UG, PG ಶಿಕ್ಷಣ ಸುಧಾರಣೆ: ಅವಸರದ ನಿರ್ಧಾರ ಬೇಡ


Team Udayavani, Dec 7, 2024, 6:20 AM IST

Exam 3

ದೇಶದ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆಯನ್ನು ತರುವ ಕರಡು ಅಧಿಸೂಚನೆಯನ್ನು ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ (ಯುಜಿಸಿ) ಶುಕ್ರವಾರ ಬಿಡುಗಡೆ ಮಾಡಿದೆ. ಯುಜಿ, ಪಿಜಿಗೆ ಸಂಬಂಧಿಸಿದಂತೆ ವರ್ಷಕ್ಕೆ ಎರಡು ಬಾರಿ ಪ್ರವೇಶಾತಿ ನೀಡಲು ಶಿಕ್ಷಣ ಸಂಸ್ಥೆಗಳಿಗೆ ಅವಕಾಶ, ವಿದ್ಯಾರ್ಥಿಗಳಿಗೆ ಕೋರ್ಸ್‌ವೊಂದರ ಕಲಿಕೆಯ ಮಧ್ಯದಲ್ಲಿ ಕೋರ್ಸ್‌ ಬದಲಾವಣೆಗೆ ಅವಕಾಶ, ನಿಗದಿತ ಅವಧಿಗೂ ಮುನ್ನವೇ ಪದವಿ ಪೂರ್ಣಗೊಳಿಸಲು ಅವಕಾಶ, ಏಕಕಾಲದಲ್ಲಿ ಎರಡು ಕೋರ್ಸ್‌ ಕಲಿಕೆಗೆ ಅವಕಾಶ ಇವೇ ಮೊದಲಾದ ಕ್ರಾಂತಿಕಾರಕ ಸುಧಾರಣಾ ಪ್ರಸ್ತಾವಗಳನ್ನು ಈ ಕರಡು ಒಳಗೊಂಡಿದೆ. ಯುಜಿಸಿಯ ಈ ಎಲ್ಲ ಪ್ರಸ್ತಾವನೆಯೂ ಅತ್ಯಂತ ದೂರದೃಷ್ಟಿಯಿಂದ ಕೂಡಿದ್ದು, ವಿದ್ಯಾರ್ಥಿಗಳನ್ನು ಅಂತಾರಾಷ್ಟ್ರೀಯ ಮಟ್ಟದ ಪೈಪೋಟಿಯನ್ನು ಎದುರಿಸಲು ಸಶಕ್ತರನ್ನಾಗಿಸುವ ನಿಟ್ಟಿನಲ್ಲಿ ಮಹತ್ತರ ಹೆಜ್ಜೆ ಎಂಬುದರಲ್ಲಿ ಎರಡು ಮಾತಿಲ್ಲ.

ಕೇಂದ್ರ ಸರಕಾರ ಕೆಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುತ್ತಲೇ ಬಂದಿತ್ತು. ಶಿಕ್ಷಣ ವ್ಯವಸ್ಥೆಯನ್ನು ಆದಷ್ಟು ದೇಶೀಯವನ್ನಾಗಿಸುವ ನಿಟ್ಟಿನಲ್ಲಿ ಹಲವು ಉಪಕ್ರಮಗಳನ್ನು ಜಾರಿಗೆ ತಂದಿತ್ತು. ಈಗ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಮಾರ್ಪಾಡುಗಳನ್ನು ಮಾಡಲು ಯುಜಿಸಿ ಮುಂದಾಗಿದೆ. ಈ ಪ್ರಸ್ತಾವಗಳು ಮೇಲ್ನೋಟಕ್ಕೆ ಅತ್ಯಂತ ಕ್ರಾಂತಿಕಾರಿ ಮತ್ತು ವಿದ್ಯಾರ್ಥಿಸ್ನೇಹಿ ನಡೆಯಾಗಿ ಕಂಡರೂ ದೇಶದ ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಗೆ ಈ ಎಲ್ಲ ಸುಧಾರಣ ಕ್ರಮಗಳು ಎಷ್ಟು ಪೂರಕ ಮತ್ತು ವಿದ್ಯಾರ್ಥಿಗಳಿಗೆ ನೆರವಾಗಬಲ್ಲುದು ಎಂಬ ಬಗೆಗೆ ಯುಜಿಸಿ ಆದಿಯಾಗಿ ಇಡೀ ಶೈಕ್ಷಣಿಕ ರಂಗ ಗಂಭೀರ ಚಿಂತನೆ ನಡೆಸಲು ಇದು ಸಕಾಲ.

ನಾಲ್ಕು ವರ್ಷಗಳ ಹಿಂದೆ ದೇಶದಲ್ಲಿ ಜಾರಿಗೆ ತರಲಾದ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಕುರಿತಾದ ಗೊಂದಲಗಳು ಇಂದಿಗೂ ಮುಂದುವರಿದಿರುವುದು ನಮ್ಮ ಕಣ್ಣ ಮುಂದೆಯೇ ಇದೆ. ರಾಷ್ಟ್ರೀಯ ಶಿಕ್ಷಣ ನೀತಿ ರೂಪಣೆಗೆ ತೋರಿದ ಆತುರ, ಆಸಕ್ತಿ, ಬದ್ಧತೆಯನ್ನು ಅದರ ಅನುಷ್ಠಾನದಲ್ಲಿ ಸರಕಾರ ತೋರಿಲ್ಲ ಎಂಬುದಂತೂ ಸ್ಪಷ್ಟ. ಈ ಪೂರ್ವ ನಿದರ್ಶನವನ್ನೇ ಮುಂದಿಟ್ಟು ಹೇಳುವುದಾದರೆ ಈ ಯುಜಿಸಿ ಪ್ರಸ್ತಾವಿಸಿರುವ ಹೊಸ ನಿಯಮದ ಜಾರಿಯಲ್ಲಿ ಅವಸರ ಸರ್ವಥಾ ಸಲ್ಲದು.

ಅಂಕ ಗಳಿಕೆಯೊಂದೇ ಮಾನದಂಡವಾಗಿರುವ ದೇಶದ ಪ್ರಸಕ್ತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಇಂತಹ ಕ್ರಾಂತಿಕಾರಕ ಸುಧಾರಣೆಗಳನ್ನು ಜಾರಿಗೆ ತರುವುದು ಎಷ್ಟು ಸಮಂಜಸ ಎಂಬುದೇ ಸದ್ಯದ ಜಿಜ್ಞಾಸೆ. ದೇಶದ ಬೆರಳೆಣಿಕೆಯ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿದಂತೆ ಬಹುತೇಕ ಶಿಕ್ಷಣ ಸಂಸ್ಥೆಗಳು ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಸಾರವಾಗಿ ಇಲ್ಲ. ಇನ್ನು ದೇಶದಲ್ಲಿ ನೀಟ್‌ನಂತಹ ರಾಷ್ಟ್ರೀಯ ಮಟ್ಟದ ಪರೀಕ್ಷೆಯನ್ನು ಎದುರಿಸಲು ವಿದ್ಯಾರ್ಥಿ­ಗಳು ಹಿಂಜರಿದು ಆತ್ಮಹತ್ಯೆ ಹಾದಿ ಹಿಡಿಯುವಂತಹ ಸಂದರ್ಭದಲ್ಲಿ ಇಂತಹ ಕ್ರಾಂತಿಕಾರಕ ಬದಲಾವಣೆಗಳು ವಿದ್ಯಾರ್ಥಿಗಳ ಮೇಲೆ ಯಾವ ತೆರನಾದ ಒತ್ತಡಕ್ಕೆ ಕಾರಣವಾದೀತು ಎಂಬುದೂ ಚಿಂತನೀಯ.
ಈ ಕರಡು ನಿಯಮಾವಳಿಗಳ ಬಗೆಗೆ ಶಿಕ್ಷಣ ತಜ್ಞರು ಸಮಗ್ರ ಅಧ್ಯಯನ ನಡೆಸಿ, ದೇಶದ ಶೈಕ್ಷಣಿಕ ಮತ್ತು ಸಾಮಾಜಿಕ ವ್ಯವಸ್ಥೆಗೆ ಪೂರಕವಾದ ಮಾರ್ಪಾಡುಗಳನ್ನು ತರಲು ಯುಜಿಸಿಗೆ ಸೂಕ್ತ ಸಲಹೆ, ಮಾರ್ಗದರ್ಶನ ನೀಡುವ ಅಗತ್ಯವಿದೆ. ಈ ವಿಷಯದಲ್ಲಿ ಯುಜಿಸಿ ಇನ್ನಷ್ಟು ಚಿಂತನೆ ನಡೆಸಿ, ದೇಶದ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿ, ಅಗತ್ಯ ಮಾರ್ಪಾಡುಗಳೊಂದಿಗೆ ಸುಧಾರಣ ಕ್ರಮಗಳನ್ನು ಜಾರಿಗೆ ತಂದರೆ ಮಾತ್ರ ಅದರ ನೈಜ ಉದ್ದೇಶ ಈಡೇರಲು ಸಾಧ್ಯ.

 

ಟಾಪ್ ನ್ಯೂಸ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

14

Editorial: ಕಾಮಗಾರಿಯ ವಿಳಂಬ ಸಲ್ಲದು

8

Editorial: ಕುಂದಾಪುರದ ಹೆದ್ದಾರಿ ಸಮಸ್ಯೆ ಸರಿಪಡಿಸಿ

6

Editorial: ಸಂಚಾರ, ಪಾರ್ಕಿಂಗ್‌; ಸಮನ್ವಯದ ಕ್ರಮ ಆಗಬೇಕು

1

Editorial: ಕಾಳ್ಗಿಚ್ಚು ಸಂಭವಿಸುವ ಮುನ್ನವೇ ಇರಲಿ ಎಚ್ಚರಿಕೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.