Education ವಿದ್ಯಾರ್ಥಿನಿಯರ ಪ್ರಮಾಣ ಶೇ.31 ಹೆಚ್ಚಳ
Team Udayavani, Dec 25, 2023, 5:37 AM IST
ದೇಶದಲ್ಲಿ ಸದ್ಯ 30 ಕೋಟಿಗೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ನಿರತರಾಗಿದ್ದು ಈ ಪೈಕಿ 26 ಕೋಟಿ ವಿದ್ಯಾರ್ಥಿಗಳು 0-12ರ ವರೆಗಿನ ತರಗತಿಗಳಲ್ಲಿ ಶಿಕ್ಷಣ ಪಡೆಯುತ್ತಿದ್ದರೆ, 4 ಕೋಟಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಭ್ಯಸಿಸುತ್ತಿದ್ದಾರೆ.
ವಿದ್ಯಾರ್ಥಿನಿಯರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ
2014-15 ಶೈಕ್ಷಣಿಕ ವರ್ಷದಿಂದೀಚೆಗೆ ದೇಶದಲ್ಲಿ ಶಾಲೆಗಳಿಗೆ ತೆರಳುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳ ದಾಖಲಾಗಿದೆ. ಕಳೆದ 9 ವರ್ಷಗಳಲ್ಲಿ ಶೇ. 31ರಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಾಲಕಿಯರು ಶಾಲಾಕಾಲೇಜುಗಳಿಗೆ ದಾಖಲಾಗಿ ಶಿಕ್ಷಣ ಪಡೆಯುತ್ತಿದ್ದಾರೆ. ಅಲ್ಪಸಂಖ್ಯಾಕ ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರ ಸಂಖ್ಯೆಯಲ್ಲೂ ಶೇ. 45ರಷ್ಟು ಹೆಚ್ಚಳ ದಾಖಲಾಗಿದೆ.
ಕೇಂದ್ರದ ಉಪಕ್ರಮಗಳ ಫಲಶ್ರುತಿ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ವಿವಿಧ ಯೋಜನೆ, ಅಭಿಯಾನಗಳನ್ನು ಜಾರಿಗೊಳಿಸಿದ್ದರ ಫಲಶ್ರುತಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬಾಲಕಿಯರು ವಿವಿಧ ಹಂತಗಳಲ್ಲಿ ಶಿಕ್ಷಣ ಪಡೆಯಲು ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ.
ಪ್ರಗತಿಪಥದಲ್ಲಿ ಶಿಕ್ಷಣ ಕ್ಷೇತ್ರ
ಶಿಕ್ಷಣ ಪಡೆಯುತ್ತಿರುವ ಎಸ್‌ಸಿ ವಿದ್ಯಾರ್ಥಿನಿಯರ ಪ್ರಮಾಣ ಶೇ. 50ರಷ್ಟಿದೆ.
ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಕ್ರಮವಾಗಿ
ಶೇ. 44 ಮತ್ತು ಶೇ. 65ರಷ್ಟಿದೆ.
ಇತರ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳ ಸಂಖ್ಯೆಯಲ್ಲೂ ಏರಿಕೆ.
ಕೇಂದ್ರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಜಾರಿಗೊಳಿಸಿದ ಬಳಿಕ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಸುಧಾರಣೆಗಳು ಕಂಡುಬಂದಿವೆ. ಮುಂದಿನ ಮೂರು ವರ್ಷಗಳಲ್ಲಿ ದೇಶದ ಶಿಕ್ಷಣ ಕ್ಷೇತ್ರ ಮಹತ್ವದ ಪ್ರಗತಿಯನ್ನು ಕಾಣುವ ನಿರೀಕ್ಷೆ ಇದೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಉನ್ನತ ಶಿಕ್ಷಣದತ್ತಲೂ ಹೆಚ್ಚುತ್ತಿದೆ ವಿದ್ಯಾರ್ಥಿಗಳ ಆಸಕ್ತಿ
ಕಳೆದ 9 ವರ್ಷಗಳ ಅವಧಿಯಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲೂ ಶೇ.20-25ರಷ್ಟು ಹೆಚ್ಚಳ ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.