Armed Forces Flag Day 2023;ವೀರ ಯೋಧರಿಗೆ ಗೌರವ ಸಲ್ಲಿಸೋಣ
Team Udayavani, Dec 7, 2023, 5:56 AM IST
ಭಾರತೀಯ ಸಶಸ್ತ್ರ ಪಡೆಗಳ ಶ್ರೇಯೋಭಿವೃದ್ಧಿಗಾಗಿ ಡಿಸೆಂಬರ್ 7 ರಂದು ದೇಶಾದ್ಯಂತ ಭಾರತೀಯ ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸಲಾಗುತ್ತದೆ. ಭಾರತೀಯ ಸೈನಿಕರ ಕಲ್ಯಾಣಕ್ಕಾಗಿ ದೇಶದ ನಾಗರಿಕರಿಂದ ವಿಭಿನ್ನ ಶೈಲಿಯಲ್ಲಿ ದೇಣಿಗೆಯನ್ನು ಸಂಗ್ರಹಿಸಿ, ವೀರ ಯೋಧರು ಮತ್ತು ಹುತಾತ್ಮ ಯೋಧರ ಕುಟುಂಬಗಳಿಗೆ ನೆರವು ನೀಡಲಾಗುತ್ತದೆ. ದೇಶಕ್ಕಾಗಿ ಬಲಿದಾನಗೈದ ಯೋಧರು ಮತ್ತು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ದೇಶ ರಕ್ಷಣೆಯ ಕಾರ್ಯದಲ್ಲಿ ತೊಡಗಿರುವ ಸೈನಿಕರ ಒಳಿತಿಗಾಗಿ 1949ರಲ್ಲಿ ಇಂತಹ ಒಂದು ವಿನೂತನ ಪರಿಕಲ್ಪನೆಗೆ ಚಾಲನೆ ನೀಡಲಾಯಿತು. ಇದಾದ ಬಳಿಕ ಪ್ರತೀವರ್ಷ ಡಿ. 7ರಂದು ಸಶಸ್ತ್ರ ಪಡೆಗಳ ಧ್ವಜ ದಿನವನ್ನು
ಆಚರಿಸುತ್ತ ಬರಲಾಗಿದೆ.
ಉದ್ದೇಶವೇನು?
ಕೆಂಪು, ಗಾಢ ನೀಲಿ, ತಿಳಿ ನೀಲಿ ಬಣ್ಣದ ಪುಟ್ಟ ಧ್ವಜವನ್ನು, ಬ್ಯಾಡ್ಜ್ ಅಥವಾ ಧ್ವಜ ದಿನದ ಸ್ಟಿಕ್ಕರ್ ಅನ್ನು ಜನರಿಗೆ ನೀಡಿ ಅವರಿಂದ ದೇಣಿಗೆ ಸಂಗ್ರಹಿಸಿ ಮಾಜಿ ಸೈನಿಕರಿಗೆ ಮತ್ತು ಅವರ ಕುಟುಂಬದ ಹಿತರಕ್ಷಣೆಗೆ ಅದನ್ನು ಬಳಸಲಾಗುತ್ತದೆ. ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿ, ಮಡಿದ ವೀರ ಯೋಧರನ್ನು ಸ್ಮರಿಸುವ ಜತೆಯಲ್ಲಿ ದೇಶ ರಕ್ಷಣೆಯ ಕಾರ್ಯದಲ್ಲಿ ನಿರತವಾಗಿರುವ ಯೋಧರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಧ್ವಜ ದಿನವನ್ನು ಆಚರಿಸಲಾಗು ತ್ತದೆ. ಈ ಮೂಲಕ ಪ್ರತಿಯೊಬ್ಬರಲ್ಲೂ ರಾಷ್ಟ್ರಪ್ರೇಮವನ್ನು ಜಾಗೃತಗೊಳಿಸುವ ಪ್ರಯತ್ನವನ್ನು ಮಾಡುತ್ತ ಬರಲಾಗಿದೆ.
ನಿಧಿ ಸಂಗ್ರಹಿಸುವವರು ಯಾರು?
ನಿಧಿ ಸಂಗ್ರಹದ ಹೊಣೆಗಾರಿಕೆ ಕೇಂದ್ರೀಯ ಸೈನಿಕ ಬೋರ್ಡ್‌ನ ಸ್ಥಳೀಯ ಸಂಸ್ಥೆಗಳದ್ದಾಗಿದೆ. ಅದರಲ್ಲಿ ಪ್ರತ್ಯೇಕ ಸಮಿತಿ ಕೂಡ ಇದ್ದು ಅಧಿಕೃತ ಹಾಗೂ ಸಾಮಾನ್ಯ ಸ್ವಯಂ ಸೇವಾ ಸಂಸ್ಥೆಗಳು ಇದರ ಜವಾಬ್ದಾರಿಯನ್ನು ನಿರ್ವಹಿಸುತ್ತವೆ. ಆನ್‌ಲೈನ್ ಮೂಲಕ ದೇಣಿಗೆ ನೀಡಬಹುದು ಡಿಸೆಂಬರ್ ಮಾಸದಾದ್ಯಂತ ದೇಣಿಗೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಸಶಸ್ತ್ರ ಪಡೆಗಳ ಧ್ವಜ ದಿನದಂಗವಾಗಿ ಸಾರ್ವಜನಿಕರು ಆನ್‌ಲೈನ್ ಮೂಲಕ ತಮ್ಮ ಕೈಲಾದಷ್ಟು ದೇಣಿಗೆ ನೀಡಬಹುದು. https://ksb.gov.in/DonateAFFDF.htm ಭೇಟಿ ನೀಡಿ ಧನಸಹಾಯ ಮಾಡಲು ಸರಕಾರ ಅವಕಾಶ ಕಲ್ಪಿಸಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.