ಮಕ್ಕಳ ದಿನಾಚರಣೆ 2019; “ಮಕ್ಕಳ ಮುಖದಲ್ಲಿ ನಗು ತಂದ ಮಕ್ಕಳ ದಿನ”
Team Udayavani, Nov 13, 2019, 5:59 PM IST
ಎಲ್ಲೆಡೆ ಮಕ್ಕಳ ದಿನಾಚರಣೆಯನ್ನು ಆಚರಿಸುವುದನ್ನು ನೋಡುವಾಗ ಎಲ್ಲರಿಗೂ ಒಂದು ಕ್ಷಣ ತಮ್ಮ ಬಾಲ್ಯದ ದಿನಗಳು ನೆನೆದು ಕಿರಿಯರಾಗುತ್ತಾರೆ. ಹಿರಿಯರೂ ಕೂಡಾ ಮಕ್ಕಳ ದಿನಾಚರಣೆಯನ್ನು ತಾವು ಹೇಗೆ ಆಚರಿಸುತ್ತಿದ್ದೇವು ಎಂದು ಮೆಲಕು ಹಾಕುತ್ತಾರೆ. ಶಿಕ್ಷಕರಂತೂ ನವೆಂಬರ್ 1ರಿಂದಲೇ ಶಾಲೆಗಳಲ್ಲಿ ಮಕ್ಕಳ ದಿನ ಆಚರಿಸಲು ಎಲ್ಲಾ ರೀತಿಯ ಸಿದ್ದತೆಯಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನೂ ಮಕ್ಕಳ ಖುಷಿಯನ್ನು ಕೇಳುವಂತೆಯೇ ಇಲ್ಲ ಬಿಡಿ.
ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಹರಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತದಾದ್ಯಂತ ನವೆಂಬರ್ 14 ರಂದು ಮಕ್ಕಳ ದಿನಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಪುಟಾಣಿಗಳೆಲ್ಲ ಶಾಲೆಗೆ ಹೋಗಿ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ.
ಅಂದು ಪುಟಾಣಿಗಳು ನೃತ್ಯ, ಸಂಗೀತ, ನಾಟಕ, ಆಟ ಎಂದೆಲ್ಲಾ ತಮ್ಮ ಪ್ರತಿಭೆಗಳನ್ನು ಪ್ರದರ್ಶನ ಮಾಡಿ ಸಂತೋಷ ಪಡುತ್ತಾರೆ. ಶಾಲೆಗಳಲ್ಲಿ ಕೆಲವು ಗಂಟೆಗಳ ಕಾರ್ಯಕ್ರಮ ನಡೆಸಿ ಮಕ್ಕಳಿಗೆ ರಜೆ ನೀಡಲಾಗುತ್ತದೆ.ಮಕ್ಕಳ ದಿನಾಚರಣೆಯಂದು ಕೇವಲ ಮಕ್ಕಳು ಮಾತ್ರವಲ್ಲ ಶಿಕ್ಷಕರು ಕೂಡ ಸಂತೋಷದಿಂದ ದಿನ ಕಳೆಯುತ್ತಾರೆ.
ಪ್ರತಿ ಮಗುವು ಮುಗ್ಧತೆ, ಕ್ಷಮಾಗುಣ, ಸ್ನೇಹ, ಕಾಳಜಿ, ಕ್ರಿಯಾಶೀಲತೆ ಮತ್ತು ಅಪರಿಮಿತ ಪ್ರೀತಿಯ ಪ್ರತೀಕವಾಗಿರುತ್ತಾರೆ. ಒಂದು ಮಗು ಕನಸು ಕಂಡರೆ ಅದರಿಂದಾಗಿ ಇಡೀ ರಾಜ್ಯವು ಪ್ರಗತಿ ಕಾಣುತ್ತದೆ ಹಾಗಾಗಿ ಶಿಕ್ಷಕರು ಹಾಗೂ ಪೋಷಕರು ಮಕ್ಕಳ ಮನಸ್ಸಿನಲ್ಲಿ ಒಳ್ಳೆಯ ಭಾವನೆಗಳನ್ನು ಬಿತ್ತಬೇಕು, ಭವಿಷ್ಯದ ಬಗ್ಗೆ ಕನಸುನ್ನು ಕಾಣುವಂತೆ ಪೋತ್ಸಹಿಸಬೇಕು.
ಪ್ರತಿಯೊಬ್ಬರೊಳಗೂ ಒಂದು ಮಗುವಿನ ಮನಸ್ಸಿರುತ್ತದೆ ಅದನ್ನು ಎಂದಿಗೂ ಸಾಯುವುದಕ್ಕಾಗಲಿ, ಖಿನ್ನವಾಗುವುದಕ್ಕಾಗಲಿ ಬಿಡಬಾರದು. ಮಕ್ಕಳಂತ ಮನಸ್ಸಿರುವುದರಿಂದ ಯಾವಾಗಲೂ ಖುಷಿಯಿಂದ ಇರಬಹುದು. ಮಕ್ಕಳೊಂದಿಗೆ ಮಕ್ಕಳಾಗಿ ಇರಬೇಕು ಆಗ ನೋಡುವ ಪ್ರಪಂಚ ಇನ್ನಷ್ಟು ಸುಂದರವಾಗಿ ಕಾಣುತ್ತದೆ.
ರಮ್ಯ.ಬಿ
ಎಂ.ಜಿ.ಎಂ.ಕಾಲೇಜು
ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ
ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.