2022ರ ಹೊರಳು ನೋಟ; ಸುಪ್ರೀಂ ಮೆಟ್ಟಿಲೇರಿದ ಹಿಜಾಬ್‌ ಪ್ರಕರಣ


Team Udayavani, Dec 21, 2022, 6:15 AM IST

2022ರ ಹೊರಳು ನೋಟ; ಸುಪ್ರೀಂ ಮೆಟ್ಟಿಲೇರಿದ ಹಿಜಾಬ್‌ ಪ್ರಕರಣ

ಕನ್ನಡದ ಕಟ್ಟಾಳು ಚಂಪಾ ನಿಧನ
ಕವಿ, ನಾಟಕಕಾರ, ಕನ್ನಡಪರ ಹೋರಾಟಗಾರ ಚಂದ್ರಶೇಖರ ಪಾಟೀಲ(83) ಅವರು ವಯೋಸಹಜ ಅನಾರೋಗ್ಯದ ಕಾರಣ ದಿಂದಾಗಿ ಜ.10ರಂದು ನಿಧನ ಹೊಂದಿದ್ದರು.

1939ರ ಜೂ.18ರಂದು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತಿಮತ್ತೂರಿನಲ್ಲಿ ಜನಿಸಿದ್ದ ಇವರಿಗೆ ಬಾಲ್ಯದಲ್ಲಿಯೇ ಸಾಹಿತ್ಯದತ್ತ ಆಸಕ್ತಿ ಮೂಡಿತ್ತು. ಧಾರವಾಡದಲ್ಲಿ ಶಿಕ್ಷಣ ಪೂರೈಸಿದ ಇವರು ವಿದ್ಯಾರ್ಥಿಯಾಗಿದ್ದಾಗಲೇ ಇವರ ಪ್ರಥಮ ಕವನಸಂಕಲನ “ಬಾನುಲಿ’ ಬಿಡುಗಡೆಯಾಗಿತ್ತು. ಕರ್ನಾಟಕ ವಿ.ವಿ.ಯಲ್ಲಿ ಇಂಗ್ಲಿಷ್‌ ಸ್ನಾತಕೋತ್ತರ ಶಿಕ್ಷಣ ಪಡೆದ ಚಂಪಾ ಅವರು ಅಲ್ಲಿಯೇ ಪ್ರಾಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದರು. ಇದೇ ವೇಳೆ ತಮ್ಮ ಸ್ನೇಹಿತರ ಜತೆಗೂಡಿ ಸಂಕ್ರಮಣ ಎಂಬ ಹೆಸರಿನ ದ್ವೆ„ಮಾಸಿಕ ಪತ್ರಿಕೆಯನ್ನು ಆರಂಭಿಸಿದ್ದರು. ಇಂಗ್ಲೆಂಡ್‌ನ‌ ಲೀಡ್ಸ್‌ ವಿ.ವಿ.ಯಿಂದ ಎಂ.ಎ. ಪದವಿ ಪೂರೈಸಿದ ಇವರು ತುರ್ತು ಪರಿಸ್ಥಿತಿ ವಿರೋಧಿ ಹೋರಾಟದಲ್ಲಿ ಭಾಗವಹಿಸಿ ಸೆರೆವಾಸ ಅನುಭವಿಸಿದರು. ಗೋಕಾಕ ಚಳವಳಿಯಲ್ಲೂ ಇವರು ಪ್ರಧಾನ ಪಾತ್ರ ವಹಿಸಿದ್ದರು.

ಹಲವಾರು ಕವನ ಸಂಕಲನ, 11 ನಾಟಕಗಳನ್ನು ರಚಿಸಿದ್ದ ಚಂಪಾ ಹಲವಾರು ಕೃತಿಗಳನ್ನೂ ಸಂಪಾದಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್‌ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯೋತ್ಸವ, ಪಂಪ ಪ್ರಶಸ್ತಿ, ಬಸವ ಶ್ರೀ ಕರುನಾಡ ಭೂಷಣ, ಸಾಹಿತ್ಯ ಅಕಾಡೆಮಿ ಗೌರವ ಸಹಿತ ಹತ್ತು ಹಲವು ಪ್ರಶಸ್ತಿ, ಪುರಸ್ಕಾರ, ಸಮ್ಮಾನಗಳಿಗೆ ಚಂಪಾ ಭಾಜನರಾಗಿದ್ದರು. 2017ರಲ್ಲಿ ಮೈಸೂರಿನಲ್ಲಿ ನಡೆದ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆಯ ಗೌರವವೂ ಇವರಿಗೆ ಲಭಿಸಿತ್ತು.

ಸಾಹಿತಿ, ಕವಿ ಚೆನ್ನವೀರ ಕಣವಿ ನಿಧನ
ಕನ್ನಡದ ಚೆಂಬೆಳಕಿನ ಕವಿ ಎಂದೇ ಖ್ಯಾತರಾಗಿದ್ದ , ಸಮನ್ವಯ ಲೇಖಕ ಹಾಗೂ ಹಿರಿಯ ಸಾಹಿತಿ ಚೆನ್ನವೀರ ಕಣವಿ(94) ಫೆ. 16ರಂದು ನಿಧನ ಹೊಂದಿದ್ದರು.

ಕಣವಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಸತತ 33 ದಿನಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದರು.

1928ರ ಜೂ. 28ರಂದು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ ಜನಿಸಿದ್ದ ಇವರು ಧಾರವಾಡದಲ್ಲಿ ಮಾಧ್ಯಮಿಕ ಮತ್ತು ಕಾಲೇಜು ಶಿಕ್ಷಣ ಪೂರೈಸಿದ್ದರು. ಕರ್ನಾಟಕ ವಿ.ವಿ.ಯಿಂದ ಎಂ.ಎ. ಪದವಿ ಪಡೆದ ಅವರು ಇದೇ ವಿ.ವಿ.ಯ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾದರು. ಆ ಬಳಿಕ 1956ರಿಂದ 83ರ ವರೆಗೆ ವಿಭಾಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.ಆ ಕಾಲದಲ್ಲಿ ಸಾಹಿತ್ಯದ ನೆಲೆಯಾಗಿದ್ದ ಧಾರವಾಡದ ಸಾಹಿತ್ಯಿಕ ವಾತಾವರಣ ಸಹಜವಾಗಿಯೇ ಅದರತ್ತ ಕಣವಿ ಅವರನ್ನು ಸೆಳೆಯಿತು. ಕುವೆಂಪು, ಬೇಂದ್ರೆ, ಮಧುರಚೆನ್ನಯರ ಸಾಹಿತ್ಯದಿಂದ ಪ್ರೇರಿತರಾದ ಇವರು ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡರು.

ಕವನ ಸಂಕಲನ, ಪ್ರಬಂಧ ಸಂಕಲನ, ಶಿಶು ಸಾಹಿತ್ಯ ಮಾತ್ರವಲ್ಲದೆ ಅನೇಕ ಸಂಪಾದನ ಕೃತಿಗಳನ್ನು ಕಣವಿ ಅವರು ರಚಿಸಿದ್ದರು. 1982ರಲ್ಲಿ ಇವರ ಜೀವಧ್ವನಿ ಕವನ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. 1989 ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2002ರಲ್ಲಿ ಹಂಪಿ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್‌, 2004ರಲ್ಲಿ ಕರ್ನಾಟಕ ವಿ.ವಿ. ಯ ಗೌರವ ಡಾಕ್ಟರೆಟ್‌ ಪದವಿ, ನೃಪತುಂಗ ಪ್ರಶಸ್ತಿ, ದುಬಾ„ ಕನ್ನಡರತ್ನ ಪ್ರಶಸ್ತಿ, ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ…ಹೀಗೆ ಹತ್ತು ಹಲವಾರು ಪ್ರಶಸ್ತಿ, ಪುರಸ್ಕಾರ, ಗೌರವಗಳು ಚೆನ್ನವೀರ ಕಣವಿ ಅವರಿಗೆ ಲಭಿಸಿದ್ದವು.

ಹಿರಿಯ ನಟ, ಕಲಾತಪಸ್ವಿ ರಾಜೇಶ್‌ ನಿಧನ
ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾತಪಸ್ವಿ ಎಂದೇ ಪ್ರಸಿದ್ಧಿಯಾಗಿದ್ದ ಹಿರಿಯ ನಟ ರಾಜೇಶ್‌(89) ಫೆ.19 ರಂದು ನಿಧನ ಹೊಂದಿದರು. ಉಸಿ ರಾಟದ ತೊಂದರೆ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸ ಲಾಗಿತ್ತು.  1960 ರಲ್ಲಿ ವೀರ ಸಂಕಲ್ಪ ಚಿತ್ರದೊಂದಿಗೆ ಸಿನೆಮಾ ರಂಗಕ್ಕೆಪಾದಾರ್ಪಣೆ ಮಾಡಿದ್ದ ಇವರು ಸುಮಾರು 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಅವರ ಮೂಲ ಹೆಸರು ಮುನಿ ಚೌಡಪ್ಪ. ಅವರು ಚಿತ್ರರಂಗದಲ್ಲಿ ರಾಜೇಶ್‌ ಆಗಿ ಗುರುತಿಸಿಕೊಂಡರು. ರಂಗಭೂಮಿ ಹಾಗೂ ಆರಂಭದ ದಿನಗಳ ಚಿತ್ರಗಳಲ್ಲಿ ವಿದ್ಯಾಸಾಗರ್‌ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ಶಕ್ತಿ ನಾಟಕ ಮಂಡಳಿಯನ್ನು ಕಟ್ಟಿದ್ದರು. ವಿಷಸರ್ಪ, ನಂದಾದೀಪ, ಕಿತ್ತೂರು ರಾಣಿ ಚೆನ್ನಮ್ಮ ರಾಜೇಶ್‌ ಅಭಿನಯದ ಕೆಲವು ನಾಟಕಗಳು.

ಕಪ್ಪುಬಿಳುಪು, ದೇವರಗುಡಿ, ಕಾವೇರಿ, ಚದುರಿದ ಚಿತ್ರಗಳು, ವಸಂತನಿಲಯ, ಸೊಸೆ ತಂದ ಸೌಭಾಗ್ಯ, ಕ್ರಾಂತಿವೀರ, ಊರ್ವಶಿ ಇವರು ಅಭಿನಯಿಸಿದ ಪ್ರಮುಖ ಚಿತ್ರಗಳು.

ಸುಪ್ರೀಂ ಮೆಟ್ಟಿಲೇರಿದ ಹಿಜಾಬ್‌ ಪ್ರಕರಣ
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿ
ರಾಜಕೀಯ ಸ್ವರೂಪ ಪಡೆದಿದ್ದ ಹಿಜಾಬ್‌ ಪ್ರಕರಣಕ್ಕೆ ಮಾ.15ರಂದು ರಾಜ್ಯ ಹೈಕೋರ್ಟ್‌ ಮಹತ್ವದ ತೀರ್ಪು ನೀಡುವ ಮೂಲಕ  ಪ್ರಕರಣಕ್ಕೆ ತರೆ ಎಳೆದಿತ್ತು.  ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ  ಮೇಲ್ಮನವಿ ಸಲ್ಲಿಸಲಾಯಿತಾದರೂ ಹೈಕೋರ್ಟ್‌ ತೀರ್ಪಿನಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತಲ್ಲದೆ ಪ್ರಕರಣವನ್ನು ವಿಸ್ತೃತ ನ್ಯಾಯಪೀಠಕ್ಕೆ ವರ್ಗಾಯಿಸಿತು.

“ಹಿಜಾಬ್‌ ಅತ್ಯಗತ್ಯ ಧಾರ್ಮಿಕ  ಆಚರಣೆ ಅಲ್ಲ; ಮುಸ್ಲಿಂ ಮಹಿಳೆಯರು ಹಿಜಾಬ್‌ ಧರಿಸುವುದು ಇಸ್ಲಾಮಿನ ನಂಬಿಕೆ ಅನ್ವಯ ಅಗತ್ಯ ಧಾರ್ಮಿಕ ಆಚರಣೆ ಯೆಂದು ರೂಪಿತವಾಗುವುದಿಲ್ಲ’ ಎಂದು ಹೈಕೋರ್ಟ್‌ ತೀರ್ಪಿನಲ್ಲಿ ಹೇಳಿತ್ತು.

ಫೆ.6ರಂದು ರಾಜ್ಯ ಸರಕಾರ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸರಕಾರ ನಿಗದಿ ಪಡಿಸಿದ ಸಮವಸ್ತ್ರವನ್ನು ಧರಿಸ ಬೇಕೆಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕೆಂದು ಕೋರಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿ ನಿಯರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ತೀರ್ಪು ನೀಡಿದ ಹೈಕೋರ್ಟ್‌ “ಶಾಲಾ ಸಮವಸ್ತ್ರ ನಿಗದಿಪಡಿಸುವುದು ಸಂವಿಧಾನದಲ್ಲಿ ಅನುಮತಿಸಲಾದ ವಿವೇಕಯುಕ್ತ ಮತ್ತು ಸಮಂಜಸ ನಿರ್ಧಾರವಾಗಿದ್ದು, ಅದನ್ನು ವಿದ್ಯಾರ್ಥಿಗಳು ಪ್ರಶ್ನಿಸುವಂತಿಲ್ಲ. ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆಗೆ ಸಂಬಂಧಿಸಿ ಸರಕಾರ ಫೆ.5 ರಂದು ಹೊರಡಿಸಿದ್ದ ಆದೇಶ ಕಾನೂನು ಬದ್ಧ ವಾಗಿದೆ’ ಎಂದು ತೀರ್ಪು ನೀಡಿತ್ತು.

ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜುಲೈಯಲ್ಲಿ ಸುಪ್ರೀಂ ಕೋರ್ಟ್‌ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿತ್ತು. ಅಕ್ಟೋಬರ್‌ನಲ್ಲಿ ಸುಪ್ರೀಂ  ಕೋರ್ಟ್‌ನ ದ್ವಿಸದಸ್ಯ ಪೀಠವು ಹೈಕೋರ್ಟ್‌ ಆದೇಶವನ್ನು ಯಥಾಸ್ಥಿತಿ ಯಲ್ಲಿರಿಸಿದ್ದೇ ಅಲ್ಲದೆ ಅರ್ಜಿಯ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿತು.

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.