RBI Unveils ULI: ಯುಎಲ್‌ಐ ಗೌಪ್ಯತೆ… ಆರ್‌ಬಿಐ ಮುಂದಿರುವ ಸವಾಲು


Team Udayavani, Aug 29, 2024, 7:30 AM IST

RBI Unveils ULI: ಯುಎಲ್‌ಐ ಗೌಪ್ಯತೆ… ಆರ್‌ಬಿಐ ಮುಂದಿರುವ ಸವಾಲು

ಭಾರತ ಮಾತ್ರವಲ್ಲದೆ ಈಗ ವಿಶ್ವದೆಲ್ಲೆಡೆ ಸಾರ್ವತ್ರಿಕ ಪ್ರಶಂಸೆಗೆ ಪಾತ್ರವಾಗಿರುವ ಯುಪಿಐ ಮಾದರಿಯಲ್ಲಿ ಶೀಘ್ರದಲ್ಲಿಯೇ ಸಾಲ ನೀಡಿಕೆಗೂ ದೇಶವ್ಯಾಪಿಯಾಗಿ ಯುನಿಫೈಡ್‌ ಲೆಂಡಿಂಗ್‌ ಇಂಟರ್‌ಫೇಸ್‌(ಯುಎಲ್‌ಐ) ಅನ್ನು ಪರಿಚಯಿಸಲಾಗು­ವುದು ಎಂದು ಆರ್‌ಬಿಐ ಘೋಷಿಸಿದೆ. ಸಾಲ ನೀಡಿಕೆ ಪ್ರಕ್ರಿಯೆಯನ್ನು ಸರಳ ಮತ್ತು ಸುಲಲಿತಗೊಳಿಸುವುದೇ ಯುಎಲ್‌ಐ ಜಾರಿಯ ಹಿಂದಿನ ಉದ್ದೇಶ.

ಯುಪಿಐ, ಇಡೀ ಪಾವತಿ ವ್ಯವಸ್ಥೆಯನ್ನು ಬದಲಾಯಿಸಿದ್ದೇ ಅಲ್ಲದೆ ವಹಿವಾಟು ಮತ್ತು ವ್ಯವಹಾರವನ್ನು ಹೆಚ್ಚು ಪಾರದರ್ಶಕವಾಗಿಸಿತು. ನಿರೀಕ್ಷೆಗೂ ಮೀರಿದ ವೇಗದಲ್ಲಿ ದೇಶದ ಜನತೆ ಯುಪಿಐ ಪಾವತಿ ವ್ಯವಸ್ಥೆಗೆ ಹೊಂದಿಕೊಳ್ಳುವ ಮೂಲಕ ನಗದು ವ್ಯವಹಾರ ಒಂದಿಷ್ಟು ಹಿನ್ನೆಲೆಗೆ ಸರಿಯುವಂತಾಯಿತು. ದೇಶದಲ್ಲಿ ಯುಪಿಐ ಈಗ ಸಾರ್ವತ್ರಿಕವಾಗಿ ಬಳಕೆಯಲ್ಲಿದ್ದು ಬಲುಜನಪ್ರಿಯವಾಗಿದೆ. ಇದರಿಂದ ಪ್ರೇರಣೆ ಪಡೆದು ಭಾರತೀಯ ರಿಸರ್ವ್‌ ಬ್ಯಾಂಕ್‌ ಈಗ ಸಾಲ ನೀಡಿಕೆಗೂ ಇಂತಹುದೇ ತಂತ್ರಜ್ಞಾನ ಪ್ಲಾಟ್‌ಫಾರಂ ಅನ್ನು ಪರಿಚಯಿಸಲು ಮುಂದಾಗಿದೆ.

ಗ್ರಾಹಕರಿಗೆ ಯಾವುದೇ ಸಮಸ್ಯೆ, ತೊಡಕುಗಳಿಲ್ಲದೆ ಸಾಲ ಲಭಿಸುವಂತಾಗ ಬೇಕೆಂಬ ಉದ್ದೇಶದಿಂದ ಆರ್‌ಬಿಐ, ಸಾರ್ವಜನಿಕ ತಾಂತ್ರಿಕ ವೇದಿಕೆಯೊಂದನ್ನು ಅಭಿವೃದ್ಧಿಪಡಿಸಿತ್ತು. ಆದರೆ ಸಾಲ ನೀಡಿಕೆಗೆ ಅತ್ಯಗತ್ಯವಾದ ದಾಖಲೆ ಪತ್ರಗಳು, ಮಾಹಿತಿಗಳು, ದತ್ತಾಂಶಗಳು ವಿವಿಧ ವ್ಯವಸ್ಥೆಗಳಲ್ಲಿರುವುದರಿಂದ ಇದು ಕಷ್ಟಸಾಧ್ಯ ವಾಯಿತು. ಈ ಹಿನ್ನೆಲೆಯಲ್ಲಿ ಆರ್‌ಬಿಐ ಯುಎಲ್‌ಐ ಅನ್ನು ಪರಿಚಯಿಸಲು ತೀರ್ಮಾನಿಸಿದೆ. ಈ ಹೊಸ ವ್ಯವಸ್ಥೆಯಿಂದ ಗ್ರಾಮೀಣ ಮತ್ತು ಸಣ್ಣ ಸಾಲಗಾರರು ಹಾಗೂ ಸೂಕ್ಷ್ಮ, ಸಣ್ಣ ಮತ್ತು ಅತೀ ಸಣ್ಣ ಉದ್ದಿಮೆಗಳಿಗೆ ಅತ್ಯಂತ ತ್ವರಿತಗತಿಯಲ್ಲಿ ಸಾಲ ನೀಡಲು ಸಾಧ್ಯವಾಗಲಿದೆ. ಇನ್ನು ಕೇಂದ್ರ ಸರಕಾರದ ಅತ್ಯಂತ ಮಹತ್ವಾ ಕಾಂಕ್ಷೆಯ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಕೂಡ ಈ ಪ್ಲಾಟ್‌ಫಾರಂನ ವ್ಯಾಪ್ತಿಗೆ ಬರಲಿದೆ. ಗ್ರಾಹಕರ ಭೂ ದಾಖಲೆ ಸಹಿತ ಎಲ್ಲ ದಾಖಲೆಗಳು ಮತ್ತು ಮಾಹಿತಿಗಳು ಯುಎಲ್‌ಐನಲ್ಲಿ ಲಭ್ಯವಿರಲಿದ್ದು ಇದರ ಆಧಾರದಲ್ಲಿ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸಾಲ ಮಂಜೂರು ಮಾಡಲು ಸಾಧ್ಯವಾಗಲಿದೆ. ಯುಪಿಐ ಮಾದರಿಯಲ್ಲಿ ಯುಎಲ್‌ಐ ಕೂಡ ಸಾಲ ನೀಡಿಕೆ ಪ್ರಕ್ರಿಯೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ ಎಂಬ ವಿಶ್ವಾಸ ಆರ್‌ಬಿಐನದ್ದಾಗಿದೆ.

ಇದೇ ವೇಳೆ ಯುಎಲ್‌ಐ ಜಾರಿಯಿಂದ ಗ್ರಾಹಕರ ಮಾಹಿತಿ ಸಾರ್ವಜನಿಕರಿಗೆ ಮುಕ್ತವಾಗಿರುವುದಿಲ್ಲ ಮತ್ತು ಗ್ರಾಹಕರ ವೈಯಕ್ತಿಕ ಮಾಹಿತಿಗಳು ಮತ್ತು ದಾಖಲೆಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ. ಆದರೆ ಯುಪಿಐ ಜಾರಿಯಾದ ಬಳಿಕ ವಂಚನೆ ಪ್ರಕರಣಗಳು ಅಗಾಧ ಪ್ರಮಾಣದಲ್ಲಿ ಹೆಚ್ಚಿವೆ. ಪ್ರತಿನಿತ್ಯ ಎಂಬಂತೆ ಜನರು ವಂಚನ ಜಾಲಕ್ಕೆ ಸಿಲುಕಿ ಕೈಸುಟ್ಟುಕೊಳ್ಳುತ್ತಿದ್ದಾರೆ. ಜನರ ವೈಯಕ್ತಿಕ ಮಾಹಿತಿ, ದತ್ತಾಂಶಗಳು,

ದಾಖಲೆಗಳು ಪರರ ಕೈಸೇರಿ ಮೋಸ ಹೋಗುತ್ತಿರುವ ಘಟನೆಗಳು ನಿತ್ಯ ನಿರಂತರ ಎಂಬಂತಾಗಿದೆ. ಇಂತಹ ಸ್ಥಿತಿಯಲ್ಲಿ ಈಗ ಸಾಲ ನೀಡಿಕೆಗೂ ತಂತ್ರಜ್ಞಾನದ ಪ್ಲಾಟ್‌ಫಾರಂ ಅನ್ನು ಪರಿಚಯಿಸಿದಲ್ಲಿ ಯಾರ್ಯಾರದೋ ಹೆಸರಲ್ಲಿ ಇನ್ಯಾರೋ ಸಾಲ ಪಡೆದು ಗ್ರಾಹಕರಿಗೆ ಮಾತ್ರವಲ್ಲದೆ ಬ್ಯಾಂಕ್‌ಗಳಿಗೂ ಪಂಗನಾಮ ಹಾಕುವ ಸಾಧ್ಯತೆ ಇದೆ. ಹಾಗಾಗದಂತೆ ಎಚ್ಚರ ವಹಿಸಲಾಗುವುದು ಎಂದು ಆರ್‌ಬಿಐ ಮುಖ್ಯಸ್ಥರು ಭರವಸೆ ನೀಡಿದ್ದರೂ ಈಗ ದೇಶದ ವಿವಿಧೆಡೆ ವಂಚಕರು ನವನವೀನ ಮಾದರಿಯಲ್ಲಿ ತಂತ್ರಜ್ಞಾನವನ್ನು ಬಳಸಿಯೇ ವಂಚಿಸುತ್ತಿರುವ ಘಟನೆಗಳಿಂದಾಗಿ ಯುಎಲ್‌ಐ ಸುರಕ್ಷೆಯ ಬಗೆಗೆ ಸಾರ್ವಜನಿಕರಿಗೆ ಅನುಮಾನ ಇದ್ದೇ ಇದೆ. ಹೀಗಾಗಿ ಆರ್‌ಬಿಐ ಯುಎಲ್‌ಐ ಜಾರಿಗೂ ಮುನ್ನ ಇಂತಹ ಅಕ್ರಮ, ವಂಚನೆಗಳು ನಡೆಯದಂತೆ, ಗ್ರಾಹಕರ ವೈಯಕ್ತಿಕ ದಾಖಲೆ, ಮಾಹಿತಿಗಳ ಗೌಪ್ಯತೆಯನ್ನು ಕಾಯ್ದುಕೊಳ್ಳುವುದು ಆರ್‌ಬಿಐನ ಹೊಣೆಗಾ­ರಿ­ಕೆಯಾಗಿದೆ. ಆರ್‌ಬಿಐ ಈ ಜವಾಬ್ದಾರಿಯನ್ನು ನಿಭಾಯಿಸುವಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದರ ಮೇಲೆ ಯುಎಲ್‌ಐ ನ ಯಶಸ್ಸು ನಿಂತಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.