ಪ್ರಣವ್‌ ಪಯಣ: ಪ್ರಧಾನಿಯಾಗುವ ಎಲ್ಲ ಅರ್ಹತೆ ಇದ್ದ ಧೀಮಂತ ನಾಯಕ ಪ್ರಣವ್‌


Team Udayavani, Sep 1, 2020, 7:01 AM IST

ಪ್ರಣವ್‌ ಪಯಣ: ಪ್ರಧಾನಿಯಾಗುವ ಎಲ್ಲ ಅರ್ಹತೆ ಇದ್ದ ಧೀಮಂತ ನಾಯಕ ಪ್ರಣವ್‌

ಒಂದು ದೇಶದ ನೇತಾರರಲ್ಲೊಬ್ಬರಾಗಿ ಐದು ದಶಕಗಳಿಗೂ ಹೆಚ್ಚು ಕಾಲ ದುಡಿಯುವುದೆಂದರೆ ಅದು ಸಣ್ಣ ಮಾತಲ್ಲ. ಇದರ ಜೊತೆಗೆ ಎಲ್ಲರ ಪ್ರೀತಿಯನ್ನೂ ಸಂಪಾದಿಸಿಕೊಂಡರೆ ಅದೇ ಒಂದು ದೊಡ್ಡ ಸಾಧನೆ. ಇಂದಿನ ತ್ವೇಷಮಯ ರಾಜಕೀಯ ಸನ್ನಿವೇಶದಲ್ಲಿ ಮೇರು ರಾಜಕಾರಣಿಯೆಂದು ಎಲ್ಲರಿಂದ ಗೌರವಿಸಲ್ಪಡುವುದು ಅಪರೂಪದಲ್ಲಿ ಅಪರೂಪ. ಅಂತಹದ್ದೊಂದು ದಿವ್ಯಶಕ್ತಿ ಪ್ರಣವ್‌ ಮುಖರ್ಜಿಯವರಿಗಿತ್ತು. ಅದನ್ನು ದೇಶದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನಃಪೂರ್ವಕವಾಗಿ ಸ್ಮರಿಸಿಕೊಂಡಿದ್ದಾರೆ ಓದಿ…

– ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಪ್ರಣವ್‌ ಮುಖರ್ಜಿ ಅವರು ಕೇವಲ ರಾಜಕಾರಣಿ ಮಾತ್ರವಲ್ಲ. ಪ್ರಮುಖ ಆರ್ಥಿಕ ತಜ್ಞರೂ ಆಗಿದ್ದವರು. ದೇಶ ಕಂಡ ಅಪರೂಪದ ರಾಜಕಾರಣಿಗಳ ಪೈಕಿ ಅವರೂ ಒಬ್ಬರು.

47ನೇ ವಯಸ್ಸಿನಲ್ಲೇ ಹಣಕಾಸು ಖಾತೆಯನ್ನು ನಿಭಾಯಿಸಿದ್ದರು. ಅವರನ್ನು ಗುರುತಿಸಿ ರಾಜಕೀಯಕ್ಕೆ ಕರೆತಂದವರು ಇಂದಿಗಾಂಧಿಯವರು.

ಡಾ| ಮನಮೋಹನ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗಲೂ ಪ್ರಣವ್‌ ಮುಖರ್ಜಿಯವರು ಹಣಕಾಸು ಇಲಾಖೆಯನ್ನು ನಿರ್ವಹಿಸಿದ್ದರು. ಇದಕ್ಕೂ ಮೊದಲು ಅವರು ಪಿ.ವಿ. ನರಸಿಂಹರಾವ್‌ ಅವರು ಪ್ರಧಾನಿಯಾಗಿದ್ದಾಗ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು.

ಕೇವಲ ಹಣಕಾಸು ಇಲಾಖೆ ಮಾತ್ರವಲ್ಲ ಎಲ್ಲ ಇಲಾಖೆಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದರು. ಈ ಕಾರಣಕ್ಕಾಗಿಯೇ ಹಲವಾರು ರಾಜಕಾರಣಿಗಳು ಅವರಿಂದ ಮಾರ್ಗದರ್ಶನ ಪಡೆದುಕೊಳ್ಳುತ್ತಿದ್ದರು.

ಎಂದೂ ವಾದಕ್ಕೆ ಸಿಲುಕದೆ, ಎಲ್ಲರ ಅಚ್ಚುಮೆಚ್ಚಿನ ರಾಜಕಾರಣಿಯಾಗಿದ್ದ ಮುಖರ್ಜಿಯವರು ಇನ್ನು ನೆನಪು ಮಾತ್ರ ಎಂಬುದನ್ನು ಊಹಿಸಿಕೊಳ್ಳುವುದೂ ಅಸಾಧ್ಯ. ವಿದೇಶಾಂಗ ಸಚಿವರಾಗಿಯೂ ಅವರು ತಮ್ಮದೇ ಆದ ಛಾಪು ಮೂಡಿಸಿದ್ದರು.

ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮುಖರ್ಜಿಯವರು ರಾಷ್ಟ್ರಪತಿಗಳಾಗಿದ್ದರು. ಹೀಗಾಗಿ ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿ ಮಾಡಿದ್ದುಂಟು. ಜತೆಗೆ ಬೆಂಗಳೂರಿಗೂ ಅವರು ಭೇಟಿ ನೀಡಿದ್ದರು. ಭೇಟಿಯಾದ ಸಂದರ್ಭದಲ್ಲಿ ಜನರ ಬಗೆಗಿನ ಕಾಳಜಿ ಅವರ ಮಾತುಗಳಲ್ಲಿ ವ್ಯಕ್ತವಾಗುತ್ತಿತ್ತು.

ಹಣಕಾಸು ನನ್ನ ನೆಚ್ಚಿನ ಇಲಾಖೆಯೂ ಆಗಿದ್ದರಿಂದ ಆ ಕುರಿತಾಗಿಯೇ ಅವರು ನನ್ನೊಂದಿಗೆ ಹೆಚ್ಚು ಮಾತನಾಡುತ್ತಿದ್ದರು. ಹಣಕಾಸು ಇಲಾಖೆಯ ನಿರ್ವಹಣೆ ಕುರಿತು ತಮ್ಮ ಅನುಭವಗಳನ್ನು ಅವರು ನನ್ನೊಂದಿಗೆ ಹಂಚಿಕೊಂಡಿದ್ದೂ ಉಂಟು.

ಇದೆಲ್ಲಕಿಂತ ಮಿಗಿಲಾಗಿ ಅವರ ಸರಳ ನಡವಳಿಕೆ ಗಮನ ಸೆಳೆಯುತ್ತಿತ್ತು. ಇನ್ನು ರಾಷ್ಟ್ರಪತಿಗಳಾಗಿ ಅವರು ನಡೆದುಕೊಂಡ ರೀತಿಯನ್ನು ಇಡೀ ದೇಶವೇ ಕೊಂಡಾಡಿತ್ತು.

ಅವರು ಹಣಕಾಸು ಇಲಾಖೆ ಮಾತ್ರವಲ್ಲ, ಎಲ್ಲ ಇಲಾಖೆಗಳಲ್ಲೂ ಗುರ್ತಿಸಿಕೊಂಡ ರಾಜಕಾರಣಿಗಳ ಸಾಲಿನಲ್ಲಿ ಅತ್ಯಂತ ಮೇಲ್ಮಟ್ಟದ ಸ್ಥಾನ ಪಡೆದಿದ್ದರು. ಅಪ್ಪಟ ಕಾಂಗ್ರೆಸ್ಸಿಗರಾಗಿದ್ದ ಮುಖರ್ಜಿಯವರು ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದರು. ಬಂಗಾಳಿ ಬಾಬು ಎಂದು ಕಾಂಗ್ರೆಸ್‌ ವಲಯದಲ್ಲಿ ಅಭಿಮಾನದಿಂದ ಕರೆಸಿಕೊಳ್ಳುತ್ತಿದ್ದ ಅವರು ಇತಿಹಾಸ, ಸಂಗೀತ ಮತ್ತು ಸಾಹಿತ್ಯದ ಬಗ್ಗೆ ಒಲವು ಇರಿಸಿಕೊಂಡಿದ್ದರು. ಈ ಕಾರಣಕ್ಕಾಗಿಯೇ ಅವರೊಬ್ಬ ಭಿನ್ನ ರಾಜಕಾರಣಿಯಾದರು. ಪ್ರಧಾನಿಯಾಗುವ ಎಲ್ಲ ಅರ್ಹತೆ ಅವರಿಗೆ ಇತ್ತು. ಆದರೆ ಅವರು ದೇಶದ ಅತ್ಯುನ್ನತ ಪದವಿಯಾದ ರಾಷ್ಟ್ರಪತಿ ಹುದ್ದೆ ಅಲಂಕರಿಸಿದರು. ಸ್ವತಂತ್ರ ಚಿಂತನೆಯನ್ನು ಹೊಂದಿದ್ದರು. ಒಂದು ಸಣ್ಣ ಅವಧಿಯನ್ನು ಹೊರತುಪಡಿಸಿ 4 ದಶಕಗಳ ಕಾಲ ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದವರು.

ನಿತ್ಯ 18 ಗಂಟೆಗಳ ಕಾಲ ದೇಶಕ್ಕಾಗಿ ಅವರು ಕೆಲಸ ಮಾಡುತ್ತಿದ್ದರು. ತಮ್ಮ ಅಪಾರ ಅನುಭವ ಮತ್ತು ರಾಜಕೀಯ ಚಾಣಾಕ್ಷತೆಯ ಫ‌ಲವಾಗಿ ರಾಜಕೀಯದಲ್ಲಿ ಎಂದೂ ನೇಪಥ್ಯಕ್ಕೆ ಸರಿದವರಲ್ಲ. ಬರವಣಿಗೆಯಲ್ಲೂ ಸೈ ಎನಿಸಿಕೊಂಡಿದ್ದರು. ಕೆಲವು ಕಾಲ ಪತ್ರಕರ್ತರಾಗಿಯೂ ಕಾರ್ಯನಿರ್ವಸಿದ್ದರು. ಜತೆಗೆ 10ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿರುವುದು ಅವರ ಕ್ರಿಯಾಶೀಲತೆಗೆ ಹಿಡಿದ ಕನ್ನಡಿ.

ರಾಷ್ಟ್ರಪತಿಗಳಾಗಿ ರಾಷ್ಟ್ರಪತಿಭವನದಲ್ಲಿಯೂ ಹಲವಾರು ಸುಧಾರಣೆಗಳನ್ನು ಅವರು ಜಾರಿಗೆ ತಂದರು. ಎಷ್ಟೋ ರಾಜಕಾರಣಿಗಳು ರಾಜಕೀಯದಲ್ಲಿ ಹೆಸರು ಮಾಡಿದರೂ ಜನರ ನೆನಪಿನಿಂದ ಬಹುಬೇಗ ಮರೆಯಾಗುತ್ತಾರೆ. ಆದರೆ, ಮುಖರ್ಜಿಯವರ ವ್ಯಕ್ತಿತ್ವ ಅಂಥದ್ದಲ್ಲ. ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತೆ ನಡೆದುಕೊಂಡರು. ಮುಖರ್ಜಿಯವರ ಅಗಲಿಕೆ ದೇಶಕ್ಕೆ ನಿಜವಾದ ನಷ್ಟ. ಅವರಂಥ ರಾಜಕಾರಣಿ ನಮಗೆ ಸಿಗುವುದು ಕಷ್ಟವೇ ಸರಿ. ಅವರಿಗೆ ನನ್ನ ಭಾವಪೂರ್ಣ ನಮನಗಳು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉದ್ಯೋಗ, ಅರ್ಹತೆ ಮತ್ತು ವೃತ್ತಿ ನಿಷ್ಠೆ

Employment: ಉದ್ಯೋಗ, ಅರ್ಹತೆ ಮತ್ತು ವೃತ್ತಿ ನಿಷ್ಠೆ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

Cinema Story:”ಇಂತಹ” ನೆಗೆಟಿವ್ ಕಥಾ ವಸ್ತುಗಳಿಲ್ಲದೇನೆ ಸಿನಿಮಾ ಬಾಕ್ಸಾಫೀಸ್ ತುಂಬ ಬಹುದೇ ?

Cinema Story:”ಇಂತಹ” ನೆಗೆಟಿವ್ ಕಥಾ ವಸ್ತುಗಳಿಲ್ಲದೇನೆ ಸಿನಿಮಾ ಬಾಕ್ಸಾಫೀಸ್ ತುಂಬ ಬಹುದೇ ?

ರಾಜ್ಯದಲ್ಲಿ ಇನ್ನೊಂದು ಪಕ್ಷದ ಸರ್ಕಾರವಿದ್ದಾಗ ಈ ರಾಜ್ಯಪಾಲರುಗಳು‎ ತುಂಬಾ ಆತಂತ್ರ ಸ್ಥಿತಿ

ಮುಡಾ: ಸಿದ್ದು ವಿರುದ್ಧ ರಾಜ್ಯಪಾಲರ prosecution ಅನುಮತಿ ಸಿಎಂ ಸ್ಥಾನಕ್ಕೆ ಮುಳುವಾಗಬಹುದೇ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.