ಖಾಸಗಿ ಶಾಲೆಗಳ ಎಚ್ಚರಿಕೆ; ಸೌಹಾರ್ದಯುತ ಪರಿಹಾರ ಮುಖ್ಯ

Team Udayavani, Nov 27, 2020, 5:55 AM IST

ಖಾಸಗಿ ಶಾಲೆಗಳ ಎಚ್ಚರಿಕೆ; ಸೌಹಾರ್ದಯುತ ಪರಿಹಾರ ಮುಖ್ಯ

ಸಾಂದರ್ಭಿಕ ಚಿತ್ರ

ಶುಲ್ಕ ಪಾವತಿಸದೆ ಇದ್ದರೆ ನವೆಂಬರ್‌ 30ಕ್ಕೆ ಆನ್‌ಲೈನ್‌ ತರಗತಿ ಬಂದ್‌ ಮಾಡುವುದಾಗಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ಎಚ್ಚರಿಕೆ ನೀಡಿದೆ. ಇದು ಮೇಲ್ನೋಟಕ್ಕೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಹಾಕಿದ ಬೆದರಿಕೆ ಯಂತೆ ಕಾಣಿಸಿದರೂ, ಇದು ಸರಕಾರಕ್ಕೆ ಹಾಕಿದ ಸವಾಲು ಎನ್ನಲಡ್ಡಿಯಿಲ್ಲ.

ಕೊರೊನಾ ಅವಧಿಯಲ್ಲಿ ಪಾಲಕರು ಹೇಗೆ ಸಮಸ್ಯೆಯಲ್ಲಿದ್ದಾರೋ, ಹಾಗೆಯೇ ಖಾಸಗಿ ಶಾಲೆಗಳೂ ಹಿಂದೆಂದೂ ಕಾಣದ ಸಂಕಷ್ಟವನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸರಕಾರದ ಪಾತ್ರ ಮಹತ್ವದ್ದು. ಆನ್‌ಲೈನ್‌ ತರಗತಿಗಳ ಶುಲ್ಕದ ವಿಚಾರಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳುವ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ ಖಾಸಗಿ ಶಾಲೆಗಳ ನಿರ್ವಹಣೆ, ಮಕ್ಕಳ ಶೈಕ್ಷಣಿಕ ಭವಿಷ್ಯ ಹಾಗೂ ಪೋಷಕರ ಅರ್ಥಿಕ ಸಂಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಸರಕಾರ ಸಮತ್ವದ ಹೆಜ್ಜೆ ಇಡಬೇಕಾಗಿದೆ.

ಕೊರೊನಾ ಕಾರಣಕ್ಕೆ ಲಾಕ್‌ಡೌನ್‌ ಘೋಷಣೆಯಾದ ಬಳಿಕ ಶಾಲೆಗಳು ಸ್ಥಗಿತಗೊಂಡಾಗಿನಿಂದ ಆನ್‌ಲೈನ್‌ ತರಗತಿಗಳನ್ನು ನಡೆಸುವ ವಿಚಾರದಲ್ಲಿ ಖಾಸಗಿ ಶಾಲೆಗಳು, ಸರಕಾರ ಮತ್ತು ಪೋಷಕರ ನಡುವೆ ತ್ರಿಕೋನ ಗೊಂದಲ ನಿರ್ಮಾಣವಾಗಿ ವಿಷಯ ನ್ಯಾಯಾಲಯದ ಅಂಗಳಕ್ಕೂ ತಲುಪಿತು. ಈಗ ಮತ್ತೆ ಎದ್ದಿರುವ ಶುಲ್ಕ ಗೊಂದಲ ಮತ್ತೂಂದು ಸುತ್ತಿನ ಕಾನೂನು ಸಂಘರ್ಷಕ್ಕೆ ಎಡೆ ಮಾಡಿಕೊಡದಂತೆ ನೋಡಿಕೊಳ್ಳುವ ಜವಾಬ್ದಾರಿ ತನ್ನ ಮೇಲಿದೆ ಎನ್ನುವುದನ್ನು ಸರಕಾರ ಮನಗಾಣಬೇಕು.

ಶುಲ್ಕದ ವಿಚಾರದಲ್ಲಿ ಸರಕಾರ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕಿದೆ. ಖಾಸಗಿ ಶಾಲೆಗಳು ಒತ್ತಡ ತಂತ್ರಗಳನ್ನು ಬಿಟ್ಟು ಉದಾರತೆ ತೋರಬೇಕಾಗಿದೆ ಮತ್ತು ಪೋಷಕರು ತಮ್ಮ ಅರ್ಥಿಕ ಸ್ಥಿತಿಗತಿಗಳಿಗೆ ತಕ್ಕಂತೆ ನ್ಯಾಯೋಚಿತವಾಗಿ ನಡೆದುಕೊಳ್ಳಬೇಕಾಗಿದೆ. ಈ ವಿಚಾರದಲ್ಲಿ ಸರಕಾರ, ಖಾಸಗಿ ಶಾಲೆಗಳು ಮತ್ತು ಪೋಷಕರ ನಡುವೆ ತ್ರಿಪಕ್ಷೀಯ ಪರಿಹಾರ ಸೂತ್ರ ಕಂಡುಕೊಳ್ಳ ಬೇಕಾಗಿದೆ. ಸರಕಾರ ದೃಢ ನಿಲುವು ತಾಳಬೇಕು, ಖಾಸಗಿ ಶಾಲೆಗಳು ಹಠ ಬಿಡಬೇಕು ಮತ್ತು ಪೋಷಕರು ಮಕ್ಕಳ ಶೈಕ್ಷಣಿಕ ಭವಿಷ್ಯದ ಕುರಿತು ದೂರದೃಷ್ಟಿ ಮತ್ತು ಸಮಚಿತ್ತ ಹೊಂದಿರಬೇಕು. ಹೀಗಾದರೆ ಗೊಂದಲಕ್ಕೆ ತೆರೆ ಎಳೆಯಬಹುದು.

ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಮಾಹಿತಿಯಂತೆ ರಾಜ್ಯ ಪಠ್ಯಕ್ರಮದ 19 ಸಾವಿರ ಹಾಗೂ ಸಿಬಿಎಸ್‌ಸಿ, ಐಸಿಎಸ್ಸಿ ಪಠ್ಯಕ್ರಮದ ಸಾವಿರ ಶಾಲೆಗಳು ಸೇರಿ ರಾಜ್ಯದಲ್ಲಿ ನರ್ಸರಿಯಿಂದ ಹತ್ತನೆ ತರಗತಿ ವರೆಗೆ ಸುಮಾರು 20 ಸಾವಿರ ಖಾಸಗಿ ಶಾಲೆಗಳಿವೆ. ಇವುಗಳಲ್ಲಿ 48ರಿಂದ 50 ಲಕ್ಷ ಮಕ್ಕಳು ಕಲಿಯುತ್ತಿದ್ದು, ಬೋಧಕ-ಬೋಧಕೇತರ ಸೇರಿ 1.20 ಲಕ್ಷ ಸಿಬಂದಿ ಇದ್ದಾರೆ. ರಾಜ್ಯ ಪಠ್ಯಕ್ರಮದ 19 ಸಾವಿರ ಶಾಲೆಗಳ ಪೈಕಿ 17 ಸಾವಿರ ಶಾಲೆಗಳು ವಾರ್ಷಿಕ 10 ಸಾವಿರದಿಂದ 30 ಸಾವಿರದವರೆಗೆ ಶುಲ್ಕ ಪಡೆಯವ ಶಾಲೆಗಳಿವೆ. ಈ ಪೈಕಿ ಬಹುತೇಕ ಶಾಲೆಗಳು ಮಾಸಿಕ ಕಂತುಗಳನ್ನು ಕಟ್ಟಿಸಿಕೊಂಡು ಶಿಕ್ಷಣ ನೀಡುತ್ತವೆ. ಒಂದು ಅಂದಾಜಿನಂತೆ ರಾಜ್ಯದಲ್ಲಿ 35ರಿಂದ 40 ಲಕ್ಷ ಕುಟುಂಬಗಳು ಖಾಸಗಿ ಶಾಲೆಗಳ ಒಡನಾಟ ಹೊಂದಿವೆ. ಇದರಲ್ಲಿ ಶೇ.90ರಷ್ಟು ಕುಟುಂಬಗಳು ಬಡ ಮಧ್ಯಮ ಕುಟುಂಬಗಳಾಗಿವೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ನಿರ್ಣಾಯಕ ಪಾತ್ರವಹಿಸಬೇಕಿದೆ.

ವಿಪಕ್ಷಗಳೂ ಸಹ ಈ ವಿಚಾರವನ್ನು ಕೇವಲ ರಾಜಕೀಯವಾಗಿ ನೋಡದೆ ಇದೊಂದು ಸಾಮಾಜಿಕ ಮತ್ತು ಶೈಕ್ಷಣಿಕ ವಿಚಾರ ಎಂದು ಮನಗಂಡು ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ಸರಕಾರಕ್ಕೆ ಅಗತ್ಯ ಸಲಹೆ ಮತ್ತು ಸಹಕಾರ ನೀಡಬೇಕು.

ಟಾಪ್ ನ್ಯೂಸ್

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.