ರಷ್ಯಾದ ಕೋವಿಡ್ ಕಥನ ; ಮಾದರಿಯಾಗಲಿ ಪ್ರಯತ್ನ

Team Udayavani, Jun 6, 2020, 10:00 AM IST

ರಷ್ಯಾದ ಕೋವಿಡ್ ಕಥನ ; ಮಾದರಿಯಾಗಲಿ ಪ್ರಯತ್ನ

ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಸೇರಿದಂತೆ ಬಹುತೇಕ ರಾಷ್ಟ್ರಗಳು ತಮ್ಮ ಪೂರ್ಣ ಶಕ್ತಿಯನ್ನು ಉಪಯೋಗಿಸುತ್ತಿವೆಯಾದರೂ, ಈಗಲೂ ಕೂಡ ವೈರಸ್‌ ಅನ್ನು ಹತ್ತಿಕ್ಕುವಂಥ ಲಸಿಕೆಯಾಗಲಿ ಅಥವಾ ವೈರಸ್‌ ರೂಪಾಂತರಗೊಂಡು ದುರ್ಬಲವಾಗುತ್ತಿದೆ ಎಂಬ ಸುದ್ದಿಯಾಗಲಿ ಬರುತ್ತಿಲ್ಲ. ಆರಂಭಿಕ ಸಮಯದಲ್ಲಿ ಯುರೋಪಿಯನ್‌ ರಾಷ್ಟ್ರಗಳಲ್ಲಿ ತಾಂಡವವಾಡಿದ ಈ ವೈರಸ್‌ ಈಗ ಉಳಿದ ದೇಶಗಳಲ್ಲಿ ಹಾವಳಿ ಎಬ್ಬಿಸಲಾರಂಭಿಸಿದೆ. ಆದಾಗ್ಯೂ, ದಕ್ಷಿಣ ಏಷ್ಯಾದಲ್ಲಿ ಈ ಸಾಂಕ್ರಾಮಿಕದ ತೀವ್ರತೆ ಕಡಿಮೆಯಿದೆ ಎನ್ನಲಾಗುತ್ತಿದೆಯಾದರೂ, ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ವಿಷಯದಲ್ಲಿ ಸೋಂಕಿತರ ಸಂಖ್ಯೆ ಗಾಬರಿಹುಟ್ಟಿಸುವಂತೆ ಏರುತ್ತಿದೆ.

ಭಾರತದಲ್ಲಿ ಮಾಸ್ಟರ್‌ಸ್ಟ್ರೋಕ್‌ ಎಂದು ಕರೆಸಿಕೊಂಡ ಲಾಕ್‌ಡೌನ್‌ನಿಂದಾಗಿ ಆರಂಭದಲ್ಲಿ ಎದುರಾಗಬಹುದಾಗಿದ್ದ ಅನಾಹುತ ತಪ್ಪಿದಂತಾಗಿದೆ. ಆದರೆ ಮೇ 18ರಿಂದ ದೇಶದಲ್ಲಿ ನಿತ್ಯ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚುತ್ತಲೇ ಇದೆ. ಆದಾಗ್ಯೂ, ಸ್ಥಿತಿಯನ್ನು ತುಲನಾತ್ಮಕವಾಗಿ ಅರ್ಥಮಾಡಿಕೊಳ್ಳಬೇಕು ಎಂದರೆ, ನಾವು ಬ್ರಿಟನ್‌ ಅಥವಾ ಇಟಲಿಯತ್ತ ನೋಡದೆ, ಅಧಿಕ ಉಪಯುಕ್ತವಾಗುವಂಥ ಉದಾಹರಣೆಗಳನ್ನು ಆಯ್ದುಕೊಳ್ಳಬೇಕಾಗುತ್ತದೆ. ಉದಾಹರಣೆಗೆ, ರಷ್ಯಾ. ಗಮನಾರ್ಹ ಸಂಗತಿಯೆಂದರೆ ಜಾಗತಿಕ ಹಾಟ್‌ಸ್ಪಾಟ್‌ಗಳಲ್ಲಿ ಮೂರನೇ ಸ್ಥಾನದಲ್ಲಿರುವ ರಷ್ಯಾದಲ್ಲಿ ಸೋಂಕಿತರ ಸಂಖ್ಯೆ ಶುಕ್ರವಾರದ ವೇಳೆಗೆ 4 ಲಕ್ಷ 49 ಸಾವಿರಕ್ಕೇರಿದರೂ, ಆ ದೇಶದಲ್ಲಿ ಮೃತಪಟ್ಟವರ ಸಂಖ್ಯೆ ಭಾರತಕ್ಕಿಂತಲೂ ಕಡಿಮೆಯಿದೆ. ಅಲ್ಲಿ 5 ಸಾವಿರಕ್ಕೂ ಅಧಿಕ ಜನ ಮೃತಪಟ್ಟಿದ್ದರೆ, ಏಳನೇ ಸ್ಥಾನದಲ್ಲಿರುವ ಭಾರತದಲ್ಲಿ ಮೃತಪಟ್ಟವರ ಸಂಖ್ಯೆ 6 ಸಾವಿರದ ಗಡಿ ದಾಟಿದೆ. ರಷ್ಯಾ ವ್ಯಾಪಕ ಟೆಸ್ಟಿಂಗ್‌ಗಳ ಮೂಲಕ ಆರಂಭದ ದಿನಗಳಲ್ಲೇ ರೋಗಿಗಳನ್ನು ಪತ್ತೆಹಚ್ಚಲಾರಂಭಿಸಿತು.

ಜೂನ್‌ 5ರ ವೇಳೆಗೆ ಆ ದೇಶದಲ್ಲಿ 1 ಕೋಟಿ 20 ಲಕ್ಷ ಟೆಸ್ಟ್‌ಗಳನ್ನು ನಡೆಸಲಾಗಿದ್ದರೆ, ಭಾರತದಲ್ಲಿ 43 ಲಕ್ಷ ಟೆಸ್ಟ್‌ಗಳನ್ನು ನಡೆಸಲಾಗಿದೆ. ಇದೇನೇ ಇದ್ದರೂ, ರಷ್ಯಾ ಕೋವಿಡ್‌-19 ಚಿಕಿತ್ಸೆಗೆ ಎವಿಫ‌ವಿರ್‌ ಎಂಬ ಡ್ರಗ್‌ ಬಳಸುತ್ತಿದ್ದು, ಈ ಔಷಧ ನಿಜಕ್ಕೂ ಪರಿಣಾಮಕಾರಿಯೇ, ಕೊರೊನಾ ವಿರುದ್ಧದ ಹೋರಾಟಕ್ಕೆ ಪ್ರಬಲ ಅಸ್ತ್ರವಾಗಬಲ್ಲದೇ ಎನ್ನುವ ಚರ್ಚೆ ಆರಂಭವಾಗಿದೆ. ಎವಿಫ‌ವಿರ್‌ ಅನ್ನು ಆರಂಭಿಕ ಸಮಯದಲ್ಲೇ ಬಳಸುವುದರಿಂದ, ರೋಗ ಉಲ್ಬಣಿಸುವ ಸಾಧ್ಯತೆಯನ್ನು 50 ಪ್ರತಿಶತದಷ್ಟು ಕಡಿತಗೊಳಿಸಬಹುದು ಎಂದು ಆ ದೇಶದ ಸಂಶೋಧನಾ ವರದಿಗಳು ಹೇಳುತ್ತಿವೆ. ಭಾರತದಲ್ಲಿ ಎವಿಫ‌ವಿರ್‌ ಪರಿವಾರದ್ದೇ ಒಂದು ಔಷಧ ಇದ್ದು ಇದರ ಮೇಲೀಗ ಪರೀಕ್ಷೆಗಳು ನಡೆದಿವೆ. ಮರಣ ಪ್ರಮಾಣ ತಗ್ಗಿಸುವಲ್ಲಿ ಅದು ಪರಿಣಾಮಕಾರಿ ಎಂದು ತಿಳಿದರೆ ಅದಕ್ಕಿಂತ ಶುಭಸುದ್ದಿ ಮತ್ತೂಂದಿಲ್ಲ. ಏನೇ ಇದ್ದರೂ, ಸೋಂಕಿತರ ಸಂಖ್ಯೆ ಭಯಹುಟ್ಟಿಸುವ ರೀತಿಯಲ್ಲಿ ಬೆಳೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಮರಣ ಪ್ರಮಾಣವೂ ಹೆಚ್ಚುತ್ತದೆ. ಆದಷ್ಟು ಹಾನಿಯನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶದ ಸಂಶೋಧನಾ ವಲಯವು ನಡೆಸಿರುವ ಪ್ರಯತ್ನ ಸಫ‌ಲವಾಗಲಿ.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.