ಬಡ ವಿದ್ಯಾರ್ಥಿಗಳಿಗೂ ದುಬಾರಿಯಲ್ಲದ ಕೋರ್ಸ್‌


Team Udayavani, Sep 7, 2021, 6:10 AM IST

ಬಡ ವಿದ್ಯಾರ್ಥಿಗಳಿಗೂ ದುಬಾರಿಯಲ್ಲದ ಕೋರ್ಸ್‌

ವೃತ್ತಿಪರ ಶಿಕ್ಷಣ ಬರಿ ಹಣವಂತರಿಗೆ ಮಾತ್ರವಲ್ಲ. ಬಡವರ್ಗ ದವರೂ ಇಂಥ ವಿವಿಧ ಕೋರ್ಸ್‌ಗಳಿಗೆ ದಾಖಲಾಗಬಹುದು. ಕುರಿತು ಇಲ್ಲಿದೆ ಮಾಹಿತಿ.

ಮಧ್ಯಮ ವರ್ಗದ, ಬಡ ಕುಟುಂಬಗಳ ಪ್ರತಿಭಾವಂತ, ಆಸಕ್ತ ವಿದ್ಯಾರ್ಥಿಗಳಿಗಾಗಿ ಮೆಡಿಕಲ್‌, ಎಂಜಿನಿಯರಿಂಗ್‌ನಂಥ ಇನ್ನೂ ಅನೇಕ ಉತ್ತಮ ಕೋರ್ಸುಗಳಿವೆ. ಅಂದರೆ ಹೋಟೆಲ್‌ ಮ್ಯಾನೇಜೆ¾ಂಟ್‌ ಪ್ಯಾರಾಮೆಡಿಕಲ್‌ ಸಿನೆಮಾಟೋಗ್ರಫಿ, ಅನಿಮೇಶನ್‌ ತಂತ್ರಜ್ಞಾನ, ಲ್ಯಾಬ್‌ ಟೆಕ್ನಿಶಿಯನ್‌ ಅಲ್ಲದೆ ಇನ್ನಿತರ ವೃತ್ತಿ ಶಿಕ್ಷಣ ಕೋರ್ಸುಗಳಿವೆ. ಇವುಗಳ ಫೀಸೂ ದುಬಾರಿಯಲ್ಲ ಹಾಗೂ ಕೋರ್ಸ್‌ ಮುಗಿಸಿದ ನಂತರ ಖಾಸಗಿ, ಸರಕಾರಿ ಕ್ಷೇತ್ರಗಳಲ್ಲಿ ವಿಫ‌ುಲ ಉದ್ಯೋಗಾವಕಾಶಗಳಿವೆ.  ನಾಯಿ ಕೊಡೆಗಳಂತೆ ತಲೆ ಎತ್ತಿರುವ ಎಂಜಿನಿಯರಿಂಗ್‌ ಹಾಗೂ ಮೆಡಿಕಲ್‌ ಕಾಲೇಜುಗಳಿಂದ ಪ್ರತೀ ವರ್ಷ ಸಾವಿರಾರು ಪದವೀಧರರು ಹೊರಬರುತ್ತಾರೆ.  ಅವರಲ್ಲಿ ಉತ್ತಮ ಶ್ರೇಣಿಗಳಲ್ಲಿ ಹೊರ ಬರುವವರಿಗೆ ಮಾತ್ರ ಯಶಸ್ಸು ಸಾಧ್ಯ.ಇಲ್ಲ ಇನ್ನೂ ಉನ್ನತ ವಿದ್ಯಾಭ್ಯಾಸ ಪಡೆಯಬೇಕಾಗಬಹುದು.

ಪಾಲಿಟೆಕ್ನಿಕ್‌ ಡಿಪ್ಲೊಮಾ :

ಶಿಕ್ಷಣ ಪಡೆದ ತಕ್ಷಣ ಉದ್ಯೋಗ ಸಿಗಬೇಕು. ಅಂತಹ ಶಿಕ್ಷಣ ವನ್ನು ನಾವು ಪಡೆಯುತ್ತೇವೆ ಎಂದು ಆಶಿಸುವ ವಿದ್ಯಾರ್ಥಿ ಗಳಿಗೆ ಉನ್ನತ ಶಿಕ್ಷಣ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಉದ್ಯೋಗ ಮಾರುಕಟ್ಟೆ ಹಾಗೂ ಕೈಗಾರಿಕೆಗಳ ಬೇಡಿಕೆ ಗಳಿಗೆ ತಕ್ಕಂತೆ ಮಾನವ ಸಂಪನ್ಮೂಲವನ್ನು ಒದಗಿಸುವ ಉದ್ದೇಶದಿಂದ ಬಹುದೊಡ್ಡ ತೀರ್ಮಾನವನ್ನು ರಾಜ್ಯ ಸರಕಾರ ತೆಗೆದುಕೊಂಡಿದೆ. ಎಂಟು ಹೊಸ ಡಿಪ್ಲೊಮಾ ಕೋರ್ಸ್‌ಗಳನ್ನು ಡಿಪ್ಲೊಮಾ ಇಂಜಿನಿಯರಿಂಗ್‌ನಲ್ಲಿ ಸೇರಿಸುವ ಮೂಲಕ ಡಿಪ್ಲೊಮಾ ಕಲಿಯಲು ಬಯಸುವ ವಿದ್ಯಾರ್ಥಿಗಳಿಗೆ ಸಂತಸ ಕೊಟ್ಟಿದೆ.

ಈಗಾಗಲೇ ಡಿಪ್ಲೊಮಾ ಇಂಜಿನಿಯರಿಂಗ್ನಲ್ಲಿ ಇರುವ ಕೋರ್ಸ್‌ ಗಳೊಂದಿಗೆ ಇವು ಹೊಸದಾಗಿ ಸೇರಲಿವೆ. ರಾಜ್ಯದಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿಸುವುದು, ಕೈಗಾರಿಕೆಗಳಿಗೆ ಉತ್ಕೃಷ್ಟ ಮಾನವ ಸಂಪನ್ಮೂಲ ಒದಗಿಸುವುದೇ ಹೊಸ ಕೋರ್ಸುಗಳ ಗುರಿಯಾಗಿದೆ. ಸಾಮಾನ್ಯವಾಗಿ ದ್ವಿತೀಯ ಪಿಯುಸಿ ಮುಗಿದ ಬಳಿಕ ವಿದ್ಯಾರ್ಥಿಗಳು ಡಿಪ್ಲೊಮಾ ಕೋರ್ಸ್‌ಗೆ ಸೇರಿಕೊಳ್ಳುತ್ತಾರೆ. ಪಿಯುಸಿಯಲ್ಲಿ ಅನುತ್ತೀರ್ಣ ರಾದವರೂ ಡಿಪ್ಲೊಮಾ ಸೇರುವ ಮೂಲಕ ಮತ್ತೆ ಇಂಜಿನಿಯರಿಂಗ್‌ ಪದವಿ ಪಡೆಯಲು ಅವಕಾಶವಾಗುತ್ತದೆ. ಆದರೆ ಬಿ.ಇ ಇಂಜನೀ ಯರಿಂಗ್‌ನಲ್ಲಿ ಇರುವಷ್ಟು ವಿಷಯಗಳು ಡಿಪ್ಲೊಮಾದಲ್ಲಿ ಇರಲಿಲ್ಲ. ಆ ಸಮಸ್ಯೆ ಪರಿಹರಿಸಲು ಸರಕಾರ ಮುಂದಾಗಿದೆ. ಡಿಪ್ಲೊಮಾದಲ್ಲಿ ಸದ್ಯ 33 ಕೋರ್ಸ್‌ಗಳು ಇವೆ. ಇವುಗಳಲ್ಲಿ ಹಳೆಯ, ಅಪ್ರಸ್ತುತ ಕೋರ್ಸುಗಳನ್ನು ಕೈಬಿಡಲಾಗಿದೆ. ಈಗಾಗಲೇ ಹೊಸ ಪಠ್ಯವನ್ನು ಅಳವಡಿಸಲಾಗಿದೆ. ಈಗ 21ನೇ ಶತಮಾನದ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಎಂಟು ಹೊಸ ಕೋರ್ಸ್‌ ಗಳನ್ನು ಈ ಶೈಕ್ಷಣಿಕ ವರ್ಷದಿಂದಲೇ (2021-22) ಆರಂಭಿಸ ಲಾಗುತ್ತಿದೆ. ಆಟೋ ಮೇಷನ್‌, ರೊಬಾಟಿಕ್ಸ್‌, ಸೈಬರ್‌ ಸೆಕ್ಯುರಿಟಿ, ಆರ್ಟಿಫಿಷಿಯಲ್‌ ಇಂಟೆಲಿಜೆ®Õ…ನಂತಹ ಉದಯೋನ್ಮುಖ ಕ್ಷೇತ್ರಗಳ ಕೌಶಲ ಕಲಿಸುವ ಎಂಟು ಹೊಸ ಕೋರ್ಸ್‌ಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆ ಆರಂಭಿಸಿದೆ.

ರಾಜ್ಯದ ವಿವಿಧ ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಈ ಕೋರ್ಸ್‌ಗಳು ಲಭ್ಯ ಇವೆ. ಇಂದಿನ ತಂತ್ರಜ್ಞಾನ ಯುಗಕ್ಕೆ ಸರಿ ಹೊಂದುವ ಮತ್ತು ಜಾಗತಿಕವಾಗಿ ರಾಜ್ಯದ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕವಾಗಿಸುವ ನಿಟ್ಟಿನಲ್ಲಿ ಈ ಕೋರ್ಸ್‌ಗಳು ಸಹಾಯಕ­ವಾಗಲಿದೆ. “ಸೈಬರ್‌ ಸೆಕ್ಯುರಿಟಿಯಲ್ಲಿ ಇಸ್ರೇಲ…, ಫಿಲ್ಡ… ಅಂಡ್‌ ಎಂಟರ್ಟೆçನ್ಮೆಂಟ್‌ನಲ್ಲಿ ಕೊರಿಯಾ ದೇಶಗಳ ಜಾಗತಿಕ ಮಟ್ಟದ ಸಾಧನೆ ಬೆರಗಾಗುವಂತಹದ್ದು. ಆ ದೇಶಗಳಿಗೆ ಹಲವು ಶತಕೋಟಿ ಡಾಲರ್‌ಗಳ ಆದಾಯ ಸಿಗುತ್ತಿದೆ. ನಮ್ಮ ರಾಜ್ಯದಲ್ಲೂ ಪ್ರತಿಭೆಗಳಿವೆ. ಸಾಂಪ್ರದಾಯಿಕ ಕೋರ್ಸ್‌ಗಳಿಗೆ ಪರ್ಯಾಯವಾಗಿ ಆಧುನಿಕ ಕೋರ್ಸ್‌ಗಳಲ್ಲಿ ಅವಕಾಶ ನೀಡಿದರೆ ಉದ್ಯೋಗವೂ ಸಿಗುತ್ತದೆ.

ಪಾಲಿಟೆಕ್ನಿಕ್‌ ಡಿಪ್ಲೊಮಾದಲ್ಲಿ ಸದ್ಯ 33 ಕೋರ್ಸ್‌ಗಳಿವೆ. ಇವುಗಳಲ್ಲಿ ಹಳೆಯ, ಅಪ್ರಸ್ತುತ ಕೋರ್ಸುಗಳನ್ನು ಕೈಬಿಡಲಾಗಿದೆ. ಈಗಾಗಲೇ ಹೊಸ ಪಠ್ಯವನ್ನು ಅಳವಡಿಸಲಾಗಿದೆ. ಈಗ 21ನೇ ಶತಮಾನದ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಎಂಟು ಹೊಸ ಕೋರ್ಸ್‌ಗಳನ್ನೂ ಈ ವರ್ಷದಿಂದಲೇ ಆರಂಭಿಸಲಾಗುತ್ತಿದೆ.

ಈ ನೂತನ ಕೋರ್ಸುಗಳನ್ನು ಗೌರಿಬಿದನೂರು, ಶಿರಾಳಕೊಪ್ಪ, ಕೂಡ್ಲಿಗಿ, ರಬಕವಿ ಬನಹಟ್ಟಿ, ಔರಾದ್‌ ಹಾಗೂ ಬೆಂಗಳೂರಿನ ಎಸ್‌.ಜೆ.ಪಾಲಿಟೆಕ್ನಿಕ್‌, ಚನ್ನಗಿರಿ, ಕೊಪ್ಪ, ಹೊನ್ನಾಳಿ, ಕಾಪು ಕಾಲೇಜುಗಳಲ್ಲಿ ಆರಂಭಿಸಲಾಗುತ್ತಿದೆ.

ನೂತನ ಕೋರ್ಸುಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ಹೊಸ ಪಠ್ಯಕ್ರಮದ ಪ್ರಕಾರ ಬೋಧನೆ ಮಾಡಲಾಗುತ್ತದೆ ಹಾಗೂ ಈ ಪಠ್ಯಕ್ರಮವು ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟು ಪ್ರಕಾರ ಸಿದ್ಧಪಡಿಸಲಾಗಿದೆ. ಜಾಗತಿಕ ಮಟ್ಟದಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗಲಿದೆ. ಡಿಪ್ಲೋಮಾ ಪಠ್ಯಕ್ರಮಗಳನ್ನು ಉದ್ಯಮಿಗಳು, ಶಿಕ್ಷಣ ತಜ್ಞರು ಮತ್ತು ಹಳೆಯ ವಿದ್ಯಾರ್ಥಿಗಳೊಂದಿಗೆ ವ್ಯಾಪಕ ಸಮಾಲೋಚನೆಯ ಅನಂತರ ಅಭಿವೃದ್ಧಿ ಗೊಳಿಸಲಾಗಿದೆ.

ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೂತನ ಕೋರ್ಸು­ಗಳಿಗೆ ನೇರ ಪ್ರವೇಶಾತಿ ಸಿಗಲಿದ್ದು, ಮೂರನೇ ವರ್ಷದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಇದೊಂದು ರೀತಿಯಲ್ಲಿ ವಿಶೇಷ ಕಲಿಕಾ ವಿಷಯವಾಗಿರುತ್ತದೆ. ಅಲ್ಲದೆ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಎರಡು ವರ್ಷದ ಡಿಪೋ›ಮಾ ಅನಂತರ ಮೂರನೇ ವರ್ಷದಲ್ಲಿ ಹೊಸ ರಾಷ್ಟೀಯ ಶಿಕ್ಷಣ ನೀತಿ ಅನುಸಾರ ತಮ್ಮ ಇಚ್ಛೆಗೆ ಅನುಗುಣವಾಗಿ ಓದಲು ಡಾಟಾ ಸೈನ್ಸ್‌, ಎಐ-ಎಂಎಲ…, ಪವರ್‌ ಎಂಜಿನಿಯರಿಂಗ್‌, ನವೀಕರಿಸಬಹುದಾದ ಇಂಧನ, ಇಂಡಸ್ಟ್ರಿಯಲ್‌ ಆಟೋ­ಮ್ಯಾಷನ್‌ ಹಾಗೂ ಕೈಗಾರಿಕಾ ವಿದ್ಯುತ್‌ ಎಂಜಿನಿಯರಿಂಗ್‌, ಸುಸ್ಥಿರ ನಿರ್ಮಿತ ಪರಿಸರ, ಮೂಲಭೂತ ಎಂಜಿನಿಯರಿಂಗ್‌ ಸೇರಿ ಇನ್ನೂ ಹಲವಾರು ವಿಷಯ­ಗಳನ್ನು ಆಯ್ಕೆಯ ಅನು­ಸಾರ ಅಧ್ಯಯನ ಮಾಡಬಹುದಾಗಿದೆ.

ಅಲ್ಲದೇ ಸಂವಹನ ಕೌಶಲಗಳು, ಯೋಜನಾ ನಿರ್ವಹಣೆ ಕೌಶಲ­ಗಳು, ಸಾಮಾನ್ಯ ಮಾಹಿತಿ ತಂತ್ರ­ಜ್ಞಾನ ಕೌಶಲಗಳು, ಅಂಶಗಳು ಮತ್ತು ವಿಶ್ಲೇಷಣಾ ಅಂಕಿ ಕೌಶಲ­ಗಳು, ವಿದ್ಯುತ್‌ ಮತ್ತು ಎಲೆ­ಕ್ಟ್ರಾನಿಕ್ಸ್‌ನ ಮೂಲ­ಭೂತ ಕೌಶಲ­ಗಳನ್ನು ಕಲಿಸಲಾಗುತ್ತದೆ. ಈಗ ಆರಂಭಿಸುತ್ತಿ­ರುವ ಕೋರ್ಸ್‌ಗಳು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಅತ್ಯಂತ ದುಬಾರಿ ಕೋರ್ಸ್‌ಗಳಾ­ಗಿವೆ. ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲ­ವಾಗುತ್ತದೆ. ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಸರಕಾರವೇ ಶಿಷ್ಯ ವೇತನ ನೀಡುತ್ತದೆ. ಹಾಗೂ ಟ್ಯಾಬ್ಲೆಟ್‌ಗಳನ್ನು ವಿತರಿಸಲಾ­ಗುತ್ತದೆ. ಉತ್ತಮ ಗುಣಮಟ್ಟದ ಬೋಧನೆಯೂ ಇರುತ್ತದೆ. 2021-22 ನೇ ಸಾಲಿಗೆ ರಾಜ್ಯದಲ್ಲಿರುವ ಒಟ್ಟು 87 ಸರಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳ ಪೈಕಿ 26 ಸರಕಾರಿ ಕಾಲೇಜುಗಳಲ್ಲಿ ಮೆರಿಟ್‌ ಮೇಲೆ ಪ್ರವೇಶ ನೀಡಲಾಗು­ವುದು. ಉಳಿದ ಕಾಲೇಜುಗಳಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಸೀಟು ನೀಡಲಾಗುವುದು. ಈ ಬಾರಿ ಸರಕಾರಿ ಪಾಲಿಟೆಕ್ನಿಕ್‌ಗಳಿಗೆ ಹೊಸ ಲೊಗೊ ಕೂಡಾ ಬಿಡುಗಡೆಯಾಗಿದೆ.

 ಹೊಸ ಕೋರ್ಸ್‌ಗಳು :

ಆಲ್ಟರ್ನೇಟಿವ್‌ ಎನರ್ಜಿ ಟೆಕ್ನಾಲಜೀಸ್‌ (Alternative Energy Technologies)

ಸೈಬರ್‌ ಭದ್ರತೆ (Cyber security)

ಆಹಾರ ಸಂಸ್ಕರಣೆ ಮತ್ತು ಸಂರಕ್ಷಣೆ (Food Processing and Preservation)

ಪ್ರವಾಸೋದ್ಯಮ (Travel  Tourism)

ಕ್ಲೌಡ್‌ ಕಂಪ್ಯೂಟಿಂಗ್‌ (ಇlಟuಛ ಇಟಞಟuಠಿಜಿnಜ)

ಆಟೋಮೇಷನ್‌ ಮತ್ತು ರೋಬೋಟಿಕ್ಸ್‌ (Automation and Robotics)

ನಿರ್ದೇಶನ ಮತ್ತು ಚಿತ್ರಕಥೆ ರಚನೆ, ಟೀವಿ ಕಾರ್ಯಕ್ರಮಗಳ ನಿರ್ಮಾಣ (Direction screen play writing and

TV production)

ಸೈಬರ್‌ ಭೌತಿಕ ವ್ಯವಸ್ಥೆ ಮತ್ತು ಭದ್ರತೆ(Cyber physical system and security)

 

ಆರ್‌.ಕೆ.ಬಾಲಚಂದ್ರ

ಟಾಪ್ ನ್ಯೂಸ್

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

Donald Trump Salry: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

Donald Trump Salary: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ

ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Explainer:ಅಮೇರಿಕವನ್ನು ಅಭಿನಂದಿಸುವ ಮೊದಲು ಭಾರತೀಯರು ಕಲಿಯಬೇಕಾದ ರಾಜಕೀಯ ಪಾಠ…

Kannada-Horata

Golden Jubliee: ಕನ್ನಡಕ್ಕೆ ಹೋರಾಡುತ್ತಲೇ ಇರಬೇಕಾದ ಸ್ಥಿತಿ ಬಾರದಿರಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

BGT Series: Indians Should not forget the battle of Pujara at the Gabba

BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.