ಖರ್ಗೆ ಹೆಗಲ ಮೇಲೆ ಕಾಂಗ್ರೆಸ್‌ ಪುನರ್‌ ಸಂಘಟನೆ ಹೊಣೆ

Team Udayavani, Oct 20, 2022, 6:00 AM IST

ಖರ್ಗೆ ಹೆಗಲ ಮೇಲೆ ಕಾಂಗ್ರೆಸ್‌ ಪುನರ್‌ ಸಂಘಟನೆ ಹೊಣೆ

ಕಾಂಗ್ರೆಸ್‌ನ ಹಿರಿಯ ನಾಯಕ, ಕರ್ನಾಟಕದ ಅನುಭವಿ ರಾಜಕಾರಣಿ, 80 ವರ್ಷದ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಗಾದಿಗೇರಿದ್ದಾರೆ. ಸುಮಾರು 24 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬೇತರ ನಾಯಕರೊಬ್ಬರು ಈ ಹುದ್ದೆಗೆ ಏರುತ್ತಿರುವುದು ವಿಶೇಷ. ರಾಜಕೀಯ ವಿಶ್ಲೇಷಕರ ಪ್ರಕಾರ ತಡವಾಗಿಯಾದರೂ ಖರ್ಗೆ ಅವರ ಪಕ್ಷ ನಿಷ್ಠೆ ಗುರುತಿಸಿ, ಕಾಂಗ್ರೆಸ್‌ ಅತ್ಯುನ್ನತ ಸ್ಥಾನಮಾನ ನೀಡಿದೆ.

ಇದನ್ನು ಅತ್ಯುನ್ನತ ಸ್ಥಾನದ ಅಧಿಕಾರ ಎಂದು ಪರಿಗಣಿಸುವುದರ ಜತೆಗೆ ಖರ್ಗೆ ಮುಂದೆ ಅಗಾಧ ಸವಾಲುಗಳಿವೆ ಎನ್ನುವುದನ್ನು ಮರೆಯುವ ಹಾಗಿಲ್ಲ. ಕಾಂಗ್ರೆಸ್‌ ಪಕ್ಷ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿದೆ ಎಂಬ ವಾತಾವರಣ ಇದೆ. ಒಂದೊಂದೇ ರಾಜ್ಯಗಳನ್ನು ಕಳೆದುಕೊಂಡು ಬಂದಿರುವ ಪಕ್ಷವು ಎಷ್ಟೋ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಮುಂದೆ ಸಣ್ಣ ಪಕ್ಷ ವಾಗಿ ಗುರುತಿಸಿಕೊಂಡಿದೆ. ಇಂಥ ಸಮಯದಲ್ಲಿ ಖರ್ಗೆ ಅಧ್ಯಕ್ಷರಾಗಿರುವುದು ಸಹಜವಾಗಿಯೇ ಆ ಪಕ್ಷದಲ್ಲಿ ಹೊಸ ನಿರೀಕ್ಷೆಗೆ ದಾರಿ ಮಾಡಿಕೊಟ್ಟಿದೆ. ಖರ್ಗೆ ಅವರು ಗಾಂಧಿ ಕುಟುಂಬಕ್ಕೆ ತೋರುತ್ತಿರುವ ಪರಮ ನಿಷ್ಠಾವಂತಿಕೆ ನಡುವೆಯೂ ಗಾಂಧಿಯೇತರ ಕುಟುಂಬದ ವ್ಯಕ್ತಿ ಯೊಬ್ಬರು ಪಕ್ಷದ ಸಾರಥ್ಯ ವಹಿಸಲು ಮುಂದಾಗಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಕನಸು ಗರಿಗೆದರುವಂತೆ ಮಾಡಿದೆ.

ಖರ್ಗೆ ಅವರನ್ನು ಪಕ್ಷ ನಿಷ್ಠ ಎಂದು ಮಾತ್ರಕ್ಕೆ ಸೀಮಿತಗೊಳಿಸುವ ಬದಲು ಅವರ ಕ್ಷಮತೆ, ಪರಿಶ್ರಮ, ಕಾರ್ಯತಂತ್ರವನ್ನು ಮರೆಯುವ ಹಾಗಿಲ್ಲ. ಎಲ್ಲದ್ದಕ್ಕೂ ಮಿಗಿಲಾಗಿ ಅವರು ಇತರ ಪಕ್ಷಗಳ ನಾಯಕ ರೊಂದಿಗೂ ಸಹ ಅತ್ಯಂತ ಸೌಹಾರ್ದ ಸಂಬಂಧ ಇರಿಸಿಕೊಂಡಿರುವುದು ಪಕ್ಷದ ಭವಿಷ್ಯಕ್ಕೂ ಪೂರಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತದೆ. ಕಾಂಗ್ರೆಸ್‌ನಲ್ಲಿ ಹಿರಿತಲೆಗಳ ಒಂದು ಗುಂಪು, ಮಹತ್ವಾಕಾಂಕ್ಷಿ ಕಿರಿಯರ ಒಂದು ಗುಂಪು, ಗಾಂಧಿ ಕುಟುಂಬದ ನಿಷ್ಠರ ಒಂದು ಗುಂಪು, ಗಾಂಧಿ ಕುಟುಂಬ ವನ್ನು ವಿರೋಧಿಸುವ ಗುಂಪು ಎಂಬ ರೀತಿಯಲ್ಲಿ ಪಕ್ಷ ಒಡೆದಿ ರುವ ಈ ಸನ್ನಿವೇಶದಲ್ಲಿ ಖರ್ಗೆ ಮುಂದೆ ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುವ ದೊಡ್ಡ ಸವಾಲಿದೆ. ಇಷ್ಟು ಮಾತ್ರವಲ್ಲ, ಎದುರಾಳಿ ಪಕ್ಷಗಳ ನಾಯಕತ್ವಕ್ಕೆ ಸಡ್ಡು ಹೊಡೆಯುವ ಮಾದರಿಯಲ್ಲಿ ಪಕ್ಷವನ್ನು ಮುನ್ನ ಡೆಸಿಕೊಂಡು ಹೋಗಬೇಕಾದ ಅನಿವಾರ್ಯತೆ ಖರ್ಗೆ ಮುಂದೆ ಇದೆ. ಹಾಗೆಯೇ ಕರಗಿಹೋಗುತ್ತಿರುವ ಪಕ್ಷದ ಕಾರ್ಯಕರ್ತ ಪಡೆಯನ್ನು ಮತ್ತೆ ಕಟ್ಟಿ ಉತ್ಸಾಹ ತುಂಬಬೇಕಾದ ಅಗತ್ಯ ಇದೆ. ನೆಲಕಚ್ಚಿರುವ ಪಕ್ಷವನ್ನು ಮತ್ತೆ ಸಿಡಿ ದೇಳುವಂತೆ ಮಾಡುವುದು ಸರಳ ಕೆಲಸವೇನಲ್ಲ. ಈ ನಿಟ್ಟಿನಲ್ಲಿ ಖರ್ಗೆ ಅವರು ಸಮರ್ಥವಾದ ತಂಡವನ್ನು ರೂಪಿಸಿಕೊಂಡು ಎಲ್ಲರನ್ನೂ ಒಳಗೊಳ್ಳುವ ಕಾರ್ಯತಂತ್ರ ರೂಪಿಸಿಕೊಳ್ಳಬೇಕಿದೆ. ಅಲ್ಲದೆ ಈ ವರ್ಷಾಂತ್ಯಕ್ಕೆ ನಡೆಯಲಿರುವ ಗುಜರಾತ್‌ ಮತ್ತು ಹಿಮಾಚಲ ಪ್ರದೇಶದ ಚುನಾವಣೆಗೂ ಸಜ್ಜಾಗಬೇಕಾಗಿದೆ.

ಚುನಾವಣೆ ಎದುರಿಸುತ್ತಿರುವ ಕರ್ನಾಟಕದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ನಾಯಕತ್ವವನ್ನು ಸರಿದೂಗಿಸಿಕೊಂಡು ಹೋಗಬೇಕಾದ ದೊಡ್ಡ ಜವಾಬ್ದಾರಿ ಖರ್ಗೆ ಮೇಲಿದೆ. ರಾಜ್ಯದ ಕಾಂಗ್ರೆಸ್‌ ನಾಯಕರು ಮತ್ತು ಕಾರ್ಯಕರ್ತರಿಗೆ ಸದಾ ಲಭ್ಯರಾಗುವ ಮೂಲಕ ಅವರ ದುಮ್ಮಾನಗಳಿಗೆ ಪರಿಹಾರ ನೀಡಿದಲ್ಲಿ ಮಾತ್ರ ರಾಜ್ಯ ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿ ಸಿಗಬಹುದು. ಒಟ್ಟಿನಲ್ಲಿ ಖರ್ಗೆ ಅವರ ಮುಂದೆ ಸವಾಲುಗಳ ಪರ್ವತವೇ ಇದ್ದು, ಇದನ್ನು ಮೆಟ್ಟಿ ನಿಂತರೆ ಮಾತ್ರ ಅವರ ಸಾಮರ್ಥ್ಯ, ಕ್ಷಮತೆ ಕಾಂಗ್ರೆಸ್‌ ಇತಿಹಾಸದಲ್ಲಿ ಅಜರಾಮರವಾಗಿ ಉಳಿಯಲಿದೆ.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.