ಸಾಮಾಜಿಕ ಮಾಧ್ಯಮಕ್ಕೆ ಬೆ‹àಕ್
Team Udayavani, Mar 11, 2019, 12:30 AM IST
ಈ ಬಾರಿ ಚುನಾವಣಾ ಆಯೋಗವು ಕೇವಲ ಭೌತಿಕವಾಗಿ ಚುನಾವಣಾ ಪ್ರಚಾರವನ್ನು ನಿಯಂತ್ರಿಸುವುದಿಲ್ಲ. ಬದಲಿಗೆ ವರ್ಚುವಲ್ ಜಗತ್ತಿನ ಮೇಲೂ ನಿಯಂತ್ರಣ ಹೇರಲಿದೆ. ಸಾಮಾಜಿಕ ಮಾಧ್ಯಮಗಳು ಪಕ್ಷಗಳಿಗೆ ಪ್ರಚಾರ ನಡೆಸಲು ತ್ವರಿತ, ಸುಲಭ ಲಭ್ಯ ಹಾಗೂ ಕಡಿಮೆ ಖರ್ಚಿನ ಪ್ಲಾಟ್‌ಫಾರಂ ಆಗಿದ್ದು, ಇಲ್ಲೂ ಚುನಾವಣಾ ಆಯೋಗ ಕಣ್ಣಿಡಲಿದೆ. ಈ ಬಗ್ಗೆ ಸಮಗ್ರ ವಿವರಗಳನ್ನು ಚುನಾವಣಾ ಆಯುಕ್ತ ಸುನೀಲ್ ಅರೋರಾ ವಿವರಿಸಿದ್ದಾರೆ.
ಚುನಾವಣೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸುವ ಜಾಹೀರಾತಿಗೆ ಮೊದಲೇ ಪ್ರಮಾಣಪತ್ರ ಪಡೆಯಬೇಕು. ಇವು ಪಕ್ಷದ ಚುನಾವಣೆ ವೆಚ್ಚದ ಭಾಗವಾಗಿರುತ್ತದೆ. ಗೂಗಲ್, ಫೇಸ್‌ಬುಕ್, ಯೂಟ್ಯೂಬ್ ಹಾಗೂ ಟ್ವಿಟರ್‌ಗಳು ಎಲ್ಲ ರಾಜಕೀಯ ಜಾಹೀರಾತುಗಳನ್ನೂ ಪ್ರಮಾಣೀ ಕರಿಸುತ್ತವೆ. ಈ ಸಾಮಾಜಿಕ ಮಾಧ್ಯಮಗಳು ರಾಜಕೀಯ ಜಾಹೀರಾತು ಪ್ರಕಟಿಸುವಾಗ ಅವುಗಳಲ್ಲಿ ಇದು ರಾಜಕೀಯ ಜಾಹೀರಾತು ಎಂಬುದಾಗಿ ಪ್ರಕಟಿಸುತ್ತವೆ. ಚುನಾವಣಾ ಆಯೋಗದ ನೀತಿಯ ಯಾವುದೇ ಉಲ್ಲಂಘನೆಯ ಬಗ್ಗೆ ದೂರು ಸ್ವೀಕರಿಸಲು ಗೂಗಲ್ ಹಾಗೂ ಫೇಸ್‌ಬುಕ್ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಿವೆ.
ಅಭ್ಯರ್ಥಿಗಳು ಕೂಡ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ವಿವರವನ್ನು ನೀಡಬೇಕು. ಇದು ಸುಳ್ಳು ಸುದ್ದಿ ಹಬ್ಬಿಸುವುದು ಹಾಗು ದ್ವೇಷಯುತ ವಿಷಯಗಳ ಹಂಚಿಕೊಳ್ಳುವುದನ್ನು ತಡೆಯುವಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದೆ. ಅಷ್ಟೇ ಅಲ್ಲ, ಸಾಮಾಜಿಕ ಮಾಧ್ಯಮ ಪರಿಣಿತರನ್ನು ಪ್ರಮಾಣೀಕರಣ ಮತ್ತು ವಿಚಕ್ಷಣಾ ಸಮಿತಿಯಲ್ಲಿ ಬಳಸಿಕೊಳ್ಳಲಾಗುತ್ತದೆ. ಆದರೆ ಈಗಾಗಲೇ ನಿರೀಕ್ಷಿಸಿದಂತೆ ಮತದಾನಕ್ಕೂ 48 ಗಂಟೆಗಳ ಮೊದಲು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಪ್ರಚಾರ ನಡೆಸಲು ನಿಷೇಧ ಹೇರಿದಂತೆ ಸಾಮಾಜಿಕ ಮಾಧ್ಯಮಗಳಿಗೂ ನಿಷೇಧ ಹೇರುವ ಬಗ್ಗೆ ಚುನಾವಣಾ ಆಯೋಗ ಯಾವುದೇ ವಿವರಣೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಗಾಂಜಾ ಸೇವನೆ; ಯುವಕನ ಬಂಧನ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.