Reading Hobby ಮಕ್ಕಳಲ್ಲಿ ಓದುವ ಅಭ್ಯಾಸ ವೃದ್ಧಿಗೆ ಕಾರ್ಯಕ್ರಮ ಸ್ತುತ್ಯರ್ಹ


Team Udayavani, Jul 30, 2024, 6:00 AM IST

Reading Hobby ಮಕ್ಕಳಲ್ಲಿ ಓದುವ ಅಭ್ಯಾಸ ವೃದ್ಧಿಗೆ ಕಾರ್ಯಕ್ರಮ ಸ್ತುತ್ಯರ್ಹ

ಡಿಜಿಟಲ್‌ ಯುಗದಲ್ಲಿ ಸಾಮಾಜಿಕ ಜಾಲತಾಣಗಳು, ಸ್ಮಾರ್ಟ್‌ಫೋನ್‌ಗಳ ಬಳಕೆಯ ಪ್ರಭಾವದಿಂದ ಶಾಲಾ ಮಕ್ಕಳಲ್ಲಿ ದಿನದಿಂದ ದಿನಕ್ಕೆ ಓದುವ ಹವ್ಯಾಸ ಕುಂಠಿತವಾಗುತ್ತಿರುವುದನ್ನು ಸಾಕಷ್ಟು ಅಧ್ಯಯನ ವರದಿಗಳು ಖಚಿತಪಡಿಸಿವೆ. ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸುವುದಕ್ಕಾಗಿ ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ “ಓದುವ ಹವ್ಯಾಸ ಜ್ಞಾನದ ವಿಕಾಸ’ ಎಂಬ ವಿನೂತನ ಪ್ರಯತ್ನಕ್ಕೆ ಮುಂದಾಗಿರುವುದು ಸ್ವಾಗತಾರ್ಹವಾಗಿದೆ.

ಈ ವಿನೂತನ ಯೋಜನೆಯಡಿ 1ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳು ವಾರದಲ್ಲಿ ಒಂದು ಅವಧಿ ಗ್ರಂಥಾಲಯದಲ್ಲಿ ಕಳೆಯುವುದು ಮತ್ತು ಪ್ರತಿ ಶಾಲೆಯು ಅತ್ಯುತ್ತಮ ಗ್ರಂಥಾಲಯ ಹೊಂದುವುದನ್ನು ಕಡ್ಡಾಯ ಗೊಳಿಸಲಾಗಿದೆ. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ “ಮಕ್ಕಳ ಸ್ನೇಹಿ ಗ್ರಂಥಾಲಯ’ ಅಥವಾ “ಓದುವ ಮೂಲೆ’ (ರೀಡಿಂಗ್‌ ಕಾರ್ನರ್‌) ಸ್ಥಾಪನೆ, ಗ್ರಂಥಾಲಯದ ಅವಧಿ ಅಥವಾ ಯಾವುದೇ ಸಮಯದಲ್ಲಿ ಯಾವುದೇ ಅಡಚಣೆ ಇಲ್ಲದೆ ಮಕ್ಕಳು ಸ್ವತಂತ್ರವಾಗಿ ಈ ಸ್ಥಳವನ್ನು ಬಳಸಿಕೊಳ್ಳವುದು, ಮಕ್ಕಳಿಗೆ ಸುಲಭವಾಗಿ ಪುಸ್ತಕಗಳು ದೊರೆಯುವಂತೆಯೂ ಮಾಡುವುದು ಸೇರಿ ಅನೇಕ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಮಕ್ಕಳ ಬೌದ್ಧಿಕ ವಿಕಾಸದ ದೃಷ್ಟಿಯಿಂದ ರಾಜ್ಯ ಸರಕಾರದ ಈ ನಡೆಯು ಅತ್ಯುತ್ತಮ ಹೆಜ್ಜೆಯಾಗಿದೆ.

ಕೋವಿಡ್‌ ಕಾಲಘಟ್ಟದಲ್ಲಿ ದೊಡ್ಡವರೂ ಸೇರಿದಂತೆ ಮಕ್ಕಳೂ ಸ್ಮಾರ್ಟ್‌ ಫೋನ್‌ ಮೊರೆ ಹೋಗುವುದು ಅನಿವಾರ್ಯವಾಗಿತ್ತು. ಕಲಿಕೆಗೆ ಬೇರೆ ದಾರಿಯೇ ಇರಲಿಲ್ಲ. ಆಗ ನೆರವಿಗೆ ಬಂದಿದ್ದೇ ಸ್ಮಾರ್ಟ್‌ಫೋನ್‌ಗಳು ಅಥವಾ ಆನ್‌ಲೈನ್‌ ಮೂಲಕ ಕಲಿಯುವ ಪದ್ಧತಿ. ಆದರೆ ಶೈಕ್ಷಣಿಕ ವ್ಯವಸ್ಥೆಯು ಕೋವಿಡ್‌ ಪೂರ್ವ ಸ್ಥಿತಿಗೆ ಮರಳಿ, ಶಾಲೆಗಳು ಎಂದಿನಂತೆ ಆರಂಭವಾದರೂ ಮಕ್ಕಳು ಮಾತ್ರ ಫೋನ್‌ಗಳನ್ನು ಕೆಳಗಿಟ್ಟಿಲ್ಲ! ಇಂಥ ಪರಿಸ್ಥಿತಿಯಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸುವುದು ಸುಲಭದ ಮಾತಲ್ಲ.

6ರಿಂದ 10 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಕಲಿಕೆ ಸರಿಯಲ್ಲ ಎಂದು ವಿಶ್ವ ಸಂಸ್ಥೆಯೂ ಶಿಫಾರಸು ಮಾಡಿದೆ. ಡಿಜಿಟಲ್‌ ಕಲಿಕೆ ಆಧುನಿಕ ಕಾಲದ ಅಗತ್ಯವಾದರೂ ಮಕ್ಕಳ ಒಟ್ಟಾರೆ ಕಲಿಕೆಯನ್ನು ಅದು ಪರಿಣಾಮಕಾರಿಯಾಗಿ ಪ್ರತಿನಿಧಿಸುವುದಿಲ್ಲ. ಸಾಂಪ್ರದಾಯಿಕ ಮಾದರಿ ಅಂದರೆ, ಓದುವುದು, ಬರೆಯುವುದು, ಕೇಳುವುದು, ತಿಳಿದುಕೊಳ್ಳುವಂಥ ಪ್ರಕ್ರಿಯೆಗಳು ಹೆಚ್ಚು ಪರಿಣಾಮಕಾರಿಯಾಗಿರುತ್ತವೆ. ಈ ಒಟ್ಟು ಪ್ರಕ್ರಿಯೆಗೆ ಓದುವ ಹವ್ಯಾಸವು ಪೂರಕವಾಗಿರುತ್ತದೆ. ಹಾಗಾಗಿ ಮಕ್ಕಳನ್ನು ಮತ್ತೆ ಓದುವ ಹವ್ಯಾಸದ ಹಳಿಗೆ ತರುವುದು ಈಗಿನ ತುರ್ತೂ ಹೌದು.

ಓದುವ ಹವ್ಯಾಸವು ಮಕ್ಕಳಲ್ಲಿ ಶಬ್ದ ಭಂಡಾರ ವೃದ್ಧಿಸಲು ಕಾರಣವಾಗುತ್ತದೆ. ಮಕ್ಕಳ ಗ್ರಹಿಕಾ ಸಾಮರ್ಥ್ಯ, ಏಕಾಗ್ರತೆಯ ಶಕ್ತಿ, ಭಾಷಾ ಕೌಶಲ ಮತ್ತು ಸೃಜನಾತ್ಮಕ ಬರವಣಿಗೆಗೆ ಪೂರಕವಾಗಿರುತ್ತದೆ. ಜತೆಗೆ ವಿಮಶಾìತ್ಮಕ ಚಿಂತನೆ, ತಾರ್ಕಿಕತೆ, ವಿಶ್ಲೇಷಣೆ ಸಾಮರ್ಥ್ಯ, ಸಾರಾಂಶ ಮಾಡುವ ಕ್ಷಮತೆ, ಕಲ್ಪನಾ ಶಕ್ತಿ, ಸೃಜನಶೀಲತೆಯನ್ನು ಬೆಳೆಸುವಲ್ಲಿ ಓದುವ ಹವ್ಯಾಸವು ಅತ್ಯಂತ ಪ್ರಮುಖ ಸಾಧನವಾಗಿದೆ. ಹಾಗಾಗಿ “ಓದುವ ಹವ್ಯಾಸ ಜ್ಞಾನದ ವಿಕಾಸ’ ಎಂಬ ನೂತನ ಕಾರ್ಯಕ್ರಮ ಕೇವಲ ಆರಂಭಶೂರತ್ವಕ್ಕೆ ಸೀಮಿತವಾಗಿರದೆ ಸಮರ್ಪಕವಾಗಿ ಜಾರಿಗೊಳಿಸುವತ್ತ ಅಧಿಕಾರಿಗಳು ಮುತುವರ್ಜಿ ವಹಿಸಬೇಕು. ಏಕೆಂದರೆ ಸರಕಾರದ ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳು ಭಾರೀ ಸದ್ದಿನೊಂದಿಗೆ ಆರಂಭವಾಗಿ, ಅನಂತರ ಸದ್ದಿಲ್ಲದೇ ಮರೆಯಾಗುತ್ತವೆ. ಎಲ್ಲಕ್ಕೂ ಮಿಗಿಲಾಗಿ ಶಾಲೆಗಳಲ್ಲಿ ಸುಸಜ್ಜಿತ ಗ್ರಂಥಾಲಯ ಸ್ಥಾಪನೆಗೆ ಗಮನನೀಡಬೇಕು. ಮಕ್ಕಳ ಸಮಗ್ರ ಬೆಳವಣಿಗೆಗೆ ಪೂರಕವಾಗಿರುವ ಈ ಯೋಜನೆಯನ್ನು ಯಾವುದೇ ಲೋಪಕ್ಕೆ ಅವಕಾಶ ಇಲ್ಲದಂತೆ ಜಾರಿಗೊಳಿಸಬೇಕು.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.