ಭಯೋತ್ಪಾದನೆ: ಕಠಿನ ಸಂದೇಶ ರವಾನಿಸಿದ ಅಮಿತ್‌ ಶಾ


Team Udayavani, Oct 25, 2021, 6:00 AM IST

ಭಯೋತ್ಪಾದನೆ: ಕಠಿನ ಸಂದೇಶ ರವಾನಿಸಿದ ಅಮಿತ್‌ ಶಾ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರಕಾರ ಹಿಂಪಡೆದ 2 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಅಲ್ಲಿನ ಕಾನೂನು ಸುವ್ಯವಸ್ಥೆ ಮತ್ತು ಭದ್ರತಾ ವ್ಯವಸ್ಥೆಗಳ ಅವ ಲೋಕನ ನಡೆಸಿದ್ದಾರೆ. ನಾಗರಿಕರು ಅದರಲ್ಲೂ ಮುಖ್ಯವಾಗಿ ಅಲ್ಲಿನ ಅಲ್ಪಸಂಖ್ಯಾಕರು ಮತ್ತು ಭದ್ರತಾ ಸಿಬಂದಿಯನ್ನು ಗುರಿ ಯಾಗಿಸಿ ಪಾಕಿಸ್ಥಾನ ಪ್ರೇರಿತ ಉಗ್ರರು ದಾಳಿ ನಡೆಸುತ್ತಿರುವ ಪ್ರಕರಣಗಳು ಹೆಚ್ಚು ತ್ತಿರುವ ನಡುವೆಯೇ ಗೃಹ ಸಚಿವರು ಜಮ್ಮುವಿಗೆ ಭೇಟಿ ನೀಡುವ ಮೂಲಕ ಅಲ್ಲಿನ ನಾಗರಿಕರು ಮತ್ತು ಭದ್ರತಾ ಪಡೆಗಳಿಗೆ ಧೈರ್ಯ ತುಂಬುವ ಕಾರ್ಯ ಮಾಡಿದ್ದಾರೆ.

ಭಯೋತ್ಪಾದನೆಯ ಮೂಲೋತ್ಪಾಟನೆಯೇ ಕೇಂದ್ರ ಸರಕಾರದ ಗುರಿಯಾಗಿದ್ದು ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅಷ್ಟು ಮಾತ್ರ ವಲ್ಲದೆ ಜಮ್ಮು-ಕಾಶ್ಮೀರ ಇವೆರಡೂ ಪ್ರದೇಶಗಳ ಸರ್ವಾಂಗೀಣ ಅಭಿ ವೃದ್ಧಿಗೆ ಸರಕಾರ ಬದ್ಧವಾಗಿದೆ. ಉಗ್ರರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ, ಜನರಲ್ಲಿನ ಧರ್ಮಾಂಧತೆಯ ನಿಯಂತ್ರಣ, ನಾಗರಿಕರ ಹತ್ಯೆಗೆ ತಡೆ, ಶಾಂತಿ ಮರುಸ್ಥಾಪನೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಭದ್ರತಾ ಪಡೆ ಗಳಿಗೆ ಅಮಿತ್‌ ಶಾ ನಿರ್ದೇಶನ ನೀಡಿದ್ದಾರೆ.

ರಾಜ್ಯದ ಸಮಗ್ರ ಅಭಿವೃದ್ಧಿ, ಯುವಜನತೆಯ ಭಾಗೀದಾರಿಕೆ ಮತ್ತಿತರ ವಿಚಾರಗಳನ್ನು ಪ್ರಸ್ತಾವಿಸಿ, ಮುಂದಿನ ದಿನಗಳಲ್ಲಿ ಹಿಂಸಾಚಾರ ಮತ್ತು ಉಗ್ರಗಾಮಿ ಕೃತ್ಯಗಳಲ್ಲಿ ಯಾವೊಬ್ಬ ನಾಗರಿಕನೂ ಹತ್ಯೆಗೀಡಾ ಗದಂತೆ ನೋಡಿಕೊಳ್ಳುವುದೇ ಕೇಂದ್ರದ ಮುಂದಿ ರುವ ಗುರಿಯಾಗಿದೆ ಎಂದು ಹೇಳುವ ಮೂಲಕ ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ಶಾ ಘಂಟಾಘೋಷವಾಗಿ ಸಾರಿದ್ದಾರೆ.

ಇದನ್ನೂ ಓದಿ:ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಹೊಸ ಕೈಗಾರಿಕ ನೀತಿ ಜಾರಿಗೊಳಿಸಿದ ಬಳಿಕ ಜಮ್ಮು-ಕಾಶ್ಮೀರಕ್ಕೆ 12,000 ಕೋ. ರೂ. ಹೂಡಿಕೆ ಹರಿದುಬಂದಿದ್ದು 2022ರ ವೇಳೆಗೆ ಒಟ್ಟು 51,000 ಕೋ. ರೂ.ಗೆ ಹೆಚ್ಚಲಿದೆ. ಇದರಿಂದ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗಲಿದೆಯಲ್ಲದೆ ಸ್ಥಳೀಯ ಲಕ್ಷಾಂತರ ಮಂದಿ ಗೆ ಉದ್ಯೋಗ ಲಭಿಸಲಿದೆ. ಇಲ್ಲಿನ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರಕಾರ ಸಂಕಲ್ಪ ತೊಟ್ಟಿದ್ದು ಈ ಕಾರ್ಯದಲ್ಲಿ ಎಷ್ಟೇ ಅಡ್ಡಿ, ಆತಂಕ ಗಳು ಎದುರಾದರೂ ಅವೆಲ್ಲವನ್ನೂ ನಿವಾರಿಸಿ ಮುನ್ನಡೆಯಲಾಗುವುದು. ಅಭಿವೃದ್ಧಿ ವಿಚಾರದಲ್ಲಿ ಸರಕಾರ ದೊಂದಿಗೆ ಯುವಕರು ಕೈಜೋಡಿಸ ಬೇಕಿದೆ. ಇದರ ಜತೆಯಲ್ಲಿ ದಶಕಗ ಳಿಂದ ಈ ಪ್ರದೇಶದ ಬಲುದೊಡ್ಡ ಸಮಸ್ಯೆಯಾಗಿದ್ದ ಭಯೋತ್ಪಾದನೆ ಯನ್ನು ಬೇರು ಸಹಿತ ಕಿತ್ತೂಗೆಯುವ ನಿಟ್ಟಿನಲ್ಲಿ ಸರಕಾರ ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು ಈ ದಿಸೆಯಲ್ಲಿ ಸಫ‌ಲತೆಯನ್ನು ಕಂಡಿದೆ. ಮುಂದಿನ ದಿನಗಳಲ್ಲಿ ಜಮ್ಮು-ಕಾಶ್ಮೀರ ಭಯೋತ್ಪಾದನೆ ಮುಕ್ತವಾಗಲಿದ್ದು ನಾಗರಿಕರು ಭಯಭೀತರಾಗುವ ಅಗತ್ಯವಿಲ್ಲ ಎಂಬ ಅಭಯವನ್ನೂ ನೀಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಮತ್ತೆ ಬಿಗಡಾಯಿಸುತ್ತಿದೆ ಎಂಬ ಆತಂಕದ ವಾತಾವರಣ ಸೃಷ್ಟಿಯಾಗುತ್ತಿದ್ದಂತೆಯೇ ಗೃಹ ಸಚಿವರು ನೇರ ಅಲ್ಲಿಗೆ ತೆರಳಿ ಭದ್ರತಾ ಪಡೆಗಳಿಗೆ ಸಲಹೆ, ಸೂಚನೆಗಳನ್ನು ನೀಡುವ ಜತೆಯಲ್ಲಿ ನಾಗರಿಕರೊಂದಿಗೆ ಮಾತುಕತೆ ನಡೆಸಿ ಅವರಲ್ಲಿ ನಂಬಿಕೆ, ವಿಶ್ವಾಸ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಪ್ರಸ್ತುತ ಸ್ಥಿತಿಯಲ್ಲಿ ಸಚಿವರ ಈ ನಡೆ ಸ್ವಾಗತಾರ್ಹವಾಗಿದ್ದು ಭದ್ರತಾ ಪಡೆಗಳು ಮತ್ತು ನಾಗರಿಕರಲ್ಲಿ ಸರಕಾರ ಮತ್ತು ಆಡಳಿತ ವ್ಯವಸ್ಥೆಯ ಬಗ್ಗೆ ವಿಶ್ವಾಸಾರ್ಹತೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kannadiga

Editorial: ಕನ್ನಡಿಗರ ನಿಂದನೆಗೆ ಕಠಿನ ಕ್ರಮ: ಸ್ತುತ್ಯರ್ಹ ನಿಲುವು

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

cyber crime

Cyber ​​crime ತಡೆ: ವಿವೇಚನೆಯೇ ಕೀಲಿಕೈ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ಹುಸಿ ಬೆದರಿಕೆ ಸಂದೇಶ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.