ಶಿಶು ಮರಣ ಪ್ರಮಾಣ ಹೆಚ್ಚಳದ ಆತಂಕ ; ಸ್ವಾಸ್ಥ್ಯ ಸೇವೆ ಎಲ್ಲರಿಗೂ ಸಿಗಲಿ


Team Udayavani, May 18, 2020, 6:11 AM IST

ಶಿಶು ಮರಣ ಪ್ರಮಾಣ ಹೆಚ್ಚಳದ ಆತಂಕ ; ಸ್ವಾಸ್ಥ್ಯ ಸೇವೆ ಎಲ್ಲರಿಗೂ ಸಿಗಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜಗತ್ತಿನಾದ್ಯಂತ ಮಕ್ಕಳ ಮರಣ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು, ಅದು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚುವ ಸೂಚನೆ ಸಿಗುತ್ತಿರುವುದು ನಿಜಕ್ಕೂ ಕಳವಳದ ಸಂಗತಿ.

ಕೋವಿಡ್ ನಿಂದಾಗಿ ವಿಶ್ವಾದ್ಯಂತ ನಿಯಮಿತ ಸ್ವಾಸ್ಥ್ಯ ಸೇವೆಗಳಿಗೆ ತೊಂದರೆಯಾಗಿರುವುದರಿಂದ, ಐದು ವರ್ಷಕ್ಕೂ ಕಡಿಮೆ ವಯೋಮಾನದ ಮಕ್ಕಳಲ್ಲಿನ ಮರಣ ಪ್ರಮಾಣ ವಿಪರೀತ ಹೆಚ್ಚಾಗಲಿದೆ.

ಪರೋಕ್ಷ ಪರಿಣಾಮಗಳಿಂದಾಗಿ ಮುಂದಿನ ಆರು ತಿಂಗಳಲ್ಲಿ ಪ್ರತಿದಿನ ವಿಶ್ವಾದ್ಯಂತ 6000 ಮಕ್ಕಳು ಸಾಯಬಹುದು ಎಂದು ವಿಶ್ವಸಂಸ್ಥೆಯ ಅಂತಾರಾಷ್ಟ್ರೀಯ ಮಕ್ಕಳ ತುರ್ತು ನಿಧಿ (ಯುನಿಸೆಫ್) ಎಚ್ಚರಿಸಿದೆ.

ಕೋವಿಡ್ ಹಿಡಿತಕ್ಕೆ ಬರದೇ ಹೋದರೆ, ಕಡಿಮೆ ಹಾಗೂ ಮಧ್ಯಮ ಆದಾಯವಿರುವ ಪ್ರಪಂಚದ 118 ರಾಷ್ಟ್ರಗಳಲ್ಲಿ ಮುಂದಿನ ಆರು ತಿಂಗಳಲ್ಲಿ 12 ಲಕ್ಷಕ್ಕೂ ಅಧಿಕ ಮಕ್ಕಳು ಸಾಯಬಹುದು ಎನ್ನಲಾಗುತ್ತಿದೆ. ಗಮನಿಸಬೇಕಾದ ಸಂಗತಿಯೆಂದರೆ, ಮುಂದಿನ ಆರು ತಿಂಗಳಲ್ಲಿ ಈ 118 ರಾಷ್ಟ್ರಗಳಲ್ಲಿ ವಿವಿಧ ಕಾರಣಕ್ಕಾಗಿ ಮೃತಪಡುವ ಮಕ್ಕಳ ಸಂಖ್ಯೆ 25 ಲಕ್ಷವಿರಬಹುದು ಎಂದು ಅಂದಾಜಿತ್ತು. ಈಗ ಹೆಚ್ಚುವರಿ 12 ಲಕ್ಷ ಮಕ್ಕಳು ಸಾಯಬಹುದು ಎನ್ನಲಾಗುತ್ತಿದೆ!

ಈಗ ವಿಶ್ವದ ಸ್ಥಿತಿ ಹೇಗಿದೆಯೆಂದರೆ, ಎಲ್ಲಾ ರಾಷ್ಟ್ರಗಳ ಆರೋಗ್ಯ ವ್ಯವಸ್ಥೆಗಳು ತಮ್ಮ ಸಂಪೂರ್ಣ ಶಕ್ತಿಯನ್ನು ಕೋವಿಡ್ ಸೋಂಕಿತರನ್ನು ಪತ್ತೆಹಚ್ಚಲು, ಅವರಿಗೆ ಚಿಕಿತ್ಸೆ ನೀಡಲು ವಿನಿಯೋಗಿಸುತ್ತಿವೆ. ಇದರಿಂದಾಗಿ ಸಾಮಾನ್ಯ ಸ್ವಾಸ್ಥ್ಯ ಸೇವೆಗಳಿಗಂತೂ ಭಾರೀ ಪೆಟ್ಟು ಬಿದ್ದಿದೆ.

ಅನೇಕ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಚಿಕಿತ್ಸಾ ವಿಭಾಗಗಳನ್ನೇ ಬಂದ್‌ ಮಾಡಲಾಗಿದೆ. ಸಾಮಾನ್ಯ ರೋಗಿಗಳನ್ನು ನೋಡುವ ಪ್ರಮಾಣ ಬಹಳ ತಗ್ಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಮಕ್ಕಳ ಸ್ವಾಸ್ಥ್ಯ ಮತ್ತು ಪ್ರಸೂತಿಗೆ ಸಂಬಂಧಿಸಿದ ಸೇವೆ ಸಲ್ಲಿಸುವ ಸಿಬಂದಿಯೂ ಕೂಡ ಈಗ ಕೋವಿಡ್ ವಿರುದ್ಧದ ಹೋರಾಟದಲ್ಲಿ ವ್ಯಸ್ತವಾಗಿದ್ದಾರೆ.

ಪ್ರಸೂತಿ ಹಾಗೂ ಮಕ್ಕಳ ಸ್ವಾಸ್ಥ್ಯ ಸೇವೆಯ ವಿಷಯದಲ್ಲಿ ಶ್ರಮಿಸುತ್ತಿದ್ದ ಪ್ರಾಥಮಿಕ ಆರೋಗ್ಯ ವಲಯದ ಸಿಬಂದಿ ಮತ್ತು ಆಶಾ ಕಾರ್ಯಕರ್ತೆಯರೂ ಕೂಡ ಈ ಸಾಂಕ್ರಾಮಿಕದ ವಿರುದ್ಧ ಜಾಗರೂಕತೆ ಮೂಡಿಸುವಲ್ಲಿ ವ್ಯಸ್ತರಾಗಿದ್ದಾರೆ. ಹೀಗಾಗಿ, ಅನೇಕ ಹಳ್ಳಿಗಳಲ್ಲಿ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ಮಹಿಳೆಯರು ಅಸುರಕ್ಷಿತ ವಾತಾವರಣದಲ್ಲಿ ಹೆರಿಗೆ ಮಾಡಿಕೊಳ್ಳುತ್ತಿರುವ ಬಗ್ಗೆ ವರದಿಯಾಗುತ್ತಿದೆ.

ಇದಷ್ಟೇ ಅಲ್ಲದೇ, ಮಕ್ಕಳಿಗೆ 5 ವರ್ಷಗಳವರೆಗೆ ನೀಡಲಾಗುವ ಔಷಧ ಹಾಗೂ ಅಗತ್ಯ ಲಸಿಕೆ ಕಾರ್ಯಕ್ಕೂ ಪೆಟ್ಟು ಬಿದ್ದಿದೆ. ಆದಾಗ್ಯೂ, ಈ ಸೌಲಭ್ಯಗಳೆಲ್ಲ ನಿಂತುಹೋಗಿವೆ ಎಂದೇನೂ ಅಲ್ಲ. ಆದರೆ, ಆಸ್ಪತ್ರೆಗಳಿಗೆ, ಆರೋಗ್ಯ ಘಟಕಗಳಿಗೆ ತೆರಳಲು ತಾಯಂದಿರಿ, ಗರ್ಭಿಣಿಯರು ಹಿಂಜರಿಯುತ್ತಿರುವ ಬಗ್ಗೆ ವರದಿಯಾಗುತ್ತಿದೆ.

ಭಾರತದಂಥ ರಾಷ್ಟ್ರಗಳಲ್ಲಿ  ಪೌಷ್ಟಿಕತೆಯಿಲ್ಲದೇ, ಅಗತ್ಯ ಸುರಕ್ಷಾ ಕ್ರಮಗಳಿಲ್ಲದೇ, ನಿಯಮಿತ ತಪಾಸಣೆಯಾಗದೆ, ಗರ್ಭಾವಸ್ಥೆಯ ಸಮಯದಲ್ಲಿ ಸರಿಯಾದ ಪೋಷಣೆ ಸಿಗದೇ, ನಿಯಮಿತ ಲಸಿಕೆ ಲಭ್ಯವಾಗದೇ ಅಗಣಿತ ಮಕ್ಕಳು ಮರಣವನ್ನಪ್ಪುತ್ತವೆ.

ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ತಾಯಿ-ಶಿಶು ಮರಣ ಪ್ರಮಾಣದಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆಯಾದರೂ ಸಾಗಬೇಕಾದ ದಾರಿ ತುಂಬಾ ದೊಡ್ಡದಿದೆ. ಇಂಥ ಹೊತ್ತಲ್ಲೇ ಕೋವಿಡ್ ಕಂಟಕ ಎದುರಾಗಿ ಸ್ವಾಸ್ಥ್ಯ ಸೇವೆಗಳಿಗೆ ವಿವಿಧ ಆಯಾಮಗಳಿಂದ ಕಗ್ಗಂಟು ಎದುರಾಗಿರುವುದು ದುರಂತವೇ ಸರಿ.

ಏನೇ ಇದ್ದರೂ ಭಾರತ ಸರಕಾರ, ರಾಜ್ಯ ಸರ್ಕಾರಗಳು, ಆರೋಗ್ಯ ಇಲಾಖೆಗಳು ಮಕ್ಕಳ ಮರಣ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಹೆಜ್ಜೆಗಳನ್ನು ತ್ವರಿತವಾಗಿ ಇಡುವಂತಾಗಲಿ.

ಟಾಪ್ ನ್ಯೂಸ್

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.