ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆ ಪರೀಕ್ಷೆ ಎದುರಿಸಲು ಸಿದ್ಧರಾಗಿ
Team Udayavani, Jul 9, 2021, 6:20 AM IST
ಪೊಲೀಸ್ ಕಾನ್‌ಸ್ಟೆಬಲ್ (ಪುರುಷ-ಮಹಿಳೆ) ಹುದ್ದೆಗಳ ಆಯ್ಕೆಗೆ ಲಿಖೀತ ಪರೀಕ್ಷೆಯು ಕನ್ನಡ ಮತ್ತು ಆಂಗ್ಲಭಾಷೆ ಯಲ್ಲಿ ನಡೆಯಲಿದೆ. ಪರೀಕ್ಷೆಯಲ್ಲಿ 100 ಅಂಕಗಳಿಗೆ ಆಬೆjಕ್ಟಿವ್ ಮಾದರಿಯ ಪ್ರಶ್ನೆಗಳನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಪೈಕಿ ಯಾವುದಾದರೂ ಒಂದು ಭಾಷೆಯಲ್ಲಿ ಉತ್ತರಿಸಬಹುದು. ಪ್ರಶ್ನೆ ಪತ್ರಿಕೆಯಲ್ಲಿ ಒಟ್ಟು 100 ಪ್ರಶ್ನೆ ಇರಲಿದ್ದು, ಒಂದು ಸರಿ ಉತ್ತರಕ್ಕೆ 1 ಅಂಕ ನೀಡಲಾಗುತ್ತದೆ. 1 ತಪ್ಪು ಉತ್ತರಕ್ಕೆ 0.25 ಅಂಕ ಕಳೆಯಲಾಗುತ್ತದೆ. ಪರೀಕ್ಷೆಯ ಅವಧಿ 1 ಗಂಟೆ 30 ನಿಮಿಷ ಇರುತ್ತದೆ.
ವಿದ್ಯಾರ್ಹತೆ: ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಪಿಯುಸಿ ಉತ್ತೀರ್ಣರಾಗಿರಬೇಕು. ಸಾಮಾನ್ಯ ವರ್ಗದವರಿಗೆ 19-25 ವರ್ಷ, ಪರಿಶಿಷ್ಟ ಜಾತಿ/ ಪಂಗಡದವರಿಗೆ 19-27 ವರ್ಷ ಮತ್ತು ಬುಡಕಟ್ಟು ಜನಾಂಗದವರಿಗೆ 19-30 ವರ್ಷವೆಂದು ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಮೆಂಟಲ್ ಎಬಿಲಿಟಿ :
ಸಾಮಾನ್ಯ ಜ್ಞಾನ ಹೊರತುಪಡಿಸಿ ಸುಲಭವಾಗಿ ಅಂಕಗಳನ್ನು ಗಳಿಸ ಬಹುದಾದ ವಿಭಾಗ ಮೆಂಟಲ್ ಎಬಿಲಿಟಿ ಪ್ರಶ್ನೆಗಳದ್ದು. ದಿನವೂ ಕನಿಷ್ಠ 5 ಮಾದ ರಿಯ 10 ಪ್ರಶ್ನೆಗಳನ್ನಾದರೂ ಬಿಡಿಸುತ್ತಾ ಬಂದರೆ, ಪರೀಕ್ಷೆಯಲ್ಲಿ ಹೆಚ್ಚಿನ ಯಶಸ್ಸು ಪಡೆಯಲು ಸಾಧ್ಯ.
ಜು.12 ಕೊನೇ ದಿನ :
ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಕೆಗೆ 12-07-21 ಕೊನೇ ದಿನ. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಗೆ 14-07- 21 ಕೊನೇ ದಿನವಾಗಿದೆ. ಪರೀಕ್ಷೆ ನಡೆಯುವ ದಿನಾಂಕವನ್ನು ಪೊಲೀಸ್ ಇಲಾಖೆ ವೆಬ್ ಸೈಟ್ https://recruitment.ksp.gov.in ನಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ ಅನ್ನು ದಿನವೂ ನೋಡಲು ತಿಳಿಸಲಾಗಿದೆ. ಲಿಖೀತ ಪರೀಕ್ಷೆ ದಿನಾಂಕ, ಸಮಯ ಮತ್ತು ಸ್ಥಳದ ವಿವರ ಹೊಂದಿದ ಪ್ರವೇಶ ಕರೆ ಪತ್ರವನ್ನು ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಅಂಚೆ ಮೂಲಕ ಕಳುಹಿಸಲಾಗುವುದಿಲ್ಲ. ಹೀಗಾಗಿ ಲಿಖೀತ ಪರೀಕ್ಷೆಯ ಕರೆ ಪತ್ರವನ್ನು https://recruitment.ksp.gov.in ವೆಬ್ ಸೈಟ್ ನಿಂದ ಪಡೆದುಕೊಳ್ಳಬೇಕು.
ಲಿಖಿತ ಪರೀಕ್ಷೆಯ ಪಠ್ಯಕ್ರಮ :
ಸಾಮಾನ್ಯ ಜ್ಞಾನ, ಭಾರತ ಸಂವಿಧಾನ, ಇತಿಹಾಸ – ಭಾರತ ಮತ್ತು ಕರ್ನಾಟಕ, ಭೂಗೋಳ – ಭಾರತ ಮತ್ತು ಕರ್ನಾ ಟಕ, ವಿಜ್ಞಾನ ಮತ್ತು ತಂತ್ರಜ್ಞಾನ, ಭಾರ ತದ ಸ್ವಾತಂತ್ರ್ಯ ಸಂಗ್ರಾಮ, ಭಾರತದ ಆಡಳಿತ. ಅರ್ಥಶಾಸ್ತ್ರ, ನೀತಿ ಶಿಕ್ಷಣ, ಪ್ರಚಲಿತ ವಿದ್ಯಮಾನಗಳು- ಈ ವಿಷಯಗಳಿಗೆ ಸಂಬಂಧಿಸಿದ ಪಠ್ಯಕ್ರಮ ವನ್ನು ಲಿಖೀತ ಪರೀಕ್ಷೆ ಹೊಂದಿರುತ್ತದೆ.
ಯಶಸ್ಸು ಗಳಿಸಲು ಹೀಗೆ ಮಾಡಿ :
5-6 ವರ್ಷಗಳ ಹಿಂದಿನ ಪೊಲೀಸ್ ಕಾನ್‌ಸ್ಟೆàಬಲ್ ಹುದ್ದೆಗಳಿಗೆ ನಡೆದ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಇಟ್ಟುಕೊಂಡು ಅದರ ಪ್ರಕಾರವೇ ಅಭ್ಯಾಸ ಮಾಡಿದರೆ ಯಶಸ್ಸು ಪಡೆಯಲು ಸಾಧ್ಯ. ಕೆಲವೊಮ್ಮೆ 2-3 ವರ್ಷಗಳ ಹಿಂದಿನ ಪ್ರಶ್ನೆಗಳು ರಿಪೀಟ್ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವುದು ಅಗತ್ಯ. ದಿನವೂ ತಪ್ಪದೆ ಪೇಪರ್ ಓದುವ ಮೂಲಕ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅಪ್‌ಡೇಟ್ ಆಗುತ್ತಿರಿ. ಕನ್ನಡ, ವಿಜ್ಞಾನ, ಸಮಾಜ ವಿಜ್ಞಾನದಲ್ಲಿ ಹೆಚ್ಚಿನ ಜ್ಞಾನ ಸಂಪಾದನೆಗೆ 6ನೇ ತರಗತಿಯಿಂದ 10ನೇ ತರಗತಿವರೆಗಿನ ಶಾಲಾ ಪಠ್ಯ ಪುಸ್ತಕಗಳನ್ನು ಓದಬೇಕು. ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗೆ ನಡೆಯುವ ಪರೀಕ್ಷೆಯಲ್ಲಿ ಯಶಸ್ಸು ಪಡೆಯುವುದು ಹೇಗೆಂದು ವಿವರಿಸುವ ಗೈಡ್‌ಗಳು, ಪ್ರಶ್ನೆ ಪತ್ರಿಕೆಗಳ ಸೆಟ್‌ಗಳು ಸಿಗುತ್ತವೆ. ಅವನ್ನು ಓದಿ. ಈಗಾಗಲೇ ಪೊಲೀಸ್ ಆಗಿರುವ ಸ್ನೇಹಿತರು ಇದ್ದರೆ ಅವರಿಂದ ಅಥವಾ ತರಬೇತಿ ಕೇಂದ್ರಗಳಲ್ಲಿ ಓದುತ್ತಿರುವ ಸ್ನೇಹಿತರೊಂದಿಗೆ ಚರ್ಚಿಸಿ ಸಲಹೆ ಪಡೆದುಕೊಳ್ಳಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.