ಮಕ್ಕಳ ದಿನಾಚರಣೆ; ಮಕ್ಕಳೇ ಮನೆಯ ಮಾಣಿಕ್ಯ, ಮಕ್ಕಳೇ ದೇಶದ ಸಂಪತ್ತು


Team Udayavani, Nov 13, 2019, 5:00 PM IST

Child-day-02

ಮುದ್ದು ಪುಟಾಣಿಗಳೇ, ನನಗೆ ಸರಿಯಾಗಿ ನೆನಪಿದೆ.. ನಾವು ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದಾಗ ನವೆಂಬರ್ ಬಂತೆಂದರೆ ಕನ್ನಡ ರಾಜ್ಯೋತ್ಸವದ ತಯಾರಿ. ಇದನ್ನೆಲ್ಲ ಮುಗಿಸಿ ಪ್ರೌಢ ಶಿಕ್ಷಣ ಅಂತ ಹೊರಟಾಗ ಇದರ ಆಚರಣೆಯೇ ಬೇರೆ ರೀತಿ. ಶಿಕ್ಷಕರು ಎಲ್ಲರೂ ಸೇರಿ ಅದೂ ಇದೂ ಅಂತ ಆಟಗಳನ್ನಾಡಿಸಿ ಏನೋ ಒಂದು ಸಿಹಿ ಹಂಚಿ ಒಂದು ಸಭೆ ಮಾಡುತ್ತಿದ್ದರು. ಏನೊ ಒಂದಷ್ಟು ಮಾಡೋವಾಗ ಆಸಕ್ತಿ ಇದ್ದ ನಾಲ್ಕಾರು ಜನ ಅಲ್ಲೇ ಇರ್ತಿದ್ರು. ಆಗ ನಮಗೆ ಅದರಲ್ಲಿ ಆಸಕ್ತಿ ಇರಲಿಲ್ಲ. ನಮ್ಮದೇ ಬೇರೆಯ ಪ್ರಪಂಚ.

ನನಗೆ ಮಕ್ಕಳೊಂದಿಗೆ ಒಡನಾಟ ತುಂಬಾನೇ ಇಷ್ಟ. ಮಕ್ಕಳೊಂದಿಗೆ ಮಾತುಕತೆ, ನಗುನಗುತ್ತಾ ಸಮಯ ಕಳೆಯೋದು, ಆಟವಾಡುವುದು… ನನಗಿಷ್ಟ. ಮಕ್ಕಳ ಜೊತೆಗಿದ್ದರೆ ಒಂದು ಕ್ಷಣ ನಾನೊಬ್ಬಳು ಹಿರಿ ವಯಸ್ಸಿನವಳು ಎಂಬುದನ್ನು ಮರೆತೇ ಬಿಡುತ್ತೇನೆ, ನನ್ನ ಬಾಲ್ಯದ ದಿನಗಳು ಎಂದೋ ಕಳೆದಿವೆ ಎನ್ನುವ ಪರಿವೆಯೂ ಇರುವುದಿಲ್ಲ. ಕಿರಿಯರಿಗೆ ಉಪದೇಶ ಮತ್ತು ಸಲಹೆ ನೀಡುವುದೇ ಹಿರಿಯರ ಅಭ್ಯಾಸ. ನನಗಿನ್ನೂ ನೆನಪಿದೆ, ಪುಟ್ಟ ಹುಡುಗಿಯಾಗಿದ್ದಾಗ ನನಗೂ ಇಂಥ ಉಪದೇಶಗಳೆಂದರೆ ಕಿರಿಕಿರಿ.

ಇತರರ ಮಾತುಗಳನ್ನು ಆಲಿಸಿದಾಗಲೆಲ್ಲಾ ನಾನೊಬ್ಬಳು ಜ್ಞಾನಿ, ಬುದ್ಧಿವಂತೆ ಹಾಗೂ ಪ್ರಮುಖ ವ್ಯಕ್ತಿಯಾಗುವ ಕನಸು ಕಾಣುತ್ತಿದ್ದೆ. ಸುತ್ತ ಮುತ್ತಲಿನ ಈ ಅಭೂತಪೂರ್ವ ಸೌಂದರ್ಯ… ಎಲ್ಲವನ್ನೂ ಮರೆಯುವ ನಾವು ಅಥವಾ ನಮ್ಮ ಹಿರಿಯರು ನಮ್ಮದೇ ವಾದ ವಿವಾದ ಮಂಡಿಸುತ್ತಾ ಕಾಲಹರಣ ಮಾಡಿ ಸ್ವಂತಿಕೆಯನ್ನೇ ಕಳೆದುಕೊಳ್ಳುತ್ತಿದ್ದೇವೆ. ಆದರೆ ನನಗೆ ಗೊತ್ತು. ನೀವೆಲ್ಲಾ ತುಂಬಾ ಬುದ್ಧಿವಂತರು, ನಿಮ್ಮ ಕಣ್ಣು ಮತ್ತು ಕಿವಿಗಳು ಜಗತ್ತಿನ ಸೌಂದರ್ಯ ಮತ್ತು ಸುತ್ತಲಿನ ಬದುಕನ್ನು ಆಸ್ವಾದಿಸಲು ತೆರೆದೇ ಇರುತ್ತದೆ.

” ಒಂದು ಸುಂದರ ಹೂವನ್ನು ಅದರ ನಾಮಧೆಯದಿಂದ ಗುರುತಿಸುವಿರಾ ಅಥವಾ ಹಕ್ಕಿಯೊಂದು ಹಾಡುತ್ತಿದ್ದರೆ ಆ ಹಕ್ಕಿಯ ಹೆಸರು ಹೇಳಬಲ್ಲಿರಾ? ಅವುಗಳೊಂದಿಗೆ ಅದೆಷ್ಟು ಸರಳವಾಗಿ ಸ್ನೇಹ ಬೆಳೆಸುತ್ತೀರಿ”ಅಥವಾ ಒಂದಿಷ್ಟು ಪ್ರೀತಿಯಿಂದ ಬಳಿ ಸರಿದರೆ ಸಾಕು ಪ್ರಕೃತಿಯ ಪ್ರತಿ ಜೀವ ಜಂತುಗಳೂ ನಿಮ್ಮ ಒಡನಾಡಿಯಾಗಬಲ್ಲವು.

ಮಕ್ಕಳು ಜೊತೆಯಾಗಿ ಆಡುತ್ತಾರೆ, ಜೊತೆಯಾಗಿ ನಲಿಯುತ್ತಾರೆ ಮತ್ತು ಕೆಲಸ ಮಾಡುತ್ತಾರೆ. ಪುಟಾಣಿಗಳೇ, ನಮ್ಮ ನಿಮ್ಮ ನಡುವೆ ಒಬ್ಬ ಮಹಾನ್ ವ್ಯಕ್ತಿ ಇದ್ದಾರೆಂಬುವುದು ನಿಮಗೂ ಗೊತ್ತಲ್ಲ? ಅವರೇ ರಾಷ್ಟ್ರಪಿತ ಮಹಾತ್ಮಗಾಂಧಿ. ಇವರನ್ನು ನಾವು ಪ್ರೀತಿಯಿಂದ ಬಾಪೂಜಿ ಎನ್ನುತ್ತೇವೆ. ಅವರೊಬ್ಬ ಮಹಾನ್ ಜ್ಞಾನಿ. ಆದರೆ ಅವರೆಂದೂ ತಮ್ಮ ಬುದ್ದಿವಂತಿಕೆಯನ್ನು ಪ್ರದರ್ಶಿಸಿಲ್ಲ. ಬಲು ಸರಳ ಮತ್ತು ಮಕ್ಕಳಂಥ ಮುಗ್ಧ ಮನಸ್ಸು ಅವರದು. ಮಕ್ಕಳನ್ನು ತುಂಬಾ ಪ್ರೀತಿಸುತ್ತಿದ್ದರು. ಎಷ್ಟೋ ಬಾರಿ, ನಗುನಗುತ್ತಲೇ ಜಗತ್ತನ್ನು ಎದುರಿಸಲು ಸಿದ್ಧರಾಗಿ ಎಂಬ ನೀತಿಪಾಠವನ್ನು ನಮಗೆ ಬೋಧಿಸುತ್ತಿದ್ದರು.

*ಸಾನಿಯಾ. ಆರ್. ಶಿವಮೊಗ್ಗ

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Kannada: ಅಂತರ್ಜಾಲದಲ್ಲಿ ಕನ್ನಡದ ಕುಸುಮ ಮತ್ತಷ್ಟು ಅರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.