ಇಪಿಎಫ್ ವಾಟ್ಸ್ ಆ್ಯಪ್ ಸಹಾಯವಾಣಿ
ನೌಕರರ ಭವಿಷ್ಯನಿಧಿ ಖಾತೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರ ಸುಲಭ
Team Udayavani, Oct 27, 2020, 5:33 AM IST
ದೇಶದಲ್ಲಿ ಸಂಬಳ ಪಡೆಯುವ ವರ್ಗವು ಈಗ ತಮ್ಮ ಭವಿಷ್ಯ ನಿಧಿ (ಪಿಎಫ್) ಖಾತೆಗಳಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ, ಗೊಂದಲಗಳನ್ನು ವಾಟ್ಸ್‌ಆ್ಯಪ್ ಸಹಾಯವಾಣಿ ಮೂಲಕ ಸರಳವಾಗಿ ಮತ್ತು ತ್ವರಿತವಾಗಿ ಪರಿಹರಿಸಿಕೊಳ್ಳಬಹುದಾಗಿದೆ. ಸಹಾಯವಾಣಿಯು ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಪ್ರಾದೇಶಿಕ ಕಚೇರಿಗಳೊಂದಿಗೆ ಸಂಪರ್ಕಿಸುತ್ತದೆ. ಕೋವಿಡ್ ಸಾಂಕ್ರಾಮಿಕದ ಅನಂತರ ಚಂದಾದಾರರಿಗೆ ತಡೆ ರಹಿತ ಮತ್ತು ಸುಲಲಿತ ಸೇವೆ ಒದಗಿಸುವ ಸಲುವಾಗಿ ಇಪಿಎಫ್ಒ ವಾಟ್ಸ್ ಆ್ಯಪ್ ಆಧಾರಿತ ಸಹಾಯವಾಣಿ ಹಾಗೂ ಕುಂದುಕೊರತೆ ಪರಿಹಾರ ಕಾರ್ಯ ವಿಧಾನವನ್ನು ಪ್ರಾರಂಭಿಸಿದೆ. ಈ ಸೌಲಭ್ಯದ ಮೂಲಕ ಇದುವರೆಗೆ ಇಪಿಎಫ್ಗೆ ಸಂಬಂಧಪಟ್ಟ 1,64,040ಕ್ಕೂ ಹೆಚ್ಚು ಅಹವಾಲುಗಳನ್ನು ಮತ್ತು ಪ್ರಶ್ನೆಗಳನ್ನು ಪರಿಹರಿಸಿದೆ ಎಂದು ಇಪಿಎಫ್ಒ ತಿಳಿಸಿದೆ. ಅದರ ಪ್ರಕ್ರಿಯೆಗೆ ತ್ವರಿತ ಮಾರ್ಗದರ್ಶಿ ಇಲ್ಲಿದೆ.
ದೇಶಾದ್ಯಂತ ಕಾರ್ಯಾಚರಣೆ
ಇಪಿಎಫ್ಒನ ಎಲ್ಲ 138 ಪ್ರಾದೇಶಿಕ ಕಚೇರಿಗಳು ಈಗ ತಮ್ಮದೇ ಆದ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಯನ್ನು ಹೊಂದಿವೆ. ಎಲ್ಲ ಪ್ರಾದೇಶಿಕ ಕಚೇರಿಗಳ ಮೀಸಲಾದ ಸಹಾಯವಾಣಿ ಸಂಖ್ಯೆಗಳ ಪಟ್ಟಿಯನ್ನು ಪಡೆಯಲು, ಇಪಿಎಫ್ಒ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: https://www.epfindia.gov.in/site‰docs/PDFs/Downloads‰PDFs/WhatsApp‰Helpline.pdfa
ಚಂದಾದಾರರು ಹೇಗೆ ಪ್ರಶ್ನೆ ಕೇಳಬಹುದು?
ಪಿಎಫ್ ಖಾತೆಯನ್ನು ನಿರ್ವಹಿಸುವ ಸಂಬಂಧಪಟ್ಟ ಪ್ರಾದೇಶಿಕ ಕಚೇರಿಯ ಸಹಾಯವಾಣಿ ಸಂಖ್ಯೆಗೆ ವಾಟ್ಸ್‌ಆ್ಯಪ್ ಸಂದೇಶವನ್ನು ಕಳುಹಿಸುವ ಮೂಲಕ ಯಾವುದೇ ಚಂದಾದಾರರು ಇಪಿಎಫ್ಒ ಒದಗಿಸುವ ಸೇವೆಗಳಿಗೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳನ್ನು ಕೇಳಬಹುದು. ಜತೆಗೆ ಮಾರ್ಗ ದರ್ಶನವನ್ನು ಪಡೆಯಬಹುದು. ಚಂದಾದಾರರ ಕುಂದು ಕೊರತೆಗಳಿಗೆ ತ್ವರಿತ ಪರಿಹಾರವನ್ನು ಒದಗಿಸಿಕೊಡಲು ಮತ್ತು ವಾಟ್ಸ್ ಆ್ಯಪ್‌ನಲ್ಲಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಲು ಪ್ರತೀ ಪ್ರಾದೇಶಿಕ ಕಚೇರಿಯಲ್ಲೂ ಇದಕ್ಕೆಂದೇ ತಜ್ಞರ ತಂಡವನ್ನು ನೇಮಿಸಲಾಗಿದೆ.
ಇತರ ವ್ಯವಸ್ಥೆಗಳು
ವಾಟ್ಸ್‌ಆ್ಯಪ್ ಸೌಲಭ್ಯದ ಹೊರತಾಗಿ ಇಪಿಎಫ್ಒನ ಕುಂದುಕೊರತೆ ಪರಿಹಾರ ವೇದಿಕೆಗಳಲ್ಲಿ ವೆಬ್ ಆಧಾರಿತ ಇಪಿಎಫ್ಐಜಿಎಂಎಸ್ ಪೋರ್ಟಲ್ (EPFiGMS), ಸಿಪಿಜಿಆರ್‌ಎಎಂಎಸ್(CPGRAMS), ಸೋಷಿಯಲ್ ಮೀಡಿಯಾ (ಫೇಸ್‌ಬುಕ್ ಮತ್ತು ಟ್ವಿಟರ್) ಮತ್ತು ಮೀಸಲಾದ 24/7 ಕಾಲ್ ಸೆಂಟರ್‌ಗಳನ್ನು ಸಂಪರ್ಕಿಸಬಹುದಾಗಿದೆ.
ಚಂದಾದಾರರು ಯಾವ ಮಾಹಿತಿ ನೀಡಬೇಕು?
ವಾಟ್ಸ್ ಆ್ಯಪ್‌ನಲ್ಲಿ ಪ್ರಶ್ನೆಯನ್ನು ಕೇಳುವ ಸಂದರ್ಭದಲ್ಲಿ ಚಂದಾದಾರರು ತಮ್ಮ ಯುನಿವರ್ಸಲ್ ಖಾತೆ ಸಂಖ್ಯೆ (ಯುಎಎನ್)ಅನ್ನು ನಮೂದಿಸುವುದು ಕಡ್ಡಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.