Editorial; ಹಣದುಬ್ಬರ ಗಮನಾರ್ಹ ಇಳಿಕೆ ಸರಕಾರ, ಆರ್‌ಬಿಐ ನಿರಾಳ


Team Udayavani, Aug 13, 2024, 11:27 PM IST

Significant decrease in inflation, government, RBI relaxed

ಜನರನ್ನು ಅದರಲ್ಲೂ ಜನಸಾಮಾನ್ಯರ ದೈನಂದಿನ ಜೀವನ ಮತ್ತು ದೇಶದ ಆರ್ಥಿಕತೆಯೊಂದಿಗೆ ನೇರ ಸಂಬಂಧ ಹೊಂದಿರುವ ಹಣದುಬ್ಬರ ನಿಯಂತ್ರಣದ ಪ್ರಶ್ನೆ ಬಂದಾಗಲೆಲ್ಲ ಇದು ಸರಕಾರ ಮತ್ತು ಆರ್‌ಬಿಐ ಪಾಲಿಗೆ ಕಬ್ಬಿಣದ ಕಡಲೆಯೇ. ತೈಲ, ಆಹಾರ ಪದಾರ್ಥಗಳು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾದಾಗಲೆಲ್ಲ ಹಣದುಬ್ಬರ ಹೆಚ್ಚಾಗಿ ಜನಸಾಮಾನ್ಯರನ್ನು ಮತ್ತು ಸರಕಾರವನ್ನು ಇನ್ನಿಲ್ಲದಂತೆ ಕಾಡುತ್ತಲೇ ಬಂದಿದೆ. ಆದರೆ ಜುಲೈ ತಿಂಗಳಲ್ಲಿ ಹಣದುಬ್ಬರ ನಿರೀಕ್ಷೆಗೂ ಮೀರಿ ಇಳಿಕೆಯಾಗಿದೆ. ಇದು ಸರಕಾರ ಮತ್ತು ಆರ್‌ಬಿಐಯ ನಿಟ್ಟುಸಿರಿಗೆ ಕಾರಣವಾಗಿದ್ದರೆ, ಜನಸಾಮಾನ್ಯರು ಕೂಡ ಒಂದಿಷ್ಟು ನಿರಾಳರಾಗುವ ಬೆಳವಣಿಗೆಯಾಗಿದೆ.

ಕಳೆದ ಐದು ವರ್ಷಗಳಲ್ಲಿಯೇ ಮೊದಲ ಬಾರಿಗೆ ದೇಶದಲ್ಲಿ ಚಿಲ್ಲರೆ ಹಣದುಬ್ಬರ ಅತೀ ಕನಿಷ್ಠ ಅಂದರೆ ಶೇ. 3.54ಕ್ಕೆ ಇಳಿದಿದೆ. ಇದು ಭಾರತೀಯ ರಿಸರ್ವ್‌ ಬ್ಯಾಂಕ್‌ ನಿಗದಿಪಡಿಸಿರುವ ಶೇ.4ಕ್ಕಿಂತ ಕಡಿಮೆ ಎಂಬುದು ಕೂಡ ಅತ್ಯಂತ ಗಮನಾರ್ಹ. ರಾಷ್ಟ್ರೀಯ ಸಾಂಖೀಕ ಕಚೇರಿ ಬಿಡುಗಡೆ ಮಾಡಿರುವ ಜುಲೈ ತಿಂಗಳ ದತ್ತಾಂಶಗಳ ಪ್ರಕಾರ, ಆಹಾರ ವಸ್ತುಗಳ ಸಹಿತ ಅಗತ್ಯ ವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿರುವುದೇ ಹಣದುಬ್ಬರ ಇಷ್ಟೊಂದು ಕಡಿಮೆಯಾಗಲು ಪ್ರಮುಖ ಕಾರಣ. ಈ ಹಿಂದೆ ಅಂದರೆ 2019ರ ಸೆಪ್ಟಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರವು ಶೇ. 3.99ರಷ್ಟು ದಾಖಲಾಗಿತ್ತು.

ಬೇಸಗೆಯಲ್ಲಿ ಅಧಿಕ ತಾಪಮಾನದ ಪರಿಣಾಮ ದೇಶದ ಹಲವೆಡೆ ಒಂದಿಷ್ಟು ಮುಂಚಿತವಾಗಿ ಬೇಸಗೆ ಮಳೆ ಸುರಿದಿತ್ತು. ಹೀಗಾಗಿ ರೈತರು ಕೆಲವು ಆಹಾರ ಬೆಳೆಗಳ ಬಿತ್ತನೆ, ನಾಟಿ ಕಾರ್ಯವನ್ನು ನಿಗದಿತ ಅವಧಿಗೂ ಮುನ್ನವೇ ಆರಂಭಿಸಿದ್ದರಿಂದಾಗಿ ಮಾರುಕಟ್ಟೆಗೆ ಕೆಲವು ಬೆಳೆಗಳು ಸಾಕಷ್ಟು ಮುಂಚಿತವಾಗಿ ಪೂರೈಕೆಯಾಗಿವೆ. ಬೇಡಿಕೆಗೆ ತಕ್ಕಷ್ಟು ಪೂರೈಕೆ ಇದ್ದುದರಿಂದಾಗಿ ಆಹಾರ ಪದಾರ್ಥಗಳ ಬೆಲೆ ಹೆಚ್ಚೇನೂ ಏರಿಳಿತ ಕಾಣದೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಲ್ಲಿ ಸಫ‌ಲವಾಗಿದೆ.

ಇದೇ ವೇಳೆ ನಿವ್ವಳ ತೆರಿಗೆ ಸಂಗ್ರಹ ಕೂಡ ಶೇ.22.48ರಷ್ಟು ಹೆಚ್ಚಳ ಕಂಡಿದೆ. ಉತ್ಪಾದನ ವಲಯ ಒಂದಿಷ್ಟು ಹಿನ್ನಡೆ ಕಂಡಿದೆಯಾದರೂ ಮುಂದಿನ ದಿನಗಳಲ್ಲಿ ಈ ಕ್ಷೇತ್ರವೂ ಚೇತರಿಸಿಕೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಒಟ್ಟಾರೆ ಬೆಳವಣಿಗೆಗೆಗಳು ದೇಶದ ಆರ್ಥಿಕತೆಯನ್ನು ಇನ್ನಷ್ಟು ಸದೃಢಗೊಳಿಸಲು ಪೂರಕವಾಗಿವೆ. ಆರ್‌ಬಿಐ ಮತ್ತು ಸರಕಾರದ ಕಠಿನ ನಿಲುವಿನ ಪರಿಣಾಮ ಒಂದೆಡೆಯಿಂದ ಸರಕಾರದ ಬೊಕ್ಕಸ ತುಂಬುತ್ತಿದ್ದರೆ ಮತ್ತೂಂದೆಡೆಯಿಂದ ದೇಶದ ಆರ್ಥಿಕತೆ ವಿಶ್ವದಲ್ಲಿಯೇ ಮುಂಚೂಣಿಯಲ್ಲಿ ಬೆಳವಣಿಗೆ ಹೊಂದುತ್ತಿದೆ.

ಏತನ್ಮಧ್ಯೆ ಆಗಸ್ಟ್‌-ಸೆಪ್ಟಂಬರ್‌ ತಿಂಗಳ ಅವಧಿಯಲ್ಲಿ ದೇಶದ ಹಲವೆಡೆ ಭಾರೀ ಮಳೆಯಾಗಿ ಪ್ರವಾಹ ತಲೆದೋರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಬೆಳೆ ಹಾನಿಗೀಡಾಗುವ ಆತಂಕ ತಲೆದೋರಿದೆ. ಹೀಗಾದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಆಹಾರ ಪದಾರ್ಥಗಳು ಮಾರುಕಟ್ಟೆಗೆ ಆವಕವಾಗುವ ಸಾಧ್ಯತೆಗಳು ಕಡಿಮೆ. ಅಷ್ಟು ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಹಬ್ಬಗಳ ಸರಣಿ ಆರಂಭಗೊಳ್ಳಲಿದ್ದು ಆಹಾರ ಪದಾರ್ಥಗಳಿಗೆ ಹೆಚ್ಚಿನ ಬೇಡಿಕೆ ಕುದುರಲಿದೆ. ಕಾಳಸಂತೆಕೋರರು ಮತ್ತು ಸಗಟು ವ್ಯಾಪಾರಿಗಳು ಇದನ್ನು ದಾಳವಾಗಿ ಬಳಸಿಕೊಳ್ಳುವ ಎಲ್ಲ ಸಾಧ್ಯತೆಗಳಿರುವುದರಿಂದ ಸರಕಾರ ಇತ್ತ ನಿಗಾ ವಹಿಸಬೇಕು. ಬೆಳೆಗಳ ಸಮರ್ಪಕ ಮತ್ತು ಸುವ್ಯವಸ್ಥಿತ ದಾಸ್ತಾನಿಗೆ ಅಗತ್ಯ ಗೋದಾಮುಗಳ ವ್ಯವಸ್ಥೆಯನ್ನು ಮಾಡಬೇಕು. ಮಾರುಕಟ್ಟೆಯಲ್ಲಿ ಈ ವಸ್ತುಗಳ ಅಭಾವ ಎದುರಾದಲ್ಲಿ ತನ್ನ ದಾಸ್ತಾನಿನಲ್ಲಿರುವ ಸರಕನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ಎಚ್ಚರ ವಹಿಸಬೇಕು. ಇಲ್ಲವಾದಲ್ಲಿ ಚಿಲ್ಲರೆ ಹಣದುಬ್ಬರ ಮತ್ತೆ ಏರು ಹಾದಿಯನ್ನು ಹಿಡಿದು ಆರ್ಥಿಕತೆಯ ನಾಗಾಲೋಟಕ್ಕೆ ಕಡಿವಾಣ ಹಾಕಲಿದೆ.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

PM-yojana

Education: ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಬಡ ಪ್ರತಿಭಾನ್ವಿತರಿಗೆ ವರದಾನ

supreme-Court

Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ

Canada

Canada Temple Attack: ಕೆನಡಾ ದೇಗುಲ ದಾಳಿ: ಜಾಗತಿಕ ವಿರೋಧ ಪ್ರತಿಧ್ವನಿಸಲಿ

Flight

Hoax Call: ಹುಸಿ ಬಾಂಬ್‌ ಬೆದರಿಕೆ ಮರುಕಳಿಸದಿರಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.