ಸರ್ವಾಧಿಕಾರಿ ಕಿಮ್‌ ಜಾಂಗ್‌ ಹುಚ್ಚಾಟಕ್ಕೆ ಬೀಳಲಿ ತಡೆ

Team Udayavani, Mar 25, 2022, 6:00 AM IST

ಸರ್ವಾಧಿಕಾರಿ ಕಿಮ್‌ ಜಾಂಗ್‌ ಹುಚ್ಚಾಟಕ್ಕೆ ಬೀಳಲಿ ತಡೆ

ರಷ್ಯಾ ಮತ್ತು ಉಕ್ರೇನ್‌ ನಡುವೆ ಯುದ್ಧ ಗುರುವಾರ 29ನೇ ದಿನಕ್ಕೆ ಕಾಲಿಡುತ್ತಿರುವಂತೆಯೇ ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ಸರ್ಕಾರ ಖಂಡಾಂತರ ಕ್ಷಿಪಣಿ  ಪರೀಕ್ಷೆ ನಡೆಸಿದೆ. ಇದು ನಿಜಕ್ಕೂ ಆತಂಕಕಾರಿಯಾಗಿರುವ ವಿಚಾರವೇ ಹೌದು. ಏಕೆಂದರೆ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ 2017ರಲ್ಲಿ ಆ ದೇಶ ಮೊದಲ ಬಾರಿಗೆ ಖಂಡಾಂತರ ಕ್ಷಿಪಣಿಯ ಪರೀಕ್ಷೆ ನಡೆಸಿದ ಸಂದರ್ಭಕ್ಕಿಂತ ಅತ್ಯಧಿಕವಾಗಿರುವ ಶಕ್ತಿ ಮತ್ತು ಪ್ರಭಾವ ಹೊಂದಿರುವ ಹೊಸ ಮಾದರಿಯ ಖಂಡಾಂತರ ಕ್ಷಿಪಣಿಯನ್ನು ಕಿಮ್‌ ಜಾಂಗ್‌ ಉನ್‌ ಆಡಳಿತ ಪ್ರಯೋಗ ಮಾಡಿದೆ.

ಆ ದೇಶದ ಜತೆಗೆ ಚೀನ ಹೊರತುಪಡಿಸಿ ಬೇರೆ ಯಾವುದೇ ರಾಷ್ಟ್ರ ಉತ್ತಮ ಬಾಂಧವ್ಯ ಹೊಂದಿಲ್ಲ. ಹೀಗಾಗಿ ಮೇಲ್ನೋಟಕ್ಕೆ ಅದು ಉತ್ತರ ಕೊರಿಯಾಕ್ಕೆ ಸಂಬಂಧಿಸಿದ ಪ್ರಲಾಪ ಎಂದು ತೀರ್ಮಾನಿಸುವುದು ಸರಿಯಲ್ಲ. ಸದ್ಯ ಜಪಾನ್‌ನ ಹೊಕ್ಕೆ„ಡೋ ದ್ವೀಪ ವ್ಯಾಪ್ತಿಯ ಜಲಪ್ರದೇಶಕ್ಕೆ ಬಿದ್ದ ಕ್ಷಿಪಣಿ ಮುಂದಿನ ದಿನಗಳಲ್ಲಿ ಬೇರೆ ದೇಶದ ಗಡಿ ಪ್ರದೇಶಕ್ಕೆ ಸಿಡಿಯಲೂ ಬಹುದು ಅಥವಾ ಉದ್ದೇಶ ಪೂರ್ವಕವಾಗಿಯೇ ಉಡಾಯಿಸಬಹುದು. ಏಕೆಂದರೆ, ಉತ್ತರ ಕೊರಿಯಾದಲ್ಲಿ ಚಿತ್ರ-ವಿಚಿತ್ರ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಆಡಳಿತ ನಡೆಸುವ ಕುಖ್ಯಾತಿ ಕಿಮ್‌ ಸರಕಾರದ್ದು.

ಡೊನಾಲ್ಡ್‌ ಟ್ರಂಪ್‌ ಅಮೆರಿಕದ ಅಧ್ಯಕ್ಷರಾಗಿದ್ದ ವೇಳೆ 2018ರಲ್ಲಿ ಕಿಮ್‌ ಸರಕಾರದ ಜತೆಗೆ ಮಾತುಕತೆ ನಡೆಸಲಾಗಿತ್ತು. ಬಳಿಕ ಖಂಡಾಂತರ ಕ್ಷಿಪಣಿಗಳ ಪರೀಕ್ಷೆ ನಡೆಸುವುದನ್ನು ನಿಲ್ಲಿಸುವುದಾಗಿ ಸರಕಾರ ಹೇಳಿತ್ತು. 2020ರಲ್ಲಿ ಅದನ್ನು ಉಲ್ಲಂಘಿಸುವ ಬಗ್ಗೆ ಪ್ರಕಟಿಸಿತ್ತು. ಈ ಪರೀಕ್ಷೆಗಳಿಂದ ಉತ್ತರ ಕೊರಿಯಾ ಸಾಧಿಸುವು ದಾದರೂ ಏನು ಎಂಬುದೇ ಕುತೂಹಲಕಾರಿ ಅಂಶವಾಗಿದೆ. ಅಮೆರಿಕ ಮತ್ತು ಜಪಾನ್‌ ಹೊಂದಿರುವ ಅತ್ಯಾಧುನಿಕ ತಂತ್ರಜ್ಞಾನಗಳಿಂತಲೂ ಅಧಿಕ ಸಾಮರ್ಥ್ಯ ಹೊಂದಿರುವ ಹಾಗೂ ಆ ಸರಕಾರಗಳು ಹೊಂದಿರುವ ರಕ್ಷಣ ವ್ಯವಸ್ಥೆ ಅಂದಾಜು ಮಾಡಲೂ ಸಾಧ್ಯವಿಲ್ಲದ ಕ್ಷಿಪಣಿ ವ್ಯವಸ್ಥೆ ಹೊಂದುವುದರತ್ತ ಆ ದೇಶ ಆಸಕ್ತ ಹೊಂದಿದೆ. ಕೊರಿಯಾ ವ್ಯಾಪ್ತಿಯ ಪ್ರದೇಶದಲ್ಲಿ ಅಮೆರಿಕದ ಸೇನೆ ಇದೆ. ಈ ಮೂಲಕ ಅಮೆರಿಕ ಎಂದಾದರೂ ಒಂದು ದಿನ ತನ್ನ ಮೇಲೆ ದಾಳಿ ಮಾಡಬಹುದು ಎಂಬ ಆತಂಕ ಕಿಮ್‌ ಸರಕಾರಕ್ಕಿದೆ. ಜಪಾನ್‌ ಹೇಗಿದ್ದರೂ, ಅಮೆರಿಕದ ಜತೆಗೆ ಉತ್ತಮ ಬಾಂಧವ್ಯ ಹೊಂದಿದೆ. ಹೀಗಾಗಿ, ಜನರಿಗೆ ತುತ್ತು ಕೂಳಿಗೆ ಗತಿ ಇಲ್ಲದೇ ಇದ್ದರೂ, ಪ್ರಬಲ ರಕ್ಷಣ ವ್ಯವಸ್ಥೆ ಬೇಕು ಎನ್ನುವುದು ಕಿಮ್‌ ಸರಕಾರ ಹೊಂದಿರುವ ವ್ಯರ್ಥಾಲಾಪದ ವಾದ.

ಇದರ ಜತೆಗೆ ವಿಶ್ವಸಂಸ್ಥೆಯ ಗಮನ ಸೆಳೆದು, ಬೆದರಿಕೆಯ ತಂತ್ರದ ಮೂಲಕವಾದರೂ ಆರ್ಥಿಕ ದಿಗ್ಬಂಧನವನ್ನು ತೆಗೆದು ಹಾಕುವ ದೂರದ ಆಲೋಚನೆ. ದಕ್ಷಿಣ ಕೊರಿಯಾ ಮೂಲಕ ಜಗತ್ತಿಗೆ ಆಗಾಗ ಪ್ರಕಟವಾಗುತ್ತಿರುವ ವರದಿಗಳ ಪ್ರಕಾರ ಜನರು ಹಲವು ರೀತಿಯ ಸಂಕಷ್ಟಗಳನ್ನು ನಿವಾರಿಸುವುದು ಆದ್ಯತೆಯಾಗಿರಬಹುದು. ಅದೇನೇ ಇರಲಿ, ಕೊರೊನಾದ ಜತೆಗೆ ರಷ್ಯಾ-ಉಕ್ರೇನ್‌ ಕಾಳಗ ಜಗತ್ತನ್ನು ಕಾಡುತ್ತಿದೆ. ಅದರ ನಡುವೆ ಇಂಥ ಕಿಡಿಗೇಡಿತನ ಖಂಡನೀಯ. ಜಗತ್ತಿನ ಶಾಂತಿಗಾಗಿ ಸ್ಥಾಪನೆಯಾಗಿರುವ ವಿಶ್ವಸಂಸ್ಥೆ ಉತ್ತರ ಕೊರಿಯಾದ ವ್ಯರ್ಥಾಲಾಪಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲೇಬೇಕು.

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಭಾರತ್‌ ಬ್ರ್ಯಾಂಡ್‌ ಆಹಾರಧಾನ್ಯ ಕಾಳಸಂತೆಕೋರರ ಮೇಲಿರಲಿ ನಿಗಾ

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶಕ್ಕೆ ನೆರವಾಗುವ ಕೋರ್ಸ್‌

school

Karnataka; ಶಾಲಾ ಆಸ್ತಿ ಸಂರಕ್ಷಣೆ ಅಭಿಯಾನ ಎಲ್ಲ ಇಲಾಖೆಗಳಿಗೂ ಮಾದರಿ

Forest

Forest: ಅರಣ್ಯದಲ್ಲಿ ನಿರಂತರ ಗಣಿಗಾರಿಕೆ: ಸರಕಾರ ಚರ್ಚಿಸಿ ನಿರ್ಧರಿಸಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

3

Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.