1.5 ಡಿಗ್ರಿ ಸೆಲ್ಸಿಯಸ್‌ಗೆ ಜಗತ್ತಿನ ಒಪ್ಪಿಗೆ

Team Udayavani, Nov 2, 2021, 6:10 AM IST

1.5 ಡಿಗ್ರಿ ಸೆಲ್ಸಿಯಸ್‌ಗೆ ಜಗತ್ತಿನ ಒಪ್ಪಿಗೆ

ಯುನೈಟೆಡ್‌ ಕಿಂಗ್‌ಡಮ್‌ನ ಗ್ಲ್ಯಾಸ್ಗೋದಲ್ಲಿ ಜಾಗತಿಕ ಹವಾಮಾನ ಸಂಬಂಧ ಸಿಒಪಿ26 ಸಮ್ಮೇಳನ ಆರಂಭವಾಗಿದೆ. ಇದರ ನಡುವೆಯೇ ಇಟಲಿಯ ರೋಮ್‌ನಲ್ಲಿ ಸಭೆ ಸೇರಿದ್ದ ಜಿ20 ನಾಯಕರು ಜಗತ್ತಿನ ತಾಪಮಾನವನ್ನು 1.5 ಡಿಗ್ರಿ ಸೆಲ್ಸಿಯಸ್‌ಗೆ ಇಳಿಸಲು ನಿರ್ಧರಿಸಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲೂ ಇದೇ ತಾಪಮಾನವನ್ನು ಉಳಿಸಿಕೊಂಡು ಹೋಗುವ ಬಗ್ಗೆಯೂ ತೀರ್ಮಾನಿಸಿದ್ದಾರೆ. ಜಿ20ಯಲ್ಲಿ ಬಹುತೇಕ ಮುಂದುವರಿದ ದೇಶಗಳೇ ಇದ್ದು, ಗ್ಲ್ಯಾಸ್ಗೋದಲ್ಲೂ ಈ ಬಗ್ಗೆ ಚರ್ಚೆಯಾಗಿ ಒಂದು ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ.

2015ರ ಪ್ಯಾರಿಸ್‌ನಲ್ಲೇ ಆಗಿತ್ತು ತೀರ್ಮಾನ
ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಬಹು ಹಿಂದೆಯೇ ಕಂಡು ಬಂದಿದೆ. ಇದರಿಂದಾಗಿಯೇ ಜಗತ್ತಿನಲ್ಲಿ ಸೈಕ್ಲೋನ್‌ಗಳ ಹೆಚ್ಚಳ, ಅತಿವೃಷ್ಟಿ ಮತ್ತು ಅನಾವೃಷ್ಟಿಗಳು ಸಂಭವಿಸುತ್ತಲೇ ಇವೆ. ಹೀಗಾಗಿ 2015ರಲ್ಲಿ ಪ್ಯಾರಿಸ್‌ನಲ್ಲಿ ನಡೆದ ಹವಾಮಾನ ಶೃಂಗದಲ್ಲಿ ಜಾಗತಿಕ ತಾಪಮಾನವನ್ನು ಕಡಿಮೆಗೊಳಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ ಅಮೆರಿಕದ ಹಿಂದಿನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮೊಂಡಾಟದಿಂದಾಗಿ ಈ ಪ್ಯಾರಿಸ್‌ ಶೃಂಗದ ನಿರ್ಧಾರ ಜಾರಿಯಾಗುವಲ್ಲಿ ತಡವಾಗಿತ್ತು. ಈಗಲೂ ಈ ಬಗ್ಗೆ ನಿರ್ಧಾರವಾಗಿಲ್ಲ.

ಹೆಚ್ಚು ಮಾಲಿನ್ಯಕ್ಕೆ ಅಭಿವೃದ್ಧಿ ಹೊಂದಿದ ದೇಶಗಳೇ ಕಾರಣ
ಜಿ20ರ  ಗುಂಪಿನಲ್ಲಿ ಬಹುತೇಕ ಮುಂದುವರಿದ ದೇಶಗಳೇ ಇವೆ. ಅಂದರೆ, ಈ ಗುಂಪಿನಲ್ಲಿ ಅರ್ಜೆಂಟೀನಾ, ಆಸ್ಟ್ರೇಲಿಯ, ಬ್ರೆಜಿಲ್‌, ಕೆನಡಾ, ಚೀನಾ, ಫ್ರಾನ್ಸ್‌, ಜರ್ಮನಿ, ಜಪಾನ್‌, ಭಾರತ, ಇಂಡೋನೇಶಿಯಾ, ಇಟಲಿ, ಮೆಕ್ಸಿಕೋ, ರಷ್ಯಾ, ದಕ್ಷಿಣ ಆಫ್ರಿಕಾ, ಸೌದಿ ಅರೇಬಿಯಾ, ದಕ್ಷಿಣ ಕೊರಿಯಾ, ಟರ್ಕಿ, ಯುನೈಟೆಡ್‌ ಕಿಂಗ್‌ಡಮ್‌, ಅಮೆರಿಕ, ಐರೋಪ್ಯ ಒಕ್ಕೂಟ, ಸ್ಪೈನ್‌. ಜಾಗತಿಕ ಮಾಲಿನ್ಯದಲ್ಲಿ ಈ ದೇಶಗಳ ಪಾಲು ಶೇ.80ರಷ್ಟು. ಈ ರಾಷ್ಟ್ರಗಳು ನಿಯಂತ್ರಣಕ್ಕೆ ತಂದು, ಇಂಗಾಲದ ಡೈ ಆಕ್ಸೆ„ಡ್‌ ಹೊರಸೂಸುವಿಕೆ ಪ್ರಮಾಣವನ್ನು ಕಡಿಮೆ ಮಾಡಿದರೆ, ತಂತಾನೇ ಜಾಗತಿಕ ತಾಪಮಾನವೂ ಇಳಿಯಲಿದೆ. ಹೀಗಾಗಿ, ಈಗ ಗ್ಲ್ಯಾಸ್ಗೋದಲ್ಲಿ ಆರಂಭವಾಗಿರುವ ಶೃಂಗದಲ್ಲಿ ಜಿ20 ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಚರ್ಚಿಸಲಾಗುತ್ತದೆ.

ಇದನ್ನೂ ಓದಿ:ರಷ್ಯಾ ಲಸಿಕೆ ಅಭಿಯಾನ ಫ್ಲಾಪ್‌? ಸ್ಫುಟ್ನಿಕ್ ವಿ ಕೋವಿಡ್‌ ಲಸಿಕೆ ಬಗ್ಗೆ ಜನರ ನಿರ್ಲಕ್ಷ್ಯ

ಏನಿದು 1.5 ಡಿಗ್ರಿ ಸೆಲ್ಸಿಯಸ್‌?
ಮೂರು ವರ್ಷಗಳ ಹಿಂದೆ ವಿಜ್ಞಾನಿಗಳು 2 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದ್ದರೆ ಅದು ಸೇಫ್ ಎಂದು ಹೇಳಿದ್ದರು. ಆದರೆ ಈ ಮೂರು ವರ್ಷಗಳಿಂದ ಸಂಶೋಧನೆ ಮಾಡುತ್ತಿರುವ ವಿಜ್ಞಾನಿಗಳು, 1.5 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದ್ದರೆ ಅದು ಸುರಕ್ಷಿತ ಎಂದು ಹೇಳಿದ್ದಾರೆ. ಆದರೆ, ಇದಕ್ಕಿಂತ ಕಡಿಮೆ ಮಾಡುವುದು ಸಾಧ್ಯವೇ ಇಲ್ಲ ಎಂಬುದು ಎಲ್ಲರಿಗೂ ಗೊತ್ತು. ಏಕೆಂದರೆ, ಆರ್ಥಿಕ ಸ್ಥಿತಿ ಸುಧಾರಣೆಯಲ್ಲಿ ಕೈಗಾರಿಕೆಗಳು ಇರಲೇಬೇಕು.

2 ಡಿಗ್ರಿ ಸೆ.ನಿಂದ ಇಳಿಸಿದ್ದು ಏಕೆ?
ವಿಶೇಷವೆಂದರೆ, 1995ರಲ್ಲಿ ಆರ್ಥಿಕ ತಜ್ಞ ವಿಲಿಯಂ ನಾರ್ಡೂಸ್‌ 2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿ, ಪರವಾಗಿಲ್ಲ ಎಂದು ಗುರಿಯನ್ನು ನಿಗದಿ ಮಾಡಿದ್ದರು. ಇದಕ್ಕಿಂತ ಹೆಚ್ಚು ಬಿಸಿಯಾಗಬಾರದು ಎಂದಿದ್ದರು. ಈ ಬಳಿಗ 1990ರಲ್ಲಿ ಐರೋಪ್ಯ ಒಕ್ಕೂಟವೂ 2 ಡಿಗ್ರಿ ಸೆಲ್ಸಿಯಸ್‌ ಟಾರ್ಗೆಟ್‌ಗೆ ಒಪ್ಪಿಕೊಂಡಿತ್ತು. ಆದರೆ, ಈ 2 ಡಿಗ್ರಿ ಸೆಲ್ಸಿಯಸ್‌ ಟಾರ್ಗೆಟ್‌ಗೆ ಸಣ್ಣಪುಟ್ಟ ದ್ವೀಪ ರಾಷ್ಟ್ರಗಳು ಆಕ್ಷೇಪವೆತ್ತಿದ್ದವು. ಜಾಗತಿಕ ತಾಪಮಾನ ಏರಿಕೆಯಿಂದಾಗಿ ಸಮುದ್ರದ ಮಟ್ಟ ಏರಿಕೆಯಾಗಿ ನಾವು ಮುಳುಗುವ ಸ್ಥಿತಿ ಬರುತ್ತದೆ ಎಂದೇ ವಾದಿಸಿದ್ದವು.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Ammebala-Subbarao

ಸ್ವಾವಲಂಬಿ ಬದುಕು, ಹೆಣ್ಣು ಮಕ್ಕಳ ಶಿಕ್ಷಣ ಪ್ರವರ್ತಕ ಅಮ್ಮೆಂಬಳ ಸುಬ್ಬರಾವ್‌ ಪೈ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.