೀಡದಿರಲು ನಿರ್ಧರಿಸಿ, ಆದೇಶ ಹೊರಡಿಸಿತ್ತು. ಆದರೆ ಈ ಬಗ್ಗೆ ಖಾಸಗಿ ಮತ್ತು ಅನುದಾನಿತ ಕಾಲೇಜುಗಳ ಆಡಳಿತ ಮಂಡಳಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಕೆಎಸ್‌ಇಎಬಿ ಸೋಮವಾರದಂದು ಪರಿಷ್ಕೃತ ಆದೇಶ ಹೊರಡಿಸಿ, ಗ್ರಾಮೀಣ ಭಾಗದಲ್ಲಿ ಏಕೈಕ ಪದವಿ ಪೂರ್ವ ಕಾಲೇಜು ಇದ್ದರೆ ಅಲ್ಲಿನ ವಿದ್ಯಾರ್ಥಿಗಳಿಗೆ ಹಾಲಿ ವ್ಯವಸ್ಥೆಯಂತೆ ಅಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಕಾಲೇಜುಗಳ ವಿದ್ಯಾರ್ಥಿಗಳನ್ನು ಅಲ್ಲಿಗೆ ಸಮೀಪದ ಕಾಲೇಜುಗಳಿಗೆ ಸಂಯೋಜಿಸುವಂತೆ ಸೂಚನೆ ನೀಡಿತ್ತು. ಅಷ್ಟು ಮಾತ್ರವಲ್ಲದೆ ಪರೀಕ್ಷಾ ಕೇಂದ್ರಗಳ ನಿಗದಿ, ಪ್ರಯೋಗಾಲಯಗಳಿಗೆ ಅಗತ್ಯ ಪ್ರಾಯೋಗಿಕ ಉಪಕರಣ ಮತ್ತು ಮೂಲಸೌಕರ್ಯ ಒದಗಿಸುವುದು, ಉಪನ್ಯಾಸಕರ ನೋಂದಣಿ ಮತ್ತಿತರ ವಿಷಯಗಳ ಬಗೆಗೆ ಈ ಆದೇಶದಲ್ಲಿ ಕೆಲವು ಮಾರ್ಗಸೂಚಿಯನ್ನು ಕೆಎಸ್‌ಇಎಬಿ ಕಾಲೇಜುಗಳಿಗೆ ನೀಡಿತ್ತು.
ಬುಧವಾರದಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಸೂಚನೆ ಮೇರೆಗೆ ಪರಿಷ್ಕೃತ ಸುತ್ತೋಲೆಯನ್ನು ಕೂಡ ಕೆಎಸ್‌ಇಎಬಿ ತಡೆ ಹಿಡಿದಿದೆ. ಈ ಬಾರಿಯೂ ಹಾಲಿ ಜಾರಿಯಲ್ಲಿರುವ ವ್ಯವಸ್ಥೆಯಂತೆ ಆಯಾಯ ಕಾಲೇಜಿನಲ್ಲೇ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು. ಒಂದು ವೇಳೆ ಅಗತ್ಯ ವ್ಯವಸ್ಥೆ ಇಲ್ಲದಿದ್ದರೆ ಸಮೀಪದ ಕಾಲೇಜಿಗೆ ತೆರಳಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದು ಮತ್ತೂಮ್ಮೆ ವಿದ್ಯಾರ್ಥಿಗಳನ್ನು ಗೊಂದಲಕ್ಕೀಡು ಮಾಡಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೆಎಸ್‌ಇಎಬಿ ಪದೇಪದೆ ತನ್ನ ನಿರ್ಧಾರಗಳನ್ನು ಬದಲಾಯಿಸುತ್ತಿರುವುದರಿಂದಾಗಿ ವಿದ್ಯಾರ್ಥಿಗಳ ಮೇಲೆ ಇನ್ನಿಲ್ಲದ ಮಾನಸಿಕ ಒತ್ತಡ ಸೃಷ್ಟಿಯಾಗುತ್ತಿದೆ. ಇಂತಹ ಸೂಕ್ಷ್ಮ ಮತ್ತು ಮಹತ್ವದ ವಿಷಯಗಳಲ್ಲಿ ನಿರ್ಧಾರಗಳನ್ನು ಕೈಗೊಳ್ಳುವಾಗಲೂ ಇಲಾಖೆ ಮತ್ತು ಕೆಎಸ್‌ಇಎಬಿ ಸಂಬಂಧಪಟ್ಟ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡದಿರುವುದು ವಿಪರ್ಯಾಸವೇ ಸರಿ. ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಅಥವಾ ಕೊನೆಯ ಹಂತದಲ್ಲಿ ಇಂತಹ ನಿರ್ಧಾರಗಳನ್ನು ಕೈಗೊಳ್ಳುವುದು ಇಡೀ ವ್ಯವಸ್ಥೆಯನ್ನು ನಗೆಪಾಟಲಿಗೀಡು ಮಾಡುತ್ತದೆ. ಇದರ ಬದಲಾಗಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ಆ ವರ್ಷಕ್ಕೆ ಸಂಬಂಧಿಸಿದಂತೆ ಸಮಗ್ರವಾಗಿ ಚರ್ಚಿಸಿ ನಿರ್ಧಾರಗಳನ್ನು ಕೈಗೊಳ್ಳುವ ಸಂಪ್ರದಾಯಕ್ಕೆ ಇಲಾಖೆ ನಾಂದಿ ಹಾಡಬೇಕಿದೆ. ಅವರಿವರ ತಾಳಕ್ಕೆ ಕುಣಿಯುವ ಬದಲಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಮತ್ತು ಶಿಕ್ಷಣದ ಗುಣಮಟ್ಟ ಕಾಯ್ದುಕೊಳ್ಳುವುದೇ ಶಿಕ್ಷಣ ಇಲಾಖೆಯ ಪ್ರಥಮ ಆದ್ಯತೆಯಾಗಬೇಕೇ ವಿನಾ ಈ ತೆರನಾದ ದ್ವಂದ್ವ ಮತ್ತು ತರಾತುರಿಯ ನೀತಿ-ನಿರೂಪಣೆಗಳಲ್ಲ. ಶೈಕ್ಷಣಿಕ ಗುಣಮಟ್ಟ ಸುಧಾರಣೆಯ ಭರದಲ್ಲಿ ಇಂತಹ ಧಾವಂತದ ನಿರ್ಧಾರಗಳು ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಮತ್ತಷ್ಟು ಗೋಜಲುಮಯವನ್ನಾಗಿಸುತ್ತವೆ ಎಂಬ ಪ್ರಾಥಮಿಕ ಜ್ಞಾನ ನಮ್ಮನ್ನಾಳುವವರು ಮತ್ತು ಅಧಿಕಾರಿಗಳಲ್ಲಿರಬೇಕು.

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.