ಎಚ್ಚರ…ವಾಯುಮಾಲಿನ್ಯವು ನಿಮ್ಮನ್ನು ಹಂದಿ ಜ್ವರಕ್ಕೆ ಗುರಿಯಾಗಿಸುವ ಸಾಧ್ಯತೆ ಹೆಚ್ಚು!

Team Udayavani, Apr 30, 2020, 1:15 PM IST

ವಾಯುಮಾಲಿನ್ಯವು ನಿಮ್ಮನ್ನು ಹಂದಿ ಜ್ವರಕ್ಕೆ ಗುರಿಯಾಗಿಸುವ ಸಾಧ್ಯತೆ ಹೆಚ್ಚು

ಬೇಸಿಗೆಯಲ್ಲಿ ಜನರು ಸೋಂಕು ಖಾಯಿಲೆಗೆ ಒಳಗಾಗುವ ಅಪಾಯ ಹೆಚ್ಚಿರುತ್ತದೆ ಎನ್ನುತ್ತದೆ ಅಧ್ಯಯನ.

ಬೆಂಗಳೂರು: ಕೋವಿಡ್ ವೈರಸ್ ಭೀತಿಯ ನಡುವೆ ವಾಯುಮಾಲಿನ್ಯದಿಂದಾಗಿ ಹೆಚ್1ಎನ್1 ಹಂದಿ ಜ್ವರಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚಿದೆಯೆಂದು ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿನ ಅರ್ಧದಷ್ಟು ಪ್ರಕರಣಗಳು ಬೆಂಗಳೂರಿನಲ್ಲೇ ವರದಿಯಾಗುತ್ತಿದೆ. 2020ರ ಫೆಬ್ರವರಿ ಅಂತ್ಯದ ವೇಳೆಗೆ ಬೆಂಗಳೂರಿನಲ್ಲಿ 101 ಪ್ರಕರಣಗಳು ಕಂಡುಬಂದಿದ್ದು, ಒಬ್ಬ ರೋಗಿ ಸಾವನ್ನಪ್ಪಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಯನದ ಪ್ರಕಾರ, ಬ್ಯಾಕ್ಟೀರಿಯಾದ ವಾಯುಗಾಮಿ ಕಣಗಳನ್ನು ಉಸಿರಾಡುವುದರಿಂದ ಶ್ವಾಸಕೋಶದಲ್ಲಿ ಹಲವಾರು ಸೋಂಕು ಕಾಯಿಲೆ ಹಾಗೂ ಶ್ವಾಸಕೋಶದ ಅತಿಸೂಕ್ಷ್ಮತೆಗೂ ಕಾರಣವಾಗುತ್ತಿವೆ. ಬೇಸಿಗೆಯಲ್ಲಿ ಜನರು ಸೋಂಕು ಖಾಯಿಲೆಗೆ ಒಳಗಾಗುವ ಅಪಾಯ ಹೆಚ್ಚಿರುತ್ತದೆ ಎನ್ನುತ್ತದೆ ಅಧ್ಯಯನ.

ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥೆ ನಂದಿನಿ ಎನ್. ಅವರ ಪ್ರಕಾರ, ‘ವೈರಸ್‍ಗಳ ಗಾತ್ರವು 2.5 ಮೈಕ್ರಾನ್ಸ್ ಗಿಂತಲೂ (1 ಮೀಟರ್ – 10 ಲಕ್ಷ ಮೈಕ್ರಾನ್ಸ್) ಕಡಿಮೆಯಿರುತ್ತದೆ. ಹೀಗಾಗಿ ಇದು ಸುಲಭವಾಗಿ ಗಾಳಿಯಲ್ಲಿ ಸಂಚರಿಸುತ್ತದೆ, ಇದರಿಂದಾಗಿ ಅದು ಹೆಚ್ಚಿನ ಜನರ ಮೇಲೆ ಪರಿಣಾಮ ಬೀರಬಲ್ಲದು.

ಹೆಚ್1ಎನ್1 ಹಂದಿಜ್ವರವು ಹೆಚ್1ಎನ್1 ಇನ್ಫ್ಲುಯೆಂಝ ಎಂಬ ವೈರಸ್‍ನಿಂದ ಉಂಟಾಗುವ ಉಸಿರಾಟದ ಸೋಂಕು. ಇದು ಮುಖ್ಯವಾಗಿ ಕೆಮ್ಮು ಅಥವಾ ಸೀನು, ಕೈಕುಲುಕುವುದು ಅಥವಾ ಅಪ್ಪುಗೆ, ಚುಂಬನ ಅಥವಾ ಪಾನೀಯಗಳನ್ನು ಹಂಚಿಕೊಳ್ಳುವುದು ಅಥವಾ ಕಲುಷಿತ ಹೊದಿಕೆ, ಬಾಗಿಲ ಹಿಡಿಕೆಯಿಂದ ಹರಡುತ್ತದೆ. ಆದಾಗ್ಯೂ, ವಾಯುಮಾಲಿನ್ಯ ಗಾಳಿಯಲ್ಲಿನ ವೈರಸ್ ಅಥವಾ ಬ್ಯಾಕ್ಟೀರಿಯಾಗಳನ್ನು ಹೆಚ್ಚಿಸುತ್ತದೆ ಮತ್ತು ಒಂದು ಬಾರಿಗೆ ವ್ಯಕ್ತಿಯ ರೋಗನಿರೋಧಕ ಶಕ್ತಿಯ ಮೇಲೆ ದಾಳಿ ಮಾಡಿದರೆ ನಂತರ ಇದು ಶ್ವಾಸಕೋಶದ ಕಾಯಿಲೆ, ನೆಗಡಿ ಮತ್ತು ಸಾಮಾನ್ಯ ಜ್ವರ, ಹಂದಿ ಜ್ವರಕ್ಕೂ ಕಾರಣವಾಗುತ್ತದೆ.

ಪರಿಸರ ಕಾರ್ಯಕರ್ತ ಸಂದೀಪ್ ಅನಿರುದ್ಧನ್ ಅವರ ಪ್ರಕಾರ, `ಕಸ ಸುಡುವಿಕೆ, ಅಸಮರ್ಪಕ ಘನತ್ಯಾಜ್ಯ ನಿರ್ವಹಣೆಯಿಂದಾಗಿ ವಾಯುಗಾಮಿ ಕಣಗಳು, ಬ್ಯಾಕ್ಟೀರಿಯಾ ವಾಯುಗಾಮಿ ಕಣಗಳು, ಅಲರ್ಜಿಕಾರಕಗಳು, ಪಾಥೋಜೆನ್‍ಗಳು (ಒಂದು ವಿಧ ಬ್ಯಾಕ್ಟೀರಿಯಾದಂತಹ ವೈರಸ್) ಎಲ್ಲೆಂದರಲ್ಲಿ ಗಾಳಿಯಲ್ಲಿ ತುಂಬಾ ಸಮಯದವರೆಗೂ ಸಂಚರಿಸುತ್ತಿರುತ್ತವೆ.

ಇವುಗಳನ್ನು ಉಸಿರಾಡುವುದರಿಂದ ಶ್ವಾಸಕೋಶದಲ್ಲಿ ಸೋಂಕು ಉಂಟಾಗಿ ಉಸಿರಾಟದ ತೊಂದರೆ, ಕಿರಿಕಿರಿಯುಂಟು ಮಾಡುತ್ತದೆ. ಇವು ವಾಯುಮಾಲಿನ್ಯದಿಂದ ಉಸಿರಾಟದ ಸಮಸ್ಯೆಗೆ ಕಾರಣವಾಗುವುದನ್ನು ಸೂಚಿಸುತ್ತದೆ ಎಂದು ಅವರು ಉಲ್ಲೇಖಿಸುತ್ತಾರೆ.

ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸಯನ್ಸ್ (ಐಐಎಸ್‍ಸಿ)ಯ ಅಧ್ಯಯನ ಪ್ರಕಾರ ‘ಬೆಂಗಳೂರಿನಂತಹ ಕಲುಷಿತ ನಗರದ ನಿವಾಸಿಗಳು ಆರೋಗ್ಯದ ವಿಷಯದಲ್ಲಿ ಸ್ವಚ್ಛ ನಗರವೊಂದರ ನಿವಾಸಿಗಳಿಗೆ ಹೋಲಿಸಿದರೆ ಅಸಹಜ ವ್ಯತ್ಯಾಸಗಳನ್ನು ಹೊಂದಿದ್ದಾರೆ’.

ಅಧ್ಯಯನದ ಲೇಖಕರಲ್ಲಿ ಒಬ್ಬರಾದ ಡಾ. ಹೆಚ್. ಪರಮೇಶ್ ಅವರ ಪ್ರಕಾರ,`ವಾಯುಮಾಲಿನ್ಯವು ಶ್ವಾಸಕೋಶದ ಮೇಲಿನ ಹಾಗೂ ಕೆಳಗಿನ ಭಾಗದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಇದರಿಂದಾಗಿ ದೀರ್ಘಕಾಲದ ಕೆಮ್ಮು, ನ್ಯುಮೇನಿಯಾ, ಜ್ವರ, ಹೆಚ್1ಎನ್1 ಇಂಪ್ಲುಯೆಂಝ ಸೇರಿದಂತೆ ಅನೇಕ ಸೋಂಕು ಕಾಯಿಲೆಗಳಿಗೆ ಕಾರಣವಾಗುತ್ತದೆ ಮತ್ತು ಬೆಂಗಳೂರಿನಲ್ಲಿ ವಾಯುಮಾಲಿನ್ಯವು ಇಂತಹ ಖಾಯಿಲೆಗಳಿಗೆ ಪ್ರಮುಖ ಕಾರಣವಾಗಿದೆ’ ಎಂದಿದ್ದಾರೆ.

ಸ್ವಿಟ್ಜರ್‍ಲೆಂಡ್ ಮೂಲದ ಕಂಪೆನಿಯೊಂದರ ವರದಿಯ ಪ್ರಕಾರ ಹೆಚ್ಚಿನ ಪ್ರಮಾಣದ ವಾಯುಮಾಲಿನ್ಯ ಹೊಂದಿರುವ ಪ್ರದೇಶದ ಜನರು ಜ್ವರದಿಂದ ಅನಾರೋಗ್ಯಕ್ಕೆ ಒಳಗಾಗುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಏಕೆಂದರೆ ವಾಯುಗಾಮಿ ಕಣಗಳು “ಘನೀಕರಣ ನ್ಯೂಕ್ಲಿಯಸ್”ಗಳನ್ನು ಒದಗಿಸುತ್ತದೆ, ಇದಕ್ಕೆ ವೈರಸ್ ಹನಿಗಳು ತನ್ನನ್ನು ತಾನು ಜೋಡಿಸಿಕೊಳ್ಳುತ್ತದೆ. ಈ ಕಣಗಳು ವೈರಸ್ ಕಣಗಳನ್ನು ಜೋಡಿಸಿಕೊಂಡು ವಾಯುಗಾಮಿಗಳಾಗಿ ಉಳಿಯುತ್ತವೆ. ಸೀನುವಾಗ ಆವರಿಸುವ ದೂರಕ್ಕಿಂತಲೂ ಹೆಚ್ಚು ದೂರ ಪ್ರಯಾಣಿಸಲು ವೈರಸ್‍ಗೆ ಇದು ಅನುವು ಮಾಡಿಕೊಡುತ್ತದೆ ಎಂದು ಕಂಪನಿಯ ಅಧ್ಯಯನ ತಿಳಿಸುತ್ತದೆ.

ವೈರಸ್ ಹಾಗೂ ಮಾಲಿನ್ಯಕಣಗಳು ಬಿಡುಗಡೆ ಮಾಡುವ ರಾಸಾಯನಿಕ ಪ್ರಕ್ರಿಯೆಗೆ ಜೀವಕೋಶಗಳು ಪ್ರತಿಸ್ಪಂದಿಸುತ್ತವೆ. ಈ ಪ್ರಕ್ರಿಯೆಗೆ ಸೈಟೋಕಿನ್ಸ್ ಎನ್ನುತ್ತಾರೆ. ಇವು ಪ್ರೊಟೀನ್‍ಗಳಾಗಿದ್ದು, ಜೀವಕೋಶಗಳು ಹಾಗೂ ದೇಹದ ಪ್ರತಿರಕ್ಷಣಾ ವ್ಯವಸ್ಥೆಯಿಂದ ಬಿಡುಗಡೆಯಾಗುವ ರಾಸಾಯನಿಕಗಳ ನಡುವೆ ಸಂದೇಶ ವಾಹಕಗಳಾಗಿ ಕಾರ್ಯನಿರ್ವಹಿಸುತ್ತವೆ. ಇದು ಉರಿಯೂತ ಮತ್ತು ದ್ರವಗಳ ಬಿಡುಗಡೆಗೆ ಕಾರಣವಾಗುತ್ತದೆ ಎನ್ನುತ್ತದೆ ಅಧ್ಯಯನ ವರದಿ.

ವೈಟ್‍ಫೀಲ್ಡ್ ರೈಸಿಂಗ್‍ನ ಸದಸ್ಯರಾಗಿರುವ ಜಿಬಿ ಜಮಾಲ್ ಪ್ರಕಾರ, ಶ್ವಾಸಕೋಶದ ಕಾರ್ಯಚಟುವಟಿಕೆಗೆ ಧಕ್ಕೆಯುಂಟಾದಾಗ ವ್ಯಕ್ತಿಯ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಬೆಂಗಳೂರಿನಲ್ಲಿರುವ ವಾಯುಮಾಲಿನ್ಯವು ಎಚ್1ಎನ್1ನಂತರ ವಾಯುಗಾಮಿ ಕಾಯಿಲೆಗಳಿಗೆ ಅನುಕೂಲಕರವಾಗುತ್ತಿವೆ ಎಂದು ಹೇಳುತ್ತಾರೆ.

ಹಾಂಗ್‍ಕಾಂಗ್‍ನ ವಿಜ್ಞಾನಿಗಳ ಗುಂಪೊಂದು ಮಾಲಿನ್ಯಕಾರಕಗಳ ದೈನಂದಿನ ಸಾಂದ್ರತೆಯನ್ನು ಅಳೆಯುತ್ತಾ, ಇದರಿಂದಾಗಿ ಉಂಟಾಗುವ ಉಸಿರಾಟ ಹಾಗೂ ಹೃದಯರಕ್ತನಾಳದ ಕಾಯಿಲೆಗೆ ಒಳಗಾಗುವವರ ಸರಾಸರಿಯನ್ನು ಅಂದಾಜಿಸಿದೆ.

ಗಮನಾರ್ಹವಾದ ಅಧ್ಯಯನಗಳ ಪ್ರಕಾರ ಎಲ್ಲಾ ಉಸಿರಾಟದ ಕಾಯಿಲೆಗಳು, ಎಲ್ಲಾ ರೀತಿಯ ಹೃದಯ ರಕ್ತನಾಳದ ಕಾಯಿಲೆಗಳು, ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆಗಳು, ಅಸ್ತಮಾ, ನ್ಯುಮೇನಿಯಾ, ಇನ್ಪ್ಲುಯೆಂಝಾ ಖಾಯಿಲೆಗಳಿಗಾಗಿ ಆಸ್ಪತ್ರೆಗೆ ದಾಖಲಾಗುವವರ ಹಿನ್ನಲೆಯನ್ನು ಗಮನಿಸಿದಾಗ ನೈಟ್ರೋಜನ್ ಡೈಆಕ್ಸೈಡ್, ಓಝೋನ್, ಪಿಎಂ (ಅತಿಸೂಕ್ಷ್ಮ ಧೂಳಿನ ಕಣ) ಸೇವನೆಯ ಪರಿಣಾಮವನ್ನು ಕಂಡುಕೊಳ್ಳಲಾಗಿದೆ.

ಪರಿಸರವಾದಿ ಅಕ್ಷಯ್ ಹೆಬ್ಳೀಕರ್ ಅವರ ಪ್ರಕಾರ ‘ಹೆಚ್ಚಿನ ಒತ್ತಡ ಮತ್ತು ಗಾಳಿಯಲ್ಲಿ ಮಾಲಿನ್ಯಕಾರಕಗಳ ಸಾಂದ್ರತೆಯಿಂದಾಗಿ ನೈಸರ್ಗಿಕ ಗಾಳಿಯ ಪ್ರವಾಹಗಳು ಚದುರಿಹೋಗಲು ಸಾಧ್ಯವಾಗುತ್ತಿಲ್ಲ, ಇವು ವಾಯುಗಾಮಿ ರೋಗಗಳನ್ನು ವ್ಯಾಪಕವಾಗಿ ಹರಡಲು ಕಾರಣವಾಗುತ್ತವೆ.’

ಹೆಚ್ಚುತ್ತಿರುವ ಮಾಲಿನ್ಯವನ್ನು ನಿಭಾಯಿಸಲು ಮಾರ್ಗಸೂಚಿ ಹಾಗೂ ಗುಣಮಟ್ಟದ ಶಿಕ್ಷಣದ ಅಗತ್ಯತೆಯನ್ನು ಒತ್ತಿಹೇಳುತ್ತಾರೆ ಶ್ವಾಸಕೋಶಶಾಸ್ತ್ರಜ್ಞ ಡಾ. ಜಿ. ಶಶಿಧರ. ಜನಸಂಖ್ಯೆಯ ನಿಯಂತ್ರಣ, ಹಸಿರನ್ನು ಹೆಚ್ಚಿಸುವುದು, ಸರಿಯಾದ ಘನತ್ಯಾಜ್ಯ ನಿರ್ವಹಣೆ ಕೂಡಾ ಈ ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಅವರು.

ವರದಿ : ಕಪಿಲ್ ಕಾಜಲ್

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.