ಈ ಮಾದರಿಯ ಎದಿರೇಟು ಅಗತ್ಯ


Team Udayavani, Oct 22, 2019, 5:58 AM IST

e-22

ಗಡಿಯಾಚೆಗಿನಿಂದ ಸತತವಾಗಿ ಕದನ ವಿರಾಮ ಉಲ್ಲಂ ಸುತ್ತಾ ನಾಗರಿಕರನ್ನು ಮತ್ತು ಯೋಧರನ್ನು ಗುರಿ ಮಾಡಿಕೊಂಡು ಶೆಲ್‌ ಮತ್ತು ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ಥಾನಕ್ಕೆ ಭಾರತದ ಸೇನೆ ತಕ್ಕ ಪಾಠ ಕಲಿಸಿದೆ. ಕಾಶ್ಮೀರದ ವಿಶೇಷ ವಿಧಿ ರದ್ದುಗೊಂಡ ಬಳಿಕ ಭಾರತದೊಳಕ್ಕೆ ಉಗ್ರರನ್ನು ನುಗ್ಗಿಸಲು ಪಾಕ್‌ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿದೆ. ಇದರಂಗವಾಗಿ ಗಡಿ ಭಾಗದಲ್ಲಿ ಅನೇಕ ಉಗ್ರ ಶಿಬಿರಗಳನ್ನು ಸಕ್ರಿಯಗೊಳಿಸಿತ್ತು.

ಲಷ್ಕರ್‌-ಎ-ತಯ್ಯಬ, ಹಿಜ್ಬುಲ್‌ ಮುಜಾಹಿದಿನ್‌ ಮತ್ತಿತರ ಸಂಘಟನೆಗಳಿಗೆ ಸೇರಿದ ಉಗ್ರರು ಈ ಶಿಬಿರಗಳಲ್ಲಿ ಜಮೆಯಾಗಿರುವ ಕುರಿತು ಗುಪ್ತಚರ ಪಡೆ ಖಚಿತ ಮಾಹಿತಿ ನೀಡಿತ್ತು. ಈ ಮಾಹಿತಿಯ ಆಧಾರದಲ್ಲಿ ಸೇನೆ ಕಾರ್ಯಾಚರಣೆ ನಡೆಸಿ ಸುಮಾರು 10 ಪಾಕ್‌ ಸೈನಿಕರನ್ನು ಕೆಲವು ಉಗ್ರರನ್ನು ಸಾಯಿಸಿರುವುದಲ್ಲದೆ ಮೂರು ಉಗ್ರ ನೆಲೆಗಳನ್ನು ಧ್ವಂಸಗೊಳಿಸಿದೆ.

ಆದರೆ ಈ ಕಾರ್ಯಾಚರಣೆಯಿಂದ‌ ಪಾಕ್‌ ಪಾಠ ಕಲಿತುಕೊಳ್ಳುತ್ತದೆ ಎನ್ನುವುದಕ್ಕೆ ಯಾವ ಖಾತರಿಯೂ ಇಲ್ಲ. 2016ರಲ್ಲಿ ಉರಿ ಸೇನಾ ನೆಲೆಯ ಮೇಲೆ ಉಗ್ರರು ದಾಳಿ ಮಾಡಿದ ಬಳಿಕ ನಮ್ಮ ಸೇನೆ ಪಾಕ್‌ನೊಳಗೆ ನುಗ್ಗಿ ಸರ್ಜಿಕಲ್‌ ಸ್ಟ್ರೈಕ್‌ ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಅನೇಕ ಉಗ್ರರು ಸತ್ತಿದ್ದರು. ಅನಂತರ ಈ ವರ್ಷದ ಆದಿಯಲ್ಲಿ ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ವಾಯುಪಡೆ ಪಾಕ್‌ನ ಬಾಲಾಕೋಟ್‌ನಲ್ಲಿರುವ ಉಗ್ರ ನೆಲೆಯನ್ನು ಬಾಂಬ್‌ ಹಾಕಿ ಉಡಾಯಿಸಿದೆ. ಈ ಎರಡು ಮಾರಕ ಹೊಡೆತಗಳ ಬಳಿಕವೂ ಪಾಕ್‌ ಉಗ್ರರನ್ನು ಸಾಕುವುದನ್ನು ನಿಲ್ಲಿಸಿಲ್ಲ. ಹೀಗಾಗಿ ನಿನ್ನೆ ನಡೆಸಿದ ದಾಳಿಯಿಂದ ದೊಡ್ಡ ಮಟ್ಟದ ಪ್ರಯೋಜನವಾದೀತು ಎಂದು ನಿರೀಕ್ಷಿಸುವಂತಿಲ್ಲ. ಆದರೆ ಪದೇ ಪದೇ ಕದನ ವಿರಾಮ ಉಲ್ಲಂ ಸಿ ನಮ್ಮ ನಾಗರಿಕರನ್ನೂ, ಯೋಧರನ್ನೂ ಸಾಯಿಸಿದರೆ ಸಹಿಸಿಕೊಂಡು ಸುಮ್ಮನಿರುವುದಿಲ್ಲ. ನಾವು ನೀಡುವ ಎದಿರೇಟು ಬಹಳ ಬಲವಾಗಿರುತ್ತದೆ ಎಂಬ ಸಂದೇಶವನ್ನು ಈ ದಾಳಿ ನೀಡಿದೆ.ಅಷ್ಟರ ಮಟ್ಟಿಗೆ ಈ ದಾಳಿ ಸಫ‌ಲ.

ಕದನ ವಿರಾಮ ಉಲ್ಲಂಘನೆ ಎನ್ನುವುದು ಪಾಕ್‌ ಸೇನೆಗೆ ನಿತ್ಯದ ಕಾರ್ಯಾಚರಣೆ ಎಂಬಂತಾಗಿದೆ. ವಿಶೇಷ ವಿಧಿ ನಿಷ್ಕ್ರಿಯಗೊಂಡ ಬಳಿಕ ಬರೀ ಒಂದೂವರೆ ತಿಂಗಳಲ್ಲಿ 7000ಕ್ಕೂ ಹೆಚ್ಚು ಬಾರಿ ಪಾಕ್‌ ಕಡೆಯಿಂದ ಕದನ ವಿರಾಮ ಉಲ್ಲಂಘನೆಯಾಗಿದೆ. ಉಗ್ರರನ್ನು ಗಡಿ ದಾಟಿಸಲು ಪಾಕ್‌ ಸೇನೆ ಕದನ ವಿರಾಮ ಉಲ್ಲಂಘನೆಯನ್ನು ರಕ್ಷಣಾ ಕವಚವನ್ನಾಗಿ ಬಳಸಿಕೊಳ್ಳುತ್ತಿದೆ. ಗಡಿ ಕಾಯುವ ಯೋಧರು ಪ್ರತಿದಾಳಿ ನಡೆಸುತ್ತಿದ್ದಾಗ ಇನ್ನೊಂದೆಡೆಯಿಂದ ಉಗ್ರರು ನುಸುಳಿ ಬರುತ್ತಾರೆ. ಆದರೆ ಬಹುಕಾಲ ಈ ತಂತ್ರ ಸಾಗುವುದಿಲ್ಲ ಎನ್ನುವುದನ್ನು ಪಾಕಿಗೆ ಕಲಿಸಿಕೊಡುವ ಅಗತ್ಯವಿದೆ. ಲೇಸರ್‌ ಬೇಲಿ ನಿರ್ಮಾಣ ಸೇರಿದಂತೆ ಗಡಿ ಭಾಗವನ್ನು ಇನ್ನಷ್ಟು ಭದ್ರಗೊಳಿಸುವ ಕೆಲಸವನ್ನು ತ್ವರಿತವಾಗಿ ಮಾಡಿ ಮುಗಿಸಬೇಕಾಗಿದೆ.

ಕದನ ವಿರಾಮ ಉಲ್ಲಂಘನೆ ಎಂಬ ಯುದ್ಧವಲ್ಲದ ಯುದ್ಧದಲ್ಲಿ ನಿತ್ಯ ನಮ್ಮ ಯೋಧರು ಎಷ್ಟೆಂದು ಹುತಾತ್ಮರಾಗುತ್ತಾ ಅಥವಾ ಗಾಯಗೊಳ್ಳುತ್ತಾ ಇರಬೇಕು? ಗಡಿ ಕಾವಲು ವ್ಯವಸ್ಥೆಗೆ ಗರಿಷ್ಠ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಅಲ್ಲಿ ಪ್ರಾಣ ಹಾನಿಯಾಗುವ ಪ್ರಮಾಣವನ್ನು ತಪ್ಪಿಸಬೇಕು. ಗಡಿಯಲ್ಲಿ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಒಪ್ಪಂದಗಳು ಮತ್ತು ನಿಯಮಾವಳಿಗಳು ಇದ್ದರೂ ಪಾಕ್‌ ಅದಕ್ಕೆ ಕವಡೆ ಕಿಮ್ಮತ್ತು ನೀಡುತ್ತಿಲ್ಲ. ಹೀಗಾಗಿ ಅದಕ್ಕೆ ಅರ್ಥವಾಗುವ ಭಾಷೆಯಲ್ಲಿ ಉತ್ತರ ನೀಡುವುದು ಅನಿವಾರ್ಯ.

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.